Author: Prajatv Kannada

ಬೆಂಗಳೂರು: ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್​​​​ ಕಾರ್ಡ್​​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್​ ಬಿಡುಗಡೆ ಮಾಡಿದರು. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್​, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್​ಸಿ ಹರಿಪ್ರಸಾದ್​​, ಸಿಎಸ್​​ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್​.ವಿ.ಪ್ರಸಾದ್​, ಕೆಸ ಎಂಡಿ ಅನ್ಬುಕುಮಾರ್,​ ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.

Read More

ಬೆಂಗಳೂರು: ನುಡಿದಂತೆ ನಡೆಯುವುದೇ ಕಾಂಗ್ರೆಸ್​ನ ಶಕ್ತಿ. ಕಾಂಗ್ರೆಸ್​ ಹಾಗೂ ಜೆಡಿಎಸ್​ನವರು ಟೀಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದವರು ಟೀಕೆ ಮಾಡಲಿ, ಟೀಕೆ ಬೇಗ ಸಾಯುತ್ತದೆ. ಜನರನ್ನು ಸಂತೋಷಪಡಿಸುವುದೇ ನಿಜವಾದ ಈಶ್ವರನ ಪೂಜೆ. ಇದೀಗ ಈಶ್ವರನ ಪೂಜೆ ಮಾಡಿಕೊಂಡು ಬಂದಿದ್ದೇನೆ ಎಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಆಗಮಿಸಿದ್ದು,  ಕೆಲವೇ ಹೊತ್ತಿನಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್​, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್​ಸಿ ಹರಿಪ್ರಸಾದ್​​, ಸಿಎಸ್​​ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್​.ವಿ.ಪ್ರಸಾದ್​, ಕೆಸ ಎಂಡಿ ಅನ್ಬುಕುಮಾರ್,​ ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.

Read More

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ (Congress Guarantee) ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ (Free Bus Travel) ಯೋಜನೆ ‘ಶಕ್ತಿ’ಗೆ (Shakti Scheme) ರಾಜ್ಯಾದ್ಯಂತ ಇಂದು (ಭಾನುವಾರ) ಚಾಲನೆ ಸಿಗಲಿದೆ. ಇದೇ ಹೊತ್ತಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಫ್ರೀ ಬಸ್‌ ಪ್ರಯಾಣದ ಟಿಕೆಟ್‌ ಬಿಡುಗಡೆ ಮಾಡಿದೆ. ಆ ಟಿಕೆಟ್‌ ಹೇಗಿದೆ ಗೊತ್ತಾ? ಮಹಿಳೆಯರಿಗಾಗಿ ಘೋಷಿಸಿದ್ದ ‘ಶಕ್ತಿ’ ಯೋಜನೆ ಚಾಲನೆಗೆ ಕ್ಷಣಗಣನೆ ಶುರುವಾಗಿದ್ದು, ಯೋಜನೆ ಜಾರಿಗೂ ಮೊದಲು ಸಾರಿಗೆಯ ನಾಲ್ಕು ನಿಗಮಗಳು ತಯಾರಿ ನಡೆಸಿದ್ದವು. ಕೆಎಸ್‌ಆರ್‌ಟಿಸಿ ಯಿಂದಲೂ ಉಚಿತ ಟಿಕೆಟ್‌ ತಯಾರಿ ನಡೆದಿತ್ತು. ಹೇಗಿದೆ ಟಿಕೆಟ್? ಸರ್ಕಾರಿ ಬಸ್‌ಗಳಲ್ಲಿ ಈವರೆಗೆ ನೀಡುತ್ತಿದ್ದ ಟಿಕೆಟ್‌ಗಳು ಸಾಮಾನ್ಯವಾಗಿ ಬಿಳಿ ಬಣ್ಣದ್ದಾಗಿತ್ತು. ಈಗ ಮಹಿಳೆಯರಿಗೆ ವಿಶೇಷ ಟಿಕೆಟ್‌ ರೂಪುಗೊಳಿಸಲಾಗಿದೆ. ಟಿಕೆಟ್‌ ಪಿಂಕ್‌ ಬಣ್ಣದಿಂದ ಕೂಡಿದೆ. ಮಹಿಳೆಯರ ಪ್ರಯಾಣದ ವೇಳೆ ನಿರ್ವಾಹಕರು ಪಿಂಕ್‌ ಬಣ್ಣದ ಟಿಕೆಟ್‌ ನೀಡುತ್ತಾರೆ. ಶಕ್ತಿ ಯೋಜನೆಯಡಿ ಮಹಿಳಾ ಉಚಿತ ಟಿಕೆಟ್‌ ಎಂದು ನಮೂದಿಸಿದೆ. ಎಲ್ಲಿಂದ….. ಎಲ್ಲಿಗೆ….. ಮೊತ್ತ: 0 ರೂ. ಎಂದು…

Read More

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್​​, ಎಪಿಎಲ್​ ಎಂಬ ನಿಯಮವಿಲ್ಲ. ಯಾವುದಾದರೂ ಐಡಿ ತೋರಿಸಿದರೆ ಪ್ರಯಾಣ ಮಾಡಬಹುದು. ಸ್ಮಾರ್ಟ್​ ಕಾರ್ಡ್​ ಮಾಡಿಸಲು ಯಾರೂ ದುಡ್ಡು ಕೊಡಬೇಕಿಲ್ಲ. ಸ್ಮಾರ್ಟ್ ಕಾರ್ಡ್​​ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶವಿದೆ. ಮಧ್ಯಾಹ್ನ ೧ ಗಂಟೆ ಮೇಲೆ ಉಚಿತ ಪ್ರಯಾಣ ಮಾಡಲು ಅವಕಾಶವಿದೆ. ಶೇ.90 ಕ್ಕಿಂತ ಹೆಚ್ಚು ಬಸ್​​ಗಳಲ್ಲಿ ರಾಜ್ಯದ ಯಾವುದೇ ಮೂಲೆಗೆ ಮಹಿಳೆಯರು ಹೋಗಬಹುದು ಸಮಾರಂಭದಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Read More

ಮೈಸೂರು: ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದ ಅವರು ನಂತರ ಅಲ್ಲಿಂದ ಸುತ್ತೂರು ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ವರುಣಾವನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯ ವಿಚಾರ ‘ ವರುಣಾವನ್ನ ತಾಲೂಕು ಮಾಡಿ ಎಂದು ಜನರು ಕೇಳಿಲ್ಲ. ತಾಲೂಕು ಮಾಡುತ್ತೇವೆ ಎಂದು ಹೇಳಿದ್ದು ಬಸವರಾಜ ಬೊಮ್ಮಾಯಿ. ನಾನು ಪ್ರಚಾರ ಮಾಡುವಾಗಲೂ ತಾಲೂಕು ಮಾಡಿ ಎಂದು ಕೇಳಿಲ್ಲ. ಬಸವರಾಜ ಬೊಮ್ಮಾಯಿ ತಾಲೂಕು ಮಾಡಿ ಎಂದು ಕೇಳಿದ್ರೆ ಮಾಡಲ್ಲ. ಜನ ಕೇಳಿದರೆ ಮಾತ್ರ ವರುಣವನ್ನು ತಾಲೂಕು ಮಾಡುತ್ತೇನೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Read More

ಮೈಸೂರು: ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 20 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಕಿಡಿಕಾರಿದರು. ನಾವು ನುಡಿದಂತೆ ನಡೆಯುತ್ತಿದ್ದೇವೆ. ನಾವು ಹೇಳಿದಂತೆ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ಬಿಜೆಪಿಯವರಂತೆ ವಚನ ಭ್ರಷ್ಟರಲ್ಲ. ಅನ್ನಭಾಗ್ಯ ಯೋಜನೆಯಡಿ ಜು.1ರಿಂದ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಬಿಪಿಎಲ್​​​ ಕಾರ್ಡ್​ ಇರುವವರಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದರು.

Read More

ಮೈಸೂರು: ನಾವು ನುಡಿದಂತೆ ನಡೆಯುತ್ತಿದ್ದೇವೆ. ನಾವು ಹೇಳಿದಂತೆ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ಬಿಜೆಪಿಯವರಂತೆ ವಚನ ಭ್ರಷ್ಟರಲ್ಲ. ಅನ್ನಭಾಗ್ಯ ಯೋಜನೆಯಡಿ ಜು.1ರಿಂದ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಬಿಪಿಎಲ್​​​ ಕಾರ್ಡ್​ ಇರುವವರಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದರು. ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ. ಒಂದು ವರ್ಷದಲ್ಲಿ‌ 100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡಬೇಕು? ಇದು ದುರುಪಯೋಗ ಅಲ್ವಾ? ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರು 190, 180, 70 ಯುನಿಟ್ ಬಳಸುತ್ತಾರ) ಅವರಿಗೆ ಫ್ರೀ. ಅದಕ್ಕೆ ಒಂದು ವರ್ಷದ ಆವೇರೆಜ್ ತೆಗೆದುಕೊಳ್ಳಲು ಹೇಳಿದ್ದೇನೆ. ಅದರಲ್ಲಿ ಶೇ 10 ಹೆಚ್ಚುವರಿ ನೀಡುತ್ತೇವೆ. ಯಾರು 200 ಯೂನಿಟ್ ಬಳಸುತ್ತಾರೋ ಅಂತಹವರೆಲ್ಲರಿಗೂ ಉಚಿತ ಎಂದರು.

Read More

ಬಳ್ಳಾರಿ: ಒಂಬತ್ತು ತಿಂಗಳ ಮಗು  (Baby) ತಲೆ ನೋವು (Headache) ನಿವಾರಕದ ಡಬ್ಬಿ ನುಂಗಿ ದಾರುಣವಾಗಿ ಮೃತಪಟ್ಟ ಘಟನೆ ಬಳ್ಳಾರಿ  (Ballari) ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿ ಏಕೈಕ ಪುತ್ರಿ ಪ್ರಿಯದರ್ಶಿನಿ ಸಾವನ್ನಪ್ಪಿದ ದುರ್ದೈವಿ. ಶುಕ್ರವಾರ ಸಂಜೆ ಆಟವಾಡುತ್ತಿದ್ದಾಗ ಪ್ರಿಯದರ್ಶಿನಿ ಚಿಕ್ಕ ಡಬ್ಬಿಯನ್ನು ನುಂಗಿದ್ದಾಳೆ. ಡಬ್ಬಿ ನುಂಗಿದ ಪರಿಣಾಮ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿದೆ.  ಉಸಿರಾಟದ ತೊಂದರೆ ಹೆಚ್ಚಾದ ಬೆನ್ನಲ್ಲೇ ಗಾಬರಿಯಾದ ಪೋಷಕರು ಖಾಸಗಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ದೇಹ ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಈ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಈ ಮಗು ಜನಿಸಿತ್ತು.

Read More

ಬೆಳಗಾವಿ: 8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ (Soldier) ರೈಲಿನಿಂದ (Train) ಕಾಲು ಜಾರಿ ಬಿದ್ದು ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ಕನಸಗೇರಿ (Kanasageri) ಗ್ರಾಮದ ವೀರ ಯೋಧರಾಗಿದ್ದು, ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದರು. ಮದುವೆಗೆಂದು (Marriage) ಪಂಜಾಬ್‌ನಿಂದ (Punjab) ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಯೋಧನ ಸಾವಿನಿಂದ ಸ್ವಗ್ರಾಮ ಕನಸಗೇರಿಯಲ್ಲಿ ಸ್ಮಶಾನ ಮೌನ ಆವರಿಸಿದ್ದು, ದುಃಖ ಮಡುಗಟ್ಟಿದೆ. ಮೃತ ಯೋಧನ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮ ಕನಸಗೇರಿಗೆ ಆಗಮಿಸಲಿದೆ.

Read More