ಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ)ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು. ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ನೇಮಕಾತಿಯು ಪಾರದರ್ಶಕವಾಗಿ ನಡೆಯುತ್ತದೆ. ಆದರೆ, ಕೆಪಿಎಸ್ಸಿ ನೇಮಕಾತಿಯು ಹಗರಣವಿಲ್ಲದೇ ನಡೆಯುವುದಿಲ್ಲ ಎಂದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದರು. ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಸುಳ್ಳ ಪಂಚಗ್ರಹ ಹಿರೇಮಠ ಶ್ರೀ ಅಭಿನವ ಶಿವಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಯುಪಿಎಸ್ಸಿ ಪರೀಕ್ಷೆಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ, ಮಾನವ ಕಂಪ್ಯೂಟರ್ ಖ್ಯಾತಿಯ ಅಂಧ ಪ್ರತಿಭೆ ಬಸವರಾಜ…
Author: Prajatv Kannada
ಮೈಸೂರು ;- ಮಹಾಪುರುಷರು ತಂದುಕೊಟ್ಟ ಸ್ವಾತಂತ್ರ್ಯ ಕೈತಪ್ಪಿಹೋಗದಂತೆ ನೋಡಿಕೊಳ್ಳಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ. ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಲೋಕ ಮಾನ್ಯ ಬಾಲಗಂಗಾಧರ ತಿಲಕರ 167ನೇ ಜಯಂತ್ಯುತ್ಸವವನ್ನು ತಿಲಕ್ ನಗರದಲ್ಲಿ ಆಚರಿಸುತ್ತಿರುವುದು ಅತ್ಯಂತ ಮಹತ್ವಪೂರ್ಣದ್ದಾಗಿದೆ. ನಾವು ಇವರಿಗೆ ಎಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರು ಅದು ಕಡಿಮೆ. ಯಾಕೆಂದರೆ ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟವರು ಅವರು. ಅವರು ಪಟ್ಟಿರುವ ಶ್ರಮ ಊಹಿಸಲೂ ಅಸಾಧ್ಯ. ಹಿಂದೆ ನಮ್ಮ ಸಮಾಜವನ್ನು ಒಗ್ಗೂಡಿಸುವುದೇ ದೊಡ್ಡ ಕಷ್ಟಕರವಾದ ಕಾರ್ಯವಾಗಿತ್ತು. ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ ಎಂದರು. ಅವರನ್ನು ನಾವು ಸದಾ ನೆನಪಿಸಿಕೊಳ್ಳಬೇಕು, ಜೊತೆಗೆ ನಾವು ಅವರಿಗೆ ಕೊಡಬೇಕಾದ ಗೌರವ ಎಂದರೆ, ಅವರು ಏನು ಸ್ವಾತಂತ್ರ್ಯವನ್ನು ದೊರಕಿಸಿ ಕೊಟ್ಟು ಹೋಗಿದ್ದಾರೆಯೋ ನಾವು ಅದನ್ನು ಕೈತಪ್ಪಿ ಹೋಗದಂತೆ ಸಮಾಜದಲ್ಲಿ ಒಗ್ಗಟ್ಟಾಗಿ ಉಳಿದರೆ ಮಾತ್ರ ಅ ಸ್ವಾತಂತ್ರ್ಯ ಉಳಿಯುತ್ತದೆ. ನಮ್ಮೊಳಗೆ ನಾವು ಒಡಕು ಸೃಷ್ಟಿಸಿಕೊಂಡು ಇಲ್ಲ ಸಲ್ಲದ ವಿಚಾರಕ್ಕೆ…
ಮಂಡ್ಯ: ಕೋರಂ ಕೊರತೆಯಿಂದಾಗಿ ಮುಂದೂಡಲ್ಪಟ್ಟಿದ್ದ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ(ಮನ್‌ಮುಲ್) ಅಧ್ಯಕ್ಷ ಸ್ಥಾನದ ಚುನಾವಣೆಗೆ ಮತ್ತೆ ಜುಲೈ 24ರಂದು ಮುಹೂರ್ತ ನಿಗದಿಯಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ನಡುವೆ ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿರುವುದರಿಂದ ಚುನಾವಣೆಯ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ಜುಲೈ 6ರಂದು ಚುನಾವಣೆ ನಿಗದಿಯಾಗಿತ್ತು. ಆದರೆ, ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ದೇಶಕ ಡಾಲು ರವಿ ಹೊರತಾಗಿ ಉಳಿದ್ಯಾವ ನಿರ್ದೇಶಕರು ಭಾಗವಹಿಸಿರಲಿಲ್ಲ. ನಾಮಪತ್ರ ಸಲ್ಲಿಸಿದ ಆಕಾಂಕ್ಷಿತರೂ ಕೂಡ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದರು. ಹೀಗಾಗಿ ಕೋರಂ ಕೊರತೆಯಿಂದಾಗಿ ಚುನಾವಣಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರು ಮುಂದೂಡಿದ್ದರು. ಜುಲೈ 6ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಪಾಲ್ಗೊಳ್ಳದಂತೆ ಇಬ್ಬರು ನಿರ್ದೇಶಕರಿಗೆ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನಿರ್ಬಂಧ ಹೇರಿತ್ತು. ತನಗೆ ಅಧಿಕಾರ ಕೈತಪ್ಪುವ ಸೂಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು, ಚುನಾವಣೆಗೆ ಮುನ್ನ ರಾಜಕೀಯ ಅಧಿಕಾರ ಬಳಸಿ ನಿರ್ದೇಶಕರಿಗೆ ನಿರ್ಬಂಧ ಹೇರುವ ಪ್ರಯತ್ನವನ್ನು ಪರೋಕ್ಷವಾಗಿ ಮಾಡಿತ್ತು. ಎರಡು…
ರಾಮನಗರ ;- ಜನಸ್ನೇಹಿ ಆಡಳಿತ ನೀಡಿ, ಇಲ್ಲ ನಿಮ್ಮ ದಾರಿ ನೋಡಿಕೊಳ್ಳಿ ಎಂದು ಸಂಸದ ಡಿ.ಕೆ.ಸುರೇಶ್ ಅವರು ಅಧಿಕಾರಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಆಡಳಿತ ಪಾರದರ್ಶಕವಾಗಿ ಇರಬೇಕು. ಇಂದಿನಿಂದಲೇ ನಿಮ್ಮ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳಬೇಕು. ಯಾವ ಅಧಿಕಾರಿಗೆ ಕೆಲಸ ಮಾಡಲು ಇಷ್ಟವಿದಿಯೋ ಇರಬಹುದು. ಕೆಲಸ ಮಾಡಲು ಆಸಕ್ತಿ ಇಲ್ಲದಿದ್ದರೆ ನಿಮಗೆ ಬೇಕಾದ ಕಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು. ನಿಮಗೆ ಅನುಕೂಲ ಇರುವ ಕಡೆಗೆ ಹೋಗುವುದಾದರೆ ಹೋಗಿ ನಮ್ಮದೇನು ಅಭ್ಯಂತರ ಇಲ್ಲ. ನಿಮ್ಮ ತಲೆಯಲ್ಲಿ ವರ್ಗಾವಣೆ ಆಲೋಚನೆ ಬಂದಿದ್ದರೆ ನಾನೇನು ಮಾಡಲು ಆಗಲ್ಲ. ನಿಮ್ಮನ್ನು ವರ್ಗಾವಣೆ ಮಾಡುವುದು ಸುಲಭ. ಆ ರೀತಿ ವರ್ಗಾವಣೆ ಮಾಡಿಸುವ ವ್ಯಕ್ತಿ ನಾನಲ್ಲ. ನೀವಾಗಿ ನೀವು ಹೋಗುವುದಾದರೆ ಹೋಗಬಹುದು ಎಂದು ಹೇಳಿದರು. ಸರ್ಕಾರಿ ಅಧಿಕಾರಿಗಳು ರೈತರು ಮತ್ತು ಜನಸಾಮಾನ್ಯರ ಕಷ್ಟಸುಖಗಳನ್ನು ಆಲಿಸುವುದರ ಜೊತೆಗೆ ಅದಕ್ಕೆ ಪರಿಹಾರ ಸೂಚಿಸಬೇಕು. ಇನ್ನು ಮುಂದೆ ನಿಮ್ಮ ಪರ್ಸೆಂಟೇಜ್ ,…
ಬೆಂಗಳೂರು ;– ಮುನಿರತ್ನ ಅತ್ಯಾಪ್ತ ಎಂದೇ ಗುರುತಿಸಿದ್ದ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಸೇರಿ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಆರ್.ಆರ್.ನಗರ ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆಸುವ ಮೂಲಕ ಬಿಜೆಪಿ ಶಾಸಕ ಮುನಿರತ್ನಗೆ ಡಿಕೆ ಬ್ರದರ್ಸ್ ಬಿಗ್ ಶಾಕ್ ನೀಡಿದ್ದಾರೆ. ಶಾಸಕ ಮುನಿರತ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಲು ನಾಯ್ಕರ್, ಮೋಹನ್ ಕುಮಾರ್, ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಪಾಲಿಕೆ ಸದಸ್ಯರಾಗಿ ಈ ಮೂವರು ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವೇಲು ನಾಯ್ಕರ್ ಕೆಜಿಎಫ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೇಳಿದ್ದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದೀಗ ಶಾಸಕ ಮುನಿರತ್ನ ಆಪ್ತ ವಲಯದ ಮೂವರು ಮಾಜಿ ಕಾರ್ಪೋರೇಟರ್‌ಗಳು ಕಾಂಗ್ರೆಸ್ ತೆಕ್ಕೆಗೆ ಸೇರಿದ್ದಾರೆ.
ಬೆಂಗಳೂರು ;- ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು ಹಾಕಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವರು, “ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳ ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಲಪಟಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು, ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು” ಎಂದಿದ್ದಾರೆ. ಸರ್ಕಾರವು ಹೊರಡಿಸಿರುವ ಸುತ್ತೋಲೆಯನ್ನು ಕೆಐಎಡಿಬಿ ಕಚೇರಿಗಳಲ್ಲಿ ಕೂಡಲೇ ಕಡ್ಡಾಯವಾಗಿ ಪ್ರದರ್ಶಿಸಬೇಕು. ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವಂತಹ ಶಕ್ತಿಗಳಿಗೆ ಅಂಕುಶ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೆಐಎಡಿಬಿ ಕಚೇರಿ ಇದರ ಅನುಸರಣ ಕಾರ್ಯವನ್ನೂ ಮಾಡಬೇಕು ಎಂದು ಅವರು ನಿರ್ದೇಶಿಸಿದ್ದಾರೆ.
ಸೂರ್ಯೋದಯ: 06.03 AM, ಸೂರ್ಯಾಸ್ತ : 06.49 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಅದಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ವರ್ಷ ಋತು, ತಿಥಿ: ಇವತ್ತು ಷಷ್ಠಿ 01:42 PM ತನಕ ನಂತರ ಸಪ್ತಮಿ ನಕ್ಷತ್ರ: ಇವತ್ತು ಹಸ್ತ 10:12 PM ತನಕ ನಂತರ ಚಿತ್ತ ಯೋಗ: ಇವತ್ತು ಶಿವ 02:52 PM ತನಕ ನಂತರ ಸಿದ್ದಿ ಕರಣ: ಇವತ್ತು ಕೌಲವ 12:47 AM ತನಕ ನಂತರ ತೈತಲೆ 01:42 PM ತನಕ ನಂತರ ಗರಜ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 01:30 ನಿಂದ 03:00 ವರೆಗೂ ಅಮೃತಕಾಲ: 03.36 PM to 05.22 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:48 ವರೆಗೂ ಮೇಷ ರಾಶಿ: ಸಹೋದರ ಸಹೋದರಿಯರ ಮಧ್ಯೆ ಶಾಂತಿ ಕಾಪಾಡುವುದು ಉತ್ತಮ, ಆಸ್ತಿ ವಿಚಾರದಲ್ಲಿ ಜಯ,ಪಾಲಕರ ನಡುವೆ ವಾಗ್ವಾದ, ಗರ್ಭಿಣಿಯರು…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿಚಾರದಲ್ಲಿ, ಮಂತ್ರಿಗಳ ವಿಚಾರದಲ್ಲಿ ವೈಯಕ್ತಿಕವಾಗಿ ಫೇಕ್ ಸುದ್ದಿಗಳ ಹೆಚ್ಚಾಗುತ್ತಿವೆ. ಇವುಗಳನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತೇವೆ. ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(Dr. G. Parameshwar) ಹೇಳಿದ್ರು. ಇನ್ನು ‘ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಹರಿಪ್ರಸಾದ್ ಹೇಳಿಕೆಗೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ಗೊತ್ತಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರಿಸುತ್ತಾರೆ ಎಂದರು. ಇನ್ನು ಪಿಎಸ್ಐ ಅಕ್ರಮ ನ್ಯಾಯಾಂಗ ತನಿಖೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಿನ್ನೆ ಆದೇಶ ಮಾಡಿದ್ದೇವೆ. ನ್ಯಾಯಾಧೀಶ ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು ಏಕ ಸದಸ್ಯತ್ವದಲ್ಲಿ ತನಿಖೆ ಆಗಲಿದೆ. ನ್ಯಾಯಾಂಗ ತನಿಖೆ ಆಗಬೇಕು ಎಂದು ಹಿಂದೆ ನಾವೇ ಹೇಳಿದ್ದೆವು. ಸತ್ಯಾಸತ್ಯತೆಗಳನ್ನು ಹೊರಗೆ ತರಬೇಕು ಎಂದು ಕೊಟ್ಟಿದ್ದೇವೆ. ತನಿಖೆ ಬೇರೆ ಮಾಡುತ್ತೆವೆ, ನೇಮಕಾತಿಯ ಪ್ರಕ್ರಿಯೆ ಬೇರೆ ಮಾಡುತ್ತೇವೆ. ಅದಕ್ಕೂ ಇದಕ್ಕೂ ಟ್ಯಾಲಿ ಮಾಡಲು ಹೋಗಲ್ಲ. ಅದನ್ನು ಟೈಅಪ್ ಮಾಡಿಕೊಂಡರೆ ನೇಮಕಾತಿ ಮಾಡಲು ಆಗಲ್ಲ. ಇನ್ನೊಂದು ನೇಮಕಾತಿ ಆಗಬೇಕು. 400 ಹುದ್ದೆಗಳು ಖಾಲಿ ಇವೆ. ಅವುಗಳನ್ನು ನೇಮಕ ಮಾಡಬೇಕೆಂದರೂ ಈ ಕೇಸ್ ಇತ್ಯರ್ಥ ಆಗಬೇಕು ಎಂದರು.
ಬೆಂಗಳೂರು : ನೈಸ್ ಯೋಜನೆಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಸಹಿ ಹಾಕಿದ್ದು ಎಂದು ಹೇಳಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಅಷ್ಟೇ ಅಲ್ಲದೇ ಸಾಲು ಸಾಲು ಪ್ರಶ್ನೆಗಳನ್ನು, ಸವಾಲುಗಳನ್ನು ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅವರ ಮುಂದಿಟ್ಟಿದ್ದಾರೆ. ಜೊತೆಗೆ ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ ‘ಪೊಲಿಟಿಕಲ್ ಏಜೆಂಟ್’ ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ? ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನೈಸ್ ಯೋಜನೆಗೆ ಎಚ್‌ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ. ಯಾಕೆ? ಎಂದು ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು: ಪ್ರಜಾಪ್ರಭುತ್ವ ಉಳಿಸಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಸ್ಪೀಕರ್ ಒನ್ಸೈಡ್, ವಿಪಕ್ಷ ತುಳಿಯುವ ಕೆಲಸ ಮಾಡುತ್ತಿದ್ದಾರೆ. ಸ್ಪೀಕರ್ ಯಾಕೆ ಊಟಕ್ಕೆ ಹೋದರಿ ಅಂದ್ವಿ ಅವರು ನಮ್ಮನ್ನ ಹೊರಗಡೆ ಹಾಕಿದರು. ಕಾಂಗ್ರೆಸ್ ಆಫೀಸಿಗೆ ಊಟಕ್ಕೆ ಯಾಕೆ ಹೋದರಿ ಅಂತ ಕೇಳಿದ್ವಿ. ನೀವು ಅಲ್ಲಿ ಬಿರಿಯಾನಿ ತಿಂದರಾ ಅಂತ ಕೇಳಿಲ್ಲ ವೆಜ್ತಿಂದರಾ ಅಂತ ಕೇಳಿಲ್ಲ. ಸರ್ಕಾರ ಹಣದಲ್ಲಿ ತಿನ್ನಬೇಕು ಅಲ್ವ ಯಾಕೆ ಅಲ್ಲಿಗೆ ಹೋದರಿ. ಹೋಟೆಲ್ ಮುಂದೇ ಸ್ವೀಕರ್ ಕೈ ಕಟ್ಟಿಕೊಂಡು ನಿಂತಿದ್ದರು. ಸಭಾಧ್ಯಕ್ಷರ ಮಾನ ಮರ್ಯಾದೆ ತೆಗೆದ ಖಾದರ್ಗೆ ದಿಕ್ಕಾರ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್ ಅಶೋಕ್(R Ashok) ಹೇಳಿದ್ದಾರೆ.