ಉಡುಪಿ: ಉಡುಪಿಗೆ ಬಿಪರ್ ಜಾಯ್ ಚಂಡಮಾರುತ ಆತಂಕ ಹಿನ್ನಲೆ ಬೀಚ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಡುಕರೆ ಸಮುದ್ರ ತೀರದಲ್ಲಿ ಗಾಳಿ ವೇಗವಾಗಿ ಬೀಸುತ್ತಿದ್ದು, ಜೋರಾದ ಗಾಳಿಯ ಅಬ್ಬರದ ಮಧ್ಯೆ ರಕ್ಕಸ ಗಾತ್ರದ ಅಲೆಗಳ ಅಬ್ಬರ ಹೆಚ್ಚಾಗಿದೆ. ಚಂಡಮಾರುತ ಭೀತಿಯಿಂದ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.
Author: Prajatv Kannada
ಉತ್ತರ ಕನ್ನಡ: ಸೈಕ್ಲೋನ್ ಎಪೆಕ್ಟ್ ಹಿನ್ನಲೆ, ಮುಂಜಾನೆಯಿಂದ ಜಿಲ್ಲೆಯ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಒಂದು ತಾಸಿನಿಂದ ಬಿಟ್ಟು ಬಿಡದೆ ಮಳೆ ಶುರುಯುತ್ತಿದೆ. ಕಾರವಾರ, ಅಂಕೋಲ, ಭಟ್ಕಳ, ಜೋಯಿಡಾ ಭಾಗದಲ್ಲಿ ಮಳೆಯಾಗುತ್ತಿದ್ದು, ರೇನ್ ಕೋಟ್, ಕೊಡೆಗಳ ಮೊರೆ ಹೋಗಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.
ಹಾವೇರಿ: ರಾಜ್ಯ ಸರಕಾರ ವಿದ್ಯುತ್ ಬಳಕೆ ದರವನ್ನು ಮೂರು ಪಟ್ಟು ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿಡೇನೂರ ಗ್ರಾಮಸ್ಥರು ಶುಕ್ರವಾರ ಸಭೆ ನಡೆಸಿ ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್ ಪಾವತಿ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. 200 ರೂ. ಬದಲಿಗೆ 800 ರೂ.ವರೆಗೂ ಬಿಲ್ ಮೂರು ಪಟ್ಟು ದರ ಹೆಚ್ಚಳಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದ ಜನರಿಗೆ ಜೂನ್ ನಲ್ಲಿ (ಮೇ ತಿಂಗಳ ಬಿಲ್) ಮೂರುಪಟ್ಟು ಹೆಚ್ಚಳದ ಬಿಲ್ ನೀಡಿರುವುದು ಆಘಾತ ತಂದಿದೆ ಸರಕಾರ ಹಾಗೂ ಹೆಸ್ಕಾಂ ವಿರುದ್ದ ರಾಜ್ಯಾದ್ಯಂತ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ತಾಲೂಕಿನ ಶಿಡೇನೂರ ಗ್ರಾಮಸ್ಥರು ಸಹ ಶುಕ್ರವಾರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅಧಿಕ ಬಿಲ್ ಕಟ್ಟುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ ಏರಿಕೆ ಖಂಡಿಸಿ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿದ್ದಾರೆ. “ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳುತ್ತಿರುವ ಸರಕಾರ ಇದೀಗ ಏಕಾಏಕಿ ಬಿಲ್ ಜಾಸ್ತಿ…
ದಾವಣಗೆರೆ: ಇಲಿ (Rat) ಸಾಯಿಸಲು ಇಟ್ಟ ಹಣ್ಣು (Poisoned Fruit) ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ನಿವಾಸಿ ಐಶ್ವರ್ಯಾ (21) (Aishwarya) ಸಾವನ್ನಪ್ಪಿದ ಯುವತಿ. ಈಕೆ ನ್ಯಾಮತಿಯ ಸರ್ಕಾರಿ ಕಾಲೇಜ್ ನಲ್ಲಿ ಬಿಎ ಓದುತ್ತಿದ್ದಳು. ಮನೆಯಲ್ಲಿ ಓಡಾಡಿ ಉಪಟಳ ಕೊಡುವ ಇಲಿಯನ್ನು ಸಾಯಿಸಲೆಂದು ಕುಟುಂಬಸ್ಥರು ಹಣ್ಣಿಗೆ ವಿಷ ಸವರಿ ಇಟ್ಟಿದ್ದರು. ಆದರೆ ಇದನ್ನು ಗಮನಿಸದೇ ಯುವತಿ ಕಾಲೇಜು ಮುಗಿಸಿ ಮನೆಗೆ ಬಂದಾಗ ನೆಲದ ಮೇಲೆ ಬಿದ್ದಿದ್ದ ಹಣ್ಣನ್ನು ತಿಂದಿದ್ದಳು. ಹಣ್ಣು ತಿಂದ ಯುವತಿಯ ಆರೋಗ್ಯದಲಲಿ ಏರುಪೇರಾಗುತ್ತಿದ್ದಂತೆಯೇ ಕುಟುಂಬಸ್ಥರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾದರೆ ಯುವತಿ ಸಾವನ್ನಪ್ಪಿದ್ದಾಳೆ.
ಬೆಂಗಳೂರು: 40% ಕಮಿಷನ್ ಆರೋಪದ ತನಿಖೆಯನ್ನು ಸ್ವಾಗತ ಮಾಡ್ತೇನೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಸಮಾಜ ಕಲ್ಯಾಣ ಇಲಾಖೆಯಿಂದಲೇ ತನಿಖೆಯನ್ನು ಆರಂಭಿಸಿ, ಎಲ್ಲರೂ ಸಮಾನ ಎನ್ನುವ ಕಾಂಗ್ರೆಸ್ ಗೆ, ಹಿಂದುಗಳು ಕಡಿಮೆ ಎಂದು ಯಾಕೆ ಅನ್ನಿಸುತ್ತದೆ? ಚಾಣಕ್ಯ ವಿಶ್ವ ವಿದ್ಯಾಲಯಕ್ಕೆ ನೀಡಿದ್ದ ಭೂಮಿ ವಾಪಸ್ ಪಡೆಯುತ್ತೇವೆ ಅನ್ನೋದು ಯಾಕೆ? ಹಿಂದುಗಳು ಕಡಿಮೆ ಸಮಾನವೆಂದು ಯಾಕೆ ಯೋಚನೆ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಸಿಎಂ ಜೊತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ನಾಳೆ(ಜೂ.11) ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇನ್ನು ಭಾನುವಾರ ಜನರು ಫ್ರೀ ಇರ್ತಾರೆ, ಹಾಗಾಗಿ ನಾನೇ ಭಾನುವಾರ ಕಾರ್ಯಕ್ರಮ ಮಾಡೋಣ ಅಂತಾ ಹೇಳಿದ್ದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ‘ದೇಶಕ್ಕೆ ಪ್ರಜ್ಞಾವಂತರು ಮುಖ್ಯ. ಪೆನ್ನು, ಪೇಪರ್ ಕೈಯಲ್ಲಿ ಇದ್ದಾಗ ಹೇಗೆ ಬಳಸಬೇಕೋ ಹಾಗೇ ಬಳಸಬೇಕು. ಅಧಿಕಾರ ಇದ್ದಾಗ ಜನರ ಒಳಿತಿಗಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಆರೋಗ್ಯ ಸಚಿವ ಸುಧಾಕರ್ ಉದಾಹರಣೆ ನೀಡಿದ ಡಿಕೆ ಶಿವಕುಮಾರ್, ಆರೋಗ್ಯ ಸಚಿವರಾಗಿ ಸುಧಾಕರ್ ಕನಕಪುರಕ್ಕೆ ಬಂದಿದ್ರು, ನಮ್ಮ ಕನಕಪುರಕ್ಕೆ ಇದ್ದ ಆಸ್ಪತ್ರೆಯನ್ನ ತೆಗೆದುಕೊಂಡು ಹೋದ್ರು. ಅದಕ್ಕೆ ಅಧಿಕಾರ ಇದ್ದಾಗ, ಪೆನ್ನು ಜನರ ಒಳಿತಿಗಾಗಿ ಬಳಸಬೇಕು. ಒಳ್ಳೇದು ಮಾಡೋದಿದ್ರೆ ಇವತ್ತೇ ಮಾಡಬೇಕು, ನಾಳೆ ಬಗ್ಗೆ ಯೋಚಿಸಬಾರದು ಎಂದು ಡಿಸಿಎಂ ಸಲಹೆ ನೀಡಿದರು.
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ (Jnanabharathi Police Station) ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳು (Accused) ಕೆಲಸ ಕೊಡಿಸುವ ನೆಪದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನ ಕರೆತಂದು ಅಪಾರ್ಟ್ಮೆಂಟ್ ನಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು
ಬೆಂಗಳೂರು: ನಾಳೆ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವರು, ವಿಧಾನಸೌಧದಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ರಾಮಲಿಂಗ ರೆಡ್ಡಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಉಚಿತ ಬಸ್ ನಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ. ಬಸ್ ನಲ್ಲಿ ಟಿಕೆಟ್ ಕೊಡಲು ಕಂಡಕ್ಟರ್ ಇರ್ತಾರೆ, ಬಸ್ ಓಡಿಸಲು ಡ್ರೈವರ್ ಇರ್ತಾರೆ. ಉದ್ಘಾಟನೆ ಬಳಿಕ ಬಸ್ ನಲ್ಲಿ ಒಂದು ರೌಂಡ್ ಹೋಗ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಚುನಾವಣೆ ಪೂರ್ವದಲ್ಲಿ ನಾವು ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ನುಡಿದಂತೆ ನಡೆಯುವವರು. ಏನು ಹೇಳುತ್ತೇವೆಯೋ ಅದರಂತೆ ನಾವು ನಡೆಯುತ್ತೇವೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ? ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಮಾಡಿಲ್ಲ, ರೈತರ ಆದಾಯ ಡಬಲ್ ಮಾಡ್ತೀವಿ ಎಂದು ಮಾಡಿಲ್ಲ. ಪ್ರಧಾನಿ ಮೋದಿಯವರು ಕೊಟ್ಟ ಯಾವ ಭರವಸೆ ಈಡೇರಿಸಿದ್ದಾರೆ? ಎಂದು ಪ್ರಶ್ನಿಸಿದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಡಿಕೆಶಿ ನಿವಾಸಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಜೊತೆ ರಾಘವೇಂದ್ರ ರಾಜ್ ಕುಮಾರ್ ಕೂಡ ಭೇಟಿ ನೀಡಿದರು. ಈ ವೇಳೆ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರಿಗೆ ಅಶ್ವಿನಿ ಮತ್ತು ರಾಘಣ್ಣ ಶುಭ ಕೋರಿದ್ದಾರೆ. ಈ ಬಾರಿಯ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಶಿವರಾಜ್ ಕುಮಾರ್ ದಂಪತಿ ಪ್ರಚಾರ ಮಾಡಿದ್ದರು. ಅದರಂತೆ ರಾಜ್ಯದಲ್ಲಿ ಬಹು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆ ಇಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಸಿಎಂ ಅವರ ನಿವಾಸಕ್ಕೆ ಅಶ್ವಿನಿ ಎಂಟ್ರಿ ನೀಡಿದ ವಿಡಿಯೋ ಕೂಡ ಲಭ್ಯವಾಗಿದೆ.