ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; 123 ಕ್ಷೇತ್ರ ಗೆಲ್ಲದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಈಗೆಲ್ಲಿ ವಿಸರ್ಜನೆ ಮಾಡಿದ್ದಾರೆ? ಎಂದು ನನ್ನನ್ನು ಪ್ರಶ್ನೆ ಮಾಡಿದ್ದಾರೆ. ಆದರೆ, ಅವರ ಅಜ್ಞಾನಕ್ಕೆ ನನ್ನ ಮರುಕವಿದೆ ಎಂದರು. ನಾನು ಚುನಾವಣೆ ಪ್ರಚಾರ ಹಾಗೂ ಪಂಚರತ್ನ ರಥಯಾತ್ರೆಯಲ್ಲಿ ನೂರಾರು ಕಡೆ ಭಾಷಣ ಮಾಡಿದ್ದೇನೆ. ಪತ್ರಿಕೆಗಳ ವರದಿಗಳನ್ನು ನೋಡಲಿ, ವಿದ್ಯುನ್ಮಾನ ಮಾಧ್ಯಮಗಳ ವೀಡಿಯೊಗಳನ್ನು ವೀಕ್ಷಿಸಲಿ. ಆಮೇಲೆ ಈ ಬಗ್ಗೆ ಮುಖ್ಯಮಂತ್ರಿ ಮಾತನಾಡಲಿ ಎಂದು ಕುಮಾರಸ್ವಾಮಿ ಅವರು ಸಿಎಂಗೆ ಟಾಂಗ್ ನೀಡಿದರು. ನಾನು ಜನರನ್ನ ಕೇಳಿದ್ದು ಇಷ್ಟೇ. ನನಗೆ 123 ಸೀಟು ಕೊಡಿ. ಅಷ್ಟು ಸೀಟು ಕೊಟ್ಟ ಮೇಲೆ ನಾನು…
Author: Prajatv Kannada
ಬೆಂಗಳೂರು ;- ನಗರ ಬೇರೆ ಭಾಷೆಯವರ ಕೈಗೆ ಹೋಗಿದೆ. ಇದು ಕಣ್ಣೀರಿನ ಕಥೆ” ಎಂದು ಕನ್ನಡ ಚಳವಳಿಯ ನಾಯಕ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬೆಂಗಳೂರು ನಗರದಲ್ಲಿ ಕೊಲೆ, ಬೆದರಿಕೆ ಲೂಟಿ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ಆಗಿದೆ ಎಂದು ಹೇಳುತ್ತಿಲ್ಲ. ಹತ್ತು ವರ್ಷಗಳಿಂದ ಬೆಂಗಳೂರು ಹಾಳಾಗುತ್ತಿದೆ. ಬೆಂಗಳೂರಿಗೆ ಬಹಳ ಜನ ವಲಸೆ ಬಂದಿದ್ದಾರೆ. ಬೆಂಗಳೂರು ಬೇರೆ ಭಾಷೆಯವರ ಕೈಯಲ್ಲಿ ಹೋಗಿದೆ. ಕನ್ನಡಿಗರು ಕಡಿಮೆಯಾಗುತ್ತಿದ್ದಾರೆ. ಎಲ್ಲೆಲ್ಲೂ ಹೊರಗಡೆಯವರೇ ಇದ್ದಾರೆ. ಅಂಗಡಿ, ಹೋಟೆಲ್, ರಸ್ತೆಯಲ್ಲಿ ಪಾನಿಪೂರಿ ಮಾರುವವರು, ಕಡ್ಲೆ ಕಾಯಿ ಮಾರುವವರು ಕೂಡ ಹೊರಗಿನವರು” ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಮೊನ್ನೆ ದಿನ ಒಂದೇ ಕಚೇರಿಯಲ್ಲಿ ಜೋಡಿ ಕೊಲೆ ಆಗಿದೆ. ನಗರದಲ್ಲಿ ಭಯ-ಭೀತಿಯ ವಾತಾವರಣ ನಿರ್ಮಾಣವಾಗಿದೆ.ಕಾರುಗಳನ್ನು ಬೆನ್ನಟ್ಟುತ್ತಾರೆ, ಹೆದರಿಸುತ್ತಾರೆ, ಬೆದರಿಸುತ್ತಾರೆ ಇದಕ್ಕೆ ಎಲ್ಲರ ಆಡಳಿತ ಜವಾಬ್ದಾರಿ. ಬೆಂಗಳೂರು ಉಳಿಸಬೇಕಾಗಿದೆ. ಹೊರಗಡೆಯಿಂದ ಬಂದವರಿಂದ ಕೊಲೆ, ಸುಲಿಗೆ ಆಗುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರಾಮಾಣಿಕವಾಗಿ ಚಿಂತನೆ ಮಾಡಬೇಕು”…
ಬೆಂಗಳೂರು ;– ಡಾ.ಸಿ.ಎನ್. ಮಂಜುನಾಥ್ ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರನ್ನಾಗಿ ಮುಂದುವರಿಸಲಾಗಿದೆ. ಜುಲೈ 19 ರಂದು ಅವರ ಸೇವಾವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು 6 ತಿಂಗಳ ಕಾಲ ಮುಂದುವರೆಸಲು ತೀರ್ಮಾನಿಸಲಾಗಿದೆ. 2007 ರಿಂದ ಸತತ 16 ವರ್ಷಗಳ ಕಾಲ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವಾ ಅವಧಿಯಲ್ಲಿ ಆಸ್ಪತ್ರೆ ನೀಡುವ ಸೇವೆ ಮತ್ತು ಸೌಲಭ್ಯದಲ್ಲಿ ವಿಶ್ವ ಮಾನ್ಯತೆ ಪಡೆದುಕೊಂಡಿದೆ. ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಜಯದೇವ ಆಸ್ಪತ್ರೆಯ ಶಾಖೆಗಳನ್ನು ತೆರೆಯಲಾಗಿದೆ. ಕಳೆದ ವರ್ಷವೇ ಅವರ ಸೇವಾ ಅವಧಿ ಮುಕ್ತಾಯವಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ರೋಗಿಗಳು ಹಾಗೂ ಸಾರ್ವಜನಿಕರ ಒತ್ತಾಯದ ಮೇರೆಗೆ ಸರ್ಕಾರ ಒಂದು ವರ್ಷ ಸೇವೆಯನ್ನು ಮುಂದುವರೆಸಿತ್ತು.
ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗವು ಇಂದು ಅವರನ್ನು ಭೇಟಿಯಾದ ಸಂದರ್ಭದಲ್ಲಿ ಅವರು ಮಾತನಾಡಿದರು. ಭೂ ಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಆಗಿದ್ದು, ಮುಂದಿನ ಅಧಿವೇಶನ ದಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆದಿದೆ. ರೈತರ ಸಮಸ್ಯೆಜಿಕ ಬಗ್ಗೆ ವಿಸ್ತ್ರುತ ಚರ್ಚೆ ಮಾಡಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು. ಬಜೆಟ್ ನಿಂದ ಹೊರಗುಳಿದಿರುವ ಕೆಲವು ವಿಚಾರಗಳ ಬಗ್ಗೆ ಚರ್ಚಿಸಬೇಕಿದ್ದು, ಸರ್ಕಾರ ಮಾರ್ಪಾಡು ಮಾಡಿರುವ ಎಪಿಎಂಸಿ ಕಾಯ್ದೆಯ ಬಗ್ಗೆಯೂ ಚರ್ಚಿಸಬೇಕಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ತಿಳಿಸಿದರು. ಹೊಸ ಸರ್ಕಾರ 5 ಗ್ಯಾರಂಟಿ ಗಳನ್ನು ಜಾರಿಗೆ ತಂದಿರುವುದು ಎಪಿಎಂಸಿ ಕಾಯ್ದೆ ಮಾರ್ಪಾಡು…
ಬೆಂಗಳೂರು ;- ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ದದ ಪ್ರಕರಣದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಾಗಿ, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಪುರಸ್ಕರಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು. ಅಲ್ಲದೇ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶಿಸಿತು.
ಬೆಂಗಳೂರು ; ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಕಳೆದ ಎರಡು ತಿಂಗಳಲ್ಲಿ ವರ್ಗಾವಣೆಗಳಿಂದ 500 ಕೋಟಿ ರೂ. ವ್ಯವಹಾರ ಆಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರ್ಗಾವಣೆಯಲ್ಲೇ ಕಳೆದ ಎರಡು ತಿಂಗಳಲ್ಲಿ 500 ಕೋಟಿ ರೂ. ವ್ಯವಹಾರ ಆಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ರೀತಿ ಆದರೆ ರಾಜ್ಯ ಉಳಿಯುತ್ತಾ?. ಇವುಗಳಿಗೆ ಎಲ್ಲಿಂದ ದಾಖಲೆ ತರುವುದು? ಎಂದು ಪ್ರಶ್ನಿಸಿದರು. ಮೊನ್ನೆ ಕೃಷಿ ಇಲಾಖೆಗೆ ಸಂಬಂಧಿಸಿದಂತೆ ರೇಟ್ ಕಾರ್ಡ್ ತೋರಿಸಿದ್ದೆ. ಅದಕ್ಕೆ ಪ್ರತಿಯಾಗಿ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ವರದಿಯನ್ನು ತೋರಿಸಿದ್ದರು. ನನ್ನ ಕಾಲದಲ್ಲಿ ಲಂಚ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಯಾವುದಪ್ಪ ನನ್ನ ಕಾಲದಲ್ಲಿ ಅವ್ಯವಹಾರ ಆಗಿದೆ ಎಂದು ನಾನೇ ಭಯಗೊಂಡೆ. ಪತ್ರಿಕಾ ವರದಿ ತರಿಸಿ ನೋಡಿದೆ. ಅದರಲ್ಲಿ 2008 -2013 ರಲ್ಲಿ ಮಾಗಡಿ ಕ್ಷೇತ್ರದಲ್ಲಿ 600 ಕೋಟಿ ರೂ. ಅಕ್ರಮದ ಬಗ್ಗೆ ತಿಳಿಸಿದ್ದಾರೆ. ಇದು ನಾನು ಸಿಎಂ ಆಗುವ…
ಬೆಂಗಳೂರು ;– ಕೇಂದ್ರ ಸರ್ಕಾರವನ್ನು ಟೀಕೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ದಾರಿ ಮಾಡಿಕೊಟ್ಟಿದ್ದಾರೆ ಎಂದು ಬಿ ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅನುಭವಿಗಳಾಗಿರುವ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಸದನವನ್ನು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಳಸಿದ್ದಾರೆ ಎಂದರು. ಸಿದ್ದರಾಮಯ್ಯ ಬರಿ ಕಾಂಗ್ರೆಸ್ ಮುಖ್ಯಮಂತ್ರಿ ಅಲ್ಲ. ಆರು ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮರೆಯಬಾರದು. ದೇಶದ 135 ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ 80 ಸಾವಿರದಿಂದ ಒಂದು ಲಕ್ಷ ಕೋಟಿ ರೂ. ಸಾಲ ಮಾಡಬೇಕಾದ ಪರಿಸ‍್ಥಿತಿ ಎದುರಾಗುವ ಸಾಧ್ಯತೆಗಳಿವೆ. ಮದ್ಯದ ದರ ಏರಿಕೆ ಮಾಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಕಳ್ಳಭಟ್ಟಿ ಹೆಚ್ಚಾಗಲಿದೆ. ಹಿಂದಿನ ಸರ್ಕಾರ ಆರ್ಥಿಕ ಶಿಸ್ತು ಮೀರಿದೆ ಎಂದು ಮಾಡಿರುವ ಟೀಕೆಯಲ್ಲಿ ಸತ್ಯಾಂಶವಿಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ…
ಬೆಂಗಳೂರು: ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ವಿಧಾನಸೌಧದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ಮೋದಿ ಪ್ರಧಾನಿಯಾದ ಮೇಲೆ ಬೆಲೆ ಏರಿಕೆ, ಆರ್ಥಿಕತೆ ಹಾಳಾಗಿದೆ. ಜನರು ಬದುಕಲು ಸಾಧ್ಯವಾಗದ ರೀತಿಯಾಗಿದೆ ಎಂದರು. ಬಿಜೆಪಿ ಮುಗಿಸಲು ವಿಪಕ್ಷಗಳು ಒಂದಾಗಿವೆ ಅನ್ನೋ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲಿಲ್ವಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ 28 ಕಡೆ ಪ್ರಧಾನಮಂತ್ರಿ ಮೋದಿ ಪ್ರಚಾರ ಮಾಡಿದ್ದರು. ಪ್ರಧಾನಿ ಮೋದಿ ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ನಾವು ಗೆದ್ದಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ & ಮಿತ್ರಪಕ್ಷಗಳು ಸೋಲಲಿವೆ ಎಂದರು.
ಬೆಂಗಳೂರು : ಪರಪ್ಪನ ಅಗ್ರಹಾರ ಬಳಿಯ ಎಟಿಎಂನಿಂದ 24 ಲಕ್ಷ ರೂ. ಎಗರಿಸಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್, ಅರುಳ್ ಕುಮಾರ್, ನದೀಂ ಹಾಗೂ ಶ್ರೀರಾಮ್ ಬಂಧಿತ ಅರೋಪಿಗಳು. ಇನ್ನು, ಮುಖ್ಯವಾಗಿ ಎಟಿಎಂಗೆ ಹಣ ಹಾಕಿದ ತಂಡದ ಸದಸ್ಯನಿಂದಲೇ ಎಟಿಎಂ ದರೋಡೆಯಾಗಿದೆ. ಜುಲೈ 5ನೇ ತಾರೀಖು ಎಟಿಎಂಗೆ ಹಣ ತುಂಬಿಸಿದ್ದ ಸಿಎಂಎಸ್ ಕಂಪನಿಯ ಕಸ್ಟೋಡಿಯನ್ ಅರುಳ್ ಕುಮಾರ್ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ. ಎಟಿಎಂಗೆ ಹಣ ತುಂಬಿದ ಕೆಲವೇ ನಿಮಿಷಗಳಲ್ಲಿ ತನ್ನ ಆಪ್ತರಿಗೆ ಮಾಹಿತಿ ನೀಡಿದ್ದ. ನಂತರ ಹೆಲ್ಮೆಟ್ ಹಾಕಿಕೊಂಡು ಬಂದ ಅರುಳ್ ಕುಮಾರ್ ಹಾಗೂ ಆತನ ತಂಡದವರು 25 ಲಕ್ಷ ಹಣವನ್ನು ಎಗರಿಸಿ ಎಸ್ಕೇಪ್ ಆಗಿದ್ದರು. ಪೊಲೀಸರು ಕಾರ್ಯಾಚರಣೆಗಿಳಿದು ಕಳ್ಳರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾಘಟಬಂಧನ್ ಕಾರ್ಯಕ್ರಮಕ್ಕೆ ಮಾಜಿ ಸಚಿವ ಆರ್.ಅಶೋಕ್ ಲೇವಡಿ ಮಾಡಿದರು. ಇದು ಫೋಟೋಶೂಟ್ ಅಷ್ಟೇ. ಎಲ್ಲರೂ ಕೈ ಎತ್ತಿ ಫೋಟೋಶೂಟ್ ಮಾಡ್ತಾರೆ, ಹೋಗ್ತಾರೆ ಎಂದು ಮಾಜಿ ಸಚಿವ ಆರ್. ಅಶೋಕ್ ಕಿಡಿಕಾರಿದರು. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಡೆಸುವವರು ಹೇಗೆ ಅಧಿಕಾರ ದುರುಪಯೋಗ ಮಾಡ್ತಾರೆ ಅನ್ನೋದು ನೋಡ್ತಿದ್ದೀನಿ. ಇದೊಂದು ಫೋಟೋಶೂಟ್ ಅಷ್ಟೆ ಎಂದು ಕುಟುಕಿದರು. ದಾರಿಯುದಕ್ಕೂ ಫ್ಲೆಕ್ಸ್ಗಳನ್ನು ಹಾಕಿದ್ದಾರೆ, ನೋಡಿದ್ದೇನೆ. ಯುಪಿಎ ಲೀಡರ್ಸ್ ಬೆಂಗಳೂರಿಗೆ ಬಂದಿದ್ದಾರೆ. ಅವರಿಗೆ ಸಿದ್ಧಾಂತಗಳಿಲ್ಲ. ಆ ರಾಜ್ಯಗಳಲ್ಲಿ ಒಬ್ಬೊರಿಗೊಬ್ಬರು ಕಚ್ಚಾಡುತ್ತಾರೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಕೇರಳದಲ್ಲಿ ಒಬ್ಬೊರಿಗೊಬ್ಬರು ಜಗಳ ಆಡ್ತಾರೆ. ಅವರಿಗೆ ಟಾರ್ಗೆಟ್ ಇಲ್ಲ, ಅದೊಂದೆ ಅಜೆಂಡಾ ಇರೋದು ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ಧ ನಾವಿದ್ದೇವೆ ಅನ್ನೊದು ಅಷ್ಟೇ ಅವರಿಗೆ. ದೇಶದ ಬಡವರಿಗೆ ಮೋದಿ ಏನು ಅಂತ ಗೊತ್ತಿದೆ. ಮೋದಿ ಅವರಿಂದ ವಿಶ್ವಮಟ್ಟದಲಿ ಭಾರತಕ್ಕೆ ಹೆಸರು ಬಂದಿದೆ. ಚಂದ್ರಯಾನ 3 ಯಶಸ್ವಿಯಾಗಿದೆ. ಫೋಟೋಶೂಟ್ ಅಷ್ಟೆ ಸಭೆಯಿಂದ…