Author: Prajatv Kannada

ಮೈಸೂರು: ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಿಷ್ಣ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಯುವತಿ ಜಿಷ್ಣ(20) ವರ್ಷದ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಈಕೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ನಿವಾಸಿ. ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್​ ಸೈನ್ಸ್​ ವ್ಯಾಸಂಗ ಮಾಡುತ್ತಿದ್ದಳು.ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಚಿತ್ರದುರ್ಗ: ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ನಲ್ಲಿದ್ದ ಚಾಲಕ, ಕನಕಮಣಿ (72) ಮತ್ತು ಆಕಾಶ್ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್‌ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ತುಮಕೂರು: ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ (DK Suresh) ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ (Lok Sabha Elections) ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತೀನೋ ಇಲ್ಲವೋ ಇನ್ನೂ ತೀರ್ಮಾನ ಮಾಡಿಲ್ಲ. ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.

Read More

ದೇವೇಂದ್ರಪ್ಪ ಅವರು ಬಡ ಕುಟುಂಬದಲ್ಲಿ ಜನಿಸಿದ್ದು, ಕಷ್ಟಗಳನ್ನು ಹಾಸುಹೊದ್ದು ಮಲಗಿದವರು. ಒಂದು ಕಾಲದಲ್ಲಿ ಒಂದೊತ್ತಿನ ಊಟಕ್ಕೂ ಕಷ್ಟ ಪಟ್ಟಿದ್ದಾರೆ. 30 ವರ್ಷಗಳ ಕಾಲ ಸಂಸ್ಥೆಯಲ್ಲಿ ಜವಾನನಾಗಿ ಕೆಲಸ ಮಾಡಿರುವ ಇವರು ಇಡೀ ಜಗಳೂರು ತಾಲೂಕಿಗೆ ಚಿರಪರಿಚಿತರು.ಜವಾನ ಕೆಲಸದಿಂದ ನಿವೃತ್ತಿ ಹೊಂದಿದ ಬಳಿಕ ಚುನಾವಣಾ ಕಣಕ್ಕಿಳಿದ ದೇವೇಂದ್ರಪ್ಪ ಮೊದಲ ಬಾರಿಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಛಲಬಿಡದೇ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದು ಟಿಕೆಟ್ ಆಕಾಂಕ್ಷಿಯಾಗಿದ್ದರು. ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಹಾಗು ಡಿಕೆಶಿ ಕೃಪಾಕಟಾಕ್ಷದಿಂದ ಟಿಕೆಟ್ ಕೂಡ ದಕ್ಕಿಸಿಕೊಂಡ ಇವರು ಕೇವಲ 800 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಜಗಳೂರು ಶಾಸಕರಾಗಿ ಆಯ್ಕೆಯಾದರೂ ದೇವೇಂದ್ರಪ್ಪ ತನಗೆ 30 ವರ್ಷಗಳಿಂದ ಅನ್ನ ನೀಡಿದ್ದ ಜವಾನ ವೃತ್ತಿಯನ್ನು ನೆನೆದು ಕೆಲಕಾಲ ತಾವು ದುಡಿದ ಕಾಲೇಜಿನಲ್ಲಿ ಸಂಬಳರಹಿತ ಕೆಲಸ ಮಾಡಿದರು. ನಾನು ರೌಡಿಯಲ್ಲ ಜನಸೇವಕ ‘‘ಚುನಾವಣೆಯಲ್ಲಿ ಸಂದರ್ಭದಲ್ಲಿ ನನ್ನನ್ನು ರೌಡಿ ಎಂದು ಕೆಲವರು ಅಪಪ್ರಚಾರ ಮಾಡಿದರು. ನಾನು ರೌಡಿಯಾಗಿದ್ದರೆ ನನ್ನನ್ನು ಜನ ಗೆಲ್ಲಿಸುತ್ತಿದ್ದರೇ…

Read More

ಬೆಂಗಳೂರು: ಸಿಎಂರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಮೇಶ್ ಶೆಟ್ಟಿ ದೂರು ನೀಡಿದ್ದಾರೆ, ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೈತಿಕ ಪೊಲೀಸ್ ಗಿರಿ ತೋರಿಸಿದ್ದಾರೆ ಎಂದು ಬಿಜೆಪಿ ಲೀಗಲ್ ಸೆಲ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಹೀಗಾಗಿ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸಿದ್ದೇವೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಗಡುವು ನೀಡಲಾಗಿದ್ದು, ವಿಡಿಯೋ ಹಾಗೂ ದಾಖಲೆಗಳನ್ನ ಪೊಲೀಸರು ಪರೀಶೀಲಿಸುತ್ತಿದ್ದು, ಘಟನೆ ಸಂಬಂಧ ಬಹುತೇಕ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.

Read More

ಬೆಂಗಳೂರು: ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರರು ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ್ ಮಾತನಾಡಿ, ಮೆಟ್ರೋ ರೈಲು ನಿಗಮದ ಅಧಿಕಾರಿಗಳ ಸಭೆ ಮಾಡಿ, ಕಾರ್ಯವೈಖರಿ ಪರಿಶೀಲನೆ ಮಾಡಿದ್ದೇನೆ. ಮೆಟ್ರೋ ಕಾರ್ಯನಿರ್ವಹಣೆ, ಮುಂದಿನ ಕಾರ್ಯಯೋಜನೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಮೆಟ್ರೋ ರೈಲು ನಂತರ ನಮ್ಮದು ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಆಗಿದ್ದು, ವಿಶ್ವದರ್ಜೆ ಮಟ್ಟದ ಸೇವೆ ನೀಡುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಯೋಗದಲ್ಲಿ ನಮ್ಮ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. 48 ಕೋಟಿ ರೂ ಆದಾಯದಲ್ಲಿ 42 ಕೋಟಿ ರೂ.ಯಷ್ಟು ಹಣ ಕಾರ್ಯನಿರ್ವಹಣೆಗೆ ಖರ್ಚಾಗುತ್ತಿದೆ. ಬಂಡವಾಳ ಹೂಡಿಕೆ ಹೊರತಾಗಿ ಕೇವಲ 6 ಕೋಟಿ ರೂ ಲಾಭದಲ್ಲಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಹೊರತಾಗಿ ಇತರೆ…

Read More

ಬೆಂಗಳೂರು: ವರ್ಷಪೂರ್ತಿ ಎಸ್​.ಆರ್. ಬೊಮ್ಮಾಯಿ ಜಯಂತಿ ಆಚರಿಸಲಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ನಿನ್ನೆ ಆಯೋಜಿಸಿದ ದಿ. ಎಸ್.ಆರ್. ಬೊಮ್ಮಾಯಿ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಶತಮಾನೋತ್ಸವ ಕಾರ್ಯಕ್ರಮವನ್ನು ಮುಂದಿನ ಒಂದು ವರ್ಷಗಳ ಕಾಲ ಅವರ ಹುಟ್ಟೂರಿನಿಂದ ದೆಹಲಿ ವರೆಗೆ ಆಚರಿಸಲಾಗುವುದು. ರಾಜ್ಯ ಕಂಡ ಅಪರೂಪದ ಮುಖ್ಯಮಂತ್ರಿಗಳಾದ ಎಸ್.ಆರ್. ಬೊಮ್ಮಾಯಿ, ಎಸ್.ಎಂ. ಕೃಷ್ಣ ಮತ್ತು ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಸಾಮ್ಯತೆ ಇದೆ. ಈ ಮೂರೂ ಜನರಿಗೆ ಯಾರೊಬ್ಬರು ಗಾಡ್​ಫದರ್​ಗಳಿಲ್ಲದೆ ಹೋರಾಟದ ಮೂಲಕವೇ ರಾಜಕೀಯ ನಡೆಸಿದವರು. ಅವರವರ ಕಾಲ ಘಟ್ಟಕ್ಕೆ ಸ್ಪಂದಿಸಿ ಹೊಸ ವಿಚಾರ ಮತ್ತು ಮನ್ವಂತರವನ್ನು ಹಾಕಿಕೊಟ್ಟಿದ್ದಾರೆ. ಆದ್ದರಿಂದ ಎಲ್ಲ ನಾಯಕರನ್ನು ಒಂದೇ ಅಳತೆಯಲ್ಲಿ ನೋಡಲು ಸಾಧ್ಯವಿಲ್ಲ. ಅಂದಿನ ಕಾಲಘಟ್ಟ, ಸವಾಲುಗಳು, ದೇಶ ಮತ್ತು ರಾಜ್ಯದ ಪರಿಸ್ಥಿತಿಯನ್ನು ಕಂಡು ಆಡಳಿತ ನಡೆಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರ ದ್ವೇಷ ರಾಜಕಾರಣಕ್ಕೆ ಮುಂದಾಯ್ತಾ ಎಂಬ ಅನುಮಾನಗಳು ವ್ಯಕ್ತವಾಗ್ತಿವೆ..ಹಿಂದೆ ಅವ್ರು ಮಾಡಿದ್ರು ಈಗ ನಾವು ಮಾಡ್ತಿದ್ದೇವೆ ತಪ್ಪೇನು ಅನ್ನೋ ಮನಸ್ಥಿತಿಗೆ ಬಂದಂತಿದೆ..ಬಿಜೆಪಿಯ ಕೇಸರೀಕರಣದ ವಿರುದ್ಧ ಸಮರಸಾರಿದಂತೆ ಕಾಣ್ತಿದೆ..ಬಿಜೆಪಿ ಸರ್ಕಾರ ತಂದ ಕೆಲವು ವಿಚಾರ,ನಿಯಮಗಳಿಗೆ ಬ್ರೇಕ್ ಹಾಕೋಕೆ ಮುಂದಾಗಿದೆ.. ಹಿಂದಿನ ಬಿಜೆಪಿ ಸರ್ಕಾರದ ತಂದಿದ್ದ ಹಲವು ವಿಚಾರ, ನಿಯಮಗಳಿಗೆ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕೋಕೆ ಹೊರಟಿದೆ.. ಕೇಸರೀಕರಣದ ವಿರುದ್ಧ ಸಮರಸಾರಿದೆ..ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಹಿಡಿದು,ಗೋಹತ್ಯೆ ಸಂರಕ್ಷಣಾ ಕಾಯ್ದೆ,ಭೂ ಸುಧಾರಣಾ ತಿದ್ದುಪಡಿಕಾಯ್ದೆಗಳ ವಾಪಸ್ ವರೆಗೆ ಹಲವು ವಿಚಾರಗಳಲ್ಲಿ ಬದಲಾವಣೆ ಬಯಸಿದೆ. ಇನ್ನು ಇದರ ಜೊತೆಗೆ ಪಾರ್ಕ್,ಶಾಲಾ ಕೊಠಡಿ ಗೋಡೆಗಳ ಮೇಲಿನ ಕೇಸರಿ ಬಣ್ಣ ತೆರವು ಮಾಡುವುದಕ್ಕೂ ಮುಂದಾಗಿದೆ.. ಕೊನೆಗೆ ಬಿಬಿಎಂಪಿ ಪೌರ ಕಾರ್ಮಿಕರ ಸಮವಸ್ತ್ರದಲ್ಲೂ ಕೇಸರಿ ಕಲರ್ ಇದೆ ಎಂಬ ಕಾರಣಕ್ಕೆ ಸಮವಸ್ತ್ರ ಬದಲಾವಣೆಗೆ ಹೊರಟಿದೆ. ಹಿಂದುತ್ವದ ಆಧಾರದಮೇಲೆಯೇ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳನ್ನ ಎದುರಿಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೂ ಇದನ್ನೇ ಆಡಳಿತದಲ್ಲಿ ಒಳ ತಂದಿತ್ತು..ಪಠ್ಯ ಪುಸ್ತಕದಿಂದಿಡಿದು,ಗೋ ಹತ್ಯಾ ಸಂರಕ್ಷಣಾ ಕಾಯ್ದೆ,ಮತಾಂತರ ನಿಷೇಧ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​ ನಗರದ 8 ವಿಭಾಗದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು (SSLC Supplementary Exam 2023) ಜೂನ್ 12 ರಿಂದ ಆರಂಭ ಗೊಳ್ಳಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​​ಆರ್​ಟಿಸಿ (KSRTC) ಉಚಿತವಾಗಿ ಪ್ರಯಾಣಿಸಿದ ಬೆನ್ನೇಲೆ ಬಿಎಂಟಿಸಿ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದೆ. ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ  BMTC  ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅವಕಾಶವನ್ನು ಕಲ್ಪಿಸಿದೆ. ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳು ಜೂನ್‌ 12ರಿಂದ ಜೂನ್ 19ರವರೆಗೆ ನಡೆಯುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ. ಮರೆಯದೆ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆಯಬೇಕಾದರೆ ಹಾಲ್ ಟಿಕೆಟ್ ಅವಶ್ಯವಾಗಿದೆ. ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್​ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ…

Read More