Author: Prajatv Kannada

ಬೆಂಗಳೂರು: NEP ರದ್ದುಗೊಳಿಸುವ ಕುರಿತು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ನಾನು ಉನ್ನತ ಶಿಕ್ಷಣ ಸಚಿವ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ಬಳಿಕ, ಇಲಾಖೆ ವತಿಯಿಂದ ಶಿಕ್ಷಣ ನೀತಿ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದರು. ಇದರ ಸಾಧಕ ಭಾದಕದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹ ಮಾಡಲು ನಿರ್ಧಾರಿಸಲಾಗಿದೆ. ಅದರ ಭಾಗವಾಗಿ ಹಿರಿಯರನ್ನು ಕರೆದು ಚರ್ಚೆ ಮಾಡುತ್ತೇವೆ. ಈ ಹಿಂದೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಭೆ ಮಾಡಿದಾಗ ಯಾರೆಲ್ಲಾ ಭಾಗಿಯಾಗಿದ್ದರೋ ಅವರ ಜೊತೆ ನಾವು ಚರ್ಚೆ ಮಾಡಲಿದ್ದೇವೆ ಎಂದು ಸುಧಾಕರ್ ಹೇಳಿದರು. ವಿಶ್ವವಿದ್ಯಾಲಯಗಳ ಕುಲಪತಿಗಳು, ವಿಶ್ರಾಂತ ಕುಲಪತಿಗಳ ನಿಯೋಗವು ಬಂದಿತ್ತು. ಅವರಿಂದಲೂ ಅಭಿಪ್ರಾಯ ಪಡೆಯಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಬಂದು ಒಂದು ವರ್ಷವಾಗಿದೆ. ಅದರ ಬಗ್ಗೆ ಪ್ರಾಧ್ಯಾಪಕರ ಬಳಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

Read More

ಎರಡು ದಿನಗಳ ಹಿಂದೆ ಅದ್ದೂರಿಯಾಗಿ ಹಸೆಮಣೆ ಏರಿದ್ದ ನಟ ಅಭಿಷೇಕ್ ಹಾಗೂ ಅವಿವಾ ಅವರ ಆರತಕ್ಷತೆ ಕಾರ್ಯಕ್ರಮ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ದತೆ ನಡೆದಿದ್ದು ಅರಮನೆ ಮೈದಾನ ಸುಂದರವಾಗಿ ಸಿಂಗಾರಗೊಂಡಿದೆ. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸುತ್ತಿದ್ದು ಇದೀಗ ಸ್ವತಃ ನಟಿ ಹಾಗೂ ಸಂಸದೆ ಸಮಲತ ಮಗನ ಆರತಕ್ಷತೆಗೆ ಆಗಮಿಸುವಂತೆ ವಿಶೇಷಚೇತನ ಅಭಿಮಾನಿಗೆ ಆಹ್ವಾನಿಸಿದ್ದಾರೆ. ಧಾರವಾಡದ ವಿಶೇಷಚೇತನ ಹೆಣ್ಣುಮಗಳು ತಾವು ಸುಮಲತಾ ಅವರ ಅಭಿಮಾನಿಯಾಗಿದ್ದು,ಅಂಬರೀಶ್ ಮತ್ತು ಸುಮಲತಾr ಫೋಟೋಗಳನ್ನು ಕತ್ತರಿಸಿ ಪುಸ್ತಕದಲ್ಲಿ ಅಂಟಿಸಿರುವುದಾಗಿ ಮತ್ತು ಸುಮಲತಾ ಅವರನ್ನು ಭೇಟಿ ಮಾಡಲು ಕಾಯುತ್ತಿರುವುದಾಗಿ ತಿಳಿಸಿದ್ದರು. ಚುನಾವಣೆ ಮತ್ತು ಇತರ ಬಿಡುವಿಲ್ಲದ ಕೆಲಸದಿಂದಾಗಿ ಈವರೆಗೂ ಅಭಿಮಾನಿಯನ್ನು ಸುಮಲತಾ ಖುದ್ದಾಗಿ ಭೇಟಿ ಮಾಡಲು ಆಗಿರಲಿಲ್ಲ. ಫೋನ್ ನಲ್ಲಿ ಮಾತನಾಡಿದ್ದರು. ಇದೀಗ ಖುದ್ದಾಗಿ ಪುತ್ರನ ಆರತಕ್ಷತೆಗೆ ಬರುವಂತೆ ಆಹ್ವಾನ ಪತ್ರಿಕೆಯನ್ನು ಅಭಿಮಾನಿಗೆ ನೀಡಿದ್ದಾರೆ ಸುಮಲತಾ. ಧಾರವಾಡದ ಸೌಭಾಗ್ಯ ಯಮನೂರು ಎನ್ನುವ ಹೆಣ್ಣು ಮಗುವಿಗೆ ಸುಮಲತಾ ಅಂಬರೀಶ್ ಖುದ್ದಾಗಿ ಆಹ್ವಾನ ಪತ್ರಿಕೆ ನೀಡಿ…

Read More

ಭಾರತದ ಪ್ರತಿಭಾವಂತ ಶಾಟ್ ಪೂಟರ್ ಸಿದ್ಧಾರ್ಥ್ ಚೌಧರಿ ದಕ್ಷಿಣ ಕೊರಿಯಾದ ಯೆಚೊಯಾನ್ ನಲ್ಲಿ ನಡೆಯುತ್ತಿರುವ ಏಷ್ಯಾನ್ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಗೆದ್ದರೆ, ಡಿಸ್ಕಸ್ ಥ್ರೋನಲ್ಲಿ ಭಾರತದ ಸುನೀಲ್ ಕುಮಾರ್ (38.79 ಮೀಟರ್) ಸ್ವರ್ಣ ಪದಕ ತಮ್ಮದಾಗಿಸಿಕೊಂಡು ದೇಶಕ್ಕೆ 4 ನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ. 17 ವರ್ಷದ ಭಾರತದ ಯುವ ಶಾಟ್ ಪೂಟರ್ ಸಿದ್ಧಾರ್ಥ್ ಚೌಧರಿ ಪದಕದ ಸುತ್ತಿನಲ್ಲಿ 3ನೇ ಪ್ರಯತ್ನದಲ್ಲಿ 19.52 ಮೀಟರ್ ಶಾಟ್ ಪುಟ್ ಎಸೆದು ಸ್ವರ್ಣ ಪದಕ ಗೆದ್ದು ಈ ಹಿಂದೆ 19.11 ದೂರ ಎಸೆದು ತಾವೇ ನಿರ್ಮಿಸಿದ್ದ ದಾಖಲೆ ಮುರಿದು ಸಂಭ್ರಮಿಸಿದ್ದಾರೆ. ಕತಾರ್ ನ ಜಿಬ್ರಿನ್ ಅಡೌಮ್ ಅಹ್ಮತ್ (18.85 ಮೀ) ಹಾಗೂ ದಕ್ಷಿಣ ಕೊರಿಯಾದ ಪಾರ್ಕ್ ಸಿಹೂನ್ (18.70 ಮೀ) ಕ್ರಮವಾಗಿ 2 ಮತ್ತು 3ನೇ ಸ್ಥಾನ ಅಲಂಕರಿಸಿದ್ದಾರೆ. ಭಾರತದ ಅಥ್ಲೆಟಿಕ್ ಗಳಿಂದ ಪದಕಗಳ ಬೇಟೆ ಜೂನ್ 4 ರಿಂದ 7ರವರೆಗೂ ನಡೆಯಲಿರುವ ಏಷ್ಯಾನ್ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನ…

Read More

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಬುಧವಾರ ಲಂಡನ್‌ನ ದಿ ಓವಲ್‌ ಮೈದಾನದಲ್ಲಿ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಪೈನಲ್‌ ಪಂದ್ಯದಲ್ಲಿ ಸೆಣಸಲಿವೆ. ಅಂದಹಾಗೆ 2023ರ ಐಪಿಎಲ್‌ ಟೂರ್ನಿಯಲ್ಲಿ 600ಕ್ಕೂ ಹೆಚ್ಚಿನ ರನ್‌ ಗಳಿಸಿದ್ದ ವಿರಾಟ್‌ ಕೊಹ್ಲಿ ಇದೀಗ ಫೈನಲ್‌ ಪಂದ್ಯದಲ್ಲಿಯೂ ಅದೇ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಜಿಯೋ ಸಿನಿಮಾ ಜೊತೆ ಮಾತನಾಡಿದ ಎಬಿ ಡಿವಿಲಿಯರ್ಸ್, “ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಯಾವುದೇ ಸರಣಿಯಾದರೂ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರುವ ಆಟಗಾರ ವಿರಾಟ್‌ ಕೊಹ್ಲಿ. ವಿಶ್ವದ ಯಾವುದೇ ಪ್ರದೇಶಕ್ಕೆ ಪ್ರಯಾಣ ಬೆಳೆಸಿದರೂ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಾರೆ. ಅವರು ಕ್ರಿಕೆಟ್‌ ಅನ್ನು ಆನಂದಿಸುವುದನ್ನು ನೋಡಲು ತುಂಬಾ ಖುಷಿಯಾಗುತ್ತದೆ. ಇಂಗ್ಲೆಂಡ್‌ನಲ್ಲಿ ಕೊಹ್ಲಿ ಬ್ಯಾಟಿಂಗ್ ನೋಡಲು ಎದುರು ನೋಡುತ್ತಿದ್ದೇನೆ,” ಎಂದು ಹೇಳಿದ್ದಾರೆ. ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೂ ಮುನ್ನ ಭಾರತ ತಂಡ ಗಾಯಾಳುಗಳ ಸಮಸ್ಯೆಯನ್ನು ಎದುರಿಸಿದೆ. ಜಸ್‌ಪ್ರೀತ್‌ ಬುಮ್ರಾ, ಕೆ.ಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಹಾಗೂ ರಿಷಭ್‌ ಪಂತ್‌ ವಿಭಿನ್ನ ಗಾಯದ ಕಾರಣಗಳಿಂದಾಗಿ ಭಾರತ…

Read More

ಇಂದಿನಿಂದ ಭಾರತ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯವಾಡಲು ಎದುರು ನೋಡುತ್ತಿರುವ ಪ್ಯಾಟ್‌ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಅಜಿಂಕ್ಯ ರಹಾನೆ ತಲೆ ನೋವಾಗಿ ಪರಿಣಮಿಸಿದ್ದಾರೆ. ಇದಕ್ಕೆ ಬಲವಾದ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ. ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಕೆಲ ಬದಲಾವಣೆ ಹೊರತುಪಡಿಸಿ ಇನ್ನುಳಿದಂತೆ ಬಹುತೇಕ ಅದೇ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶುಭಮನ್‌ ಗಿಲ್, ಮೂರನೇ ಸ್ಥಾನದಲ್ಲಿ ಚೇತೇಶ್ವರ್‌ ಪೂಜಾರ, ನಾಲ್ಕನೇ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಮತ್ತು ಐದನೇ ಸ್ಥಾನದಲ್ಲಿ ಅಜಿಂಕ್ಯ ರಹಾನೆ ಆಡುವುದು ಬಹುತೇಕ ಖಚಿತ. ಬರೋಬ್ಬರಿ 15 ತಿಂಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ರಹಾನೆ, ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈಗಾಗಲೇ ಸೂಚನೆ ನೀಡಿದ್ದಾರೆ. ತವರು ನೆಲಕ್ಕಿಂತ ವಿದೇಶಿ ನೆಲದಲ್ಲಿ ಅಜಿಂಕ್ಯ ರಹಾನೆ ಅತ್ಯುತ್ತಮ ಟೆಸ್ಟ್‌ ಕ್ರಿಕೆಟ್‌ ದಾಖಲೆ ಹೊಂದಿದ್ದಾರೆ.

Read More

ಬೆಂಗಳೂರು: ಕುಂಬಳಗೋಡು ಬಳಿ ಇರುವ ಕಣಮಿಣಿಕೆ ಟೋಲ್​ ಪ್ಲಾಜಾದಲ್ಲಿ ಕಾಂಗ್ರೆಸ್​ ಶಾಸಕ ನರೇಂದ್ರ ಸ್ವಾಮಿಗೆ ಟೋಲ್​ ಸಿಬ್ಬಂದಿ ಅವಾಜ್​ ಹಾಕಿರುವ ಘಟನೆ ಜರುಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಭಾನುವಾರ ದಂದು ಬೆಂಗಳೂರಿನಿಂದ ಮಳವಳ್ಳಿಯತ್ತ ಹೊರಟಿದ್ದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ಕಣಮಿಣಿಕೆ ಟೋಲ್​ ಬಳಿ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಕಾರಿನ ಚಾಲಕ ತಮ್ಮ ಬಳಿ ಪಾಸ್​ ಇದೆ ಎಂದು ಹೇಳಿದ್ದರು ಸಹ ಮುಂದಕ್ಕೆ ಬಿಡುವುದಿಲ್ಲ. ಟೋಲ್​ ಸಿಬ್ಬಂದಿ ದುರ್ವತನೆಯನ್ನು ಪ್ರಶ್ನಿಸಿದ ಶಾಸಕ ಹಾಗೂ ಅವರ ಕಾರಿನ ಚಾಲಕನೊಂದಿಗೆ ಏಕವಚನದಲ್ಲೇ ಮಾತನಾಡಲು ಪ್ರಾರಂಭಿಸಿದ್ದಾರೆ. ಘಟನೆಯ ವಿಡಿಯೋ ವೈರಲ್​ ಆಗಿದ್ದು ಶಾಸಕರಿಗೆ ಈ ರೀತಿ ಆದರೆ, ಸಾರ್ವಜನಿಕರ ಕಥೆಯೇನು ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ನರೇಂದ್ರ ಸ್ವಾಮಿ ಕಾರನ್ನು ತಡೆದು ಟೋಲ್​ ಸಿಬ್ಬಂದಿ ನಮ್ಮೊಂದಿಗೆ ಅನಗತ್ಯವಾಗಿ ವಾಗ್ವಾದ ನಡೆಸಿದ್ದಾರೆ. ಏಕವಚನದಲ್ಲೇ ಮಾತನಾಡಿದ್ದಾರೆ ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ಉದ್ಯಾನವನಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಕುರಿತು ಬೆಂಗಳೂರಿನಲ್ಲಿ ಬಿಬಿಎಂಪಿ ಆದೇಶ ಹೊರಡಿಸಿದೆ. ಸಾರ್ವಜನಿಕರಿಗೆ ವಾಯುವಿವಾಹರಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡುವ ಸಲುವಾಗಿ ಬಿಬಿಎಂಪಿ ಈ ಕ್ರಮಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇಷ್ಟು ದಿನ ಬೆಳಗ್ಗೆ 5ರಿಂದ 10 ಮತ್ತು ಸಂಜೆ 4ರಿಂದ 8ರವರೆಗೆ ಉದ್ಯಾನಗಳು ತೆರೆದಿರುತ್ತಿದ್ದವು. ಆದರೆ ಇನ್ನು ಮುಂದೆ ಬೆಳಗ್ಗೆ 5ರಿಂದ 10 ಮತ್ತು ಮಧ್ಯಾಹ್ನ 1.30ರಿಂದ ರಾತ್ರಿ 8ರ ವರೆಗೆ ಉದ್ಯಾನಗಳನ್ನು ತೆರೆದಿರುವಂತೆ ಬಿಬಿಎಂಪಿ ಆದೇಶಿಸಿದೆ. ಪಾರ್ಕ್ ನಿರ್ವಹಣೆ ಕುರಿತ ಕೆಲಸಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ಒಳಗೆ ಮುಗಿಸಿಕೊಳ್ಳಲು ಸೂಚಿಸಿರುವ ಪಾಲಿಕೆ, ಈ ಅವಧಿಯಲ್ಲಿ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೋಸ್ಟ್ ಹಾಕಿದ್ರೆ ತಕ್ಷಣವೇ ಬಂಧಿಸಲಾಗುತ್ತದೆ. ಸೇವಾ ಸಂಸ್ಥೆಗಳ ಜೊತೆಗೆ ನಾವು ಸಂಪರ್ಕದಲ್ಲಿದ್ದೇವೆ. ನಿಂದನೆ, ಹೀಯಾಳಿಸುವುದು ಸೇರಿದಂತೆ ಕೋಮು ಪ್ರಚೋದನೆ ಪೋಸ್ಟ್ ಹಾಕಿದ್ರೆ ಸಹಿಸುವುದಿಲ್ಲ. ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಗ್ರೂಪ್‌ಗಳಲ್ಲೂ ಪ್ರಚೋದನಕಾರಿ ಸಂದೇಶಗಳು ಹಾಗೂ ಸುಳ್ಳು ಸುದ್ದಿಗಳು ಹರಡಿದರೆ ಅಂತಹ ಗ್ರೂಪ್‌ ಅಡ್ಮಿನ್‌ಗಳ ವಿರುದ್ಧ ಕೋಮು ಸಾಮರಸ್ಯಕ್ಕೆ ದಕ್ಕೆ ತಂದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು: ಪಕ್ಷದ 13 ಸಂಸದರ ತೇಜೋವಧೆ ಮಾಡುವ ಕೆಲಸ ನಡೆಯುತ್ತಿದ್ದರೂ ಬಿಜೆಪಿ ನಾಯಕರ ಮೌನವೇಕೆ? ಎಂದು ಬಿಜೆಪಿ ಮುಖಂಡ ಸದಾನಂದಗೌಡ ಬೇಸರ ಹೊರ ಹಾಕಿದ್ದಾರೆ. ಬೆಂಗಳೂರಿನ ವಿವಿ ಟವರ್ ನಲ್ಲಿರುವ ಕಚೇರಿಯಲ್ಲಿ ಮಾತನಾಡಿದ ಅವರು, 13 ಮಂದಿ ಬಿಜೆಪಿ ಸಂಸದರ ಮಾನಹಾನಿ ಆಗುತ್ತಿರುವುದು ನೋಡಿಯೂ ಸ್ಪಷ್ಟನೆ ನೀಡದಿರುವುದು ತರವಲ್ಲ. ಇದು ರಾಜ್ಯಕ್ಕೆ ಬೇರೆ ರೀತಿಯ ಸಂದೇಶ ಹೋಗಲಿದೆ. ಆಗುತ್ತಿರುವ ಗೊಂದಲಕ್ಕೆ ಕೂಡಲೇ ಪರಿಹರಿಸುವ ಕೆಲಸವನ್ನು ಸಂಬಂಧಪಟ್ಟ ನಾಯಕರು ಮಾಡಬೇಕಿದೆ ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.

Read More

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 3 ವರ್ಷ ಕಠಿಣ‌ ಜೈಲು ಶಿಕ್ಷೆ ನೀಡಿ ಬೆಂಗಳೂರಿನ 1ನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎನ್. ರೂಪಾ, ಬೆಂಗಳೂರು ನಗರದ ನಿವಾಸಿ ಪ್ರಬೀರ್ ಅದಕ್ ಅಲಿಯಾಸ್ ಗಣೇಶ್ ಅದಕ್ ಅಪರಾಧಿಯೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಕರಣದಲ್ಲಿ ಸಾಕ್ಷಿದಾರರ ಸಾಕ್ಷ್ಯ ಪರಿಗಣಿಸಿದ ವಿಶೇಷ ನ್ಯಾಯಾಲಯ, ಪ್ರಬೀರ್ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ ಎಂದು ತಿಳಿಸಿ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಪೊಲೀಸರ ಪರ ಸರ್ಕಾರಿ ಅಭಿಯೋಜಕಿ ಪಿ.ಕೃಷ್ಣವೇಣಿ ಅವರು ಪ್ರಬಲ ವಾದ ಮಂಡಿಸಿದ್ದರು.

Read More