Author: Prajatv Kannada

ಬೆಂಗಳೂರು: ಗೃಹಜ್ಯೋತಿ ವಿದ್ಯುತ್ ಯೋಜನೆ ಸೌಲಭ್ಯ ಪಡೆಯುವ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆಯಲ್ಲಿ ಇರಲಿ, ಬಾಡಿಗೆ ಕರಾರು ಪತ್ರ ಬೇಕು. ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ ಅಂತ ಪ್ರತ್ಯಕ್ಷವಾಗಿ ಅರ್ಜಿ ಹಾಕಲು ಅವಕಾಶ ಇದೆ ಎಂದರು. ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆಯಪ್  ಬಿಡುಗಡೆ ಮಾಡುತ್ತೇವೆ, ಜುಲೈ ತಿಂಗಳಿನ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ ಎಂದರು. 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ, 2 ತಿಂಗಳ ಸರಾಸರಿ ಆಧಾರದ ಮೇಲೆ 10% ಹೆಚ್ಚು ವಿದ್ಯುತ್ ಬಳಕೆ ಉಚಿತವಾಗಿರುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ (Congress) ಸರ್ಕಾರದ ಗೃಹಜ್ಯೋತಿ (Gruha Jyoti scheme) ಗ್ಯಾರಂಟಿಗೆ (Guarantee) ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ (KJ George) ಬುಧವಾರ ಸುದ್ದಿಗೋಷ್ಠಿ…

Read More

ಮಧ್ಯಪ್ರದೇಶ: 300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೊರೆದಿದ್ದ 300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸದ್ಯ 20 ಅಡಿ ಆಳದಲ್ಲಿ ಮಗು ಸಿಲುಕಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ. ಆಕೆಯನ್ನು ಸುರಕ್ಷಿತವಾಗಿ ಹೊರತರಲು ಜೆಸಿಬಿ ಹಾಗೂ ಪೊಕ್ಲಾನ್ ಯಂತ್ರದ ಸಹಾಯದಿಂದ ಅಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ. ಮನೆಯ ಸಮೀಪವಿರುವ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ನ ತೆರೆದ ಗುಂಡಿಗೆ ಬಿದ್ದಿದ್ದಾಳೆ. ಸ್ಥಳದಲ್ಲಿಯೇ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜೆಸಿಬಿ ಹಾಗೂ ಪೊಕ್ಲೆನ್ ಯಂತ್ರದ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಸಮಾನಾಂತರ ಹೊಂಡಗಳನ್ನು ತೋಡಿ, ಬಾಲಕಿಯ ಚಲನವಲನಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಂಡು ಆಮ್ಲಜನಕವನ್ನು ಸಹ ಸರಬರಾಜು ಮಾಡಲಾಗುತ್ತಿದೆ.

Read More

ರಾಂಚಿ: ಒಡಿಶಾದ ಬಾಲಸೋರ್ (Balasore Train Tragedy) ನಲ್ಲಿ ರೈಲು ದುರಂತ ಮಾಸುವ ನಡುವೆಯೇ ಜಾರ್ಖಂಡ್‍ (Jharkhand)ನಲ್ಲಿ ಭಾರೀ ರೈಲು ದುರಂತವೊಂದು ತಪ್ಪಿದೆ. ಜಾರ್ಖಂಡ್‍ನ ಬೊಕಾರೊದಲ್ಲಿ ಸಂತಾಲ್ದಿಹ್ ರೈಲ್ವೆ ಕ್ರಾಸಿಂಗ್ ಬಳಿ ರೈಲ್ವೆ ಗೇಟ್‍ಗೆ ಟ್ರಾಕ್ಟರ್ ಅಪ್ಪಳಿಸಿದ್ದು, ಭಾರೀ ಅವಘಡವೊಂದು ತಪ್ಪಿದಂತಾದ ಘಟನೆ ಮಂಗಳವಾರ ಸಂಜೆ ನಡೆದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿ-ಭುವನೇಶ್ವರ ರಾಜಧಾನಿ ಎಕ್ಸ್ ಪ್ರೆಸ್ (Delhi-Bhubaneswar Rajdhani Express) ಸಂಜೆ ಭೋಜುದಿಹ್ ಎನ್ನುವ ರೈಲ್ವೆ ನಿಲ್ದಾಣ ( Bhojudih railway station) ಸಮೀಪಿಸುತ್ತಿತ್ತು. ಇದಕ್ಕೂ ಮುನ್ನ ಬರುವ ಸಂತಾಲ್‍ದಿಹ್ (Santhaldih) ಎಂಬಲ್ಲಿ ರೈಲ್ವೆ ಕ್ರಾಸಿಂಗ್‍ಗೆ ಡಿಕ್ಕಿ ಹೊಡೆದು ಟ್ರಾಕ್ಟರ್ ಸಿಲುಕಿತ್ತು. ದೂರದಿಂದಲೇ ಇದನ್ನು ಗಮನಿಸಿದ ಲೋಕೋ ಪೈಲಟ್ ಕೂಡಲೇ ರೈಲಿನ ವೇಗವನ್ನು ಕಡಿಮೆ ಮಾಡಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಟ್ರಾಕ್ಟರ್ (Tractor) ಕ್ರಾಸಿಂಗ್‍ನಲ್ಲಿ ಸಿಲುಕಿದ್ದರಿಂದ ಚಲಿಸದ ಸ್ಥಿತಿಯಲ್ಲಿತ್ತು. ಹೀಗಾಗಿ ರೈಲು ವೇಗವಾಗಿ ಬಂದಿದ್ದರೆ ಡಿಕ್ಕಿಯಾಗಿ ಮತ್ತೊಂದು ದುರಂತವನ್ನು ನಾವು ನೋಡಬೇಕಿತ್ತು. ಆದರೆ ಇದನ್ನು ಲೋಕೋ ಪೈಲಟ್ ಗಮನಿಸಿ…

Read More

ಬೆಂಗಳೂರು: ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸಿದ್ದಕ್ಕೆ ಬಾಲಕ ಬಲಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ನಡೆದಿದ್ದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟಿದ್ದಾನೆ. ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್​ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ವಾಟರ್ ಟ್ರ್ಯಾಕ್ಟರ್​​ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಭುವನ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಮೈಸೂರು: ಭಜರಂಗ ದಳ ಬ್ಯಾನ್, ಗೋ ಹತ್ಯೆ ನಿಷೇಧ ಕಾಯಿದೆ ವಾಪಸ್ ವಿರೋಧಿಸಿ ಮೈಸೂರು ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ಬಹು ಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಇಲ್ಲದ ಷರತ್ತುಗಳನ್ನು ವಿಧಿಸಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಶ್ರೀವತ್ಸ ಆರೋಪಿಸಿದರು.

Read More

ಮೈಸೂರು: ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸ್ ರವರ ಪುಣ್ಯಸ್ಮರಣೆಯ  ಅಂಗವಾಗಿ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್  ರವರ ಜೊತೆ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭಾಗವಹಿಸಿ ಡಿ. ದೇವರಾಜ್ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾನಮನಗಳನ್ನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯ್ ಕುಮಾರ್ ರವರು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ ರವರು, ನಗರ ಕಾಂಗ್ರೆಸ್ ನ ಅಧ್ಯಕ್ಷರಾದ ಮೂರ್ತಿ ರವರು,ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಲತಾಸಿದ್ದಶೆಟ್ಟಿ ರವರು,ಮಾಜಿ ಮಹಾಪೌರರಾದ ಪುಷ್ಪಾ‌ಲತಾ ಚಿಕ್ಕಣ್ಣ ರವರು,   ಮುಖಂಡರಾದ ಸೆನೆಟ್ ವೆಂಕಟೇಶ್ ರವರು, ಮಾರುತಿ ರವರು, ಶಿವಣ್ಣ ರವರು, ಸೋಮಸುಂದರ್ ರವರು, ಶಿವರಾಮ್ ರವರು, ಹಾಗೂ ಹಿಂದುಳಿದ ವರ್ಗಗಳ ಸಮಿತಿಯ ಪದಾಧಿಕಾರಿಗಳು. ಉಪಸ್ಥಿತರಿದ್ದರು.

Read More

ಮಂಡ್ಯ: ಸಹಾಯ ಕೇಳಿಕೊಂಡು ಇನ್ನು ಮುಂದೆ ಯಾರೂ ನನ್ನ ಮನೆ ಬಳಿ ಬರಬೇಡಿ ಎಂದು ಜನರಿಗೆ ಜೆಡಿಎಸ್ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ತಿಳಿಸಿದ್ದಾರೆ. ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ಮಾತನಾಡಿದ ಸುರೇಶ್ ಗೌಡ, ಇನ್ಮುಂದೆ ಯಾವುದೇ ಮದುವೆ ಸಮಾರಂಭಗಳಿಗೆ ಬಂದರೂ ಏನೂ ಮಾಡುವುದಿಲ್ಲ. ನಂಬಿದವರಿಂದಲೇ ನನಗೆ ಮೋಸ ಆಗಿದೆ. ನಾನೀಗ ಸೋತಿದ್ದೇನೆ. ಚುನಾವಣೆಯ ಸೋಲಿನಿಂದ ನನ್ನ ಮನಸ್ಸಿಗೆ ಬೇಸರವಾಗಿ ಮನಸ್ಸು ಕಲ್ಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕ ಕಷ್ಟ ಹೇಳಿಕೊಂಡು ಯಾರೂ ಕೂಡ ನನ್ನ ಮನೆ ಬಳಿ ಬರಬೇಡಿ. ನಾನು ಚುನಾವಣೆಯಲ್ಲಿ ಸೋತು ಕಷ್ಟದಲ್ಲಿದ್ದೇನೆ. ಆದರೂ ಬಂದು ಸಹಾಯ ಕೇಳುತ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read More

ತುಮಕೂರು: ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ 30 ಮಂದಿಗೆ ಗಾಯವಾಘಿರುವ ಘಟನೆ ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, 50 ಸಾವಿರಕ್ಕೂ ಹೆಚ್ಚು ಜನರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.. ಆದ್ರೆ ಈ ದುರ್ಘಟನೆ ಬಳಿಕ ಗಾಯಾಳುಗಳು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಳಗಾವಿ: ಗೋ ಹತ್ಯೆ ನಿಷೇಧ ಕಾಯ್ದೆ (Cow Slaughter Prohibition Act) ಬಗ್ಗೆ ಸರ್ಕಾರದಿಂದ ಸಮೀಕ್ಷೆ ನಡೆಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದ ಕುರಿತು ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ (Nippani) ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ-ಮನೆಗಳಿಗೆ ತೆರಳಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಂದರ್ಶನ ನಡೆಸುತ್ತೇವೆ. ಮನೆ ಮನೆಗೆ ಹೋಗಿ ಈ ಕಾಯ್ದೆ ಬೇಕೋ ಬೇಡವೋ ಎಂದು ಜನರನ್ನು ಕೇಳುತ್ತೇವೆ. ಬಹುಮತದ ಆಧಾರದ ಮೇಲೆ ಗೋಹತ್ಯೆ ಕಾಯ್ದೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಒರಿಜಿನಲ್ ಪಠ್ಯಪುಸ್ತಕವನ್ನು ಕಳೆದ ಬಾರಿ ಬಿಜೆಪಿ ತಿರುಚಿದೆ. ಬಸವೇಶ್ವರ, ಅಂಬೇಡ್ಕರ್ ಸೇರಿದಂತೆ ಬಹಳಷ್ಟು ಇತಿಹಾಸ ತಿರುಚಲಾಗಿದೆ. ಪಠ್ಯ ಪುಸ್ತಕ ಬದಲಾವಣೆ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಪ್ರಣಾಳಿಕೆ ಪ್ರಕಾರ ಪಠ್ಯ ಪುಸ್ತಕ ಬದಲಾವಣೆ ಮಾಡೇ ಮಾಡುತ್ತೇವೆ. ನುರಿತ ತಜ್ಞರ ಸಮಿತಿ ರಚಿಸಿ ಪಠ್ಯ ಬದಲಾವಣೆ ಮಾಡುತ್ತೇವೆ. ಕಳೆದ ಬಾರಿ ನಡೆದ ಲೋಕೋಪಯೋಗಿ…

Read More

ಮೈಸೂರು: ಚುನಾವಣೆ ವೇಳೆ ಕಾಂಗ್ರೆಸ್​ನವರು ಷರತ್ತು ಬಗ್ಗೆ ಹೇಳಿರಲಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಕಂಡಿಷನ್​​ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಗಳು ಸಿಗಲ್ಲ ಅಂತಾ ಜನರಿಗೆ ಈಗ ಅರ್ಥವಾಗುತ್ತಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಅಂತಿದ್ದಾರೆ. ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತೆ ಅಂತಾ ಮುಂದೆ ಗೊತ್ತಾಗುತ್ತೆ. ಜನರಿಂದ ವೋಟ್​​​ ಹಾಕಿಸಿಕೊಳ್ಳಲು ಉಚಿತ ಎಂದು ಹೇಳಿದ್ದಾರೆ ಎಂದು ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ.

Read More