Author: Prajatv Kannada

ಬೆಂಗಳೂರು: ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ. ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ. ನಗರದಲ್ಲಿ ಸುದ್ದಿಗಾರರೊಂದಿಗೆ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡುತ್ತಾ ಗೃಹಲಕ್ಷ್ಮಿ ಗೆ ಕಂಡಿಷನ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಸರ್ಕಾರ ನಾವು ತೀರ್ಮಾನ ಮಾಡುವುದಾಗಿ ಹೊಸ ವರಸೆ ತೆಗೆದರು. ಒಬ್ಬರಿಗೆ ಒಂದು ರೂಪಾಯಿ ಕೊಡಬೇಕಾದ್ರೆ ಅಕೌಂಟ್ ಇರಬೇಕು. ವೋಟರ್ ಐಡಿ (Voter ID), ಆಧಾರ್ ಕಾರ್ಡ್ (Adhar Card) ಇರಬೇಕು. ಅವರದ್ದೇ ಬ್ಯಾಂಕ್ ಅಕೌಂಟ್ ಇರಬೇಕು. ನಮ್ಮ ಬಳಿ ಎಲ್ಲಾ ದಾಖಲೆ ಇದೆ. ಮನೆ ಯಜಮಾನಿ ಅವರೇ…

Read More

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ, ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಗೆ ನೀಡಿಲ್ಲ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ  ಸ್ಪಷ್ಟನೆ ನೀಡಿದ್ದಾರೆ. ಇನ್ನೂ ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ

Read More

ಬೆಂಗಳೂರು: ಪದ್ಮನಾಭ ನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಭೇಟಿ ಮಾಡಿದ್ದಾರೆ. ಮನೆಯ ಗೇಟ್ ಬಳಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಹೂಗುಚ್ಛ ನೀಡಿ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ದೇವೇಗೌಡರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ, ಗೌಡರ ಆರೋಗ್ಯ ವಿಚಾರಿಸಿದರು. ಈ ವೇಳೆ ಇಬ್ಬರು ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ ಎಂ ಫಾರೂಕ್‌ ಹಾಜರಿದ್ದರು. 2024 ಕ್ಕೆ ಲೋಕಸಭೆ ಚುನಾವಣೆ ಬರುತ್ತಿರುವ ಹಿನ್ನೆಲೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

Read More

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಮತಗಳನ್ನು ಪಡೆದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. 4 ದಿನ 31 ಜಿಲ್ಲೆಗಳ ಪ್ರಮುಖರ ಜೊತೆ ಮಾಜಿ ಸಿಎಂ ಹೆಚ್​​ಡಿಕೆ ಸಭೆ ನಡೆಸಲಿದ್ದಾರೆ. ಇಂದು ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲಾ ನಾಯಕರ ಜತೆ ಸಭೆ ನಡೆಸಲಿದ್ದಾರೆ. BBMP, ಜಿ.ಪಂ., ತಾ.ಪಂ. ಚುನಾವಣೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಹಾಗೂ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

Read More

ಬೆಂಗಳೂರು: ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಈ ಸಂಬಂಧ ಯಲಹಂಕದಲ್ಲಿ ಮಾತನಾಡಿದ ಅವರು, ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ. ಅಲ್ಲದೆ, ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ನುಡಿದರು. ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರಕಾರ ನಮ್ಮದು. ನಮ್ಮ ಸರಕಾರ ಸರ್ವರಿಗೂ ಸಮಪಾಲು ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದ ಅವರು, ನಮ್ಮ ಸರಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲ ಧರ್ಮ, ಎಲ್ಲ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ ಎಂದು ನುಡಿದರು

Read More

ಬೆಂಗಳೂರು: ಸುಳ್ಳು ಕೇಸ್ ದಾಖಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಇನ್ಸ್​​​ಪೆಕ್ಟರ್​​ಗಳನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ ಮಂಜುನಾಥ್ ಹಾಗೂ ಹಿಂದೆ‌ ಇದೇ ಠಾಣೆಯ ಹಾಗೂ ಹಾಲಿ ದೇವನಹಳ್ಳಿ ಠಾಣೆಯ‌ ಇನ್ಸ್​​​​ಪೆಕ್ಟರ್​ ಲಕ್ಷ್ಮಣ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. 2022ರಲ್ಲಿ ಅಮಾಯಕ ವೈದ್ಯರನ್ನ ಕರೆತಂದು ಡ್ರಗ್ಸ್ ಕೇಸ್​ನಡಿ ಅಂದಿನ ಇನ್ಸ್​​​ಪೆಕ್ಟರ್​ ಲಕ್ಷ್ಮಣ್ ನಾಯಕ್ ಅವರು ಎಫ್‌ಐಆರ್ ದಾಖಲಿಸಿದ್ದರು. ವರ್ಗಾವಣೆ ಬಳಿಕ ಬಂದ ಮಂಜುನಾಥ್ ವೈದ್ಯರ ಮೇಲೆ ಚಾರ್ಜ್ ಶೀಟ್ ಹಾಕಿದ್ದರು. ಇಬ್ಬರು ಕಾನೂನು ಉಲ್ಲಂಘನೆ ಮಾಡಿ ಅಮಾಯಕ ಡಾಕ್ಟರ್​ ಸಿಲುಕಿಸಿದ ಹಿನ್ನೆಲೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ವರದಿ ನೀಡಿದ್ದರು. ಡಿಸಿಪಿ ವರದಿ ಆಧಾರದ ಮೇಲೆ ಇಬ್ಬರನ್ನೂ ಕಮೀಷನರ್ ಬಿ ದಯಾನಂದ್‌ ಸಸ್ಪೆಂಡ್ ಮಾಡಿದ್ದಾರೆ.

Read More

ಬೆಂಗಳೂರು: ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಕಳಿಸಬೇಕಾಗುತ್ತದೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಯತ್ನಾಳ್ ಟ್ವೀಟ್ ಮೂಲಕ ಕಿಡಿಕಾರಿದರು. ಇದೀಗ ಯತ್ನಾಳ್ ಟ್ವೀಟ್ ಗೆ ಖಾರವಾಗಿ ರೀ ಟ್ವೀಟ್ ಮಾಡಿರುವ ಎಂಬಿ ಪಾಟೀಲ್, ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು. ಜೈಲಿಗೆ ಕಳುಹಿಸುತ್ತೇವೆ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು? ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಉಲ್ಲೇಖಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು  ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇಲಾಖೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಡಿಕೆಶಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಜಲಮಂಡಳಿ ಕಾರ್ಯದ ಬಗ್ಗೆ ಸೂಚನೆ ನೀಡಲು ಬಂದಿದ್ದ ನನಗೆ ಅವರ ಗೋಳು ಕೇಳುವಂತಾಯಿತು. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಆದರೆ, ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್‌ ಬಿಲ್‌ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬೃಹತ್‌…

Read More

ಬೆಂಗಳೂರು: ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚಿಸಿ ಪಠ್ಯ ಪರಿಷ್ಕರಣೆ ಗೊಂದಲ ನಿವಾರಿಸಲು ಪಠ್ಯ ಪರಿಷ್ಕರಣೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು: ಕಾಲಮಿತಿಯಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಚಿವ ಜಮೀರ್ ಅಹಮದ್ ಖಾನ್​ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ವಸತಿ ಸಚಿವ ಜಮೀರ್, ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬ ಆದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ. ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು. ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕು. ಪ್ರತಿ ಯೋಜನೆಗೆ ಬೇಕಾದ ಹಣಕಾಸು ಹೊಂದಿಕೊಂಡು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಆದ ನಂತರವಷ್ಟೇ ಮತ್ತೊಂದು ಯೋಜನೆ ಪ್ರಾರಂಭಿಸಬೇಕು. ಆಗ ಮಾತ್ರ ನಂಬಿಕೆ ಬರಲು ಸಾಧ್ಯ. ಇದು ಕಡ್ಡಾಯವಾಗಿ ಪಾಲನೆ ಆಗಲೇಬೇಕು ಎಂದು ಸೂಚನೆ ನೀಡಿದರು.

Read More