Author: Prajatv Kannada

ಬೆಂಗಳೂರು: ನಿರ್ಮಾಪಕ ಎನ್.ಕುಮಾರ್ ವಿರುದ್ಧ ಮಾನನಷ್ಟ ನೋಟಿಸ್ ಕಳುಹಿಸಿದ್ದ ಕಿಚ್ಚ ಸುದೀಪ್  ಅವರಿಗೆ ಕುಮಾರ್ ಅವರಿಂದ ಯಾವುದೇ ಉತ್ತರ ಬಾರದೇ ಇರುವ ಕಾರಣಕ್ಕಾಗಿ ಇಂದು ಸುದೀಪ್ ಕೋರ್ಟಿಗೆ ಹಾಜರಾಗಿ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಸಂಬಂಧ ಆಗಸ್ಟ್ 17ಕ್ಕೆ ಅರ್ಜಿ ವಿಚಾರಣೆ ನಿಗದಿಯಾಗಿದೆ. ನನ್ನ ವಿರುದ್ಧ ಯಾರೆಲ್ಲ ಆರೋಪ ಮಾಡಿದ್ದಾರೋ ಅವರಿಗೆ ಕಾನೂನು ಮೂಲಕ ಉತ್ತರ ಕೊಡಬೇಕಿದೆ. ಹಾಗಾಗಿ ಕೋರ್ಟಿಗೆ ಹಾಜರಾಗುತ್ತಿರುವುದಾಗಿ ಕಿಚ್ಚ ಸುದೀಪ್ (Kiccha Sudeep) ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಕಷ್ಟಪಟ್ಟು ಹೆಸರು ಸಂಪಾದಿಸಿದ್ದೇನೆ. ಅದನ್ನು ಹಾಳು ಮಾಡಿಕೊಳ್ಳಲು ನಾನು ಸಿದ್ದನಿಲ್ಲ. ಜನರಿಗೆ ತಪ್ಪು ಸಂದೇಶ ಹೋಗಬಾರದು ಎನ್ನುವ ಕಾರಣಕ್ಕಾಗಿ ಕೋರ್ಟಿಗೆ ಬಂದಿರುವೆ. ಅಲ್ಲಿಯೇ ಅವರಿಗೆಲ್ಲ ಉತ್ತರ ನೀಡುತ್ತೇನೆ’ ಎಂದರು ಕಿಚ್ಚ. ಕಿಚ್ಚ ಸುದೀಪ್ ಬೆಂಗಳೂರಿನ ಕಾರ್ಪೊರೇಷನ್ ಹತ್ತಿರದ ಎಸಿಎಂಎಂ ನ್ಯಾಯಾಲಯಕ್ಕೆ ಕಿಚ್ಚ ಸುದೀಪ್ ಹಾಜರಾಗಿದ್ದು, ಕುಮಾರ್ ವಿರುದ್ಧ ಕ್ರಿಮಿನಲ್ ಡಿಪಾಮೇಷನ್ (Defamation) ಕೇಸ್ ಹೂಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಹಿಂದೆ ಕುಮಾರ್ ಅವರಿಗೆ…

Read More

ಹುಬ್ಬಳ್ಳಿ: ವಿಧಾನ‌ಮಂಡಲದಲ್ಲಿ ಪ್ರತಿಪಕ್ಷದವರು ಕೇಳಿದ ಪ್ರಶ್ನೆಗಳಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಸರಿಯಾಗಿ ಉತ್ತರ ಕೊಡದೇ ಪಲಾಯನವಾದ ಮಾಡುತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ(KS Eshwarappa) ಆರೋಪಿಸಿದ್ದಾರೆ. ನಗರದಲ್ಲಿ ತಮ್ಮನ್ನ ಭೇಟಿಯಾದ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಉಭಯ ಸದನಗಳಲ್ಲಿ ಯಾವುದೇ ವಿಷಯಗಳ ಕುರಿತು ಗಂಭೀರ ಚರ್ಚೆ ನಡೀತಾ ಇಲ್ಲ. ಐದು ಗ್ಯಾರಂಟಿಗಳ ಆಧಾರದ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಕಾಂಗ್ರೆಸ್ ಜನರಿಗೆ ಐದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿತು. ಆದರೆ ಅಧಿಕಾರ ಬಂದ ನಂತರ ಮೊದಲ ಕ್ಯಾಬಿನೆಟ್ ನಲ್ಲಿಯೇ ಐದು ಗ್ಯಾರಂಟಿ ಈಡೇರಿಸುವ ಭರವಸೆ ನೀಡಿದ್ದರು ಈಗ ಯಾವುದೇ ರೀತಿಯ ನೀಡಿದ ಭರವಸೆ ಅಂದಿನ ಕ್ಯಾಬಿನೆಟ್ ನಲ್ಲಿ ಸರಿಯಾಗಿ ಈಡೇರಿಸಲು ಮುಂದಾಗಲಿಲ್ಲ. ನಿರುದ್ಯೋಗಿ ಯುವಕರಿಗೆ ಒಬ್ಬರಿಗೂ ಒಂದು ರೂಪಾಯಿ ಕೊಟ್ಟಿಲ್ಲ. ಹೆಣ್ಣು ಮಕ್ಕಳಿಗೆ ಗೃಹ ಲಕ್ಷ್ಮೀ ಯೋಜನೆ ಅಡಿ ಒಬ್ಬರಿಗೆ 2000 ರೂಪಾಯಿ ಕೊಡುತ್ತೇವೆ ಅಂತಾ ಹೇಳಿದ್ದರು. ಇದುವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ಅನ್ಬಭಾಗ್ಯ ಯೋಜನೆ…

Read More

ಮಂಡ್ಯ: ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಕಳಪೆ ಬೀಜ, ಗೊಬ್ಬರ ಮಾರಾಟಗಾರರ ಪರವಾನಗಿ ರದ್ದು ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳಪೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳ ರಚನೆ ಮಾಡಲಾಗಿದೆ. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಉಪ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಕಳೆದ 4 ವರ್ಷಗಳಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದ 61 ಪ್ರಕರಣಗಳು ಹಾಗೂ, ಕಳಪೆ ರಸಗೊಬ್ಬರ ಮಾರಿದ 26 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಕಳಪೆ ಗುಣಮಟ್ಟದ ರಸಗೊಬ್ಬರ ಮಾದರಿಗಳ ವಿರುದ್ಧ 187 ಪ್ರಕರಣ, ಕಡಿಮೆ ಗುಣಮಟ್ಟದ ಬೀಜಗಳ ವಿರುದ್ಧ 774 ಪ್ರಕರಣ ದಾಖಲಿಸಲಾಗಿದೆ. ಇನ್ನು 19 ಪ್ರಕರಣಗಳಿಗೆ ಮೊಕದ್ದಮೆ ದಾಖಲಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

Read More

ದೊಡ್ಡಬಳ್ಳಾಪುರ: ವರ್ಗಾವಣೆ ಮಾಡದ ಹಿನ್ನೆಲೆಯಲ್ಲಿ ಮನನೊಂದು ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ‌ ಮಾಡಿಕೊಂಡ ದುರ್ದೈವಿ. ಮೂಲತಃ ಚಿತ್ರದುರ್ಗ ತಾಲೂಕಿ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಕೆ.ಯು. ವಿರೂಪಾಕ್ಷ ಹಾಗೂ ಹೊಳಲ್ಕೆರೆ ತಾಲೂಕು ನಲ್ಲಿಕಟ್ಟೆ ಗ್ರಾಮದ ಎನ್.ಟಿ.ಜ್ಯೋತಿ ಅವರನ್ನು 13 ವರ್ಷದ ಹಿಂದೆ‌ ವಿವಾಹವಾಗಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಕಳೆದ 12 ವರ್ಷಗಳಿಂದ‌ ದೊಡ್ಡಬಳ್ಳಾಪುರ ತಾಲೂಕಿನ‌ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದ ಜ್ಯೋತಿ ಅವರು 9 ತಿಂಗಳ ಹಿಂದೆ ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು. ಅಂದಿನಿಂದ ಸೋಮೇಶ್ವರ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಎಲ್ಲಿಯೂ ಖಾಲಿ ಜಾಗ ಇರದ ಕಾರಣ ವರ್ಗಾವಣೆ ಆಗಿರಲಿಲ್ಲ. ಈ ವಿಚಾರದಲ್ಲಿ ಮನನೊಂದಿದ್ದರು. ಜು.14ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಯಲಹಂಕದ ದೊಡ್ಡಬೆಟ್ಟಹಳ್ಳಿಗೆ ಹೋಗಿದ್ದಾಗ ಮನೆಯಲ್ಲಿ ನನ್ನ ಪತ್ನಿ ಒಬ್ಬರೇ ಇದ್ದರು. ಶುಕ್ರವಾರ ರಾತ್ರಿ 8.30 ಗಂಟೆಯಲ್ಲಿ…

Read More

ಧಾರವಾಡ : ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಜನಮನ್ನಣೆಯಿಂದಾಗಿ, ಈಗ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಹುಟ್ಟಿಸಿದೆ ಎಂದು ಸಚಿವ ಸಂತೋಷ ಲಾಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ. ಅದು ಬಿಜೆಪಿ ಜೆಡಿಎಸ್ ಪಕ್ಷಕ್ಕೆ ಬಿಟ್ಟ ವಿಚಾರ, ನಾವು ಕಳೆದ ಭಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಳ್ಳುವುದು ಬಿಜೆಪಿ ಕಾಂಗ್ರೆಸ್ ಪಕ್ಷಗಳ ನಿಲುವು ಎಂದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭಯ ಎದುರಾಗಿದೆ. ಬಿಜೆಪಿ ಬೆಂಕಿ ಹಂಚುವ ಕೆಲಸ ಮಾಡುತ್ತಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಬಿರುಕು ಮೂಡಿಸುವ ಕೆಲಸ ಮಾಡಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿಯವ ಜನಪ್ರಿಯತೆ ಹೆಚ್ಚುತ್ತಲೇ ಇದೆ, ರಾಹುಲ್ ಗಾಂಧಿ ಅದಾನಿ ಮೋದಿಗೆ ಏನು ಸಂಬಂಧ ಎಂದು ಕೇಳುವುದಕ್ಕೆ ಶುರು ಮಾಡಿದ್ದಾರೆ. ಆಗ ಅವರನ್ನು ಅಸಂವಿಧಾನಿಕ ಪದದ ಲೋಪದೋಷ ಪದ ಹುಡುಕಿ ಲೋಕಸಭೆ ಸದಸ್ಯತ್ವ…

Read More

ಬೆಂಗಳೂರು: ನಟ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ ಮಾಡಿದ್ದ ಆರೋಪಿ ನಿಶಾ ನರಸಪ್ಪಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 39ನೇ ಎ.ಸಿ.ಎಮ್.ಎಮ್ ಕೋರ್ಟ್ ಆದೇಶ ಹೊರಡಿಸಿದೆ. ಸ್ಯಾಂಡಲ್‌ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ, ಬಾಲನಟಿ ವಂಶಿಕಾ ಹೆಸರು ಬಳಸಿ ಮಹಿಳೆಯೊಬ್ಬಳು ವಂಚನೆ ಮಾಡಿರುವ ಆರೋಪದ ಮೇಲೆ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಯಶಸ್ವಿನಿ ಜೊತೆ ಮೋಸ ಹೋಗಿರುವ ಇತರರಿಂದ ನಿಶಾ ವಿರುದ್ಧ ದೂರು ದಾಖಲಿಸಲಾಗಿತ್ತು. ಆರೋಪಿ ನಿಶಾರನ್ನ ಪೊಲೀಸರು ಬಂಧಿಸಿದ್ದರು. ಮಕ್ಕಳ ಟ್ಯಾಲೆಂಟ್ ಶೋ, ಮಕ್ಕಳ ಮಾಡೆಲಿಂಗ್, ಇವೆಂಟ್ ಮ್ಯಾನೇಜ್‌ಮೆಂಟ್ ನಡೆಸುತ್ತೇನೆ ಎಂದು ಹೇಳಿ ಮಕ್ಕಳ ಪೋಷಕರಿಂದ ಲಕ್ಷಾಂತರ ರೂ. ಹಣವನ್ನು ನಿಶಾ ನಂಬಿಸಿ ದೋಚಿದ್ದಾರೆ ಎನ್ನಲಾಗುತ್ತಿದೆ. ಸಾಕಷ್ಟು ಜನರಿಂದ ಹಣ ಪಡೆದು ಮೋಸ ಹೋದ ಕೆಲವರು ನಿಶಾರ ವಿರುದ್ಧ ದೂರು ನೀಡುವ ಮೂಲಕ ಕಿಡಿಕಾರಿದ್ದಾರೆ. ಹೀಗಿರುವಾಗ ಈ ನಡುವೆ ಮಾಸ್ಟರ್ ಆನಂದ್‌ರ ಪುತ್ರಿ ವಂಶಿಕಾ ಹೆಸರು ಹೇಳಿಕೊಂಡು ಹಲವರಿಗೆ ಮೋಸ…

Read More

ಬೆಂಗಳೂರು: ಮಂಡ್ಯ ನಂತರ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದ್ವೇಷದ ರಾಜಕಾರಣದ ಆರೋಪ ಕೇಳಿಬಂದಿದೆ. K.R.ನಗರ ಶಾಸಕ ಡಿ.ರವಿಶಂಕರ್ ಮೇಲೆ ಈ ಆರೋಪ ಕೇಳಿ ಬಂದಿದೆ. ಅರಕೆರೆ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವಂತೆ ಒತ್ತಡ ಹಾಕುತ್ತಿದ್ದು, ಬಿಡುವಂತೆ ಹೇಳುತ್ತಿರುವ ಪ್ರಿನ್ಸಿಪಾಲ್ ಸ್ವಾಮಿ ನೌಕರರಿಗೆ ಸೂಚಿಸುತ್ತಿದ್ದಾರೆ.ಕೆಲಸ ಬಿಡಿ ಇಲ್ಲ ಅಂದರೆ ಶಾಸಕ, ಶಾಸಕರ ಪಿಎರನ್ನು ಭೇಟಿ ಮಾಡಿ, ನಿಮ್ಮ ಸಮಸ್ಯೆ ಸರಿಪಡಿಸಿಕೊಂಡು ಬನ್ನಿ ಎಂದು ಹೇಳುತ್ತಿದ್ದು, ಮನನೊಂದ ನೌಕರ ಚಲುವರಾಜು ಅವರು ಕಣ್ಣೀರಿಟ್ಟಿದ್ದಾರೆ. ಚಲುವರಾಜು ಅವರಿಗೆ ಹೊರ ಗುತ್ತಿಗೆ ಆಧಾರದಲ್ಲಿ ಸಾ.ರಾ.ಮಹೇಶ್ ಅವರು ಕೆಲಸ ಕೊಡಿಸಿದ್ದರು. ಅದರಂತೆ 15 ವರ್ಷದಿಂದ ಮುಖ್ಯ ಅಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಬೆಂಬಲಿತ ಎಂಬ ಕಾರಣಕ್ಕೆ ಕೆಲಸದಿಂದ ತೆಗೆಯುತ್ತಿರುವ ಆರೋಪ ಕೇಳಿಬಂದಿದೆ. ಇಷ್ಟು ದಿನ ಕೆಲಸ ಮಾಡಿದ್ದೀರಿ, ಈಗ ನಮ್ಮ ಬೆಂಬಲಿಗರಿಗೆ ಕೊಡಬೇಕು ಎಂದು ನೇರವಾಗಿ ಶಾಸಕ ಡಿ.ರವಿಶಂಕರ್ ಖಾಸಗಿ ಪಿಎ ನವೀನ್ ಹೇಳಿದ್ದಾರಂತೆ.

Read More

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್​ಟಿ ಪಾವತಿದಾರರಾಗಿರತಕ್ಕದ್ದಲ್ಲ. ರೇಷನ್ ಕಾರ್ಡ್​ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್​ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು.

Read More

ಮಂಡ್ಯ: ಚಿಕ್ಕಮಗಳೂರಿಗೆ ಮಳೆಗಾಗಿ ಪೂಜೆ ಮಾಡಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ ಎಂದ ವರದಿ ಇದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (Chaluvarayaswamy) ಹೇಳಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಆಶಾದಾಯಕವಾಗಿ ಇರಬೇಕಾದದ್ದು ಅನಿರ್ವಾಯತೆ. ಕೆಆರ್​ಎಸ್ ಒಳಹರಿವು ಕೂಡ ಕಡಿಮೆ ಆಗಿದೆ. ಸಮಸ್ಯೆಯಂತು ಇದೆ. ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು. ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು ಎಂದರು.

Read More

ಬೆಂಗಳೂರು ;- ರಾಜಧಾನಿ ಬೆಂಗಳೂರಿನ ವರ್ತೂರು ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ, ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಪುಡಿಪುಡಿ ಮಾಡಿ ಪುಂಡಾಟ ಮೆರೆದಿದ್ದ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದಾಗ ಮುಂದುಗಡೆ ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ‌ ಮಾಡುತ್ತಿದ್ದ ಆರೋಪಿಗಳಿಗೆ ದಾರಿ ಬಿಡುವಂತೆ ಹಾರ್ನ್ ಮಾಡಿದ್ದರು. ಇದರಿಂದ‌ ಕುಪಿತಗೊಂಡ ಆರೋಪಿಗಳು ಕೆಲ ದೂರ ಹೋದ ಬಳಿಕ ಕಾರನ್ನು ಅಡ್ಡಗಟ್ಟಿದ್ದಾರೆ.‌ ಅಪಾಯದ ಮೂನ್ಸೂಚನೆ ಅರಿತ ಕಾರು ಚಾಲಕ ತಕ್ಷಣವೇ ಕಾರನ್ನು ತಾನು ಬಂದ ದಾರಿಯಲ್ಲೇ ರಿವರ್ಸ್ ತೆಗೆದುಕೊಂಡು ತಪ್ಪಿಸಿಕೊಂಡು ಹೋಗಿದ್ದರು. ಆದರೆ, ಇಷ್ಷಕ್ಕೆ ಸುಮ್ಮನಾಗದ ಆರೋಪಿಗಳು ಕಾರು ಫಾಲೋ ಮಾಡಿಕೊಂಡು ಬಂದು ಗುಂಜೂರು ಬಳಿ ಅಪಾರ್ಟ್‌ಮೆಂಟ್ ಸಮೀಪ ಬಂದು ಗಲಾಟೆ ಮಾಡಿದ್ದರು. ಎಂಟ್ರಿ ಗೇಟ್ ಬಳಿ ಕಾರು ಅಡ್ಡಗಟ್ಟಿ ಗಾಜುಗಳನ್ನು ಒಡೆದು ದಾಂಧಲೆ‌ ಮಾಡಿದ್ದರು. ಆರೋಪಿಗಳು ದುಷ್ಕೃತ್ಯ ಹಾಗೂ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

Read More