ಬೆಂಗಳೂರು: ಎಷ್ಟು ವಿದ್ಯುತ್ ಬಳಸುತ್ತಿದ್ದಿರೋ ಅಷ್ಟೇ ಬಳಸಬೇಕು. ಹೆಚ್ಚು ವಿದ್ಯುತ್ ಬಳಸಿದರೆ ದುಂದು ವೆಚ್ಚ ಆಗುತ್ತೆ. ನಾವೂ ಬದುಕಬೇಕು, ಸಮಾಜದಲ್ಲಿರೋರೂ ಬದುಕಬೇಕು. ಹಾಗಾಗಿ ಕೆಲವು ಮಿತಿ, ನಿಬಂಧಗಳನ್ನು ಹಾಕಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಮಾತನಾಡುತ್ತಾ ಫ್ರೀ ವಿದ್ಯುತ್ ವಾರ್ಷಿಕ ಸರಾಸರಿ ಲೆಕ್ಕಕ್ಕೆ ಬಿಜೆಪಿ ಟೀಕೆ ಸಂಬಂಧ ಪ್ರತಿಕ್ರಿಯಿಸಿ ವಾರ್ಷಿಕ ಸರಾಸರಿ ಲೆಕ್ಕ ಸಮರ್ಥಿಸಿಕೊಂಡರು. ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ವರ್ಷದಲ್ಲಿ ಬಳಸಿದ ವಿದ್ಯುತ್ ನ ಸರಾಸರಿ ಮೇಲೆ ನಾವು ಚಾರ್ಜ್ ಹಾಕ್ತೇವೆ. ಇಲ್ಲ 200 ಯೂನಿಟ್ ಹೇಳಿದ್ದೀರಿ ಅಷ್ಟೇ ಕೊಡಿ ಅಂತಿದ್ದಾರೆ ಎಂದರು. ಎಷ್ಟು ವಿದ್ಯುತ್ ಬಳಸ್ತಿದಾರೋ ಅಷ್ಟೇ ಬಳಸಬೇಕು. ಹೆಚ್ಚು ಬಳಸಿದರೆ ದುಂದು ವೆಚ್ಚ ಆಗುತ್ತೆ. ಮನುಷ್ಯನಿಗೆ ವಿವೇಕ ಇರಬೇಕು. ನಾವೂ ಬದುಕಬೇಕು, ಸಮಾಜದಲ್ಲಿರೋರೂ ಬದುಕಬೇಕು. ಹಾಗಾಗಿ ಕೆಲವು ಮಿತಿಗಳನ್ನು ಹಾಕಬೇಕಾಗುತ್ತದೆ ಎಂದು ಸರಾಸರಿ ವಿದ್ಯುತ್ ಮೇಲಿನ ಉಚಿತ ವಿದ್ಯುತ್ ಸಮರ್ಥಿಸಿಕೊಳ್ಳುವ ಮೂಲಕ ಬಿಜೆಪಿ ನಾಯಕರಿಗೆ ಕೌಂಟರ್ ಕೊಟ್ಟರು.
Author: Prajatv Kannada
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದರು. ಈ ಹೇಳಿಕೆಗೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವುದು ಹಿಟ್ಲರ್ ಸರ್ಕಾರ. ಇಂತಹ ಬೆದರಿಕೆಗಳು ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಮಾನ್ಯ. ಆದ್ರೆ ನಾವು ನ್ಯಾಯಾಲಯದ ಒಳಗೆ ಹೋರಾಡುತ್ತೇವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಅಧಿಕಾರ ಸ್ವೀಕರಿಸಿದ ಹದಿನೈದು ದಿನಗಳೊಳಗೆ, ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಈ ಬಹಿರಂಗ ಬೆದರಿಕೆಗಳು ಸಿದ್ದರಾಮಯ್ಯ ಸರ್ಕಾರದ ಸಾಮಾನ್ಯ ಲಕ್ಷಣವಾಗಿದೆ ಎಂದು ರಾಷ್ಟ್ರೀಯ ಬಿಜೆಪಿ ಯುವ ಘಟಕದ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಎಂಬಿ ಪಾಟೀಲರ ಹೇಳಿಕೆಗೆ ಕಿಡಿಕಾರಿದ್ದಾರೆ.
ಬೆಂಗಳೂರು: ಬೆಂಗಳೂರು ಶಾಸಕರು, ಸಂಸದರು, ಪರಿಷತ್ ಸದಸ್ಯರ ಜೊತೆ ಡಿಸಿಎಂ ಡಿ.ಕೆ.ಶಿವಕಲುಮಾರ್ ಸಭೆ ನಡೆಸುತ್ತಿದ್ದು ಈ ವೇಳೆ ‘ಶಾಂತಿಯುತ ಕರ್ನಾಟಕ’ ಹೆಲ್ಪ್ಲೈನ್ ಆರಂಭಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಸಲಹೆ ನೀಡಿದ್ದಾರೆ. ಯಾವುದೇ ದ್ವೇಷ ಹರಡುವುದನ್ನು ತಡೆಯಲು ಹೆಲ್ಪ್ಲೈನ್ ಆರಂಭಿಸಿ, ಅಭಿವೃದ್ಧಿ, ಬ್ರ್ಯಾಂಡ್ ಕರ್ನಾಟಕ ಕಾಪಾಡಲು ಸಹಾಯವಾಣಿ ಆರಂಭಿಸಿ ಎಂದು ಸಚಿವರಾದ ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಡಿಕೆ ಶಿವಕುಮಾರ್ಗೆ ಮನವಿ ಮಾಡಿದರು.
ಭುವನೇಶ್ವರ: ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ಎನಿಸಿಕೊಂಡ ಬಾಲಸೋರ್‌ನಲ್ಲಿ ನಡೆದ ರೈಲುಗಳ ಅಪಘಾತವಾಗಿ (Odisha Train Tragedy) ಇದೀಗ ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಅಪಘಾತವಾಗಿ 51 ಗಂಟೆಗಳಲ್ಲಿ ಮೊದಲ ರೈಲು ಹಳಿಯಲ್ಲಿ ಸಂಚರಿಸಿದ್ದು, ಇದೀಗ ಕಾರ್ಯಾಚರಣೆ ಪುನರಾರಂಭವಾಗಿದೆ. ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ನಡೆದ ತ್ರಿವಳಿ ರೈಲು ಅಪಘಾತದಲ್ಲಿ (Train Accident) 275 ಜನರು ಸಾವನ್ನಪ್ಪಿದ್ದರು ಹಾಗೂ 1,100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಘಟನೆ ಬಳಿಕ ದುರಸ್ತಿ ಮಾಡಲಾದ ಹಳಿಗಳ ಮೂಲಕ ಮೊದಲ ರೈಲು ಸಂಚರಿಸಿದ ಸಂದರ್ಭ ರೈಲ್ವೆ ಸಚಿವರು ಖುದ್ದಾಗಿ ಸ್ಥಳದಲ್ಲಿ ಹಾಜರಿದ್ದರು. ಎರಡೂ ಹಳಿಗಳನ್ನು ದುರಸ್ತಿ ಮಾಡಲಾಗಿದೆ. 51 ಗಂಟೆಗಳಲ್ಲಿ ರೈಲುಗಳ ಸಂಚಾರವನ್ನು ಸಾಮಾನ್ಯಗೊಳಿಸಲಾಗಿದೆ. ಈಗಿನಿಂದ ರೈಲುಗಳ ಸಂಚಾರ ಮತ್ತೆ ಪ್ರಾರಂಭವಾಗುತ್ತದೆ. ಟ್ರ್ಯಾಕ್ ಲೈನ್ ಈಗ ರೈಲಿಗೆ ಸರಿಹೊಂದಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಘಟನೆಯೇನು? 3 ರೈಲುಗಳಾದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಹಾಗೂ…
ಬೆಂಗಳೂರು: ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ಬಗ್ಗೆ ಚರ್ಚೆ ಆಗಲಿದೆ. ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಸಾಹಿತಿಗಳು, ಚಿಂತಕರ ಅಭಿಪ್ರಾಯ ಸಂಗ್ರಹಿಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ಸಚಿವ ಮಧುಬಂಗಾರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಪುಸ್ತಕ ಬದಲಾಯಿಸಲು ಸಾಧ್ಯವಿಲ್ಲದಿದ್ದರೆ ಮುಂದಿನ ವರ್ಷ ಪಠ್ಯಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ 3 ಕೋಟಿ ಪಠ್ಯ ಪುಸ್ತಕಗಳು ಮುದ್ರಣವಾಗಿವೆ. ಇವುಗಳನ್ನು ಹಿಂಪಡೆದು ಹೊಸದಾಗಿ ಮುದ್ರಣ ಮಾಡಲು 1 ತಿಂಗಳು ಬೇಕಾಗುತ್ತದೆ. ಅಲ್ಲಿವರೆಗೆ ಮಕ್ಕಳಿಗೆ ಪಾಠ ಇಲ್ಲದಂತಾಗುತ್ತದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕು.
ಬೆಂಗಳೂರು: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಕೋಲಾಹಲಾ ಎಬ್ಬಿಸಿದೆ. ಅದರ ಬಗ್ಗೆ ತೀವ್ರ ಮುಜುಗರ ಉಂಟಾಗಿದೆ. ಈ ಮಧ್ಯೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಚಿಂತನೆ ವಿಚಾರಕ್ಕೆ ಸಂಬಂಧಿಸಿ ಪ್ರಾಣಿಗಳನ್ನು ಕೊಲ್ಲಬಾರದು, ನಾನು ಪ್ರಾಣಿಹತ್ಯೆ ನಿಷೇಧದ ಪರ. ಆದರೆ ಸಂಪುಟದಲ್ಲಿ ಈ ಬಗ್ಗೆ ಹೇಳುವುದಿಲ್ಲ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. 84 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬ ನಿಲುವು. 84 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂದರು.
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಗೋಹತ್ಯೆ ನಿಷೇಧ ಕಾಯ್ದೆ ಯಾಕೆ ಮುನ್ನೆಲೆಗೆ ಬರ್ತಿದೆ ಗೊತ್ತಿಲ್ಲ ಎಂದು ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ತಿಳಿಸಿದರು. ಅವರಿಗೆ ಅನಿಸಿದ್ದನ್ನು ಪಶುಸಂಗೋಪನಾ ಸಚಿವರು ಹೇಳಿದ್ದಾರೆ. ಕಾಯ್ದೆ ಬಗ್ಗೆ ಅಧಿವೇಶನ ಪ್ರಾರಂಭಕ್ಕೂ ಮುನ್ನ ಚರ್ಚೆ ಆಗಲಿದೆ. ಯಾವ ಬಿಲ್ ತರಬೇಕು, ಯಾವ್ಯಾವ ಬಿಲ್ ತರಬಾರದೆಂಬ ಚರ್ಚೆ ನಡೆಯುತ್ತೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಹೂಂ ಎನ್ನಬೇಕು ಎಂದರು.
ಬೆಂಗಳೂರು: ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ಚಕ್ರವರ್ತಿ ಸೂಲಿಬೆಲೆ ತಿರುಗೇಟು ಕೊಟ್ಟಿದ್ದಾರೆ. ಪಶುಸಂಗೋಪನೆ ಸಚಿವರು ಅಂದ್ರೆ ಪಶುಗಳನ್ನು ಕಾಪಾಡುವುದು. ಪಶುಸಂಗೋಪನೆ ಸಚಿವರೇ ಹಸು ಕಡಿಯಬೇಕು ಅಂತಾ ಹೇಳ್ತಾರೆ. ಸಚಿವರು ಹಸು ಕಡಿಯುವುದಕ್ಕೆ ಬೇರೆ ಬೇರೆ ಕಾರಣ ಕೊಡ್ತಿದ್ದಾರೆ. ಇದನ್ನೆಲ್ಲ ಬಿಟ್ಟು ಮೊದಲು 200 ಯೂನಿಟ್ ಕರೆಂಟ್ ಕೊಡಲಿ. ಯಾವುದೇ ಷರತ್ತು ಇಲ್ಲದೆ ಕರೆಂಟ್ ಕೊಡುವ ಕೆಲಸ ಮಾಡಲಿ. ಮುಸ್ಲಿಮರಿಂದ ಶೇ.80ರಷ್ಟು ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನರು ಸರ್ಕಾರದ ನಡೆಯನ್ನು ಸೂಕ್ಷ್ಯವಾಗಿ ಗಮನಿಸ್ತಿದ್ದಾರೆ. ಸರ್ಕಾರ ತನ್ನ ಅಸ್ತ್ರವನ್ನು ಹಿಟ್ಲರ್ ರೀತಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಡಿಕೆ ಶಿವಕುಮಾರ್ ತಡವಾಗಿ ವಿಧಾನಸೌಧಕ್ಕೆ ಆಗಮಿಸಿದ್ದು ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ಶಾಸಕರು, ಸಂಸದರು, ಪರಿಷತ್ ಸದಸ್ಯರ ಜೊತೆ ಸಭೆ ನಡೆಯುತ್ತಿದೆ. ಮಳೆ ನೀರು ಸಮಸ್ಯೆ, ಬಿಬಿಎಂಪಿ ಚುನಾವಣೆ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ. ಡಿಸಿಎಂ ಕರೆದ ಸಭೆಗೆ ಕಾಂಗ್ರೆಸ್ ಶಾಸಕರೇ ಗೈರಾಗಿದ್ದಾರೆ. ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ, ಹ್ಯಾರೀಸ್, ಸಚಿವ ಬೈರತಿ ಸುರೇಶ್ ಗೈರು.
ಬೆಂಗಳೂರು: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023ರ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದರು. ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ. ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಹೇಳಿದ್ದಾರೆ.