ದೇವದುರ್ಗ;– ತಾಲೂಕಿನಲ್ಲಿ ನರೇಗಾ ಕಾಮಗಾರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದ ಹಿನ್ನೆಲೆ ಕಳೆದ ಮೂರು ವರ್ಷಗಳಲ್ಲಿ ನಡೆದ ಕಾಮಗಾರಿ ಬಗ್ಗೆ ತನಿಖೆ ಆರಂಭವಾಗಿದೆ. 15ನೇ ಹಣಕಾಸಿನ ಯೋಜನೆ ಅಡಿ ಕಾಮಗಾರಿಗಳ ಬಗ್ಗೆ ತನಿಖೆ ಶುರುವಾಗಿದೆ. 2020ರಿಂದ 2023ರ ಮಾರ್ಚ್ ವರೆಗೆ ನಡೆದ ದೇವದುರ್ಗ ತಾ. 33 ಗ್ರಾ.ಪಂಗಳಲ್ಲಿ ಕಾಮಗಾರಿ ಬಗ್ಗೆ ತನಿಖೆ ಆರಂಭವಾಗಿದ್ದು, ತನಿಖೆ ವೇಳೆ 14-15ನೇ ಸಾಲಿನ ಹಣಕಾಸು ಯೋಜನೆ ಅಡಿ ಕೈಗೊಂಡ ಕಾಮಗಾರಿ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ. ಕಾಮಗಾರಿಗಳ ಸಾಮಾಗ್ರಿಗಳನ್ನು ಪೂರೈಸುವ ಸಂಸ್ಥೆಗೆ 65 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, ಒಂದೇ ಸಂಸ್ಥೆಗೆ 65ಕೋಟಿ ರೂ. ಪಾವತಿ ಬಗ್ಗೆ ತನಿಖೆ ನಡೆಸಲಾಗುತ್ತಿದೆ. 7 ಅಧಿಕಾರಿಗಳು ಒಳಗೊಂಡ 17 ತಂಡಗಳಿಂದ ತನಿಖೆ ಶುರುವಾಗಿದ್ದು, 28 ಗ್ರಾ.ಪಂ.ಗಳಿಗೆ ತನಿಖಾ ತಂಡ ಭೇಟಿ ನೀಡಿ ಕಾಮಗಾರಿಗಳ ಸ್ಥಳ ಪರಿಶೀಲನೆವ ಮಾಡಿದ್ದಾರೆ. ಗ್ರಾ.ಪಂ.ಸಿಬ್ಬಂದಿ ಮತ್ತು ಅಧಿಕಾರಿಗಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ಮಾಹಿತಿ ಸಂಗ್ರಹ ಮಾಡುತ್ತಿದ್ದು, ಸಾಮಾಜಿಕ ಲೆಕ್ಕ ಪರಿಶೋಧನಾ ನಿರ್ದೇಶನಾಲಯದಿಂದ ತನಿಖೆಗೆ ಆದೇಶಿಸಲಾಗಿದೆ.
Author: Prajatv Kannada
ರೇಷನ್ ಕಾರ್ಡ್‌ದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿಯೊಂದನ್ನ ನೀಡಿದೆ. ಹೌದು, ಕಾರ್ಡ್ ಕಳೆದು ಹೋದವರಿಗೆ ಆಹಾರ ಇಲಾಖೆಯಿಂದ ಹೊಸ ಮಾರ್ಗವನ್ನ ಸೂಚಿಸಿದೆ. ರಾಜ್ಯದ ಜನತೆಗೆ ಸಹಾಯ ಆಗುವ ರೀತಿ ಹೊಸ ಮಾರ್ಗವನ್ನ ಸೂಚಿಸಿದೆ. ಪಡಿತರ ಚೀಟಿ ಕಳೆದು ಹೋದ್ರೆ ನಕಲಿ ಚೀಟಿ ಪಡೆಯಬಹುದಾಗಿದೆ. ಕೆಲವೊಂದು ಬಾರಿ ಪಡಿತರ ಕಳ್ಳತನವಾಗುವುದು ಸಹಜ. ಹೀಗಾಗಿ ಹೊಸ ಮಾರ್ಗದ ಮೂಲಕ ನಕಲಿ ಚೀಟಿಯನ್ನ ಪಡೆಯಬಹುದಾಗಿದೆ. ನಕಲಿ ಪಡಿತರ ಚೀಟಿ ಪಡೆಯುವುದು ಹೇಗೆ? ರಾಜ್ಯದ ಆಹಾರ ಇಲಾಖೆ ವೆಬ್‌ಸೈಟ್‌ಗೆ http://ahara.kar.nic.in/ ಲಾಗಿನ್ ಆಗಿ ನಕಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್‌ಗೆ ಕ್ಲಿಕ್ ಮಾಡಿದರೆ ಮೊದಲು ಒಂದು ಫಾರ್ಮ್ ಓಪನ್ ಆಗುತ್ತೆ, ಫಾರ್ಮ್‌ನಲ್ಲಿ ನಿಮ್ಮ ಹೆಸರು, ಪಡಿತರ ಚೀಟಿ, ಸಂಖ್ಯೆ ಮಾಹಿತಿ ನಮೂದು ಮಾಡಿ ಡಾಕ್ಯುಮೆಂಟ್ ನಕಲನ್ನು ಆಪ್ಲೋಡ್ ಮಾಡಬೇಕು. ಅಪ್ಲೋಡ್ ಮಾಡಿದ ನಂತರ ಸಬ್ಮಿಟ್ ಮಾಡಬೇಕು. ಮಾಹಿತಿ ಸರಿಯಾಗಿದ್ರೆ ಕೆಲವೇ ದಿನದಲ್ಲಿ ಪಡಿತರ ಚೀಟಿ ಲಭ್ಯವಾಗಲಿದೆ. ಬಹುತೇಕ ಮಂದಿ ಪಡಿತರ ಚೀಟಿಯನ್ನ ಕಳೆದುಕೊಂಡಿದ್ದಾರೆ. ಅಂತವರು ಇದನ್ನ ಸದುಪಯೋಗ ಪಡಿಸಿಕೊಳ್ಳಲು ಅಹಾರ ಇಲಾಖೆ ಮನವಿ ಮಾಡಿದೆ.
ಹುಬ್ಬಳ್ಳಿ;- ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಬೆಳಗಿನ ವಾಯುವಿಹಾರಕ್ಕೆ ಹೋಗಿದ್ದ ಉಸ್ತುವಾರಿ ಸಚಿವ ಸಂತೋಷ ಲಾಡ್ ರೈತರೊಬ್ಬರಮೇವಿನ ಗಾಡಿಯನ್ನು ತಳ್ಳಿ ಅವರ ಮನೆಯವರೆಗೂ ಮುಟ್ಟಿಸಿದ್ದಾರೆ. ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ರೈತ ದಂಪತಿ ಹುಲ್ಲು ತೆಗೆದುಕೊಂಡು ಹೋಗುತ್ತಿದ್ದರು. ಆಗ ಸಚಿವ ಲಾಡ್ ಅವರು ತಮ್ಮ ಕಲಘಟಗಿ ನಿವಾಸಕ್ಕೆ ಬಂದಾಗ ಎಂದಿನಂತೆ ಅದೇ ಮಾರ್ಗದಲ್ಲಿ ವಾಯುವಿಹಾರಕ್ಕೆ ಹೋಗುತ್ತಿದ್ದರು. ರೈತನ ಹುಲ್ಲಿನ ಬಂಡಿ ನೋಡಿ ಖುಷಿಯಾಗಿ ರೈತನ ಬಳಿ ಬಂಡಿ ತೆಗೆದುಕೊಂಡು ಅವರ ಮನೆವರೆಗೆ ತಲುಪಿಸಿದ್ದು, ಲಾಡ್ ಸರಳತೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಜಯನಗರ;- ಜಿಲ್ಲೆಯ ಹಂಪಿಯಲ್ಲಿ ಜಿ-೨೦ ಪ್ರತಿನಿಧಿಗಳು ಯೋಗ ಮಾಡಿದ್ದಾರೆ. ವಿಶ್ವಕ್ಕೆ ಭಾರತದ ಹೆಮ್ಮೆಯ ಕೊಡುಗೆ ಯೋಗ ಎಂಬುವುದು ಎಲ್ಲರಿಗೂ ತಿಳಿದಿರುವ ವಿಷಯ. ಅದರಂತೆ ಕಳೆದ ಮೂರು ದಿನಗಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜಿ-೨೦ ಪ್ರತಿನಿಧಿಗಳು ಭಾಗಿಯಾಗಿದ್ದು, ಲಂಬಾಣಿ ಕಸೂತಿ ಕಲೆಯ ಗಿನ್ನಿಸ್ ದಾಖಲೆ ಕಾರ್ಯಕ್ರಮ, ತೆಪ್ಪದ ದೋಣಿ ವಿಹಾರ, ಹಂಪಿಯಲ್ಲಿ ಜಿ-೨೦ ಪ್ರತಿನಿಧಿಗಳು ಸಸಿ ನೆಟ್ಟಿದ್ದು, ಈಗ ಯೋಗದಲ್ಲಿ ಭಾಗಿಯಾಗಿದ್ದಾರೆ. ನಾನಾ ರಾಷ್ಟಗಳ ಪ್ರತಿನಿಧಿಗಳು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು.
ಬೆಂಗಳೂರು ;– ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆಯಲು ಪೊಲೀಸ್ ನಿರ್ಲಕ್ಷ್ಯವೇ ಕಾರಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾಪಗೊಂಡಿದ್ದು, ಈ ಘಟನೆ ನಡೆಯಲು ಪೊಲಿಸ್ ನಿರ್ಲಕ್ಷ್ಯವೇ ಕಾರಣ ವಿಶೇಷ ಎಂದರು. ಬೊಮ್ಮಾಯಿ ಪ್ರಸ್ತಾಪಿಸಿದ ವಿಷಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನಾವಳಿ, ಆರೋಪಿಗಳ ಬಂಧನದ ಬಗ್ಗೆ ಸುದೀರ್ಘವಾಗಿ ಉತ್ತರಿಸಿದರು.
ಬೆಂಗಳೂರು ;– ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 245.84 ಕೋ. ರೂ.ಗಳ ಪ್ರಸ್ತಾವನೆ ಬಂದಿದ್ದು, ಅನುದಾನದ ಕೊರತೆ ಇರುವುದರಿಂದ ಎಲ್ಲ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತಿಲ್ಲ. ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದರು. ಉಡುಪಿ ಜಿಲ್ಲೆಯಿಂದ ಪ್ರವಾಸೋದ್ಯಮ ಇಲಾಖಾ ಯೋಜನಾನುಷ್ಠಾನಕ್ಕೆ 61.15 ಕೋಟಿ ರೂ. ಪ್ರಸ್ತಾವನೆ ಬಂದಿದ್ದರೆ, ದ.ಕ. ಜಿಲ್ಲೆಯಿಂದ 63.51 ಕೋಟಿ ರೂ. ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ 121.18 ಕೋಟಿ ರೂ. ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಈ ಪೈಕಿ ತಲಾ 50 ಲಕ್ಷ ರೂ. ವೆಚ್ಚದ ಮರೋಳಿಯ ಶ್ರೀಸೂರ್ಯನಾರಾಯಣ ದೇವಸ್ಥಾನ ಹಾಗೂ ಅತ್ತಾವರದ ಶ್ರೀ ಮಂಗಳಾದೇವಿ ದೇವಸ್ಥಾನದ ಯಾತ್ರಿ ನಿವಾಸ ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದೆ ಎಂದರು.
ಬೆಂಗಳೂರು ;– ರಾಜಧಾನಿ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದ ಜೋಡಿ ಕೊಲೆ ನಡೆದ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್. ನಾಲ್ಕೈದು ದುಷ್ಟರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.ಡಿಕೆ ಹಳ್ಳಿ ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ ಕಪಿಲ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕೂಡಲೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಕಪಿಲ್ ಉಸಿರು ಚೆಲ್ಲಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಬೆಂಗಳೂರು ;- ನಗರದಲ್ಲಿ ಹಾಡಹಗಲೇ ಏರೋನಿಕ್ಸ್ ಕಂಪನಿ CEO, MD ಬರ್ಬರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಡಬ್ಬಲ್ ಮರ್ಡರ್…ಅ ಮೂರು ಗಂಟೆಗಳು ಪೊಲೀಸರ ಅಪರೇಷನ್ ಹೀಗಿತ್ತು ನೋಡಿ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಬ್ಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಫೆಲಿಕ್ಸ್, ವಿನಯ್ ರೆಡ್ಡಿ, ಶಿವು ಬಂಧಿತರು. ಆರೋಪಿಗಳು, ಕೊಲೆ ಮಾಡಿ ಕುಣಿಗಲ್ ನಲ್ಲಿ ಸಿಕ್ಕಿದ್ದಾರೆ. ಶಿವಮೊಗ್ಗ ಮೂಲದ ಫೆರಿಕ್ಸ್ , ರೂಪೇನಾ ಅಗ್ರಹಾರದ ಮೂಲದ ವಿನಯ್ ಫೆಲಿಕ್ಸ್ ಅನ್ನ ಈತ್ತಿಚೀಗೆ ಕೆಲಸದಿಂದ ಫಣೀಂದ್ರ ತೆಗೆದು ಹಾಕಿದ್ದ. ಅಷ್ಟೇ ಅಲ್ಲದೇ ಕೆಲಸದ ವೇಳೆಯಲ್ಲಿ ಫೆರಿಕ್ಸ್ ಗೆ ಫಣೀಂದ್ರ ಬೈಯ್ಯುತ್ತಿದ್ದ. ಅದೇ ದ್ವೇಷದ ಹಿನ್ನೆಲೆ ಫಣೀಂದ್ರನನ್ನ ಫೆಲಿಕ್ಸ್ ಹತ್ಯೆ ಮಾಡಿದ್ದಾರೆ. ಆರೊಪಿಗಳಿಗೆ ವಿನುಕುಮಾರ್ ನನ್ನ ಹತ್ಯೆ ಮಾಡುವ ಉದ್ದೇಶ ವಿರಲಿಲ್ಲ. ಫಣೀಂದ್ರನ ಹತ್ಯೆ ವೇಳೆ ತಡೆಯಲು ಹೋಗಿದ್ದ ವಿನುಕುಮಾರ್ , ಈ ವೇಳೆ ಅತನನ್ನ ಕೂಡ ಹತ್ಯೆ ಮಾಡಿ ಮೂವರು ಕಿರಾತಕರು…
ಬೆಂಗಳೂರು ;- ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಸಮಸ್ಯೆ ಪರಿಹರಿಸಲು ಪ್ರಯತ್ನ ಪಡಲಾದುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಿಸುವಲ್ಲಿ ವೇತನಾನುದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಣದ ಹಕ್ಕು ಕಾಯ್ದೆಯ ನಿಯಮ 4ಕ್ಕೆ ತಿದ್ದುಪಡಿ ತಂದಿರುವ ಪರಿಣಾಮ ಇಂದು 9 ಲಕ್ಷಕ್ಕೂ ಅಧಿಕ ಮಕ್ಕಳು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಈ ಬಗ್ಗೆ ಅಂಕಿ-ಅಂಶ ತರಿಸಿಕೊಂಡು ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು. ಕೇಂದ್ರದಲ್ಲಿ ಯುಪಿಎ ಸರ್ಕಾರದ ಕಾರ್ಯಕಾಲದಲ್ಲಿ ಬಡ ಮಕ್ಕಳಿಗೂ ಉತ್ತಮ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರ್ಟಿಇ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ಲಕ್ಷಾಂತರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕಂತೂ ಈ ಕಾಯ್ದೆ ವರದಾನವಾಗಿತ್ತು. ಈ…
ಬೆಂಗಳೂರು ;- ರಾಜ್ಯದಲ್ಲಿ ಶಕ್ತಿ ಯೋಜನೆ ಸಕ್ಸಸ್ ಆಗಿದ್ದು, ತಿಂಗಳಲ್ಲೇ 16.73 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವರೆಗೂ 16.73 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 401.94 ಕೋಟಿಯಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವರು ಯೋಜನೆ ಯಶಸ್ವಿಗೆ ಸಹಕರಿಸಿದ ಪ್ರಯಾಣಿಕರು ಮತ್ತು ಸಿಬ್ಬಂದಿ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಜೂನ್ 11 ರಂದು ಚಾಲನೆಗೊಂಡ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ “ಶಕ್ತಿ” ಯೋಜನೆಯು ಇಂದಿಗೆ ಒಂದು ತಿಂಗಳು ಪೂರೈಸಿದ್ದು, ಸಾರಿಗೆ ಸಂಸ್ಥೆಗಳಲ್ಲಿ ಮಹತ್ತರವಾದ ಬದಲಾವಣೆಗೆ ಕಾರಣವಾಗಿ, ಮಹಿಳಾ ಪ್ರಯಾಣಿಕರಿಂದ ಅಭೂತಪೂರ್ವ ಯಶಸ್ಸನ್ನುಗಳಿಸಿದೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಹಕರಿಸಿದ ನಾಲ್ಕು ಸಾರಿಗೆ ಸಂಸ್ಥೆಗಳ ಎಲ್ಲ ಅಧಿಕಾರಿ/ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸಾರ್ವಜನಿಕ ಪ್ರಯಾಣಿಕರು, ಅದರಲ್ಲಿಯೂ ಮಹಿಳಾ ಪುಯಾಣಿಕರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರತಿದಿನ ಪ್ರಯಾಣಿಸಿ ‘ಸಾರಿಗೆ ಬಸ್ಗಳು ಜನರ ಜೀವನಾಡಿಯೂ ಹೌದು ಹಾಗೂ ಮಹಿಳೆಯರ…