Author: Prajatv Kannada

ಬೆಂಗಳೂರು: ಬಜರಂಗ ದಳ ಬ್ಯಾನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆಗೆ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಅನೇಕ ಕಡೆ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಒದಗಿದೆ. ಪಂಚಾಯತ್ ಸಚಿವ ಸ್ನೇಹಿತ ಪ್ರಿಯಾಂಕ್ ಖರ್ಗೆ ಬಜರಂಗದಳ ನಿಷೇಧಿಸುವ ತವಕವನ್ನು ಕೈಬಿಟ್ಟು ರಾಜ್ಯದ ಜನತೆಗೆ ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡಲೆಂಬುದೇ ಆಗ್ರಹ ಎಂದು ಕೋರಿದ್ದಾರೆ. ಇದೆ ವೇಳೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸಬೇಕಾಗುತ್ತದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಈಗ ಟ್ವೀಟ್ ಮೂಲಕ ಸೂಲಿಬೆಲೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಎಂ.ಬಿ ಪಾಟೀಲ್ ನುಡಿ ಅಚ್ಚರಿಯೆನಿಸಿದೆ. ಸೂಲಿಬೆಲೆಯನ್ನು ಜೈಲಿಗಟ್ಟಲು ಸೂಲಿಬೆಲೆ ಭಯೋತ್ಪಾದಕರಲ್ಲ ಬದಲಾಗಿ ರಾಷ್ಟ್ರೀಯವಾದಿಯೊಬ್ಬನನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು: ಒಡಿಶಾದಲ್ಲಿ ಸಿಲುಕಿದ್ದ ರಾಜ್ಯದ 17 ಮಂದಿ ಜಾನಪದ ಕಲಾವಿದರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಚಿವರು, ಒಡಿಶಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರು ಸುರಕ್ಷಿತವಾಗಿದ್ದಾರೆ ಎಂದರು. ಜಾನಪದ ಕಲಾವಿದರು ರೈಲು ದುರಂತದ ಹಿ‌ನ್ನೆಲೆಯಲ್ಲಿ ಹಿಂದಿರುಗಿ ಬರಲಾರದೇ ಒಡಿಶಾದ ಪುರಿಯಲ್ಲಿ ಅತಂತ್ರ ಸ್ಥಿತಿಯಲ್ಲಿದ್ದರು. ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೊಲ್ಕತ್ತಾದ ಹೌರಾದಲ್ಲಿ ಉಳಿದಿದ್ದ 32 ಕ್ರೀಡಾಪಟುಗಳು ರವಿವಾರ ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಹೋರಾಟ ರೂಪಿಸಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ.

Read More

ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂಬ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್‌ ಅವರ ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ಗೋವು ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿಖಾನೆ ತಡೆಗಟ್ಟಲು ಕಾನೂನು ತರಲಾಗಿದೆ. ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೇ ಬಲ ತುಂಬಿದ್ದೇವೆ. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಯೋಚಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ಸಲಹೆ ನೀಡುವ ಅವಶ್ಯಕತೆಯಿದೆ,” ಎಂದಿದ್ದಾರೆ. ಭಾರತೀಯರಾದ ನಮಗೆ ಗೋವಿನೊಂದಿಗೆ ಭಾವನಾತ್ಮಕ ಸಂಬಂಧವಿದೆ. ತಾಯಿ ಸ್ಥಾನದಲ್ಲಿ ಪೂಜಿಸುಧಿತ್ತೇವೆ. ಸಚಿವ ವೆಂಕಟೇಶ್‌ ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ? ಗೋಹತ್ಯೆ ನಿಷೇಧವನ್ನು ಪ್ರಥಮವಾಗಿ ಪ್ರತಿಪಾದಿಸಿದ್ದು ಗಾಂಧೀಜಿ. ಅವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವು ರಾಜ್ಯಗಳಲ್ಲಿ ಕಾನೂನಾಗಿ ತರಲಾಗಿದೆ,” ಎಂದಿದ್ದಾರೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಅಭಿವೃದ್ಧಿಯೇ ನನ್ನ ಉದ್ದೇಶ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್​ ಗರಂ ಆದ್ರು. ನನ್ನ ಕೈಯಲ್ಲಿ ಗಿಡ ನೆಡಿಸಿದ್ದಾರೆ, ಅದು ಸಂಪೂರ್ಣ, ಅವೈಜ್ಞಾನಿಕ. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಟ್ಟರೆ ಇಷ್ಟ ಇಲ್ಲ. ಮರ ಇರುವ ಕಡೆ ಗಿಡ ನೆಡುವುದಲ್ಲ, ಮರ ಇಲ್ಲದ ಕಡೆ ಗಿಡನೆಡಿ. ನನ್ನ ಊರಿನಲ್ಲಿ ನಾನು ಗಿಡಗಳನ್ನು ಬೆಳೆಸಿದ್ದೇನೆ ಎಂದರು.

Read More

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ ಸಿದ್ದರಾಮಯ್ಯನವರು ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್​​ನಲ್ಲಿ ದಾವಣಗೆರೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿ.ಪಂ ಸಭಾಂಗಣದಲ್ಲಿ ಸಿಎಂ ಸಭೆ ನಡೆಯಲಿದ್ದು ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್​ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Read More

ಬೆಂಗಳೂರು: ಪ್ರತಿ ವರ್ಷದಂತೆ  ಈ ವರ್ಷ ಸಹ (2023-24 ನೆ ಸಾಲಿನ) ಸಾರ್ಥಕ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಇಂದು ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಭಾಗವಹಿಸಿದ್ದರು. ಬಸವನಗುಡಿಯ ಎನ್ ಆರ್. ಕಾಲೋನಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ  ಇಂದು 200 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಈ ವೇಳೆ ವಿಸ್ತಾರ ಏರ್ ಲೈನ್ಸ್ ಚೇರ್ಮನ್ ಆಗಿರುವ ಭಾಸ್ಕರ್ ಭಟ್ ,  ವಿಧಾನಪರಿಷತ್ ಪರಿಷತ್ ಸದಸ್ಯ ಟಿ.ಎ.ಶರವಣ ಚೆಕ್ ವಿತರಿಸಿದರು. ಹಾಗೆ ಇವರನ್ನು ಸಾರ್ಥಕ ಫೌಂಡೇಷನ್ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿವೇತನ (Scholarship), ವಿದ್ಯಾರ್ಥಿಗಳ ಜೀವನದ ಒಂದು ಅತ್ಯಮೂಲ್ಯ ನಿಧಿ ಎನ್ನಬಹುದು. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಥವಾ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ (Students) ರಾಜ್ಯ ಸರ್ಕಾರ, ಅನೇಕ ಇಲಾಖೆಗಳು ಮತ್ತು ನಿಗಮಗಳು, ದಾನಿಗಳು, ಯಾವುದಾದರೂ ಫೌಂಡೇಶನ್‌ ಹೀಗೆ…

Read More

ಬೆಂಗಳೂರು: ಇಂದು ಬೆಳಗ್ಗೆ 11 ಗಂಟೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಶಾಸಕರ ಸಭೆ ಕರೆದಿದ್ದಾರೆ. ಮಳೆಯಿಂದ ಮುಂಜಾಗ್ರತ ಕ್ರಮಗಳು, ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳು ಭಾಗಿಯಾಗಲಿದ್ದಾರೆ. ಸರ್ವ ಪಕ್ಷದ ನಾಯಕರುಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನ ಸಂಗ್ರಹಿಸಲಾಗುತ್ತಿದೆ. ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿಯೂ ಚರ್ಚೆ ಸಾಧ್ಯತೆ.

Read More

ಬೆಂಗಳೂರು: ಗೋ‌ಹತ್ಯೆ ನಿಷೇಧ ಕಾಯ್ದೆ ರದ್ದತಿಗೆ ಸಮಾನ‌ ಮನಸ್ಕರ ವೇದಿಕೆ ಸೇರಿದಂತೆ ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ. ಬೇರೆ ಬೇರೆ ಸಂಘಟನೆಗಳಿಂದಲೂ ಕಾಯ್ದೆ ರದ್ದತಿಗೆ ತೆರೆಮರೆ ಒತ್ತಡವಿದ್ದು ಅದರಂತೆಯೇ ಕಾಂಗ್ರೆಸ್ ಸರ್ಕಾರ ಕಾಯ್ದೆ ವಾಪಸಾತಿಗೆ ಒಲವು ತೋರಿದೆ. ಕಾನೂನು ಇಲಾಖೆಯಿಂದ ಮಾಹಿತಿ ಪಡೆಯಲಿರುವ ಸರ್ಕಾರ, ಅಗತ್ಯವಿದ್ದರೆ ಸಂಪುಟ ಉಪಸಮಿತಿ ರಚಿಸಿ ವರದಿ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ಸಂಪುಟ ಸಭೆಯಲ್ಲಿಟ್ಟು ಅಂತಿಮ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯಾಗಿದ್ದು ಹೊಸ, ಹೊಸ ಯೋಜನೆಗಳು ಜಾರಿಯಾಗಿವೆ. ಇದರ ನಡುವೆ ಈ ಹಿಂದೆ ಬಿಜೆಪಿ ಸರ್ಕಾರ(BJP Government) ಜಾರಿ ಮಾಡಿದ್ದ ಕೆಲ ಯೋಜನೆ, ಆದೇಶ, ಕಾನೂನುಗಳಿಗೆ ಕತ್ತರಿ ಹಾಕಲು ನೂತನ ಕಾಂಗ್ರೆಸ್‌ ಸರ್ಕಾರ( Congress Government) ಸಜ್ಜಾಗ್ತಿದೆ. ಅಲ್ಲದೆ ಗೋಹತ್ಯೆ ನಿಷೇಧ ಕಾಯ್ದೆ(Cattle slaughter) ರದ್ದು ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್‌(Minister Venkatesh) ಹೇಳಿದ್ದಾರೆ. ಅಷ್ಟೇ ಅಲ್ಲ ಕೋಣ, ಎಮ್ಮೆ ಕಡಿದ್ರೆ, ಆಕಳನ್ನ ಯಾಕೆ ಕಡಿಯಬಾರ್ದು ಅಂತಾ…

Read More

ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್​​ನಲ್ಲಿ ದಾವಣಗೆರೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿ.ಪಂ ಸಭಾಂಗಣದಲ್ಲಿ ಸಿಎಂ ಸಭೆ ನಡೆಯಲಿದ್ದು ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್​ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Read More