Author: Prajatv Kannada

ಬೆಂಗಳೂರು: ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಡಿಐಜಿ ಪಿ.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಮಾತನಾಡಿದ ಅವರು,ಅಪಘಾತಕ್ಕೀಡಾದ ಹೌರಾ ರೈಲು ಬೈಯಪ್ಪನಹಳ್ಳಿ ನಿಲ್ದಾಣದಿಂದ ಹೊರಟಿತ್ತು. ಇಲ್ಲಿಂದ ಹೌರಾಗೆ 46 ಘಂಟೆಗಳ ಪ್ರಯಾಣವಾಗಿದೆ. ಈ ವೇಳೆ, ರಾತ್ರಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮೂರು ಬೋಗಿಗಳು ಸಂಪೂರ್ಣ ಜಖಂ ಆಗಿವೆ. ಮಾಹಿತಿ ತಿಳಿದ ತಕ್ಷಣವೇ ನಿನ್ನೆ ರಾತ್ರಿಯಿಂದ ಅಲ್ಲಿಗೆ ಹೊರಡುವ ರೈಲುಗಳನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದರು. ಗಾಯಾಳು, ಸಾವು – ನೋವುಗಳ ಬಗ್ಗೆ ನಮ್ಮ ನಿಲ್ದಾಣಕ್ಕೆ ಸ್ಪಷ್ಟ ಮಾಹಿತಿ ದೊರೆತಿಲ್ಲ. ಸದ್ಯ ಬೆಂಗಳೂರಲ್ಲಿ ನಾಲ್ಕು ಹೆಲ್ಪ್​ಲೈನ್ ಓಪನ್ ಮಾಡಲಾಗಿದೆ. ಈವರೆಗೆ ಹೆಲ್ಪ್ ಲೈನ್​ಗೆ ಒಂದೂ ಕರೆ ಬಂದಿಲ್ಲ. ನಿನ್ನೆ ರಾತ್ರಿಯಿಂದಲೂ ಸಿಬ್ಬಂದಿ ಯವುದೇ ಕರೆ ಸ್ವೀಕರಿಸಿಲ್ಲ. ಜನರಲ್ ಬೋಗಿ, ರಿಸರ್ವೇಶನ್ ಬೋಗಿಗಳಿಗೆ ಹೆಚ್ಚು ಹಾನಿಯಾಗಿವೆ ಎನ್ನುವ ಮಾಹಿತಿ ಇದೆ. ಬೋಗಿಗಳಲ್ಲಿ ರಾಜ್ಯಕ್ಕೆ ಕೆಲಸ ಅರಸಿ ಬಂದವರು ಹೆಚ್ಚು ಇದ್ದರು. ಸದ್ಯಕ್ಕೆ ಕರ್ನಾಟಕದವರ ಸಾವಿನ ಬಗ್ಗೆ ಅಧಿಕೃತ ಮಾಹಿತಿ ದೊರೆತಿಲ್ಲ ಎಂದು ತಿಳಿಸಿದರು.…

Read More

ಬೆಂಗಳೂರು: ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ ಎಂದು ಕಾಂಗ್ರೆಸ್ ಗ್ಯಾರಂಟಿ ಜಾರಿ ಸಂಬಂಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಟೀಕೆ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಹೆಚ್ ಡಿಕೆ, ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದಿದ್ದಾರೆ. , ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರ್ಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000…

Read More

ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳು ನಾಡಿನ ಜನತೆಗೆ ಚೈತನ್ಯ ತುಂಬಲಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಐದು ಗ್ಯಾರಂಟಿಗಳ ಅನುಷ್ಠಾನ ಅಸಾಧ್ಯ ಎಂಬ ಅಭಿಪ್ರಾಯವಿತ್ತು. ಆದರೆ ಎಲ್ಲೂ ಆರ್ಥಿಕ ಶಿಸ್ತಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಿ ಈ ಗ್ಯಾರಂಟಿಗಳ ಅನುಷ್ಠಾನಕ್ಕೆ ಅನುಮೋದನೆ ನೀಡಿರುವುದು ನಮ್ಮ ಸರ್ಕಾರದ ಹೆಚ್ಚುಗಾಕೆ. ಜನರ ತೆರಿಗೆ ಹಣ ಜನರ ಅಭಿವೃದ್ಧಿಗೆ ವ್ಯಯಿಸಬೇಕು ಎನ್ನುವ ಬದ್ಧತೆಯೊಂದಿಗೆ ಈ ಗ್ಯಾರಂಟಿಗಳು ಜನರಿಗೆ ತಲುಪಲಿವೆ’ ಎಂದು ಘೋಷಿಸಿದ್ದಾರೆ. ಬಿಜೆಪಿಯವರು ನಮ್ಮ 5 ಗ್ಯಾರಂಟಿಗಳ ಬಗ್ಗೆ ಬೀದಿ ಬೀದಿಯಲ್ಲಿ ಅಪಪ್ರಚಾರ ನಡೆಸಿದ್ದರು. ಜನರಿಗೆ ಪ್ರಚೋದನೆ ನೀಡಿದ್ದರು. ಮತದಾರರಿಗಿಂತಲೂ ಬಿಜೆಪಿಯವರೇ ಗ್ಯಾರಂಟಿಗಾಗಿ ದುಂಬಾಲು ಬಿದ್ದಿದರು. ಈಗ ಈ 5 ಗ್ಯಾರಂಟಿಗಳು ಬಿಜೆಪಿಯವರಿಗೂ ಸಿಗಲಿವೆ. ಇನ್ನು ಮುಂದೆ ಬಿಜೆಪಿ ನಾಯಕರಿಗೂ ಕರೆಂಟ್ ಫ್ರೀ, ಅವರ ಮನೆಯೊಡತಿಗೆ 2 ಸಾವಿರ ರೂ., ಉಚಿತ ಬಸ್ ಪ್ರಯಾಣ ಸಿಗಲಿದೆ’ ಎಂದು ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

Read More

ಬೆಂಗಳೂರು: ಶಿವರಾಮಕಾರಂತ ಬಡಾವಣೆಗಾಗಿ ವಕ್ಫ್ ಭೂಮಿ ಸ್ವಾಧೀನ ಪಡಿಸಿಕೊಂಡಿರುವ ಹಿನ್ನೆಲೆ ಭೂ ಪರಿಹಾರ ಅಥವಾ ಪರ್ಯಾಯ ಜಮೀನು ನೀಡಲು ಶಾಫಿ ಸಅದಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದಿರುವ ಅವರು, ಭೂ ಸ್ವಾಧೀನಾಧಿಕಾರಿಗಳು ಸಂಪೂರ್ಣ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ವಕ್ಫ್ ಸಂಸ್ಥೆಯಾದ ನಗರದ ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಮತ್ತು ಹಝ್ರತ್ ಮುಹೀಬ್ ಷಾ ಖಾದ್ರಿ ದರ್ಗಾ ಮತ್ತು ರಾಜ್ಯ ವಕ್ಫ್ ಮಂಡಳಿಯೊಂದಿಗೆ ಸಮಾಲೋಚಿಸದೆ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ. ಮೇಡಿ ಅಗ್ರಹಾರ ಗ್ರಾಮದ ಸಂಪೂರ್ಣ ವಿಸ್ತೀರ್ಣ 358 ಎಕರೆ 11 ಗುಂಟೆ ಜಮೀನು ಹಝ್ರತ್ ಹಮೀದ್ ಶಾ ದರ್ಗಾಗೆ ಸೇರಿದ ಮುಸ್ಲಿಂ ಮುಜುರಾಯಿ ದೇವಾಲಯದ ಇನಾಂತಿ ಜಮೀನಾಗಿದೆ. 1973ರಲ್ಲಿ ರಾಜ್ಯ ಸರಕಾರದ ಆದೇಶದಂತೆ ಮುಸ್ಲಿಂ ಮುಜುರಾಯಿ ಸ್ವತ್ತುಗಳನ್ನು ರಾಜ್ಯ ವಕ್ಫ್ ಮಂಡಳಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ ಎಂದು ಶಾಫಿ ಸಅದಿ ಹೇಳಿದ್ದಾರೆ. ಈ ಆದೇಶದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ…

Read More

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಇನ್ನೂ ಮುಂದಿನ 24 ಗಂಟೆಯಲ್ಲಿ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ 40 ರಿಂದ 55 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಒಳನಾಡಿನಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆ ಆಗಲಿದೆ ಎಂದು ಹೇಳಲಾಗಿದೆ.

Read More

ಬೆಂಗಳೂರು: ಆರ್‌ಬಿಐ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನೃಪತುಂಗ ರಸ್ತೆಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಗುರುವಾರ ಪರಿಶೀಲಿಸಿದ್ದಾರೆ. ಹಲವು ಗಂಟೆಗಳ ಶೋಧದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗದಿದ್ದರಿಂದ, ಇದೊಂದು ಹುಸಿ ಬಾಂಬ್ ಕರೆ ಎಂಬುದಾಗಿ ಪೊಲೀಸರು ಘೋಷಿಸಿದರು. ನಂತರ, ಕಚೇರಿ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಇನ್ನೂ ಆರ್‌ಬಿಐ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪದಡಿ ವೈಭವ್ ಭಗವಾನ್ ಎಂಬಾತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Read More

ಬೆಂಗಳೂರು: ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ. ಈ ಬಗ್ಗೆ ಅಪಪ್ರಚಾರದಲ್ಲಿ ನಿರತವಾಗಿದ್ದ ಬಿಜೆಪಿ ಇನ್ನಾದರೂ ಮೌನದಿಂದ ಇರುವುದನ್ನು ಕಲಿಯಬೇಕು ಎಂದಿದ್ದಾರೆ. ರಾಜ್ಯ ಸರಕಾರವು ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರದ ಬಳಿಕ ಮಾತನಾಡಿದ ಅವರು, ಸರಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ವಾರಗಳಲ್ಲಿ ನಮ್ಮ ಇಚ್ಛಾಶಕ್ತಿಯನ್ನು ತೋರಿಸಿದ್ದೇವೆ. ಈ ಐದೂ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯದ ಜನತೆಯ ಸಬಲೀಕರಣ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.  ಕೊಟ್ಟ ಮಾತನ್ನು ಪಾಲಿಸುವುದು ಕಾಂಗ್ರೆಸ್ಸಿಗೆ ಧರ್ಮವಿದ್ದಂತೆ. ಚುನಾವಣೆಗೆ ಮುಂಚೆ ಏನನ್ನು ಹೇಳಿದ್ದೆವೋ ಅದನ್ನೀಗ ಮಾಡಿ ತೋರಿಸಿದ್ದೇವೆ. ಇವೆಲ್ಲವೂ ಈಗ ನಿಗದಿಪಡಿಸಿರುವ ದಿನಾಂಕದಿಂದ ಪೂರ್ಣಪ್ರಮಾಣದಲ್ಲಿ ಮತ್ತು ಸಮರ್ಪಕವಾಗಿ ಜಾರಿಗೆ ಬರಲಿವೆ ಎಂದು ಸಚಿವರು ಹೇಳಿದ್ದಾರೆ.

Read More

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ನೇತೃತ್ವದಲ್ಲಿ ಬೆಂಗಳೂರಿನ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿದೆ. ಬಿಬಿಎಂಪಿ ಕಚೇರಿಯಲ್ಲಿ ಸಭೆ ಜರುಗಿದೆ. ಪ್ರಕೃತಿ ವಿಕೋಪ ತಡೆಗಟ್ಟಲು ಮಾಡಿಕೊಂಡಿರುವ ಕ್ರಮಗಳು, 63 ಉಪ ವಲಯಗಳಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಂಗಳಲ್ಲಿ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸಭೆಯಲ್ಲಿ ಮಾಹಿತಿ‌ ಪಡೆಯಲಾಯಿತು. BESCOM, BDA, BMRCL, KRide, DULT, BMTC, BWSSB ಮತ್ತು ಸಂಚಾರ ಪೋಲಿಸ್ ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಡಾ. ಆರ್ ಎಲ್ ದೀಪಕ್, ಡಾ.‌ ತ್ರಿಲೋಕ್ ಚಂದ್ರ, ಪ್ರೀತಿ ಗೆಹ್ಲೋಟ್, ರವೀಂದ್ರ, ರೆಡ್ಡಿ, ಶಂಕರ್ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜಯನಗರದ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆರ್‌ಬಿಐ ಲೇಔಟ್, ಕೊತ್ತನೂರು, ಜೆಪಿ ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವನಗರ, ನಟರಾಜ ಲೇಔಟ್, ನೃಪತುಂಗನಗರ, ಜಂಬೂಸವಾರಿದಿನ್ನೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ, ಬ್ರಿಗೇಡ್ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಕೆಂಪಮ್ಮ ಲೇಔಟ್, ಹುಳಿಮಾವು, ಭಗವತಿ ಲೇಔಟ್, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯನಗರ, ಯಾಲೇನಹಳ್ಳಿ, ನ್ಯಾನಪ್ಪನಹಳ್ಳಿ, ವಿಶ್ವಪ್ರಿಯ ಲೇಔಟ್, ಕಾಳೇನ ಅಗ್ರಹಾರ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್, ಬಿಟಿಎಸ್ ಲೇಔಟ್, ಬಿಟಿಎಂ 4ನೇ ಹಂತ, ಡಿಸಿ ಹಳ್ಳಿ, ಸತ್ಯಹಳ್ಳಿ, ಸತ್ಯಹಳ್ಳಿ, ಸತ್ಯಹಳ್ಳಿ, ಅನುಗ್ರಹ ಲೇಔಟ್, ವಿಬಿ ಲೇಔಟ್, ಕುಟ್ಟಿಯಪ್ಪ ಗಾರ್ಡನ್, ರಾಗವೇಂದ್ರ ಕಾಲೋನಿ, ಎಸ್‌ಬಿಐ ಲೇಔಟ್, ರೋಟರಿ ನಗರ, ಜಿಬಿ ಪಾಳ್ಯ, ಕುಡ್ಲು ಸೇರಿ ಹಲವೆಡೆ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

Read More

ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿ ಆದೇಶ ಹೊರಡಿಸಿದೆ. ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಪ್ರಕರಣಕ್ಕೆ ಅನ್ವಯಿಸದ ಕಾಯಿದೆಯ ವಿವಿಧ ಸೆಕ್ಷನ್ಗಳನ್ನು ಸೇರಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿವೆ. ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು 2023ರ ಏಪ್ರಿಲ್ 20ರಂದು ಶರಣರ ವಿರುದ್ಧ ಆರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು ಆದೇಶಿಸಿದೆ. ಈ ಆದೇಶ ದೋಷಪೂರಿತವಾಗಿದ್ದು ಇದಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ಪೀಠವು ಚಿತ್ರದುರ್ಗದ ವಿಶೇಷ ನ್ಯಾಯಾಲಯದ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿತು.

Read More