ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. https://youtu.be/FcgBuCXUQQA?si=tB9z0d90xiN4KWQJ ಮೆಟಲ್ ಡಿಟೆಕ್ಟರ್ ಮೂಲಕವೇ ಬಿಜೆಪಿ ಕಚೇರಿಗೆ ಭೇಟಿಗೆ ಬರುವವರ ಒಳ ಪ್ರವೇಶ ಕಡ್ಡಾಯ ಮಾಡಲಾಗಿದೆ. ಇದರ ಜತೆಗೆ ಪ್ರವೇಶ ದ್ವಾರದ ಎದುರು 3-4 ಜನ ಹೆಚ್ಚುವರಿ ಪೊಲೀಸರನ್ನು ನಿಯೋಜಿಲಾಗಿದೆ. ನಿತ್ಯ ಬಿಜೆಪಿ ಕಚೇರಿಗೆ ಮಲ್ಲೇಶ್ವರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಭೇಟಿ ಮಾಡಿ ಭದ್ರತೆ ಪರಿಶೀಲನೆ ಮಾಡಲಿದ್ದಾರೆ. ಯಾಕೆ ಭದ್ರತೆ? ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚನ್ನು ಐಸಿಸ್ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಶಾಕಿಂಗ್ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿತ್ತು. ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿದ್, ಅಬ್ದುಲ್ ಮತೀನ್ ತಾಹ, ಮಾಜ್ ಮುನೀರ್ ಅಹಮದ್, ಮುಜಾಮಿಲ್ ಷರೀಫ್ ವಿರುದ್ಧ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಆರೋಪಪಟ್ಟಿ ಸಲ್ಲಿಸಿದ್ದಾರೆ.
Author: Prajatv Kannada
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ ಎಂದು ಆರೋಪ ಹೊರಿಸಿ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. https://youtu.be/4-TSsVMizCk?si=nhvAj5J8Wz8ohWB1 ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಿದೆ. ಚಾರ್ಜ್‌ಶೀಟ್‌ನಲ್ಲಿ ಏನಿದೆ? ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ನಾಗೇಂದ್ರ, ದದ್ದಲ್ ಹೆಸರು ಇರಲಿಲ್ಲ: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ ಪೊಲೀಸರು 12…
ಭಾರತದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ಕೀನ್ಯಾ ಸರಕಾರದ ನಡುವಿನ 1.85 ಬಿಲಿಯನ್ ಮೌಲ್ಯದ ಒಪ್ಪಂದಕ್ಕೆ ಕೀನ್ಯಾದ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಈ ಒಪ್ಪಂದದಲ್ಲಿ ಅದಾನಿಯ ಸಂಸ್ಥೆಗೆ ನೈರೋಬಿಯ ಜೊಮೊ ಕೆನ್ಯಾಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 30 ವರ್ಷಗಳವರೆಗೆ ನಿರ್ವಹಿಸಲು ಗುತಿಗೆ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಬ್ಲೂಮ್ಬರ್ಗ್ ವರದಿಯ ಪ್ರಕಾರ, ನೈರೋಬಿಯ ಜೋಮೊ ಕೆನ್ಯಾಟ್ಟಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(ಜೆಕೆಐಎ) ಅದಾನಿ ವಿಮಾನ ನಿಲ್ದಾಣಕ್ಕೆ ಗುತ್ತಿಗೆ ನೀಡುವ ಕೀನ್ಯಾ ಸರ್ಕಾರದ ವಿರುದ್ಧ ನಿರ್ಧಾರದ ವಿರುದ್ಧ ಕಾನೂನು ತಕರಾರು ಎದುರಾಗಿದೆ. ಕೀನ್ಯಾ ಮಾನವ ಹಕ್ಕುಗಳ ಆಯೋಗ, ವಕೀಲರ ಸಂಘವು ಈ ಕ್ರಮವು ಅಸಂವಿಧಾನಿಕ ಎಂದು ವಾದಿಸಿದೆ. ಕೀನ್ಯಾದ ವಿಮಾನಯಾನ ಕಾರ್ಮಿಕರ ಒಕ್ಕೂಟವು ಕಳೆದ ತಿಂಗಳು ಈ ಬಗ್ಗೆ ಮುಷ್ಕರವನ್ನು ನಡೆಸಿತ್ತು. ಈ ನಿರ್ಧಾರದಿಂದ ಉದ್ಯೋಗ ಕಡಿತ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಅರ್ಜಿದಾರರಾದ ಕೀನ್ಯಾದ ಲಾ ಸೊಸೈಟಿಯ ಅಧ್ಯಕ್ಷ ಫೇಯ್ತ್ ಒಡಿಯಾಂಬೊ ಈ ಒಪ್ಪಂದವು ಉದ್ಯೋಗ ನಷ್ಟಗಳಿಗೆ ಕಾರಣವಾಗುತ್ತದೆ ಮತ್ತು…
ಕೆಲವು ಧರ್ಮ, ಭಾಷೆ ಮತ್ತು ಸಮುದಾಯಗಳನ್ನು ಆರ್ಎಸ್ಎಸ್ ಕೀಳಾಗಿ ಕಾಣುತ್ತದೆ. ಇದೇ ಕಾರಣಕ್ಕೆ ನಮ್ಮ ಹೋರಾಟ ಇವುಗಳ ಬಗ್ಗೆಯೇ ಹೊರತು, ರಾಜಕೀಯವಾಗಿ ಅಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ವಾಷಿಂಗ್ಟನ್ ಡಿಸಿಯ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೋರಾಟ ಎಂದರೇನು ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಮೇಲ್ನೋಟಕ್ಕೆ ಇದು ರಾಜಕೀಯ ಎನಿಸಿದರೂ, ಅದಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ ಸ್ಥಳದಲ್ಲಿ ನೆರೆದಿದ್ದ ಸಿಖ್ ವ್ಯಕ್ತಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸಿಖ್ಖರು ಭಾರತದಲ್ಲಿ ಟರ್ಬನ್ ಅಥವಾ ಕಡ ಧರಿಸಲು ಅವಕಾಶ ನೀಡುವುದು, ಮುಕ್ತವಾಗಿ ಗುರುದ್ವಾರ ಪ್ರವೇಶಿಸಲು ಅವಕಾಶ ನೀಡುವುದು ಇದು ಹೋರಾಟ. ಇದು ವ್ಯಕ್ತಿಗತವಾಗಿ ನಡೆಯುವ ಹೋರಾಟವಲ್ಲ. ಧರ್ಮಕ್ಕಾಗಿ ನಡೆಯುವ ಹೋರಾಟ ಎಂದರು. ಆರ್ಎಸ್ಎಸ್ ಕೆಲವು ರಾಜ್ಯಗಳನ್ನು ಇತರೆ ರಾಜ್ಯಗಳಿಗಿಂತ ಕೀಳಾಗಿ ನೋಡುತ್ತದೆ. ಕೆಲವು ಭಾಷೆಗಳು, ಧರ್ಮ, ಸಮುದಾಯವನ್ನೂ ಇದೇ ದೃಷ್ಟಿಯಿಂದ ನೋಡುತ್ತದೆ. ತಮಿಳು, ಮರಾಠಿ, ಬಂಗಾಳಿ, ಮಣಿಪುರಿ ಅವರು ಕೀಳಾಗಿ ನೋಡುವ ಭಾಷೆಗಳು. ಇದೇ…
ರೇಣುಕಾಸ್ವಾಮಿ ಕೊಲೆ ನಡೆದು ಮೂರು ತಿಂಗಳ ಕಳೆದಿದ್ದು ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ.ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲ ರಾಗಿಣಿ, ಶುಭ ಪೂಂಜಾಗೂ ಮೆಸೇಜ್ ಮಾಡಿದ್ದ ಎಂದು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ನಟಿ ಶುಭ ಪೂಂಜಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ನಟಿ ಸ್ಪಷ್ಟನೆ ನೀಡಿದ್ದಾರೆ. ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು ವಿನಯ್ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ,…
ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. https://youtu.be/o_XM3lvAQ4M?si=Mw8j89GbRDFcEVTf ಮೇ.26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆಗೆ ಧ್ರುವ ಮ್ಯಾನೇಜರ್ ಅಶ್ವಿನ್ ನಾಗೇಂದ್ರಗೆ ಸಾಥ್ ಕೊಟ್ಟಿದ್ದ ಎಂದು ತಿಳಿದು ಬಂದಿದೆ. ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವಗೆ ಜಿಮ್‌ನಲ್ಲಿ ತರಬೇತಿ ನೀಡುತ್ತಿದ್ದುದ್ದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್‌ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್…
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಘಟನೆ ನಡೆದು ಮೂರು ತಿಂಗಳು ಕಳೆದಿದ್ದು ನಿತ್ಯ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ. ಮೃತ ರೇಣುಕಾಸ್ವಾಮಿ ನಟಿ ಪವಿತ್ರಾ ಗೌಡಗೆ ಮಾತ್ರವಲ್ಲ ರಾಗಿಣಿಗೂ ಮೆಸೇಜ್ ಮಾಡಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರಾಗಿಣಿ ದ್ವಿವೇದಿ ಅವರಿಗೂ ರೇಣುಕಾಸ್ವಾಮಿ ಮೆಸೇಜ್ ಕಳುಹಿಸಿದ್ದ ಎಂಬ ವಿಚಾರ ಜಾರ್ಜ್‌ಶೀಟ್ ಉಲ್ಲೇಖವಾಗಿತ್ತು. ಇದಕ್ಕೆ ರಾಗಿಣಿ ಪ್ರತಿಕ್ರಿಯಿಸಿ, ಅಶ್ಲೀಲ ಸಂದೇಶಗಳು ನನಗೆ ಬಂದಿರುವ ಮಾಹಿತಿ ಇಲ್ಲ ಎಂದಿದ್ದಾರೆ. ನನ್ನ ಪ್ರೊಫೈಲ್ ಅನ್ನು ಏಜೆನ್ಸಿ ಹ್ಯಾಂಡಲ್ ಮಾಡುತ್ತದೆ. ಹೀಗಾಗಿ ಅಶ್ಲೀಲ ಸಂದೇಶಗಳು ನನಗೆ ಬಂದಿರುವ ಮಾಹಿತಿ ಇಲ್ಲ. ಬಂದಿದ್ದರೂ ನಾನು ಅದನ್ನ ಓದುವುದಿಲ್ಲ ಎಂದಿದ್ದಾರೆ. ನನ್ನ ಗಮನಕ್ಕೆ ಬಂದಂತೆ ಯಾವುದೇ ಕೆಟ್ಟ ಸಂದೇಶ ಬಂದಿಲ್ಲ ಎಂದು ರಾಗಿಣಿ ಸ್ಪಷ್ಟನೆ ನೀಡಿದ್ದಾರೆ. ನಕಲಿ ಅಕೌಂಟ್ ಹೊಂದಿದ್ದ ರೇಣುಕಾಸ್ವಾಮಿ ಅದರಿಂದ ಖ್ಯಾತ ನಟಿಯರಿಗೆ ಮೆಸೇಜ್ ಮಾಡುತ್ತಿದ್ದ ಎನ್ನಲಾಗುತ್ತಿದೆ. ರಾಗಿಣಿ ದ್ವಿವೇದಿ, ಶುಭಾ ಪೂಂಜಾ…
ಬೆಂಗಳೂರು: ಇನ್ಸ್ಟಾಗ್ರಾಂ ಮೂಲಕ ಥೈಲ್ಯಾಂಡ್ ನಿಂದ ಹೈಡ್ರೋ ಗಾಂಜಾ ತರೆಸಿ ಮಾರ್ತಿದ್ದ ಬಟ್ಟೆ ವ್ಯಾಪರಿಯನ್ನು ಬ್ಯಾಡರಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/o_XM3lvAQ4M?si=Mw8j89GbRDFcEVTf ಆರೋಪಿ ತೌನೇಶ್ ಬಂಧಿತನಾಗಿದ್ದು ಒಂದು ಕೋಟಿ 22 ಲಕ್ಷ ಮೌಲ್ಯದ ಎರಡು ಕೆಜಿ 779 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ ಹಾಗೆ ಅಂಧ್ರಹಳ್ಳಿಯ ಕಾಲೇಜ್ ಒಂದರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಲಾಕ್ ಮಾಡಿದ ಪೊಲೀಸರು. ಸೈಜು ಎಂಬ ಕೇರಳ ಮೂಲದನಿಂದ ಥೈಲ್ಯಾಂಡ್ ನಿಂದ ಬರ್ತಿದ್ದ ಹೈಡ್ರೋ ಗಾಂಜಾಒಂದು ವರ್ಷದ ಹಿಂದೆ ಇನ್ಸ್ಟಾದಲ್ಲಿ ಪರಿಚಯವಾಗಿದ್ದ ಸೈಜುಏರ್ಪೋರ್ಟ್ ನಲ್ಲಿ ಯಾಮಾರಿಸಿ ಹೈಡ್ರೋ ಗಾಂಜಾ ತರಸಿಕೊಳ್ತಿದ್ದ ಸಿಂಥೆಟಿಕ್ ಪೇಪರ್ ನಲ್ಲಿ ಸುತ್ತಿ ಬಿಸ್ಕೆಟ್, ಚಾಕಲೇಟ್ ಬಾಕ್ಸ್ ನಲ್ಲಿ ಗಾಂಜಾ ಬರ್ತಿತ್ತು ಸಿಂಥೆಟಿಕ್ ಪೇಪರ್ ನಲ್ಲಿ ಸುತ್ತಿರುವುದರಿಂದ ಯಾವ ವಾಪಸೆ ಬರ್ತಿರಲಿಲ್ಲ ಜೊತೆಗೆ ಸ್ಕ್ಯಾನ್ ಮಾಡಿದಾಗಲೂ ಗಾಂಜಾ ಇದೆ ಅಂತ ಗೊತ್ತಾಗುತ್ತಿರಲಿಲ್ಲ ಬಟ್ಟೆ ವ್ಯಾಪರಿಯಾಗಿರುವ ತೌನೇಶ್ 2020ರಿಂದ ಗಾಂಜಾ ಮಾರಟ ಮಾಡ್ತಿದ್ದನಂತೆ ಬೆಂಗಳೂರಿನ ನಾಲ್ಕು ಠಾಣೆಯಲ್ಲಿ ಆರೋಪಿ ವಿರುದ್ಧ ಕೇಸ್ ಇದೆ…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಹತ್ಯೆ ಪ್ರಕರಣದ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ದರ್ಶನ್ ಬಗ್ಗೆ ಒಂದೊಂದೇ ಸುದ್ದಿ ಹೊರಬೀಳುತ್ತಿದೆ. ಇತ್ತ ಪತ್ನಿ ವಿಜಯಲಕ್ಷ್ಮಿ ಗೆಳತಿಯೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟ ದರ್ಶನ್‌ಗೆ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್ ಟೆನ್ಷನ್ ಹುಟ್ಟಾಕಿದೆ ಎಂದು ವರದಿಯಾಗಿತ್ತು. ಜಾಮೀನು ಸಿಗುತ್ತೋ ಇಲ್ಲವೋ ಅನ್ನುವ ಆತಂಕದಲ್ಲಿ ಇದ್ದಾರೆ ಎಂದೂ ಹೇಳಲಾಗುತ್ತಿದೆ. ಇದೇ ವೇಳೆ ಪತಿಯನ್ನು ಜೈಲಿನಿಂದ ಹೊರ ತರಲು ವಿಜಯಲಕ್ಷ್ಮಿ ಕೂಡ ಹರಸಾಹಸ ಪಡುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಈ ಮಧ್ಯೆ ಗೆಳತಿಯೊಬ್ಬರ ಪಾರ್ಟಿಯಲ್ಲಿ ವಿಜಯಲಕ್ಷ್ಮಿ ಮಸ್ತ್ ಆಗಿ ಎಂಜಾಯ್ ಮಾಡಿದ್ದು ಫೋಟೋ ಹರಿದಾಡುತ್ತಿದೆ. ವಿಜಯಲಕ್ಷ್ಮಿ ಗೆಳತಿಯ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಗೆಳತಿಯ ಬರ್ತ್‌ಡೇಯಲ್ಲಿ ಕೇಕ್ ಮಾಡಿರುವ ಫೋಟೋಗಳನ್ನು ಅವರೇ ಹಂಚಿಕೊಂಡಿದ್ದಾರೆ. ಅಂದ್ಹಾಗೆ, ಶ್ರುತಿ…
ಬೆಂಗಳೂರು: ಇನ್ನೂ ಯಾಕೆ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಯಜಮಾನಿಯರು ಗೊಳೋ ಅನ್ನುತ್ತಿದ್ರು ಅವರಿಗೆಲ್ಲಾ ಈಗ ಸಂತಸದ ಸುದ್ದಿ ಸಿಕ್ಕಿದೆ ಏನಾಪ್ಪಾ ಅಂದ್ರೆ ಇದೀಗ ಕೊನೆಗೂ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. https://youtu.be/o_XM3lvAQ4M?si=cBe0AA_tHahjGOfx ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಮನೆ ಯಜಮಾನಿಯರ ಬ್ಯಾಂಕ್ ಖಾತೆಗೆ ಸಂದಾಯವಾಗಿದೆ. ಆದಾಗ್ಯೂ, ಮಹಿಳೆಯರ ಗೋಳು ತಪ್ಪಿಲ್ಲ. ಯಾಕೆಂದರೆ ಇನ್ನೆರಡು ತಿಂಗಳ ಬಾಕಿ ಹಣ ಜಮೆಯಾಗಬೇಕಿರೋದ್ರಿಂದ ಹೆಣ್ಣು ಮಕ್ಕಳು ಗೊಳೋ ಅನ್ನುತ್ತಿದ್ದಾರೆ. ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಆದರೆ, ಬಾಕಿ ಇರುವ ಇನ್ನೆರಡು ತಿಂಗಳ ಹಣ ಖಾತೆ ಸೇರುವುದು ವಿಳಂಬವಾಗಲಿದೆ. ಸದ್ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗಳಿಗೆ ವರ್ಗಾವಣೆಯಾಗುವುದು ಬಾಕಿ ಉಳಿದಿದೆ. ಜೂನ್ ತಿಂಗಳಲ್ಲಿ ಎಸ್ಸಿ, ಎಸ್ಟಿ ಫಾಲಾನುಭವಿಗಳ ಪೋರ್ಟಲ್ನಲ್ಲಿ ಒಂದಷ್ಟು…