Author: Prajatv Kannada

ಈ ರಾಶಿಯವರಿಗೆ ವರ್ಗಾವಣೆ ಜೊತೆಗೆ ಪ್ರಮೋಷನ್ ಭಾಗ್ಯ, ಸೂರ್ಯೋದಯ: 05.52 AM, ಸೂರ್ಯಾಸ್ತ : 06.43 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ದ್ವಾದಶಿ 01:39 PM ತನಕ ನಂತರ ತ್ರಯೋದಶಿ ನಕ್ಷತ್ರ: ಇವತ್ತು ಚಿತ್ತ 06:48 AM ತನಕ ನಂತರ ಸ್ವಾತಿ ಯೋಗ: ಇವತ್ತು ವರಿಯಾನ್ 07:00 PM ತನಕ ನಂತರ ಪರಿಘ ಕರಣ: ಇವತ್ತು ಬವ 01:48 AM ತನಕ ನಂತರ ಬಾಲವ 01:39 PM ತನಕ ನಂತರ ಕೌಲವ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 12.11 AM to 01.51 AM , 10.03 PM to 11.39 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:48 ನಿಂದ ಮ.12:39 ವರೆಗೂ ಮೇಷ ರಾಶಿ: ಪ್ರತಿಕ್ಷಣ…

Read More

ಬೆಂಗಳೂರು:  ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಅಂತ್ಯವಾಗಿದ್ದು ಅವರ ಮನೆಗಳಲ್ಲಿ ಸಿಕ್ಕಿದ್ದನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಯಾರ ಮನೆಯಲ್ಲಿ ಎಷ್ಟೇಷ್ಟೆ ಸಿಕ್ತು ಎಂಬುದ ಫುಲ್ ಡಿಟೇಲ್ಸ್ ಇಲ್ಲಿದೆ. ಭ್ರಷ್ಟ ಅಧಿಕಾರಿಗಳ ಮೇಲೆ ಬುಧವಾರ ನಡೆದ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಜೆ ರಮೇಶ್​ರ ಬಸವೇಶ್ವರನಗರದ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಿದರು. ಮನೆಯಲ್ಲಿ 1.4 ಕೋಟಿ ಮೌಲ್ಯದ ದ್ವಿಚಕ್ರ ವಾಹನ, ಕಾರು, ಗೃಹೋಪಯೋಗಿ ಉಪಕರಣಗಳು, ವಿಸ್ಕಿ ಪತ್ತೆಯಾಗಿದೆ.  ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಟಿವಿ ನಾರಾಯಣಪ್ಪರ ವಿಜಯನಗರದ ಮನೆ ಸೇರಿ 10 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ದಾಳಿ ವೇಳೆ 22.50 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳು, ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿದ್ರೆ, ಇನ್ನು ಬೆಸ್ಕಾಂನ ಟೆಕ್ನಿಕಲ್ ಚೀಫ್ ಇಂಜಿನಿಯರ್ ಹೆಚ್.ಜೆ ರಮೇಶ್​ರ ಬಸವೇಶ್ವರನಗರದ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಿ ಅಧಿಕಾರಿಗಳು, ಮನೆಯಲ್ಲಿ 1.4 ಕೋಟಿ ಮೌಲ್ಯದ…

Read More

ಬೆಂಗಳೂರು: ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪಾಷಾ ಅಲಿಯಾಸ್ ಪಿಲ್ಲು ಬಂಧಿತ ಡ್ರಗ್ ಪೆಡ್ಲರ್ (Drug Peddler). ಗುಬ್ಬಲಾಳ ಬಳಿಯ ಖಾಲಿ ಜಾಗವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಪಿಲ್ಲುನಿಂದ 10.50 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ನಗದು ಮತ್ತು ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿ ವಿರುದ್ಧ ಬನಶಂಕರಿ, ಜಯನಗರ, ಕೋರಮಂಗಲ, ಕೆ.ಎಸ್.ಲೇಔಟ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ​​ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ನಾವು ಬದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವ ಗಾಸಿಪ್ ಕೂಡ ಮಾಡಬೇಡಿ. ಹಂಗಂತೆ, ಹಿಂಗಂತೆ ಅಂತ ಯಾರೂ ಹೇಳುವುದಕ್ಕೆ ಹೋಗಬೇಡಿ. ತೀರ್ಮಾನ ಮಾಡುವುದು ಸರ್ಕಾರ. ನಿಮಗೆ ಅನಿಸಿದ್ದನ್ನೆಲ್ಲ ಹೇಳೋಕಾಗಲ್ಲ. “ಹೇಗೆ ಮಾಡಬೇಕು, ಏನು ಮಾಡಬೇಕು” ಅಂತ ಸರ್ಕಾರ ಹಾಗೂ ನಾವು ಯೋಚನೆ ಮಾಡುತ್ತೇವೆ. ನೀವು ಬಹಳ ಸ್ಪೀಡ್​ನಲ್ಲಿದ್ದೀರಿ. ನಾವು ನಿಮ್ಮಷ್ಟು ಸ್ಪೀಡ್ ಇಲ್ಲ ಎಂದರು. ಆರ್ಥಿಕ ಹೊರೆ ಎಷ್ಟಾಗುತ್ತೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಆರ್ಥಿಕ ಇಲಾಖೆ ಅಧಿಕಾರಿಗಳು ಕೂಡ ಸಲಹೆ ನೀಡಿದ್ದಾರೆ. ರೀ ವರ್ಕ್ ಮಾಡಿ ಕ್ಯಾಬಿನೆಟ್​​ಗೆ ಸಲ್ಲಿಸಲು ತಿಳಿಸಿದ್ದಾರೆ. ರೀ ವರ್ಕ್ ಮಾಡಿ ಆಲೋಚನೆ ಮಾಡುತ್ತೇವೆ.  ಗ್ಯಾರಂಟಿ ಯೋಜನೆಗಳ ಜಾರಿಗೆ ನಾವು ಬದ್ಧರಾಗಿದ್ದೇವೆ. ಅಧಿಕಾರಿಗಳು ತಮ್ಮ ಅಭಿಪ್ರಾಯ, ಸಲಹೆ ತಿಳಿಸಿದ್ದಾರೆ. ಯಾರೂ ಕೂಡ ಊಹಾಪೋಹಗಳಿಗೆ ಅವಕಾಶ ನೀಡಬೇಡಿ. ಆ ಬಗ್ಗೆ ಹೆಚ್ಚಿನ ಗಮನ ನೀಡಬೇಡಿ. ನಾವು ನಮ್ಮ ಪ್ರಣಾಳಿಕೆ, ಕೊಟ್ಟಿರುವ ಮಾತಿನ ಬಗ್ಗೆ ಅರಿವಿದೆ.…

Read More

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾಗಡಿ, ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ, ಶಿಡ್ಲಘಟ್ಟ, ಚಂದೂರಾಯನಹಳ್ಳಿ, ಬೆಂಗಳೂರು ಎಚ್​ಎಎಲ್​, ಗೋಪಾಲ್​ನಗರ, ಮಧುಗಿರಿ, ಗೋಣಿಕೊಪ್ಪಲ್, ಹರದನಹಳ್ಳಿ, ತೊಂಡೆಭಾವಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಕುಣಿಗಲ್, ಚಾಮರಾಜನಗರ, ಹೆಸರಘಟ್ಟ, ಬುಕ್ಕಾಪಟ್ಟಣ, ಮಲವಳ್ಳಿ, ಶ್ರವಣಬೆಳಗೊಳ, ಹಾರಂಗಿ, ಗೌರಿಬಿದನೂರಿನಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ…

Read More

ಬೆಂಗಳೂರು: ಕಾಂಗ್ರೆಸ್‌ನ (Congress0 ಚುನಾವಣಾ ಚಾಣಾಕ್ಷ, ಬಳ್ಳಾರಿ ಮೂಲದ ಸುನೀಲ್ ಕನಗೋಲು (Sunil Kanugolu) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಕಾಂಗ್ರೆಸ್‌ನ ಗೆಲುವಿನಲ್ಲಿ ಪ್ರಮುಖ ಪಾತ್ರ ಪೋಷಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದರು. ಜತೆಗೆ ಪೇಸಿಎಂನಂತಹ ಅಭಿಯಾನಗಳ ಮೂಲಕ ಹಿಂದಿನ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರ ಮುಂದೆ ಬಿಂಬಿಸುವಲ್ಲಿ ಯಶಸ್ವಿಯಾಗಿದ್ದರು. ತನ್ಮೂಲಕ ಕಾಂಗ್ರೆಸ್‌ಗೆ ಲಾಭ ತಂದುಕೊಟ್ಟಿದ್ದರು. ಇದೀಗ ಸಿದ್ದರಾಮಯ್ಯ ಅವರು, ಕನುಗೋಲು ಅವರನ್ನೇ ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.

Read More

ಬೆಂಗಳೂರು: ಕರ್ನಾಟಕ ತೋಟಗಾರಿಕೆ ಇಲಾಖೆ (Horticulture department) ವತಿಯಿಂದ ಲಾಲ್‌ಬಾಗ್‌ನಲ್ಲಿ (Lalbagh) ಆಯೋಜಿಸಲಾಗುವ ವಾರ್ಷಿಕ ಮಾವು ಮೇಳವು ಈ ವರ್ಷ ಜೂನ್ 2 ರಂದು ಆರಂಭವಾಗಲಿದೆ. ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ (Lalbagh Botanical Garden) ಆವರಣದಲ್ಲಿ ಮಾವು ಮೇಳ ನಡೆಯಲಿದೆ. ಮಾವಿನ ಮೇಳವು ಜೂನ್ 11 ರವರೆಗೆ 9 ದಿನಗಳ ಕಾಲ ನಡೆಯಲಿದೆ ಮತ್ತು ಎಲ್ಲಾ ಗ್ರಾಹಕರಿಗೆ ಉಚಿತ ಪ್ರವೇಶ ನೀಡಲಾಗಿದೆ. ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದ ಬೆಳೆಗಾರರು ಮಳಿಗೆಗಳನ್ನು ತೆರೆಯಲಿದ್ದು ಮಾವು ಮಾರಾಟ ಮಾಡಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಸುಮಾರು 100 ರಿಂದ 120 ರಷ್ಟು ಮಳಿಗೆಗಳು ಮಾವು ಮೇಳದಲ್ಲಿರುತ್ತವೆ. ಆದರೆ, ಈ ವರ್ಷ ಇಳುವರಿ ಕಡಿಮೆಯಾಗಿರುವುದರಿಂದಾಗಿ ಮಳಿಗೆಗಳ ಸಂಖ್ಯೆಯನ್ನು 40 ಕ್ಕೆ ಇಳಿಸಲಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಈ ವರ್ಷ ಆಲಿಕಲ್ಲು ಮಳೆಯಿಂದಾಗಿ ಮಾವಿನ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಡಿಮೆ ಮಳಿಗೆಗಳನ್ನು ತೆರೆಯಲಾಗುತ್ತಿದೆ.

Read More

ಬೆಂಗಳೂರು: ಬೇಸಿಗೆ ಹಿನ್ನೆಲೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರು ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

Read More

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಎರಡೆರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿ, ಬಿಜೆಪಿ ಮುಖಂಡರ ಬಾಯಿಗೆ ಸಿಕ್ಕು, ಕೊನೆಗೆ ಇದಾ ಆದಾ ಎಂಬ ಚಿಂತೆಯಲ್ಲಿ ತಲೆ ಮೇಲೆ ಕೈ ಹಿಡಿದು ಕುಂತಿದ್ದ ಸಿದ್ದರಾಮಯ್ಯ(Siddaramaiah) ಗೆಲುವನ್ನು ತಮ್ಮದಾಗಿಸಿಕೊಂಡು ರಾಜ್ಯದ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಸದ್ಯ ತಮಗೆ ಈ ಸ್ಥಾನ ಸಿಗುವಂತೆ ಮಾಡಿದ ಮತದಾರ ಪ್ರಭುಗಳಿಗೆ ತಮ್ಮನ್ನು ಭೇಟಿ ಮಾಡಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇನ್ನು ಮುಂದೆ ವರುಣಾ ಕ್ಷೇತ್ರದ(Varuna Constituency) ಜನ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡುವುದು ತುಂಬಾ ಸುಲಭ. ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸುಲಭ ಭೇಟಿಗೆ ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ತಮ್ಮ ಸರ್ಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ವರುಣಾದಿಂದ ಬಂದ ಮತದಾರರು ತಮ್ಮ ಅಡ್ರೆಸ್ ತೋರಿಸಿ ಒಳಗೆ ಹೋಗಲು ಅವಕಾಶ ನೀಡಲಾಗಿದೆ. ಆಧಾರ್, ಐಡಿ ಚೆಕ್ ಮಾಡಿ ವರುಣಾ…

Read More

ಮಂಗಳೂರು: ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ನಿರಂಜನ್ ಅವರ ಮಂಗಳೂರಿನ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡಿಡಿ ಆಗಿದ್ದ ನಿರಂಜನ್, ಇತ್ತೀಚಿಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು.

Read More