ಗಂಗಾವತಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿದ್ದು, ಎಲ್ಲ ಕೂಲಿಕಾರರು ಆರೋಗ್ಯದ ಕಡೆಯೂ ಗಮನಹರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್ ಹೇಳಿದರು. ತಾಲೂಕಿನ ಸಂಗಾಪುರ ಗ್ರಾಮದ ಶ್ರೀ ಲಕ್ಷ್ಮೀ ನಾರಾಯಣ ಕೆರೆ ಹೂಳೆತ್ತುವ ಕಾಮಗಾರಿಸ್ಥಳದಲ್ಲಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೂಲಿಕಾರರಿಗೆ ಅನುಕೂಲ ಆಗಲೆಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಕಾಮಗಾರಿ ಸ್ಥಳದಲ್ಲೇ ಆರೋಗ್ಯ ಶಿಬಿರ ಆಯೋಜಿಸುತ್ತಿದೆ. ಸ್ವಯಂ ಪ್ರೇರಿತರಾಗಿ ಪಾಳ್ಗೊಂಡು ಶಿಬಿರದ ಲಾಭ ಪಡೆದುಕೊಳ್ಳಬೇಕು. ಯಾರೂ ಕೂಡ ತಪಾಸಣೆ ಮಾಡಿಕೊಳ್ಳಲು ಹಿಂದೇಟು ಹಾಕಬಾರದು ಎಂದರು. ಶಿಬಿರದಲ್ಲಿ ಬಿ.ಪಿ., ಶುಗರ್, ಕ್ಷಯ ಸೇರಿ ಇತರೆ ರೋಗಗಳ ಉಚಿತ ತಪಾಸಣೆ ಮಾಡಲಾಗುತ್ತಿದೆ. ಎಲ್ಲ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಗುರುತರ ರೋಗಗಳು ಇದ್ದರೆ ವೈದ್ಯರ ಸಲಹೆಗಳನ್ನು ಪಾಲನೆ ಮಾಡಬೇಕು ಎಂದರು. ನರೇಗಾ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಆಸ್ತಿಗಳ ಸೃಜನೆಯಾಗುತ್ತಿವೆ. ಶಾಲಾ ಕಾಮಗಾರಿಗಳು, ಫಲಾನುಭವಿಗಳಿಗೆ ಜಾನುವಾರು, ಕುರಿ, ಕೋಳಿ ಶೆಡ್…
Author: Prajatv Kannada
ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಕಾಫಿನಾಡು ಚಿಕ್ಕಮಗಳೂರಿನ ಬಯಲು ಸೀಮೆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆಗಾಗಿ ಕಾದಿದ್ದ ರೈತರು ಉತ್ತಮ ಬಿತ್ತನೆ ಬೀಜ ತಂದು ಬಿತ್ತನೆ ಕಾರ್ಯ ಆರಂಭ ಮಾಡಿದ್ದಾರೆ. ತಾಲೂಕಿನ ಬಯಲುಸೀಮೆ ಪ್ರದೇಶದಲ್ಲಿ ಹೆಚ್ಚಾಗಿ ಆಲೂಗಡ್ಡೆ ಬೆಳೆಯುವ ಅಂಬಳೆ, ಸಿರಗಾಪುರ, ಮಳಲೂರು ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ನೂರಾರು ರೈತರು ಹಾಸನ ನಗರದ ಆಲೂಗಡ್ಡೆ ಬಿತ್ತನೆ ಬೀಜ ವ್ಯಾಪಾರಿಗಳಿಂದ 4 ಲಾರಿ ಲೋಡ್ ಬಿತ್ತನೆಗಾಗಿ ಆಲೂಗಡ್ಡೆ ತರಿಸಿ, ಉತ್ತಮ ಲಾಭದ ಆಸೆ ತೋರಿಸಿ ರೈತರಿಗೆ ಆಲೂಗಡ್ಡೆ ಬೀಜವನ್ನು ನೀಡಿದ್ರು. ಹಾಸನದ ಆಲೂಗಡ್ಡೆ ವ್ಯಾಪಾರಿಗಳ ಮಾತು ನಂಬಿದ ನೂರಾರು ರೈತರು, ಎಕರೆಗೆ 60 ಸಾವಿರಕ್ಕೂ ಅಧಿಕ ಹಣವನ್ನ ಖರ್ಚು ಮಾಡಿ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಮಾಡಿದ್ದರು. ಇದೀಗ ಬಿತ್ತನೆ ಮಾಡಿ ಮೂರೇ ದಿನಕ್ಕೆ ಆಲೂಗಡ್ಡೆ ಬೀಜ ಕೊಳೆಯಲಾರಂಭಿಸಿದೆ. ಹಾಸನ ಆಲೂಗಡ್ಡೆ ಬಿತ್ತನೆ ಬೀಜ ವ್ಯಾಪಾರಿಗಳಿಂದ ತಂದ ಆಲೂಗಡ್ಡೆಯನ್ನೇ ಸಿರಗಾಪುರ, ಅಂಬಳೆ ,ಮಳಲೂರು ಸುತ್ತಮುತ್ತಲಿನ ನೂರಾರು ರೈತರು 250 ಎಕರೆಗೂ ಅಧಿಕ ಜಮೀನಿನಲ್ಲಿ ಬಿತ್ತನೆ ಮಾಡಿದ್ದಾರೆ.…
ತುಮಕೂರು: ಪೊಲೀಸರು ಠಾಣೆಗೆ ದೇವರುಗಳನ್ನು ಕರೆಸಿ ವಿಶೇಷ ಪೂಜೆ ಮಾಡಿರುವ ಘಟನೆ ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸರು ಸಮವಸ್ತ್ರದಲ್ಲಿಯೇ ಠಾಣೆಯ ಎದುರಿನ ಹಳ್ಳಿಕಟ್ಟೆಯಿಂದ ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಶ್ರೀ ಭೂತರಾಯ ದೇವರುಗಳನ್ನು ಹೊತ್ತು ತಂದು ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಬಳಿಕ ಇಡೀ ದಿನ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ ಮಾಡಿ ಆರತಿ ಎಡೆ ಸೇವೆ ನೇರವೇರಿಸಿದ್ದಾರೆ. ಪೂಜೆ ನಂತರ ಸಾರ್ವಜನಿಕರಿಗೆ ಪಾನಕ ಫಲಹಾರ ನೀಡಿದ್ದಾರೆ. ಇಡೀ ದಿನ ಪೊಲೀಸ್ ಠಾಣೆ ಯಲ್ಲಿ ವಿಶೇಷ ಅಲಂಕಾರ, ಪೂಜೆ ಪೂನಸ್ಕಾರ.ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಶ್ರೀ ಭೂತರಾಯ ದೇವರನ್ನ ಕರೆಸಿ ಪೂಜೆ.ಪೊಲೀಸ್ ಠಾಣೆಯಲ್ಲೆ ದೇವರನ್ನ ಕೂರಿಸಿ ಆರತಿ ಎಡೆ ಸೇವೆ ನೆರವೇರಿಸಿದ ಪೊಲೀಸರು.ದೇವರನ್ನ ಹೊತ್ತು ತಂದ ಪೊಲೀಸರು.ಸಮವಸ್ತ್ರ ದಲ್ಲಿಯೇ ದೇವರನ್ನ ಹೊತ್ತು ತಂದು ಪೊಲೀಸರಿಂದ ವಿಶೇಷ ಪೂಜೆ.ಪೊಲೀಸ್ ಠಾಣೆ ಎದುರಿನ ಹಳ್ಳಿಕಟ್ಟೆಯಿಂದ ದೇವರುಗಳನ್ನ ಹೊತ್ತು ತಂದ ಪೊಲೀಸ್ ಸಿಬ್ಬಂದಿ.ಸಾರ್ವಜನಿಕರಿಗೆ ಪಾನಕ ಫಲಹಾರ ವ್ಯವಸ್ಥೆ ಮಾಡಲಾಗಿತ್ತು.
ಬೆಂಗಳೂರು: ಬೆಳ್ಳಂದೂರು ಕೆರೆಗೆ ಸಚಿವ ಈಶ್ವರ್ ಖಂಡ್ರೆ ಇಂದು ಭೇಟಿ ನೀಡಿ, ಕೆರೆ ಮಾಲಿನ್ಯದ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದರು. ಬಳಿಕ ಮಾತನಾಡಿದ ಸಚಿವರು, ಕೆರೆ ಮಾಲಿನ್ಯದಿಂದ ಸುದ್ದಿಯಾಗಿದೆ. ಅದು ಬದಲಾಗಬೇಕು. ಕೆರೆಯನ್ನು ಸ್ವಚ್ಛಗೊಳಿಸಲು ಮತ್ತು ಹೂಳು ತೆಗೆಯಲು ಎನ್ಜಿಟಿ ಸ್ಪಷ್ಟ ಆದೇಶ ಹೊರಡಿಸಿದೆ ಆದರೆ ಅರ್ಧದಷ್ಟು ಕೆಲಸ ಮಾತ್ರ ಪೂರ್ಣಗೊಂಡಿದೆ. ಇದು ಕೊಳಚೆನೀರಿನಿಂದ ತುಂಬಿ ಹೋಗಿದೆ. ಈ ಕೆರೆಗೆ ತ್ಯಾಜ್ಯ ನೀರು ಒಳಹರಿವು ತಡೆಯಲು ಅಗತ್ಯವಿರುವ ಶುದ್ಧೀಕರಣ ಘಟಕಗಳು 2024 ರಲ್ಲಿ ಪೂರ್ಣಗೊಳ್ಳಲಿದೆ. ಕೆರೆಯ ಮರುಸ್ಥಾಪನೆಯಲ್ಲಿ ಯಾವುದೇ ವಿಳಂಬವನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಈಶ್ವರ್ ಖಂಡ್ರೆ ತಿಳಿಸಿದರು. ನೀರಿನ ಗುಣಮಟ್ಟದ ಕುರಿತು ದಿನದ ವರದಿ ನೀಡಲು ಅಧಿಕಾರಿಗಳು ವಿಫಲರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಖಂಡ್ರೆ, ಈ ಬಗ್ಗೆ ವಿವರವಾದ ವರದಿಯನ್ನು ಕೇಳಿದರು. ಬೆಳ್ಳಂದೂರು ಕೆರೆಯ ಸುತ್ತಲಿನ ಪ್ರದೇಶದಲ್ಲಿರುವ 490 ಕೈಗಾರಿಕೆಗಳ ಪೈಕಿ ಹಲವೆಡೆ ಶುದ್ಧೀಕರಣ ಘಟಕಗಳನ್ನು ಅಳವಡಿಸಿಲ್ಲ, ಅಧಿಕಾರಿಗಳು ಕೋಟ್ಯಂತರ ರೂಪಾಯಿ ದಂಡ…
ಬೆಂಗಳೂರು: ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೆಬ್ಬಗೋಡಿಯ ಹುಲಿಮಂಗಲದ ಕ್ವಾರಿಯಲ್ಲಿ ಘಟನೆ ಜರುಗಿದೆ. 12 ವರ್ಷದ ಹಾಸನ ಮೂಲದ ತೀರ್ತೇಶ್ ಹಾಗೂ 14 ವರ್ಷದ ಫೈಸಲ್ ಖಾನ್ ಮೃತ ಬಾಲಕರು ಎಂದು ಗುರುತಿಸಲಾಗಿದೆ. ಮೃತರು, ಎಲೆಕ್ಟ್ರಾನಿಕ್ ಸಿಟಿ ಬಳಿಯ ಮಾರಗೊಂಡನ ಹಳ್ಳಿ ಯಲ್ಲಿ ವಾಸವಾಗಿದ್ದರು. ನೆನ್ನೆ ಸಂಜೆ 5 ಗಂಟೆಯಲ್ಲಿ ಹೆಬ್ಬಗೋಡಿಯ ಹುಲಿಮಂಗಲದ ಕ್ವಾರಿಯಲ್ಲಿ ಈಜಲು ಬಂದಿದ್ದರು. ಈ ವೇಳೆ ಅವರು ನೀರು ಪಾರಾಗಿದ್ದಾರೆ. ಇನ್ನೂ ಮೃತ ದೇಹಗಳಿಗೆ ಅಗ್ನಿಶಾಮಕ ದಳದ ಸಿಬ್ಬಂದಿ, ಶೊಧ ಕಾರ್ಯ ನಡೆಸುತ್ತಿದ್ದು, ಹೆಬ್ಬಗೋಡಿ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. 9008568033
ಬೆಂಗಳೂರು: ಕುಸ್ತಿಪಟುಗಳ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಮಾಜಿ ಶಾಸಕ ಸಿಟಿ ರವಿ ಆರೋಪಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕುಸ್ತಿಪಟುಗಳ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಂದು ಹೀನಾಯ ಸೋಲನ್ನು ದಿಟ್ಟಿಸಿ ನೋಡುತ್ತಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡಲು ಕುಸ್ತಿಪಟುಗಳನ್ನು ಬಳಸಿಕೊಳ್ಳುತ್ತಿದೆ. ತುಕ್ಡೆ ತುಕ್ಡೆ ಗ್ಯಾಂಗ್” ನಾಯಕನಾಗಿ ತನ್ನನ್ನು ತಾನು ಕುಗ್ಗಿಸಿಕೊಂಡ ಪಕ್ಷಕ್ಕೆ ಭಾರತೀಯರು ತಕ್ಕ ಪಾಠ ಕಲಿಸುತ್ತಾರೆ.’ ಎಂದು ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು. ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು: ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಸರ್ಕಾರಕ್ಕೆ ಮಾಜಿ ಸಚಿವ ಗೋವಿಂದ ಕಾರಜೋಳ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್‍ನವರು, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಹಾಗೂ ಈಗಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ನಾಡಿನ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟಿದ್ದರು. ಅಲ್ಲದೆ, ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷವು ಮೋಸ, ವಂಚನೆ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಹೋಗುವುದನ್ನು ಸ್ವಾತಂತ್ರ್ಯಾನಂತರದ 60 ವರ್ಷಗಳಲ್ಲಿ ಮಾಡುತ್ತಲೇ ಬಂದಿದೆ. ಮೊದಲ 60 ವರ್ಷಗಳಲ್ಲಿ ಜಾತಿ, ಜಾತಿ, ಧರ್ಮ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಆಡಳಿತ ಮಾಡಿದ್ದರು ಎಂದು ಕಿಡಿಕಾರಿದರು.
ಬೆಂಗಳೂರು: ಕಿದ್ವಾಯಿ ಆಸ್ಪತ್ರೆಯಲ್ಲಿ ರಾತ್ರಿ ಸಮಯದಲ್ಲಿ ಐಸಿಯು ನಲ್ಲಿ ವೈದ್ಯರು ಇರೋದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಆಸ್ಪತ್ರೆಯಲ್ಲಿನ ಸಿಬ್ಬಂದಿ ಮತ್ತು ವೈದ್ಯರು ಪ್ರಭಾವಿ ವ್ಯಕ್ತಿಗಳು ಮತ್ತು ಲಂಚಕೋರರಿಗೆ ಆದ್ಯತೆಯ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ವೈದ್ಯಕೀಯ ವರದಿಗಳನ್ನು ನೀಡಲು ಒಂದು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಬಾಯಿಯ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಲು ನಾನು ಸುಮಾರು 2 ತಿಂಗಳು ಕಾಯುತ್ತಿದ್ದೆ. ಅಲ್ಲದೆ, ಆಸ್ಪತ್ರೆಯಲ್ಲಿ ಸರಿಯಾದ ಮೂಲಸೌಕರ್ಯಗಳ ಕೊರತೆಯಿದೆ ರೋಗಿಯೊಬ್ಬರು ದೂರಿದ್ದಾರೆ. ಇನ್ನೂ ಆಸ್ಪತ್ರೆ ಆವರಣದ ಬಳಿ ಕಸದ ರಾಶಿ ಮತ್ತು ಎಂಎನ್ಸಿಯಿಂದ ನೀಡಲಾದ ವಸತಿ ನಿಲಯದ ಅವ್ಯವಸ್ಥೆಯ ಬಗ್ಗೆ ಇತರ ದೂರುಗಳು ಸಹ ಕೇಳಿಬಂದವು.
ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಚಿವರು ಸಭೆ ನಡೆಸಿದರು. 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನದಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ 200 ಯೂನಿಟ್ವರೆಗೂ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿತ್ತು. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳಿಸುವಂತೆ ಸಾರ್ವಜನಿಕರಿಂದ ಒತ್ತಡ ತೀವ್ರಗೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಸಚಿವರ ಸಭೆ ಕರೆದಿದ್ದಾರೆ. ಸಭೆಗೆ ಪೂರಕ ಮಾಹಿತಿಯೊಂದಿಗೆ ಹಾಜರಾಗುವ ಉದ್ದೇಶದಿಂದ ಸಚಿವ ಜಾರ್ಜ್ ಅವರು, ಇಂಧನ ಇಲಾಖೆಯ ಹಿರಿಯ ಆಧಿಕಾರಿಗಳ ಜತೆ ಸಭೆ ನಡೆಸಿ ಅಂಕಿ-ಅಂಶಗಳ ಸಹಿತ ಮಾಹಿತಿ ಪಡೆದುಕೊಂಡರು. ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಜಾರಿ ಸದ್ಯಕ್ಕೆ ಕಷ್ಟ ಅಂತಾ ಅಧಿಕಾರಿಗಳ…