Author: Prajatv Kannada

ಹುಬ್ಬಳ್ಳಿ: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ(Karnataka Budget 2023)  ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟು ಕೊಂಡು ರೂ.3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಆ ಮೂಲಕ ರಾಜ್ಯದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ್ (Jagadish Shetter)ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಬದ್ಧವಾಗಿದೆ. ಆ ಹಿನ್ನೆಲೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಇವುಗಳ ಜಾರಿಗೆ ರೂ.52 ಸಾವಿರ ಕೋಟಿ ಅಗತ್ಯವಿದ್ದು, ರಾಜ್ಯದ 1 ಕೋಟಿಗೂ ಅಧಿಕ ಜನಸಾಮಾನ್ಯರಿಗೆ ಮಾಸಿಕ 4 ರಿಂದ 5 ಸಾವಿರ ನೀಡಲಾಗುವುದು. ಅಲ್ಲದೇ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಸಹ ಕೈಬಿಡಲಾಗುವುದು. ರೈತರಿಗೆ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ರೂ. 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ದೀರ್ಘಾವಧಿ…

Read More

ಅಹಮದಾಬಾದ್: ಮಾನನಷ್ಟ ಪ್ರಕರಣದಲ್ಲಿ (Defamation Case) ಸೂರತ್ ನ್ಯಾಯಾಲಯ (Surat Court) ನೀಡಿದ್ದ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಇದೀಗ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ರಾಗಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court) ವಜಾ ಮಾಡಿದೆ. ಸುದೀರ್ಘ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ಆದೇಶ ಪ್ರಕಟಿಸಿದೆ. ಸೂರತ್ ನ್ಯಾಯಾಲಯ ನೀಡಿದ ಆದೇಶ ಸರಿಯಾಗಿದೆ ಮತ್ತು ಕಾನೂನುಬದ್ಧವಾಗಿದೆ ಎನ್ನುವ ಮೂಲಕ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಶಿಕ್ಷೆಯ ತಡೆ ನಿರಾಕರಿಸುವುದರಿಂದ ರಾಹುಲ್ ಗಾಂಧಿ ಅವರಿಗೆ ಅನ್ಯಾಯವಾಗುವುದಿಲ್ಲ, ಶಿಕ್ಷೆಯನ್ನು ತಡೆಹಿಡಿಯಲು ಯಾವುದೇ ಸಮಂಜಸವಾದ ಕಾರಣವಿಲ್ಲ. ವಿಧಿಸಲಾದ ಆದೇಶವು ಸರಿ ಮತ್ತು ಕಾನೂನುಬದ್ಧವಾಗಿದೆ. ಅನರ್ಹತೆಯು ಕೇವಲ ಸಂಸದರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ. ಇದಲ್ಲದೆ ಅರ್ಜಿದಾರರ ವಿರುದ್ಧ ಹತ್ತು ಪ್ರಕರಣಗಳು ಬಾಕಿ ಉಳಿದಿವೆ. ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಸಂಸದರಾಗಿ ತಮ್ಮ ಸ್ಥಾನಮಾನವನ್ನು…

Read More

ಮೈಸೂರು: ವೇಶ್ಯವಾಟಿಕೆ ಅಡ್ಡೆ(Prostitution) ಮೇಲೆ ದಾಳಿ ನಡೆಸಿರುವ ಪೊಲೀಸರು  7  ಮಂದಿ ಬಂಧಿಸಲಾಗಿದೆ. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ನಗರದ ಬೋಗಾದಿಯಲ್ಲಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಒಡನಾಡಿ ಸೇವಾ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಅವರು, ಖಚಿತ ಮಾಹಿತಿ ನೀಡಿದ ಮೇರೆಗೆ ಸರಸ್ವತಿಪುರಂ ಪೋಲಿಸರು ಹಾಗೂಒಡನಾಡಿ ಸೇವಾ ಸಂಸ್ಥೆ ಜಂಟಿ ಕಾರ್ಯಾಚರಣೆ‌ ನಡೆಸಿ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಮಾಡಿದ್ದಾರೆ. ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ (Karnataka Rains ) ಮಳೆಯ ಪರಿಣಾಮವಾಗಿ (Landslide) ಭೂ ಕುಸಿತಗೊಂಡಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿಯಿತು ಬಾವಿ. ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಗೆ ಎಂಬಲ್ಲಿ ಘಟನೆ ನಡೆದಿದೆ.ನೋಡು ನೋಡುತ್ತಿದ್ದಂತೆ ಬಾವಿಯೂ ಸಹ ಪಾತಾಳಕ್ಕೆ ಕುಸಿದಿದೆ. ಅಲ್ಲದೇ ಬಾವಿ ಪಕ್ಕದಲ್ಲಿದ್ದ ಮನೆಯು ಅಪಾಯದಲ್ಲಿದೆ. ಭೂಕುಸಿತದ ಪರಿಣಾಮವಾಗಿ ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಲ್ಲಿ ಬಿರುಕು ಮೂಡಿದ್ದು, ಅಲ್ಲಿನ ಪರಿಸರದ ಜನರು ಆತಂತಕದಲ್ಲಿದ್ದಾರೆ. ತಕ್ಷಣ ಅಗ್ನಿಶಾಮಕ ದಳದಿಂದ ಮನೆ ಮಂದಿಯ ರಕ್ಷಣೆ ಕಾರ್ಯಾಚರಣೆಯಾಗಿದ್ದು, ಮನೆ ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

Read More

ತುಮಕೂರು : ತುಮಕೂರಿನ ಕೆಸರುಮಡು ಗ್ರಾಮದಲ್ಲಿ ಸೋಮವಾರ ನಡೆಯಬೇಕಿದ್ದ ಜಾತ್ರೆಯು ಕರಗಲಮ್ಮ ದೇವಿಯ (Karalagamma Devi) ವೀರಗಲ್ಲು ಇದ್ದ ಪ್ರದೇಶ ಮತ್ತು ಅಲ್ಲಿ ಪೂಜೆ ಮಾಡುವ ವಿಚಾರವಾಗಿ ರದ್ದಾಗಿತ್ತು. ಜಾತ್ರೆ ರದ್ದಾಗಿದ್ದಕ್ಕೆ ಕೆಸರುಮಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಿನ್ನೆ ಎರಡೂ ಕೋಮಿನ ಮುಖ್ಯಸ್ಥರೊಂದಿಗೆ ಎಸ್ಪಿ ರಾಹುಲ್ ಕುಮಾರ್ ಶಹಾಪೂರ್ ವಾಡ್ ಸಂಧಾನ ಸಭೆ ನಡೆಸಿದರು. ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಜಾತ್ರೆಯನ್ನು ಊರಿನವರೆಲ್ಲ ಆರತಿ, ಮೆರವಣಿಗೆ ಮಾಡುವುದರ ಮೂಲಕ ಅದ್ದೂರಿಯಾಗಿ ನೆರವೇರಿಸಿದರು. ಎರಡು ಕೋಮುಗಳ ಸಾಮರಸ್ಯಕ್ಕೆ ಧಕ್ಕೆಯಾಗಿದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ತಹಶಿಲ್ದಾರ್ ಸಿದ್ದೇಶ್ ಅವರು ಜಾತ್ರೆಗೆ ಸ್ಟೇ ನೀಡಿದ್ದರು. ಮಸೀದಿ ಪಕ್ಕದಲ್ಲಿದ್ದ ಕಲ್ಲಿಗೆ ಪೂಜೆ ಸಲ್ಲಿಸಬಾರದೆಂದು ಮುಸ್ಲಿಂ ಮುಖಂಡರು ಸ್ಟೇ ತಂದಿದ್ದರು. ಹೀಗಾಗಿ ಎಸ್ಪಿ, ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಿಂದ ಸಮಸ್ಯೆ ಇಥ್ಯರ್ತ ಮಾಡಿದರು. ಅದೇ ಕಾರಣಕ್ಕೆ ಕರಗಲಮ್ಮ ಜಾತ್ರೆಯು ಪೊಲೀಸ್ ಬಂದೋಬಸ್ತ್ ನಲ್ಲಿ ನಡೆಸಲಾಯಿತು. ಸದ್ಯ ಕೆಸರುಮಡು ಗ್ರಾಮದಲ್ಲಿ ಶಾಂತಿ ಸೌಹಾರ್ದತೆಯಿಂದ ಜಾತ್ರೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

Read More

ರಾಯಚೂರು: ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ ನೀಡಲಾಗಿದ್ದು, ರಾಯಚೂರಿನ ಕಲ್ಮಲಾ ಜಂಕ್ಷನ್​ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ (Hybrid Annuity) ಮಾದರಿಯ ರಸ್ತೆ ನಿರ್ಮಾಣಕ್ಕೆ 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಜೊತೆಗೆ 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ ನಿರ್ಧರಿಸಲಾಗಿದೆ.

Read More

ದಾವಣಗೆರೆ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಶಿಸ್ತು ಸಮಿತಿ ಅಧ್ಯಕ್ಷರು ಯಾರೆಂದೇ ಗೊತ್ತಿಲ್ಲ. ಅಲ್ಲದೆ, ನಾನು ಯಾವುದೇ ರೀತಿಯಲ್ಲೂ ತಪ್ಪು ಮಾತನಾಡಿಲ್ಲ. ನಮ್ಮೆಲ್ಲ ಕಾರ್ಯಕರ್ತರು ಮಾತನಾಡುತ್ತಿರುವುದನ್ನೇ ಹೇಳಿದ್ದೇನೆ ಅಷ್ಟೆಎಂದರು.  ನನ್ನ ಮಾತುಗಳನ್ನು ಕೇಳಿ, ನಾನು ಹೇಳಿದ್ದನ್ನು ನೋಡಿ ಪಕ್ಷದ ನಾಯಕರೇ ನನಗೆ ಕರೆ ಮಾಡಿ, ನೀವು ಮಾತನಾಡಿದ್ದು ಸರಿಯಾಗಿದೆ ಎನ್ನುತ್ತಿದ್ದಾರೆ ಎಂದು ಹೇಳಿದ(Renukacharya) ರೇಣುಕಾಚಾರ್ಯ, ನಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ (yadiyurappa)ವಿರುದ್ಧ ಮಾತನಾಡಿದವರಿಗೆ ಮಾತ್ರ ಪಕ್ಷದಲ್ಲಿ ರಾಜ ಮರ್ಯಾದೆನಾ ಎಂದು ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದರು. ಪಕ್ಷದಲ್ಲಿ 11 ಮಂದಿಗೆ ನೋಟಿಸ್‌ ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ, ನನಗೆ ನೀಡಿದ್ದ ನೋಟಿಸ್‌ವೊಂದನ್ನು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುತ್ತಾರೆ. ನಾನು ಯಾವುದೇ ಕಾರಣಕ್ಕೂ ಇಂಥ ನೋಟಿಸ್‌ಗೆ ಉತ್ತರ ಕೊಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ ಸೇರಲ್ಲ: ಹಿರಿಯರಾದ ಕಾಂಗ್ರೆಸ್‌ ನಾಯಕ, ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರ ಜೊತೆಗೆ ರಾಜಕೀಯ ಹೊರತುಪಡಿಸಿ ಉತ್ತಮ ಒಡನಾಟವಿದೆ. ನಾನು ಈಗಲೂ ನಮ್ಮ ಪಕ್ಷದಲ್ಲೇ ಇದ್ದೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸೇರುವುದಿಲ್ಲ.…

Read More

ಬೆಂಗಳೂರು: ಕೇಂದ್ರ ಸರ್ಕಾರ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ನಲ್ಲಿ ಘೊಷಿಸಲಾಯಿತು. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಮತ್ತು ನಿಟ್ಟಿನಲ್ಲಿ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಹೇಳಿದರು.

Read More

ಬೆಂಗಳೂರು: ಹಿಂದುಳಿದ ವರ್ಗಗಳ ಬಗೆಗಿನ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಮತ್ತು ಬದ್ಧತೆಗೆ ನಾನು ಇಲ್ಲಿಯವರೆಗೆ ಮಂಡಿಸಿರುವ ಬಜೆಟ್‌ಗಳೇ ಸಾಕ್ಷಿ. ಸಾಮಾಜಿಕ ನ್ಯಾಯ ಎನ್ನುವುದು ರಾಜಕೀಯ ಅಸ್ತ್ರ ಅಲ್ಲ. ದಮನಿತರಿಗೆ ಅವಕಾಶ – ಪ್ರಾತಿನಿಧ್ಯಗಳನ್ನು ನೀಡುವ ಜವಾಬ್ದಾರಿ ಎಂದು ನಾನು ತಿಳಿದುಕೊಂಡಿದ್ದೇನೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಅವಶ್ಯಕ ಅನುದಾನ ನೀಡದೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದೇ ನಿರ್ಲಕ್ಷಿಸಿರುವುದು ವಿಷಾದನೀಯ ಬೆಳವಣಿಗೆ. ವೈದ್ಯಕೀಯ, ಇಂಜಿನಿಯರಿಂಗ್‌ ಮತ್ತು ಇತರೆ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಅರಿವು ಎಂಬ ಯೋಜನೆಯ ಮುಖಾಂತರ ವಾರ್ಷಿಕ ಒಂದು ಲಕ್ಷ ರೂ.ಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತಿತ್ತು. ಇದರಿಂದ 11,956 ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ, ಈ ಕಾರ್ಯಕ್ರಮವನ್ನು ಹಿಂದಿನ ಸರ್ಕಾರವು 2020-21ನೇ ಸಾಲಿನಿಂದ ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರವು ಪುನರ್‌ ಚಾಲನೆ ನೀಡಲಿದೆ. ವಿದ್ಯಾಸಿರಿ ಯೋಜನೆಯಡಿ ಸರ್ಕಾರದ ವಸತಿ ನಿಲಯಗಳಲ್ಲಿ ಪ್ರವೇಶ ದೊರಕದ ಹಿಂದುಳಿದ ವರ್ಗಗಳ…

Read More

ಬೆಂಗಳೂರು: ಸಮಾಜದಲ್ಲಿ ಹಲವು ಪೀಳಿಗೆಗಳಿಂದ ತುಳಿತಕ್ಕೊಳಗಾದ, ಅವಕಾಶ ವಂಚಿತರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯುದಯಕ್ಕೆ ನಮ್ಮ ಸರ್ಕಾರದ ಬದ್ಧತೆ ಪ್ರಶ್ನಾತೀತ. ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಿಗೆ ಈ ಹಿಂದೆ, ಅಂದರೆ, 2012-13ನೇ ಸಾಲಿನಲ್ಲಿ ಹಾಗೂ ಅದಕ್ಕೂ ಹಿಂದಿನ ಸಾಲುಗಳಲ್ಲಿ ವೈಜ್ಞಾನಿಕವಾಗಿ ಅನುದಾನ ಹಂಚಿಕೆಯಾಗುತ್ತಿರಲಿಲ್ಲ.  ಈ ನ್ಯೂನತೆಯನ್ನು ಸರಿಪಡಿಸುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯನ್ನಾಧರಿಸಿ, ಅವರ ಅಭಿವೃದ್ಧಿಗೆ ಅನುದಾನ ಹಂಚಿಕೆ ಮಾಡುವ ಹಾಗೂ ನಿರ್ದಿಷ್ಟ ಉದ್ದೇಶಗಳಿಗೇ ಅನುದಾನ ಬಳಕೆಯಾಗುವ ಕುರಿತು ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ, 2013ನ್ನು (SCSP/TSP Act, 2013) ಜಾರಿಗೆ ತಂದ ಶ್ರೇಯ ನಮ್ಮ ಸರ್ಕಾರದ್ದಾಗಿದೆ. ಈ ಯೋಜನೆಯ ಅನುದಾನ ಹಂಚಿಕೆಯಲ್ಲಿ ವ್ಯಾಪಕ ಬದಲಾವಣೆಯಾಗಿದ್ದು, 2013-14ರಲ್ಲಿ 8,988 ಕೋಟಿ ರೂ. ಇದ್ದ ಹಂಚಿಕೆ, 2014-15 ರಲ್ಲಿ 13,043 ಕೋಟಿ ರೂ.…

Read More