ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಈಗಾಗಲೇ ತನ್ನದೇ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದಾನೆ. ಇದೀಗ ಕೈಲಾಸಕ್ಕೆ ತನ್ನ ಆತ್ಮೀಯ ಶಿಷ್ಯ, ನಟಿ ರಂಜಿತಾರನ್ನು ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ ಅಲ್ಲಿಯೇ ನೆಲೆಯೂರಿದ್ದಾನೆ. ಇದೀಗ ಆ ದೇಶಕ್ಕೆ ಪ್ರಧಾನಿಯನ್ನು ನೇಮಕ ಮಾಡಿದ್ದಾನೆ. ನಟಿ ರಂಜಿತಾ ಕಾರಣದಿಂದಾಗಿಯೇ ನಿತ್ಯಾನಂದ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದು, ಇಬ್ಬರ ನಡುವಿನ ಖಾಸಗಿ ವಿಡಿಯೋ ವಿಚಾರವಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. ನಂತರ ದೇಶವನ್ನೇ ಬಿಡಬೇಕಾಗಿ ಬಂತು. ದೇಶವನ್ನು ತೊರೆಯುವಾಗ ತನ್ನ ಅಷ್ಟೂ ಶಿಷ್ಯರನ್ನು ಕರೆದೊಯ್ದು, ಹೊಸ ದೇಶ ಕಟ್ಟಿ ಮತ್ತೆ ಅಚ್ಚರಿ ಮೂಡಿಸಿದೆ. ಈ ದೇಶಕ್ಕೆ ರಂಜಿತಾ ಅವರನ್ನು ಪ್ರಧಾನಿ ಮಾಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ತನ್ನ ದೇಶದ ಕರೆನ್ಸಿಯನ್ನು ನಿತ್ಯಾನಂದ ಬಿಡುಗಡೆ ಮಾಡಿದ್ದ. ತನ್ನ ದೇಶದ ವೀಸಾ ಕೂಡ ಘೋಷಿಸಿದ್ದ. ಕೈಲಾಸ ದೇಶಕ್ಕೆ…
Author: Prajatv Kannada
ಪ್ರತಿ ವರ್ಷ ಜುಲೈ 7ರಂದು ವಿಶ್ವ ಚಾಕೋಲೆಟ್ ದಿನ (International Chocolate Day)ವನ್ನು ಆಚರಣೆ ಮಾಡಲಾಗುತ್ತದೆ. 1550ರಲ್ಲಿ ಜುಲೈ 7 ರಂದು ಯುರೋಪ್ ಚಾಕೋಲೆಟ್ ಎಂಬ ಅದ್ಭುತ ತಿನಿಸನ್ನು ಪರಿಚಯಿಸಿತು. ಆ ಬಳಿಕ ಜಗತ್ತಿನ ಇತರ ದೇಶಗಳಲ್ಲೂ ವೆರೈಟಿ ಚಾಕೋಲೇಟ್‌ಗಳನ್ನು ತಯಾರಿಸಲಾಯಿತು. ಜುಲೈ 7ರಂದು ಯುರೋಪ್ ನವರು ವೆರೈಟಿ ಚಾಕೋಲೆಟ್ ರೆಸಿಪಿ (Recipe)ಗಳನ್ನು ತಯಾರಿಸಿ ಸೇವಿಸುತ್ತಾರೆ. ಯುನೈಟೆಡ್ ಸ್ಟೇಟ್‌ನಲ್ಲಿ ಮಾತ್ರ ಅಕ್ಟೋಬರ್ 28ರಂದು ಚಾಕೋಲೆಟ್ ಡೇಯನ್ನು ಆಚರಿಸಲಾಗುತ್ತದೆ. ಆರೋಗ್ಯಕ್ಕೆ ಒಳ್ಳೆಯದಲ್ಲ ಅನ್ನೋ ಕಾರಣಕ್ಕೆ ಪೋಷಕರು, ಮಕ್ಕಳು ಚಾಕೋಲೇಟ್ ತಿನ್ನುವುದನ್ನು ತಡೆಯುತ್ತಾರೆ. ಆದ್ರೆ ಚಾಕೋಲೇಟ್ಸ್ ತಿನ್ನೋಂದ್ರಿದಲೂ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಸಾಮಾನ್ಯವಾಗಿ ಎಲ್ಲರೂ ಡಾರ್ಕ್ ಚಾಕೊಲೇಟ್ಸ್ ಹೆಚ್ಚಾಗಿ ತಿನ್ನುತ್ತಾರೆ. ಆದ್ರೆ ಕೇವಲ ಡಾರ್ಕ್ ಚಾಕೋಲೇಟ್ ಮಾತ್ರವಲ್ಲ ವೈಟ್ ಚಾಕೊಲೇಟ್ (White Chocolate) ತಿನ್ನೋದ್ರಿಂದಾನೂ ಆರೋಗ್ಯ (Health)ಕ್ಕೆ ಅದೆಷ್ಟು ಪ್ರಯೋಜನವಿದೆ ಗೊತ್ತಾ ? ಡಾರ್ಕ್ ಚಾಕೊಲೇಟ್ ಎಂಬ ಮ್ಯಾಜಿಕಲ್ ಪವರ್ ಇರುವ ಸಿಹಿ ಔಷಧ ಒತ್ತಡ ನಿವಾರಕ: ಡಾರ್ಕ್ ಚಾಕಲೇಟ್ ನಲ್ಲಿ ಕಂಡುಬರುವ ಒಂದು ಘಟಕವೆಂದರೆ ತೆಯೋಬ್ರೊಮೈನ್. ತೆಯೋಬ್ರೊಮೈನ್ ಕೆಫೀನ್ ನಂತೆಯೇ ಇದೆ. ಈ ಚಾಕಲೇಟ್ ಸೇವನೆ…
ಖೈಬರ್ ಪಖ್ತುಂಖ್ವಾ (ಪಾಕಿಸ್ತಾನ): ಪಾಕಿಸ್ತಾನದ ಶಾಂಗ್ಲಾ ಜಿಲ್ಲೆಯ ಮಾರ್ತುಂಗ್ ಖಾಸ್‌ನಲ್ಲಿ ಮರಳು ದಿಬ್ಬ ಕುಸಿದು ಬಿದ್ದ ಪರಿಣಾಮ ಒಟ್ಟು 8 ಮಕ್ಕಳು ಜೀವಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮರಳು ದಿಬ್ಬ ಕುಸಿದು ಬಿದ್ದ ಸಂದರ್ಭದಲ್ಲಿ ಮಕ್ಕಳು ಕ್ರಿಕೆಟ್ ಆಡುತ್ತಿದ್ದರು ಎನ್ನಲಾಗುತ್ತಿದೆ. ಆರಂಭದಲ್ಲಿ ಐವರು ಸಾವನ್ನಪ್ಪಿದರು. ಬಳಿಕ ಮರಳಿನಡಿ ಸಿಲುಕಿದ್ದ ಐವರನ್ನು ಹೊರ ತೆಗೆಯಲಾಯಿತಾದರೂ ಇವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಕೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿಡ್ನಿ: ಭಾರತೀಯ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಕೆಯ ಮಾಜಿ ಪ್ರಿಯಕರ ಕೈಕಾಲು ಕಟ್ಟಿ ಜೀವಂತ ಸಮಾಧಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆಸ್ಟ್ರೇಲಿಯಾ ನ್ಯಾಯಾಲಯ ನಡೆಸಿದ್ದು, ʼಸೇಡಿನ ಹಿನ್ನಲೆಯಲ್ಲಿʼ ಯುವತಿಯನ್ನು ಹತ್ಯೆಗೈದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. 2021ರ ಮಾರ್ಚ್ ತಿಂಗಳಲ್ಲಿ 21 ವರ್ಷದ ಜಾಸ್ಮೀನ್ ಕೌರ್ ಎಂಬ ಯುವತಿಯನ್ನು ಆಕೆಯ ಮಾಜಿ ಗೆಳೆಯ ತಾರಿಕ್ ಜೋತ್ ಸಿಂಗ್ ಅಪಹರಿಸಿದ್ದ. ಬಳಿಕ ಆಕೆಯನ್ನು ಕೇಬಲ್‌ಗಳಿಂದ ಕಟ್ಟಿ, ಗುಂಡಿ ತೋಡಿ ಜೀವಂತ ಸಮಾಧಿ ಮಾಡಿದ್ದ. ತನ್ನೊಂದಿಗೆ ಸಂಬಂಧ ಕಡಿದುಕೊಂಡಿರುವ ದ್ವೇಷದಲ್ಲಿ ಆರೋಪಿ ಈ ಬರ್ಬರ ಕೃತ್ಯ ಎಸಗಿದ್ದ ಎಂದು ಪ್ರಾಸಿಕ್ಯೂಟರ್ ಕಾರ್ಮೆನ್ ಮ್ಯಾಟಿಯೊ ಹೇಳಿದ್ದಾರೆ. ಸಂತ್ರಸ್ತ ಯುವತಿ ಹಾಗೂ ಆರೋಪಿಯ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದ್ದ ಹಿನ್ನೆಲೆಯಲ್ಲಿ ಯುವತಿ ಆತನಿಂದ ದೂರವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ತಾರಿಕ್ ಜೋತ್ ಸಿಂಗ್ ಆಕೆಯನ್ನು ಅಪಹರಿಸಿ ಕೊಂದಿದ್ದಾನೆ ಎಂದು ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಕೌರ್ ಳನ್ನು ಆಕೆಯ ಕೆಲಸದ ಸ್ಥಳದಿಂದ ಅಪಹರಿಸಿದ್ದ ಹಂತಕ, ಕಾರಿನ ಬೂಟಿನಲ್ಲಿ ಆಕೆಯನ್ನು ಕಟ್ಟಿ ಹಾಕಿ…
ಭೋಪಾಲ್: ಆದಿವಾಸಿ ಸಮುದಾಯದ (Tribal Community Man) ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ (MP Urination Case) ತೀವ್ರ ಖಂಡನೆ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರು ಸಂತ್ರಸ್ತನ ಪಾದ ತೊಳೆದು ಗೌರವ ಸಲ್ಲಿಸಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್‌ನ ತಮ್ಮ ನಿವಾಸಕ್ಕೆ ಸಂತ್ರಸ್ತನನ್ನು ಕರೆದು ಆತನ ಕಾಲು ತೊಳೆದು, ಸನ್ಮಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಘಟನೆಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ವೀಡಿಯೋ ನೋಡಿ ನನಗೆ ನೋವಾಯಿತು. ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಸಂತ್ರಸ್ತ ದಶಮತ್ ರಾವತ್ ಬಳಿ ಕ್ಷಮೆಯಾಚಿಸಿದ್ದಾರೆ. ಪ್ರವೇಶ್ ಶುಕ್ಲಾ ಎಂಬಾತ ಬುಡಕಟ್ಟು ಸಮುದಾಯದ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆತನ ಅಕ್ರಮ ಕಟ್ಟಡವನ್ನು ಮಧ್ಯಪ್ರದೇಶ ಸರ್ಕಾರ ಬುಲ್ಡೋಜರ್ ಮೂಲಕ ನೆಲಸಮಗೊಳಿಸುವ ಕ್ರಮಕೈಗೊಂಡಿತು.
ನವದೆಹಲಿ ;– NCP ಗೆ ನಾನೇ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳುವ ಮೂಲಕ ಭಿನ್ನಮತಿಯರ ವಿರುದ್ಧ ಶರದ್ ಪವಾರ್ ಗುಡುಗಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿರುವ ಶರದ್ ಪವಾರ್, ನಮ್ಮದೇ ನಿಜವಾದ ಎನ್ ಸಿ ಪಿ. ನಾನೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿದ್ದಾರಲ್ಲದೆ ಬಂಡಾಯ ಸಾರಿರುವ ಅಜಿತ್ ಪವಾರ್ ಸೇರಿದಂತೆ ಭಿನ್ನಮತಿಯರ ವಿರುದ್ಧ ಗುಡುಗಿದ್ದಾರೆ. ಅಜಿತ್ ಪವಾರ್ ಹಾಗೂ ಅವರ ಜೊತೆ ಕೈಜೋಡಿಸಿರುವ 8 ಬಂಡಾಯ ಶಾಸಕರು ಮತ್ತು ಇಬ್ಬರು ಸಂಸದರನ್ನು ಪಕ್ಷದಿಂದ ವಜಾಗೊಳಿಸಲಾಗಿದ್ದು, ಅಜಿತ್ ಬಂಡಾಯದ ವಿರುದ್ಧ ಕಾನೂನು ಹೋರಾಟ ನಡೆಸುವುದರ ಜೊತೆಗೆ ಚುನಾವಣಾ ಆಯೋಗಕ್ಕೂ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದ ನಂತರ ಎನ್ ಸಿ ಪಿ ಗೆ ನಾಯಕ ಯಾರೆಂಬ ಕುರಿತು ಪೈಪೋಟಿ ನಡೆದಿದೆ. ಪಕ್ಷದ ಈ ರಾಜಕಾರಣ ಈಗ ರಾಷ್ಟ್ರ ರಾಜಧಾನಿಯನ್ನು ತಲುಪಿದ್ದು, ಹಿರಿಯ ನಾಯಕ ಶರದ್ ಪವಾರ್ ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಿದ್ದಾರೆ.
ಲಕ್ನೋ: ಇಟ್ಟಿಗೆಯಿಂದ (Bricks) ಜಜ್ಜಿ ಗರ್ಭಿಣಿ (Pregnant) ಹತ್ಯೆಗೈದ ಘಟನೆ ಉತ್ತರಪ್ರದೇಶದ (Uttara Pradesh) ಮೀರತ್‌ನಲ್ಲಿ (Meerut) ನಡೆದಿದ್ದು, ಕೊಲೆಯಲ್ಲಿ (Murder) ಭಾಗಿಯಾದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಂಬಿರಿ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿಗಳಾದ ಮಹಿಳೆಯ ಪ್ರಿಯಕರ ಆದೇಶ್ ಮತ್ತು ಆತನ ಗೆಳೆಯರಾದ ದೀಪಕ್, ಆರ್ಯನ್, ಸಂದೀಪ್ ಮತ್ತು ರೋಹಿತ್‌ನನ್ನು ಬಂಧಿಸಲಾಗಿದೆ. ರಾಂಬಿರಿ 2015ರಲ್ಲಿ ವಿನೋದ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆಯಾದ ಒಂದು ವರ್ಷದ ಬಳಿಕ ರಾಂಬಿರಿ ಆಕೆಯ ಗಂಡನಿಂದ ಬೇರೆಯಾಗಿ ತನ್ನ ತಂದೆಯ ಮನೆಯಲ್ಲಿ ವಾಸವಿದ್ದಳು. ಬಳಿಕ ಆದೇಶ್ ಎಂಬಾತನ ಪರಿಚಯವಾಗಿದ್ದು, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿದೆ. ರಾಂಬಿರಿ ಆದೇಶ್‌ನಿಂದ ಗರ್ಭವತಿಯಾದ ಬಳಿಕ ತನ್ನನ್ನು ಮದುವೆಯಾಗುವಂತೆ ಆದೇಶ್‌ನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಆದೇಶ್ ಆಕೆಯನ್ನು ಕೊಲ್ಲುವಂತೆ ತನ್ನ ಸ್ನೇಹಿತರಿಗೆ ಹೇಳಿದ್ದಾನೆ. ಬಳಿಕ ಜೂನ್ 2ರಂದು ಆಕೆಗೆ ಕರೆ ಮಾಡಿ ತನ್ನ ಮನೆಗೆ ಬರುವಂತೆ ಆದೇಶ್ ಹೇಳಿದ್ದಾನೆ. ಆಕೆ ಮನೆಗೆ ಬಂದ ಬಳಿಕ ಆದೇಶ್ ಮತ್ತು ಆತನ ಸ್ನೇಹಿತರು ಸೇರಿಕೊಂಡು ಇಟ್ಟಿಗೆಯಿಂದ ಜಜ್ಜಿ ಹತ್ಯೆಗೈದು…
ಗುವಾಹಟಿ: ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ (Assam CM Himath Biswa) ಘೋಷಿಸಿದ್ದಾರೆ. ಜುಲೈ 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳಲ್ಲಿ 60% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗಿಯರು ಮತ್ತು 75% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಹುಡುಗರು ಈ ಉಚಿತ ಸ್ಕೂಟರ್ (Free Scooter) ಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದಿದ್ದಾರೆ. ಈ ಸಂಬಂಧ ಅಸ್ಸಾಂ ಪ್ರವಾಸೋದ್ಯಮ ಸಚಿವ ಜಯಂತ್ ಮಲ್ಲಾ ಬರೂಹ್ ಪ್ರತಿಕ್ರಿಯಿಸಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಉತ್ತೇಜಿಸಲು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತ್ತಮ ಪ್ರವೇಶ ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಮತ್ತು ಪ್ರಾಂತೀಯ ಶಾಲೆಗಳಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ 3.78 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ 167 ಕೋಟಿ ರೂ. ಮೀಸಲಿಡಲಾಗಿದೆ. ಇದಲ್ಲದೇ ಸೆಪ್ಟೆಂಬರ್‍ನಿಂದ…
ಗುಜರಾತ್ ;- ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮನವಿಗೆ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಹಿಂದಿನ ಸಂದರ್ಭದಲ್ಲಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದ ನ್ಯಾಯಾಲಯವು ಅವರ ಮನವಿಯನ್ನು ಪರಿಗಣನೆಯಲ್ಲಿ ಕಾಯ್ದಿರಿಸಿತ್ತು. ಒಂದು ವೇಳೆ ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದರೆ, ಅವರ ಅನರ್ಹತೆಯನ್ನು ರದ್ದುಗೊಳಿಸಬಹುದು. ಅವರ ಅಮಾನತಿಗೆ ತಡೆ ನೀಡದಿದ್ದರೆ, ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್‌ನ ಉನ್ನತ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವ ಆಯ್ಕೆಯನ್ನು ಹೊಂದಿರುತ್ತಾರೆ. ಪ್ರಸ್ತುತ, ರಾಹುಲ್ ಗಾಂಧಿ ಸಂಸತ್ ಸದಸ್ಯರಾಗಿ ಎರಡು ಮತ್ತು ಆರು ವರ್ಷಗಳ ಕಾಲ ಅಮಾನತುಗೊಂಡಿದ್ದಾರೆ.
ಗುರುಗಾಂವ್: ಮನೆಮುಂದೆ ಕಾರು ನಿಲ್ಲಿಸಿ ಜೋಡಿಯೊಂದು ಸೆಕ್ಸ್ ಮಾಡುತ್ತಿದ್ದು, ಅದನ್ನು ಪ್ರಶ್ನಿಸಿದ ಮಹಿಳೆಯ ಜೊತೆಗೂ ಅನುಚಿತವಾಗಿ ವರ್ತಿಸಿದ ಘಟನೆ ಬುಧವಾರ ಬೆಳಗ್ಗೆ 5 ಗಂಟೆಗೆ ಹರ್ಯಾಣದ ಗುರುಗಾಂವ್‍ನಲ್ಲಿ ನಡೆದಿದೆ. ಮಹಿಳೆಯೊಬ್ಬರು ಯಾರೆಂದು ನೋಡಲು ಮನೆಯಿಂದ ಹೊರಗೆ ಬಂದಿದ್ದರು. ಆಗ ಮನೆಮುಂದೆಯೇ ಕಾರು ನಿಲ್ಲಿಸಿ ಒಂದು ಜೋಡಿ ಕಾರಿನಲ್ಲಿ ಸೆಕ್ಸ್ ಮಾಡುತ್ತಿದ್ದರು. ಕಾರಿನಲ್ಲಿ ಪಕ್ಕದ್ಮನೆಯ 26 ವರ್ಷದ ಯುವತಿ ಇದ್ದು, ಮಹಿಳೆ ಮೊದಲು ಆಕೆಯನ್ನು ಗುರುತಿಸಲಿಲ್ಲ. ನಂತರ ಅವರ ಹತ್ತಿರ ಹೋಗಿ ಅವರ ಹೆಸರನ್ನು ಕೇಳಿದ್ದಾರೆ. ಆದರೆ ಈ ಜೋಡಿ 52 ವರ್ಷದ ಮಹಿಳೆಯನ್ನು ನಿರ್ಲಕ್ಷಿಸಿದ್ದರು. ಜೋಡಿ ಯಾವುದೇ ಪ್ರತಿಕ್ರಿಯೇ ನೀಡದೇ ಇದ್ದಾಗ ಮಹಿಳೆ ಮತ್ತೆ ಅವರ ಹೆಸರನ್ನು ಕೇಳಿದ್ದಾರೆ. ಆಗ ಜೋಡಿ ಮಹಿಳೆಯನ್ನು ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ನೀನು ನಮ್ಮ ಜೊತೆ ಸೇರಿಕೋ. ನೀನು ನಮ್ಮ ಜೊತೆ ಸೇರಿ ಮಜಾ ಮಾಡು ಎಂದು ಯುವಕ ಆಕೆಯ ಕೈ ಹಿಡಿದು, ದುಪ್ಪಟ್ಟಾ ಎಳೆದಾಡಿದ್ದಾನೆ. ಯುವಕ ಕೈ ಹಿಡಿಯುತ್ತಿದ್ದಂತೆ ಮಹಿಳೆ ಜೋರಾಗಿ ಕಿರುಚಿ ಅಕ್ಕಪಕ್ಕದ ಮನೆಯವರನ್ನು…