ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾರವಾರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ(Friday is a holiday for schools and colleges) ಘೋಷಿಸಲಾಗಿದೆ. ಸತತ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಶುಕ್ರವಾರ ಸಹ ಮಳೆ ಮುಂದುವರೆಯುವ ಸೂಚನೆ ಇದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ರಜೆ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಹೊನ್ನಾವರ, ಅಂಕೋಲ ಮತ್ತು ಭಟ್ಕಳ ತಾಲೂಕುಗಳ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ. ಕಾರವಾರ ಶೈಕ್ಷಣಿಕ ಜಿಲ್ಲೆಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭು ಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
Author: Prajatv Kannada
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಕಾಂಗ್ರೆಸ್ ಜಿಲ್ಲಾ ಎಸ್ ಸಿ,ಘಟಕದ ವತಿಯಿಂದ ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭಾರತದ ಮಾಜಿ ಉಪ ಪ್ರಧಾನಿ ಹಸಿರು ಕ್ರಾಂತಿ ಹರಿಕಾರ ದಿ. ಡಾ. ಬಾಬು ಜಗಜೀವನ ರಾಮ್ ಅವರ ಪರಿ ನಿರ್ವಾಣ ದಿನವಾದ ಮಹಾನಗರ ಜಿಲ್ಲಾ ಎಸ್ ಸಿ ಘಟಕದ ವತಿಯಿಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಸದಾನಂದ ಡಂಗನವರ, ಜಿಲ್ಲಾಧ್ಯಕ್ಷರಾದ ಬಸವರಾಜ ಬೆಣಕಲ್, ಬ್ಲಾಕ್ ಅಧ್ಯಕ್ಷರುಗಳಾದ ಮಹೇಶ್ ಹಂಜಗಿ, ಸುರೇಶ್ ದಿಡ್ಡಿಮನಿ, ಅನಿಲ್ ಬುನಿಯನ್ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಂಗಳೂರು: ಜನತೆಯೇ ನನ್ನ ಪಾಲಿನ ಜನಾರ್ಧನರು, ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲು ಆಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದರು. ಜೊತೆಗೆ ಅನುದಾನ ವಿಚಾರವಾಗಿ 8 ತಿಂಗಳು ಶಾಸಕರು ಸಹಕಾರ ನೀಡಬೇಕು ಎಂದು ಸಿಎಂ ಕಿವಿಮಾತು ಹೇಳಿದರು.
ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್‌ನ ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ (Karnataka Budget 2023) ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್ನಲ್ಲಿ ಏನೆಲ್ಲ ಕೊಡುಗೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ನೋಡಿ.
ಸೂರ್ಯೋದಯ: 05.59 AM, ಸೂರ್ಯಾಸ್ತ : 06.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಷಾಢ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಚೌತಿ 03:12 AM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಧನಿಷ್ಠ 12:25 AM ತನಕ ನಂತರ ಶತಭಿಷ 10:16 PM ತನಕ ನಂತರ ಪೂರ್ವಾ ಭಾದ್ರ ಯೋಗ: ಇವತ್ತು ಪ್ರೀತಿ 12:00 AM ತನಕ ನಂತರ ಆಯುಷ್ಮಾನ್ 08:30 PM ತನಕ ನಂತರ ಸೌಭಾಗ್ಯ ಕರಣ: ಇವತ್ತು ಬಾಲವ 03:12 AM ತನಕ ನಂತರ ಕೌಲವ 01:41 PM ತನಕ ನಂತರ ತೈತಲೆ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 03.43 PM to 05.10 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:54 ನಿಂದ ಮ.12:46 ವರೆಗೂ ಮೇಷ ರಾಶಿ: ಛಾಯಾಗ್ರಾಹಕರಿಗೆ, ಸಿನಿಮಾ…
ಬೆಂಗಳೂರು: ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗ ಅತೀಕ್ ಅವರು ಬಜೆಟ್ ಪುಸ್ತಕಗಳಿರುವ ಬ್ರೀಫ್ ಕೇಸನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ಮಾಡಲಿದ್ದಾರೆ. ಇನ್ನು ಬಜೆಟ್ನಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆ ಈಡೇರಿಸುವ ಸಾಧ್ಯತೆಯಿದೆ.
ಬೆಂಗಳೂರು: ಬಜೆಟ್ಗೂ ಮುನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ಮಾಡಲಾಗುತ್ತಿದೆ. ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದು, ಗ್ಯಾರಂಟಿಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಲು ಕಿವಿಮಾತು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 12 ಗಂಟೆಗೆ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. 9 ತಿಂಗಳ ಬಜೆಟ್ ಮಂಡನೆ ಮಾಡುವ ಮೂಲಕ ತಮ್ಮ 14ನೇ ಆಯವ್ಯಯ ಮಂಡಿಸಲಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. ಕಳೆದ 25 ದಿನಗಳಿಂದ ಸಿಎಂ ಸಿದ್ದರಾಮಯ್ಯ ಇಲಾಖಾವಾರು ಬಜೆಟ್ ಪೂರ್ವಬಾವಿ ಸರಣಿ ಸಭೆಗಳನ್ನು ನಡೆಸಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಬಜೆಟ್ ಮಂಡನೆ ಮಾಡಲಿದ್ದು, ಬಹುತೇಕ ಗ್ಯಾರಂಟಿ ಕೇಂದ್ರೀಕೃತ ಬಜೆಟ್ ಆಗಿರಲಿದೆ. ಸಿದ್ದರಾಮಯ್ಯ ಅವರ ಬಜೆಟ್ ಹೆಚ್ಚಿನ ತೆರಿಗೆ ಹೊರೆ ಇಲ್ಲದೆ, ಬೊಮ್ಮಾಯಿ ಸರ್ಕಾರ…
ಬೆಂಗಳೂರು ;– ವಿಧಾನಸಭೆಯಲ್ಲಿ ನಾಗಮಂಗಲ ಕೆಎಸ್‌ಆರ್ ಟಿಸಿ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಅವರು ಗಂಭೀರವಾಗಿ ಉತ್ತರ ನೀಡಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಎರಡು ಭಾರಿ ಮುಖ್ಯಮಂತ್ರಿ ಆಗಿ ಅನುಭವ ಇರುವವರು, ಅದೇ ರೀತಿಯಲ್ಲಿ ಸಚಿವ ಚಲುವರಾಯಸ್ವಾಮಿ ಅವರ ಜೊತೆಯಲ್ಲಿ ಕೆಲಸ ಮಾಡಿದ್ದಂತಹವರು. ಒಂದು ಇತಿ ಮಿತಿಯಲ್ಲಿ ಚರ್ಚೆ ನಡೆದರೆ ಸದನಕ್ಕೆ ಗೌರವ ಬರುತ್ತೆ. ಸದನದಲ್ಲಿ ಗುರುವಾರ ನಡೆದಿದ್ದು ಎರಡೂ ಕಡೆಯಿಂದ ಸ್ವಲ್ಪ ಅತಿಯಾಯಿತು ಅನ್ನಿಸಿತು. ಅದು ಮರುಕಳಿಸಬಾರದು ಎಂದು ಮನವಿ ಮಾಡಿದರು. ಈ ಪ್ರಕರಣವನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸುತ್ತೇವೆ. ಕೆಎಸ್ಆರ್ಟಿಸಿ ಇಲಾಖೆ ಹಿರಿಯ ಅಧಿಕಾರಿಗಳನ್ನು ಒಳಗೊಂಡು ತನಿಖೆ ನಡೆಸಿ ವರದಿ ತರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಸರ್ಕಾರದಿಂದ ಸೂಕ್ತ ಉತ್ತರ ಬಂದಿಲ್ಲ ಎಂದು ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಜಗದೀಶ್…
ಬೆಂಗಳೂರು: ಇಂದು 12 ಗಂಟೆಗೆ ಸಿಎಂ ಸಿದ್ದರಾಮಯ್ಯ 14ನೇ ಬಜೆಟ್ ಮಂಡಸಲಿದ್ದು, ಈ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ, ಮಹತ್ವದ ಬಜೆಟ್ ಮಂಡಿಸಲು ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಮಂಡನೆಗೆ ಅಂತಿಮ ರೂಪ ಕೊಟ್ಟಿದ್ದಾರೆ. ಮುಖ್ಯವಾಗಿ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಿಸುವ ಸಾಧ್ಯತೆಯಿದೆ. ಗ್ಯಾರಂಟಿ ಜಾರಿ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಇದಾಗಿದೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ ಮತ್ತಷ್ಟು ಹೆಚ್ಚಾಗಲಿದೆ. ಈ ಮೂಲಕ ಗ್ಯಾರಂಟಿ ಜಾರಿ ಜೊತೆ ಇನ್ನೇಷ್ಟು ಭಾಗ್ಯ ಸಿಗಲಿದೆ ಕಾದು ನೋಡಬೇಕು. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಹೊಸ ಮೈಸೂರು ಪಂಚೆ,…
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ, ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ ಸಿಎಂ ಸಿದ್ದರಾಮಯ್ಯನವರು 12 ಗಂಟೆಗೆ 14ನೇ ಬಾರಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಬಜೆಟ್ನಲ್ಲಿ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಹೆಚ್ಚು ಅನುದಾನ ಸಿಗುತ್ತಾ? ಎಂಬ ಪ್ರಶ್ನೆ ಮೂಡಿದೆ. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ನಗರದ ಸಮಗ್ರ ಅಭಿವೃದ್ಧಿಯ ಗುರಿ ಹೊಂದಿದ್ದು, ಟ್ರಾಫಿಕ್ ಸಮಸ್ಯೆ, ಕಸದ ವಿಲೇವಾರಿ ಸಮಸ್ಯೆ, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಆಗುವ ಅವಾಂತರಗಳು, ಬೃಹತ್ ನೀರುಗಾಲುವೆ ಸಮಸ್ಯೆಗಳು, ಎಲಿವೇಟಡ್ ಕಾರಿಡಾರ್, ಟೆಕ್‌ಪಾರ್ಕ್, ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಕನಸು, ರಾಜಕಾಲುವೆ ಅಭಿವೃದ್ಧಿ ಸೇರಿದಂತೆ ಅನೇಕ ನಿರೀಕ್ಷೆಗಳಿವೆ. ಸಿಎಂ ಸಿದ್ದರಾಮಯ್ಯ 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಜಾರಿ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಇದಾಗಿದೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ ಮತ್ತಷ್ಟು ಹೆಚ್ಚಾಗಲಿದೆ. ಈ…