Author: Prajatv Kannada

ಮೈಸೂರು: ಮೈಸೂರಿನಲ್ಲಿ (Mysuru) ನಡೆದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವಿನ ಭೀಕರ ಅಪಘಾತ (Accident) 10 ಜನರ ಬಲಿ ಪಡೆದುಕೊಂಡಿದೆ. ದುರ್ಘಟನೆಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಮೈಸೂರು ಜಿಲ್ಲೆಯ ಟಿ ನರಸೀಪುರ (T Narasipur) ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. https://twitter.com/CMofKarnataka/status/1663161104066035713?ref_src=twsrc%5Etfw%7Ctwcamp%5Etweetembed%7Ctwterm%5E1663161104066035713%7Ctwgr%5E4db82e688706f047a79402027d4e76730fefc040%7Ctwcon%5Es1_&ref_url=https%3A%2F%2Fpublictv.in%2F10-victims-of-mysuru-road-accident-cm-siddaramaiah-announced-compensation%2F ಕೊಳ್ಳೇಗಾಲದ ಟಿ ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, 10 ಜನ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಗುರುತು…

Read More

ಕಲಬುರಗಿ: ಬಿಜೆಪಿ (BJP) ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ (Corruption) ಮುಳುಗಿದ್ದರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್  (Facebook) ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲಾ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರನೇ ಗ್ಯಾರಂಟಿ ನೀಡಿದ್ದೆ. ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕೆಕೆಆರ್‌ಡಿಬಿ ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ 2022 ರ ಡಿಸೆಂಬರ್ 12 ರಂದು ಹಿಂದಿನ ಸರ್ಕಾರಕ್ಕೆ ಪತ್ರ ಬರೆದು ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ 431 ಕೋಟಿ ಅವ್ಯವಹಾರದ ಬಗ್ಗೆ 2022ರ…

Read More

ಹಾಸನ: ಬಿರುಗಾಳಿ ಸಹಿತ ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ನಿನ್ನೆ (ಮೇ.29) ಸುರಿದ ಭಾರಿ ಮಳೆ, ಬಿರುಗಾಳಿಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೇಲೂರು ತಾಲೂಕಿನಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿದ್ದರೇ, ಬಿರುಗಾಳಿಗೆ ಮನೆಯ ಮೇಲ್ಛಾವಣಿಗೆ ಹಾಕಿದ್ದ ಶೀಟ್​​​ಗಳು ಹಾರಿಹೋಗಿವೆ. ಅಲ್ಲದೇ ನೂರಾರು ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ಸಂಪೂರ್ಣ ನಾಶವಾಗಿದೆ.

Read More

ಗದಗ: ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆ ಮೂಲಕ ಗ್ಯಾರಂಟಿ ಕಾರ್ಡ್ (Guarantee Card) ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡುತ್ತೇವೆ ಎಂದು ಸಚಿವ ಹೆಚ್‌ಕೆ ಪಾಟೀಲ್ (HK Patil) ಟಾಂಗ್ ನೀಡಿದ್ದಾರೆ. ನೂತನವಾಗಿ ಸಚಿವರಾದ ನಂತರ ಮೊದಲ ಬಾರಿಗೆ ಸ್ವಕ್ಷೇತ್ರ ಗದಗ (Gadag) ನಗರಕ್ಕೆ ಆಗಮಿಸಿದ ಹೆಚ್‌ಕೆ ಪಾಟೀಲ್ ನಗರ ಮುಳಗುಂದ ನಾಕಾದಿಂದ ಕಾಂಗ್ರೆಸ್ (Congress) ಕಚೇರಿ ವರೆಗೆ ಬೃಹತ್ ರ‍್ಯಾಲಿ ನಡೆಸಿದರು. ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಹೂ ಎರಚಿ ಜೈಘೋಷ ಕೂಗಿ ಸಂಭ್ರಮಿಸಿದರು. ನಂತರ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಅವರ ತಂದೆ ಕೆಹೆಚ್ ಪಾಟೀಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂನ್ 1 ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಆ ಸಭೆ ಮೂಲಕ ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡುತ್ತೇವೆ. ಗ್ಯಾರಂಟಿ ಕಾರ್ಡ್ಗಳ ಗೊಂದಲವಿದೆ ಎಂದು ಕೆಲವರು ಭಾವಿಸಿಕೊಳ್ಳುವವರಿದ್ದಾರೆ. ಅಂಥವರಿಗೆ ನಾನು…

Read More

ಬೆಳಗಾವಿ:  ಸಾಂಬ್ರಾ ಏರ್‌ ಪೋರ್ಟ್‌ನಿಂ ದ ಹೊರಟಿದ್ದ ರೆಡ್‌ ಬರ್ಡ್ ಸಂಸ್ಥೆಗೆ ಸೇರಿದ VT-RBF ತರಬೇತಿ ವಿಮಾನ ತಾಂತ್ರಿಕ ದೋಷದಿಂದ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ತರಬೇತಿ ವಿಮಾನದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ದೊರೆತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು ಇದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಾಜಧಾನಿ ಬೆಂಗಳೂರು, ಉಡುಪಿ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆ ಶುರುವಾಗಿದೆ. ಹೀಗಾಗಿ ಮಳೆಯಿಂದಾಗಿ ಜನರು, ಬೈಕ್​ ಸವಾರರು ಪರದಾಡುವಂತ್ತಾಗಿದ್ದು, ಇಂದು ಬೆಳ್ಳಗೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ಸತತ ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೋಗುವ ಬೈಕ್ ಸವಾರರು ಪರದಾಡುವಂತ್ತಾಗಿದೆ. ಇನ್ನೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ…

Read More

ಮಂಡ್ಯ: ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರ ಡೈಲಾಗ್ ಹೇಳಿ ಕಾಂಗ್ರೆಸ್‌ನ (Congress) ಗ್ಯಾರಂಟಿಗಳ ಬಗ್ಗೆ ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್‌ ಗೌಡ (Suresh Gowda) ಕುಟುಕಿದ್ದಾರೆ.ನಾಗಮಂಗದಲ್ಲಿ (Nagamangala) ಮತದಾರರಿಗೆ ಧನ್ಯವಾದ ಹೇಳಲು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಗಳನ್ನು ಲೇವಡಿ ಮಾಡಿದ್ದಾರೆ. ಇವತ್ತು ಸುಳ್ಳು ಭರವಸೆ ಮೂಲಕ ಸರ್ಕಾರ ಬಂದಿದೆ. ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಕರೆಂಟ್ ಬಿಲ್ ಕೇಳಲು ಬಂದರೆ ನನ್ನನ್ನು ಕರೆಯಿರಿ. ನಾನು ಬರ್ತೀನಿ. ಮಹಿಳೆಯರಿಗೆ ಫ್ರೀ ಬಸ್, ಬಸ್ ಹತ್ತಿ ಕುಳಿತುಕೊಳ್ಳಿ. ಯಾರೂ ಬಸ್ ಟಿಕೆಟ್ ತೆಗೆದುಕೊಳ್ಳಬೇಡಿ. ನಂಗೂ ಫ್ರೀ, ನಿನಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ಉಚಿತ, ಖಚಿತ, ನಿಶ್ಚಿತ ಎಂದು ಟೀಕೆ ಮಾಡಿದರು. ರಾಮಲಿಂಗಾ ರೆಡ್ಡಿ (Ramalinga Reddy) ಆ ಖಾತೆಯಲ್ಲಿ ದುಡ್ಡೇ ಬರಲ್ಲ. ನನಗೆ ಸಚಿವ ಸ್ಥಾನ ಬೇಡ, ದಮ್ಮಯ್ಯ ಎನ್ನುತ್ತಿದ್ದಾರೆ. ದುಡ್ಡು ಇಲ್ಲದೆ ಇಂಧನ ಇಲಾಖೆ ಹೇಗೆ ನಡೆಸೋದು…

Read More

ಮೈಸೂರು: ಜಿಲ್ಲೆಯ ಕುರುಬೂರು (Kuruburu Accident) ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಉಳಿದಂತೆ ಇಬ್ಬರು ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಗಾಯಾಳು ಶಶಿಕುಮಾರ್ ಹಾಗೂ ಜನಾರ್ಧನ್‍ಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಶಶಿಕುಮಾರ್ ಸ್ಥಿತಿ ಗಂಭೀರವಾಗಿದೆ. ಇನ್ನು ಕಾರಿನಲ್ಲಿದ್ದ ಮಗು ಪುನೀತ್ ಹಾಗೂ ಬಸ್‍ನಲ್ಲಿದ್ದ ಮಗುವಿಗೆ ಕೂಡ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ 10 ಮಂದಿಯ ಮೃತದೇಹಗಳನ್ನು ಆಸ್ಪತ್ರೆ ಸಿಬ್ಬಂದಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬಳ್ಳಾರಿಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಮಂಜುನಾಥ್ (35), ಪೂರ್ಣಿಮಾ (30), ಪವನ್ (10), ಕಾರ್ತಿಕ್ (8), ಸಂದೀಪ್ (24), ಸುಜಾತ (40), ಕೊಟ್ರೇಶ್ (45), ಗಾಯಿತ್ರಿ (35), ಶ್ರೇಯಾ (3) ಮೃತದೇಹ ಕುಟುಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Read More

ಚಿಕ್ಕಬಳ್ಳಾಪುರ: ನನ್ನ ಒಂದು ದಿನ ಅಣಕನೂರು ಜೈಲಿಗೆ (Jail) ಹಾಕಿದ್ದಕ್ಕೆ ನಾನು ಇಂದು ಎಂಎಲ್‌ಎ (MLA) ಆಗಿದ್ದೇನೆ. ಜೈಲಿಗೆ ಹಾಕಿಲ್ಲ ಎಂದಿದ್ದರೆ ನಾನು ಲೆಕ್ಚರರ್ ಆಗಿ ಇರುತ್ತಿದ್ದೆ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸುಧಾಕರ್ (K Sudhakar) ವಿರುದ್ಧ ನೂತನ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾ ಪಂಚಾಯಿತಿಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಪ್ರದೀಪ್ ಈಶ್ವರ್, ಜನ ಸಣ್ಣ ಪುಟ್ಟ ಕಾರಣಗಳಿಗೆ ಪೊಲೀಸ್ ಠಾಣೆಗೆ ಬರುತ್ತಾರೆ, ಹೀಗಾಗಿ ವಿನಾಕಾರಣ ಠಾಣೆಗೆ ಬಂದವರದ್ದೆಲ್ಲಾ ಎಫ್‌ಐಆರ್ ಮಾಡಬೇಡಿ. ಕೂತು ಮಾತನಾಡಿಸಿ ರಾಜೀ ಮಾಡಲು ಪ್ರಯತ್ನ ಮಾಡಿ. ಸಾಧ್ಯವಾಗದ ಪ್ರಕರಣಗಳಲ್ಲಿ ಎಫ್‌ಐಆರ್ ಮಾಡಿ. ಆದರೆ ವಿನಾಕಾರಣ ಯಾರದೋ ಕುಮ್ಮಕ್ಕಿನಿಂದ ಸುಳ್ಳು ದೂರು ದಾಖಲಿಸಬೇಡಿ ಎಂದು ಪೊಲೀಸರಿಗೆ ತಿಳಿಸಿದರು. ಯಾರ ಮಾತು ಕೇಳಬೇಡಿ, ನನ್ನ ಮಾತು ಕೇಳಬೇಡಿ, ಕಾನೂನು ರೀತಿಯ ಕೆಲಸ ಮಾಡಿ, ನಾನು ನಿಮ್ಮ ಮೇಲೆ ಒತ್ತಡ ಹಾಕಲ್ಲ. ಹಿಂದಿನ ಶಾಸಕರ ಒತ್ತಡಕ್ಕೆ ಮಣಿದು…

Read More

ಹುಬ್ಬಳ್ಳಿ: ಬಾಲ ಕಾರ್ಮಿಕನನ್ನು ಗೃಹ ಕಾರ್ಮಿಕನಾಗಿ ಕೆಲಸಕ್ಕೆ ನೇಮಿಸಿಕೊಂಡಿರುವ ದೂರಿನನ್ವಯ ಮೇ.26 ರಂದು ಹುಬ್ಬಳ್ಳಿಯ ಲಿಂಗರಾಜನಗರ ವ್ಯಾಪ್ತಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ಮನೆಯ ಮೇಲೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಠಾತ್ ದಾಳಿ ನಡೆಸಿದರು. ಈ ಸಮಯದಲ್ಲಿ ಮಗು ಕೆಲಸ ಮಾಡುತ್ತಿರುವುದು ಕಂಡು ಬಂದಿತು. ಇದು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಉಲ್ಲಂಘನೆಯಾಗಿದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ದಾಳಿಯಲ್ಲಿ ಸಿಕ್ಕಿರುವ ಬಾಲ ಕಾರ್ಮಿಕ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದ ಮೇರೆಗೆ ಕೈಗೊಳ್ಳಲಾಗಿದೆ ಮತ್ತು ಈ ಕಾರ್ಯಾಚರಣೇಯ ನೇತೃತ್ವವನ್ನು ಮಾರಿಕಾಂಬಾ ಹುಲಕೋಟಿ ಕಾರ್ಮಿಕ ಅಧಿಕಾರಿ ಉಪ ವಿಭಾಗ-2, ಹುಬ್ಬಳ್ಳಿ ವಹಿಸಿಕೊಂಡಿದ್ದರು. ಈ ಪ್ರಕರಣವು ಅಶೋಕ ಓಡೆಯರ ಹಿರಿಯ ಕಾರ್ಮಿಕ ನಿರೀಕ್ಷಕರು 3ನೇ ವೃತ್ತ, ಹುಬ್ಬಳ್ಳಿ…

Read More