ಮಂಡ್ಯ :- ಜಿಲ್ಲಾ ಹಾಲು ಒಕ್ಕೂಟದ ಉಳಿದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಬೋರೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ಹೆಚ್.ಟಿ.ಮಂಜು, ರಘುನಂದನ್ ಹಾಗೂ ಬಾಲಕೃಷ್ಣ ಅವರುಗಳು ಬೆಳಿಗ್ಗೆ ನಾಮಪತ್ರ ಸಲ್ಲಿಸಿ ಚುನಾವಣೆ ವೇಳೆಗೆ ನಾಲ್ವರು ನಾಪತ್ತೆಯಾದ ಘಟನೆ ಜರುಗಿತು. ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಒಕ್ಕೂಟದ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆಗಳು ಆರಂಭಗೊಂಡು ಕಾಂಗ್ರೆಸ್ ಪಕ್ಷದಿಂದ ಬೋರೇಗೌಡ ಜೆಡಿಎಸ್ ಪಕ್ಷದಿಂದ ಹೆಚ್.ಟಿ.ಮಂಜು, ರಘುನಂದನ್ ಹಾಗೂ ಬಾಲಕೃಷ್ಣ ಅವರುಗಳು ಚುನಾವಣಾಧಿಕಾರಿ ಡಾ. ಹೆಚ್.ಎಲ್. ನಾಗರಾಜ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಗೆ ನಿಗದಿಯಾಗಿದ್ದ ಚುನಾವಣೆಗೆ ಯಾವುದೇ ನಿರ್ದೇಶಕರು ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿ ಕಾರಿಗಳು ಸಹಕಾರ ಸಂಘಗಳ ಕಾಯ್ದೆ ಅನ್ವಯ 1 ಗಂಟೆಗಳ ಕಾಲ ಚುನಾವಣೆ ಪ್ರಕ್ರಿಯೆಗಳನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಮಧ್ಯಾಹ್ನ 1 ಗಂಟೆಯ ಬಳಿಕ ನಿರ್ದೇಶಕ ಡಾಲು ರವಿ ಅವರನ್ನು ಹೊರತು ಪಡಿಸಿ ಉಳಿದ ನಿರ್ದೇಶಕರು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ…
Author: Prajatv Kannada
ಗದಗ: ಪರಿಹಾರಕ್ಕಾಗಿ ಒತ್ತಾಯಿಸಿ ಗದಗ ತಾಲೂಕಿನ ನಾಗಾವಿ ಸೇರಿದಂತೆ ಜಿಲ್ಲೆಯ ಗ್ರಾಮಸ್ಥರಿಂದ ಧರಣಿ ನಡೆಸಲಾಯಿತು. ಗದಗ ಜಿಲ್ಲಾಡಳಿತ ಭವನದ ಎದುರಿಗೆ ಪೆಂಡಾಲ್ ಹಾಕಿ ಆಕ್ರೋಶ ವ್ಯಕ್ತಪಡಿದರು. ಉತ್ತರ ಕರ್ನಾಟಕ ಮಹಾಸಭಾ ಹಾಗೂ ಅರಣ್ಯ ಹಕ್ಕು ಹೋರಾಟ ಸಮಿತಿ ಮತ್ತು ಬಗರ್ ಹುಕುಂ ಸಮಿತಿ ನೇತೃತ್ವದಲ್ಲಿ ಧರಣಿ ಮಾಡಲಾಗಿದ್ದು, ರೈತರಿಗೆ ಪರಿಹಾರ ನೀಡದೇ ಒಕ್ಕಲೆಬ್ಬಿಸಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಿರ್ಮಿಸಿದ್ದಾರೆ ಅನ್ನೋದು ರೈತರ ಆರೋಪವಾಗಿದೆ. ಸುಮಾರು ಮೂರ್ನಾಲ್ಕು ತಲೆಮಾರುಗಳಿಂದ ಅನೇಕ ರೈತ ಕುಟುಂಬಗಳಿಂದ ಭೂಮಿ ಉಳುಮೆ ಮಾಡಲು ಹಕ್ಕುಪತ್ರ ನೀಡಲು ಮನವಿ ಮಾಡಿದ್ದೇವೆ. ಆದ್ರೆ ಜಿಲ್ಲಾಡಳಿತ ಕ್ಯಾರೆ ಅಂದಿಲ್ಲ. ನಮ್ಮ ಉಳುಮೆ ಮಾಡುವ ಭೂಮಿಯಲ್ಲಿ ಆರ್ ಡಿ ಪಿ ಆರ್ ವಿವಿ ಸ್ಥಾಪನೆ ಆಗಿದೆ. ಅದಕ್ಕೆ ನಮಗೆ ಪರಿಹಾರ ಮಾತ್ರ ನೀಡಿಲ್ಲ ಎಂದು ಪರಿಹಾರ ಸಿಗೋವರೆಗೂ ಗದಗ ಜಿಲ್ಲಾಡಳಿತ ಭವನದ ಮುಂದೆಯೇ ಅಡುಗೆ ಮಾಡಿ ಧರಣಿಗೆ ಮುಂದಾಗಿರೋ ರೈತರು.
ಹಾವೇರಿ: ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಉಚ್ಛಾಟನೆಯನ್ನು ಕಾಂಗ್ರೆಸ್ ಹಿಂಪಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದಕ್ಕೆ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಆದ್ರೆ ಈಗ ಕಾಂಗ್ರೆಸ್ ಶಿಸ್ತು ಸಮಿತಿ ಮತ್ತೆ ಖಾದ್ರಿ ಉಚ್ಚಾಟನೆ ಹಿಂಪಡೆದಿದೆ.
ರಾಯಚೂರು: ಪಿಎಂಜಿಕೆವೈ ಯೋಜನೆಯಲ್ಲಿ ಭಾರಿ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರ ಹೋರಾಟ ನಡೆಸಿದರು. ರಾಯಚೂರ ಜಿಲ್ಲೆಯ ಹಲವೆಡೆ ಪ್ರಿಮಿಯಮ್ ಹಣ ಪಾವತಿಸಿದ ರೈತರಿಗೆ ಪಂಗನಾಮ ಹಾಕಿದ್ದು, ಸಿರವಾರ ತಾಲೂಕಿನ ವ್ಯಾಪ್ತಿಯಲ್ಲಿ ಸಾವಿರಾರು ರೂಪಾಯಿ ಬೇರೆಯವರ ಖಾತೆಗೆ ವರ್ಗಾವಣೆಯಾಗಿದೆ. ಖಾಸಗಿ ಏಜೆನ್ಸಿ ಮೂಲಕ ಕೋಟ್ಯಾಂತರ ರೂಪಾಯಿ ರೈತರಿಗೆ ಮೋಸ ಆಗಿದೆ ಎಂದು ರೈತ ಸಂಘದ ಮುಖಂಡ ಚಾಮರಸ ಪಾಟೇಲ್ ಆರೋಪ ಮಾಡಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಚಾಮರಸ ಪಾಟೀಲ್ ಆಗ್ರಹ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿ: ಒಂದೇ ದಿನದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇ ಹೊರಡಿಸಿದೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಈಶ್ವರ ಉಳ್ಳಾಗಡ್ಡಿ ನೇಮಕ ಮಾಡಿದ್ದು, ಪಾಲಿಕೆ ಆಯುಕ್ತರಾಗಿದ್ದ ಡಾ.ಬಿ.ಗೋಪಾಲಕೃಷ್ಣ ಅವರು ವರ್ಗಾವಣೆಯಾಗಿದ್ದರು. ಖಾಲಿಯಾದ ಸ್ಥಾನಕ್ಕೆ ಭರತ್ ಎಸ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಭರತ್ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮತ್ತೇ ಪಾಲಿಕೆ ಆಯುಕ್ತರ ಬದಲಾವಣೆ ಮಾಡಿದ ಸರ್ಕಾರ ಈಶ್ವರ ಉಳ್ಳಾಗಡ್ಡಿ ನೇಮಕ ಮಾಡಿದೆ.
ಮಂಡ್ಯ: ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತದೆ. ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆಗೆ ಪ್ರಯತ್ನಿಸಿರುವ (Suicide Attempt) ಘಟನೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಪ್ರಯಿಕ್ರಿಯೆ ನೀಡಿದ್ದಾರೆ. ಮಂಡ್ಯ (Mandya) ಜಿಲ್ಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚಲುವರಾಯಸ್ವಾಮಿ, ಕೆಲವರು ಅನಾವಶ್ಯಕವಾಗಿ ಈ ರೀತಿ ರಾಜಕೀಯ ಮಾಡುವುದು ಪರಿಪಾಟಲು. ವರ್ಗಾವಣೆ ಸಹಜ ಪ್ರಕ್ರಿಯೆ. ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತೆ. ಹಿಂದೆಯೂ ಸಾಕಷ್ಟು ವರ್ಗಾವಣೆ ಆಗಿದೆ. ಹಾಗಂತ ಜೆಡಿಎಸ್‌ನವರೆಲ್ಲರನ್ನೂ ವರ್ಗಾವಣೆ ಮಾಡೋಕಾಗುತ್ತಾ ಎಂದು ಪ್ರಶ್ನಿಸಿದರು. ನಾನು ಆ ಚಾಲಕನ ವರ್ಗಾವಣೆಗೆ ಲೆಟರ್ ಕೊಟ್ಟಿಲ್ಲ. ವರ್ಗಾವಣೆ ಮಾಡಿ ಎಂದು ನಾನು ಹೇಳಿಲ್ಲ. ಆದರೆ ವರ್ಗಾವಣೆ ಆಗಿದೆ. ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ರು. ಹೀಗಾಗಿ ನಾನೇ ಹೋಲ್ಡ್ ಮಾಡುವಂತೆ ಹೇಳಿದ್ದೇನೆ. ಏನಾದ್ರೂ ತಪ್ಪಿದ್ರೆ ತನಿಖೆ ಮಾಡಿ ಆಮೇಲೆ ವರ್ಗಾವಣೆ ಮಾಡಿ ಎಂದು ಹೇಳಿದ್ದೆ. ಅದನ್ನು ಕ್ಯಾನ್ಸಲ್ ಮಾಡಿ ಅಂತ ಇವರು ನಿನ್ನೆ ಹೋಗಿ ಈ ರೀತಿ…
ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆತ್ಮಹತ್ಯೆಗೆ ಯತ್ನಿಸಿದ ನಾಗಮಂಗಲ ಡಿಪೋ (Nagamangala Bus Depot) ಸಾರಿಗೆ ನೌಕರ ಜಗದೀಶ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಹೆಚ್‌ಡಿಕೆ, ಆತ್ಮಹತ್ಯೆ ಯತ್ನಿಸಿದ KSRTC ನೌಕರ ವೆಂಟಿಲೇಟರ್‌ನಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ 48 ಗಂಟೆ ಐಸಿಯುನಲ್ಲೇ ಇಡಬೇಕಾಗುತ್ತದೆ ಅಂತಾ ವೈದ್ಯರು ಹೇಳಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದು 50 ದಿನ ಆಗಿಲ್ಲ. ಆಗಲೇ ಇಷ್ಟು ದ್ವೇಷದ ರಾಜಕಾರಣ ಶುರುವಾಗಿದೆ. ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡ್ತಿದ್ದಾರೆ. ಚುನಾವಣೆಗೆ ಖರ್ಚು ಮಾಡಿದ ಹಣ ಮತ್ತೆ ವಾಪಸ್ ಪಡೆಯೋದಕ್ಕೆ ವರ್ಗಾವಣೆ ದಂಧೆ ಶುರುಮಾಡಿದ್ದಾರೆ. ಆದ್ರೆ ಜೀವಗಳ ಜೊತೆ ಚೆಲ್ಲಾಟ ಆಡುವ ಇಂತಹ ಚಿಲ್ಲರೆ ರಾಜಕಾರಣ ಮಾಡೋದು ಸರಿಯಲ್ಲ. ಇದನ್ನ ಸುಮ್ಮನೆ ಬಿಡಲ್ಲ. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರಿಂದ ಒತ್ತಡ: ಆತ್ಮಹತ್ಯೆಗೆ ಯತ್ನಿಸಿರುವ ಜಗದೀಶ್ ಕುಟುಂಬ JDS ನಿಷ್ಠಾವಂತ ಕಾರ್ಯಕರ್ತ. ಜಗದೀಶ್ ಪತ್ನಿ ಪಂಚಾಯಿತಿ ಸದಸ್ಯೆ.…
ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ ಒಂದು ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ ವಿಮೆ ಕೂಡ ಬರುವುದಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆ ನಂಬಿ ಕೂಡಬೇಡಿ, ಅವರು ಮುಂದಿನ ಐದು ದಿನ ನಿರಂತರ ಮಳೆ ಅಂತ ಹೇಳಿದ್ದಾರೆ. ಆದರೆ, ಎಲ್ಲ ಕಡೆ ನಿರ್ಧಿಷ್ಟ ಮಳೆ ಆಗುತ್ತಿಲ್ಲ. ನೀವು ವಾಸ್ತವ ನೋಡಿ ಕೆಲಸ ಮಾಡಬೇಕು. ಅದಕ್ಕಾಗಿ ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಲ್ಲದೇ ಪ್ರತಿ ಜಿಲ್ಲೆಗೂ ತಕ್ಷಣ ಐವತ್ತು ಲಕ್ಷ ರೂ.ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: KSRTC ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಸದನದಲ್ಲಿ ಸ್ಪಷ್ಟನೆ ನೀಡಿದ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ವರ್ಗಾವಣೆ ವಿಚಾರವಾಗಿ ನಮ್ಮ ಕಚೇರಿಯಿಂದ ಯಾವ ಪತ್ರ ಹೋಗಿಲ್ಲ. ಜಗದೀಶ್ ಸಂಬಂಧಿಕರು ವರ್ಗಾವಣೆ ವಾಪಸ್ಗೆ ಮನವಿ ಮಾಡಿದ್ದರು. ನಾನು ಕರೆ ಮಾಡಿ ಏನಾಗಿದೆ ಎಂದು ಮಾಹಿತಿ ಪಡೆದಿದ್ದೇನೆ. ತನಿಖೆ ಮಾಡಿ ವರದಿ ಕೊಡುವಂತೆ ಹೇಳಿದ್ದೆ. ನಂತರ KSRTC ಚಾಲಕ ಜಗದೀಶ್ ಮಾವ ಮತ್ತೆ ಕರೆ ಮಾಡಿದ್ದರು. ಎರಡು ದಿನ ಬಿಡಿ ಎಂದು ಜಗದೀಶ್ ಮಾವನವರಿಗೆ ನಾನೇ ತಿಳಿಸಿದ್ದೆ. ಬಳಿಕ ವರ್ಗಾವಣೆ ಹಿಂಪಡೆಯದಿದ್ದರೆ ವಿಷ ಕುಡಿಯುತ್ತೇನೆ ಎಂದು ಹೇಳಿದ್ದಾಗಿ ತಿಳಿದುಬಂದಿದೆ. ನಂತರ ಆತ್ಮಹತ್ಯೆಗೆ ಯತ್ನಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಅಥವಾ ಮೈಸೂರಿಗೆ ಶಿಫ್ಟ್ ಮಾಡಬೇಕಿತ್ತು. ಆಗ ಮಾಜಿ ಸಿಎಂ ಕರೆಮಾಡಿ ಬರುವವರೆಗೂ ಸ್ಥಳಾಂತರಿಸಬೇಡಿ ಎಂದಿದ್ದಾರೆ. ನಂತರ ಮಾಜಿ ಶಾಸಕ ಸುರೇಶ್ ಗೌಡ, ಅವರ ಪತ್ನಿ ಹೋಗಿ ತಡೆಯುತ್ತಾರೆ. ನಂತರ ಪೊಲೀಸರ ರಕ್ಷಣೆಯಲ್ಲಿ ಜಗದೀಶ್ನನ್ನು ಆಸ್ಪತ್ರೆಗೆ ಶಿಫ್ಟ್ ಮಾಡುತ್ತಾರೆ ಎಂದರು.
ಬೆಂಗಳೂರು: ನಾನು ದೇವೇಗೌಡರು ಕಾಂಗ್ರೆಸ್ನಿಂದ ಸಿಎಂ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದಾಗ ಕಾಂಗ್ರೆಸ್ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರಿಗೆ ಮಾತಾಡಲು ಅವಕಾಶ ಕೊಡಿ ಎಂದರು. ಹಾಗೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಈಶ್ವರಪ್ಪ ಅವರಿಂದ ಕಿತ್ತೋದ ಕಾಂಗ್ರೆಸ್ಸಿಗರು ರಾಜೀನಾಮೆ ಕೊಡಿಸಿದ್ದರು ಎಂದು ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು. ಸ್ಪೀಕರ್ ಒಪ್ಪಿದರೆ ಸದನದಲ್ಲೇ ಪೆನ್ಡ್ರೈವ್ ಪ್ರದರ್ಶನ ಮಾಡ್ತೇನೆ. ಇಲ್ಲೇ ಆಡಿಯೋ ಹಾಕಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ರು. ಈ ವೇಳೆ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸದಸ್ಯರು ಬೆಂಬಲ ಸೂಚಿಸಿದ್ರು.