ಹುಬ್ಬಳ್ಳಿ: ಜಗತ್ತಿನಲ್ಲಿ ಅನೇಕ ಪವಾಡ ಪುರುಷರ ತಮ್ಮ ಶಕ್ತಿಯಿಂದ ದೇವಿಯನ್ನು ಒಲಿಸಿಕೊಂಡ ಉದಾಹರಣೆಗಳಿವೆ ಅದರಲ್ಲಿ ಇದೇ ಕ್ಷೇತ್ರದ ನಾಗಲಿಂಗ ಅಜ್ಜನವರು ಹಾಗೂ ಶಿರೀಫ ಸಾಹೇಬರು ದೇವಿಯನ್ನು ಮಾತನಾಡಿಸಿ ಮೂಗನತ್ತನ್ನು ಕೇಳಿ ಪಡೆದರು. ದೇವಿಯ ಆರಾಧಕರಾಗಿ ದೇವಿಯನ್ನು ಒಲಿಸಿಕೊಂಡರು. ಇದರ ಅರ್ಥ ಇಷ್ಟೇ ಭಕ್ತಿಯಿಂದ ನಾವು ದ್ಯಾಮವ್ವ, ದುರ್ಗವ್ವನ ಪೂಜೆ, ಜಾತ್ರೆಯನ್ನು ಮಾಡಿ ದೇವಿ ಕೃಪಾಕಟಾಕ್ಷಿಯನ್ನು ಪಡೆಯಬೇಕೆಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಪಟ್ಟಣದ ಗ್ರಾಮದೇವತೆಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವದ 4 ನೇ ದಿನದ ದೇವತಾ ಕಾರ್ಯದ ಧರ್ಮಸಭೆಯಲ್ಲಿ ದಿವ್ಯ ಸಾನಿದ್ಯ ವಹಿಸಿ ಮಾತನಾಡಿದರು. ಸಾವಿರಾರು ರೀತಿಯಲ್ಲಿ ತಮ್ಮ ತಪೋಫಲದಿಂದ ಶ್ರೀದೇವಿ ಪೂಜೆಯನ್ನು ಕೈಗೊಳ್ಳುತ್ತಾರೆ. ಅನೇಕ ಸಾದು ಸಂತರು ದೇವಿಯನ್ನು ಪೂಜೆಸಿ ಮನವೊಲಿಸಿಕೊಂಡು ಜಗತ್ತಿನ ಉದ್ದಾರಕ್ಕಾಗಿ ತಮ್ಮ ಧಾರ್ಮಿಕ ಕಾರ್ಯವನ್ನು ಮಾಡಿದ ಇತಿಹಾಸಗಳು ನಮಗೆ ಸಿಗುತ್ತವೆ. ಸೇರಿದ ಭಕ್ತ ವೃಂದವನ್ನು ನೋಡಿದರೆ ಗ್ರಾಮದ ದೇವತೆಯ ಧರ್ಮ ಕಾರ್ಯದಿಂದ ಭಕ್ತರು ಪಾವನರಾಗಿದ್ದೀರಿ ಇಂತಹ ದೈವದ ಕಾರ್ಯಗಳಲ್ಲಿ…
Author: Prajatv Kannada
ಅಹಮದಾಬಾದ್: ಐಪಿಎಲ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಲು ಇದು ಅತ್ಯುತ್ತಮ ಸಮಯವಾಗಿದೆ. ಆದರೆ, ಅಭಿಮಾನಿಗಳು ನನ್ನ ಮೇಲೆ ತೋರಿದ ಪ್ರೀತಿ ಹಾಗೂ ವಾತ್ಸಲ್ಯದಿಂದ ಮತ್ತೊಂದು ಆವೃತ್ತಿಯಲ್ಲಿ ಆಡಲು ಎದುರು ನೋಡುತ್ತಿದ್ದೇನೆ. ಇದಕ್ಕಾಗಿ 9 ತಿಂಗಳುಗಳ ಕಾಲ ಕಠಿಣ ಪರಿಶ್ರಮ ಪಡುತ್ತನೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ತಿಳಿಸಿದ್ದಾರೆ. ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯದ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯಗೊಂಡಿದೆ. ಮೇ 28 ನಡೆಯಬೇಕಿದ್ದ ಈ ಪಂದ್ಯ ವಿಪರೀತ ಮಳೆ ಬಂದ ಕಾರಣ ರದ್ದಾಗಿ ನಿನ್ನೆಯ ರಿಸರ್ವ್ ಡೇಗೆ ಮುಂದೂಡಲ್ಪಟ್ಟಿತ್ತು. ಆದರೆ ಈ ರಿಸರ್ವ್ ಡೇ ದಿನದಂದೂ ಸಹ ಪಂದ್ಯಕ್ಕೆ ಮಳೆ ಅಡ್ಡಿ ಉಂಟುಮಾಡಿತ್ತು. ವಿಪರೀತ ಮಳೆ ಬಂದ ಕಾರಣ 20 ಓವರ್ಗಳ ಪಂದ್ಯ 15 ಓವರ್ಗೆ ಕುಸಿತ ಕಂಡಿತ್ತು. ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ…
ಅಹ್ಮದಾಬಾದ್ : ಕೊನೇ ಎಸೆತದವರೆಗೂ ನೋಡುಗರನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ರೋಚಕ ಫೈನಲ್ ಪಂದ್ಯದಲ್ಲಿ ಒತ್ತಡ ನಿಭಾಯಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟನ್ಸ್ ಎದುರು 5 ವಿಕೆಟ್‌ಗಳ ಜಯ ದಾಖಲಿಸಿ ದಾಖಲೆಯ 5ನೇ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಅಂತಿಮ 2 ಎಸೆತಗಳಲ್ಲಿ 10 ರನ್‌ಗಳ ಅಗತ್ಯವಿದ್ದಾಗ ಅನುಭವಿ ವೇಗದ ಬೌಲರ್ ಮೋಹಿತ್ ಶರ್ಮಾ ಎದುರು ಸಿಕ್ಸ್ ಮತ್ತು ಫೋರ್ ಬಾರಿಸಿದ ರವೀಂದ್ರ ಜಡೇಜಾ, ಸಿಎಸ್‌ಕೆ ಕೊರಳಿಗೆ ಜಯದ ಮಾಲೆ ತೊಡಿಸಿದರು. ಐಪಿಎಲ್ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದ ಎಂ.ಎಸ್. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಬಲಿಷ್ಠ ಗುಜರಾತ್ ಟೈಟಾನ್ಸ್‌ಗೆ (GT) ಮಣ್ಣುಮುಕ್ಕಿಸಿ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ 5 ಬಾರಿ ಐಪಿಎಲ್ ಕಪ್ ಗೆದ್ದ ಮುಂಬೈ ಇಂಡಿಯನ್ಸ್ ದಾಖಲೆಯನ್ನ ಸರಿಗಟ್ಟಿದೆ. ಗುಜರಾತ್ ಟೈಟಾನ್ಸ್ ತಾನು ಆಡಿದ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ವಿಶೇಷವೆಂದರೆ ಚೆನ್ನೈ ತಂಡದಲ್ಲಿ ಸ್ಟಾರ್…
ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್ಗಳಲ್ಲಿ ಸ್ತ್ರೀಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆ ನಡೆಯುತ್ತಿದೆ. ವಿಕಾಸಸೌಧದಲ್ಲಿ ಸಭೆ ನಡೆಯುತ್ತಿದ್ದು, ಎಲ್ಲರ ಪೋನ್ ಆಫ್ ಮಾಡಿ, ಯಾರು ವಿಡಿಯೋ ಮಾಡಬೇಡಿ. ಯಾವ ಮಷಿನ್ ಹೇಗೆ ಕೆಲಸ ಮಾಡುತ್ತೆ ಅಂತಾ ನನಗೆ ಗೊತ್ತಿದೆ. ಗಂಭೀರತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರು: ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆ ಹಾಕಿದ ಆರೋಪದಡಿ ಶಾಸಕ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. “ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂಬ ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ದರು.
ಬೆಂಗಳೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಭೆ ನಡಸಿದ ಅವರು, ಕುಡಿಯುವ ನೀರೇ ವಿಷವಾದರೆ ಜನ ಬದುಕುವುದಾದರೂ ಹೇಗೆ? ರಾಜ್ಯದಲ್ಲಿ ಜಲ ಮೂಲಗಳಿಗೆ, ಕೆರೆ, ನದಿ, ರಾಜಕಾಲುವೆಗಳಿಗೆ ವಿಷಯುಕ್ತ ತ್ಯಾಜ್ಯ ಹರಿಸುತ್ತಿರುವ ಕಾರ್ಖಾನೆಗಳ ವಿರುದ್ಧ ಕಾನೂನು ರೀತ್ಯ ಕ್ರಮ ಏಕೆ ಜರುಗಿಸಿಲ್ಲ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಇಂದು ಕುಡಿಯುವ ನೀರು ಕಲುಷಿತವಾಗಿದೆ, ಪ್ರಾಣವಾಯು ನಾವು ಉಸಿರಾಡುವ ಗಾಳಿಯೂ ವಿಷಯುಕ್ತವಾಗುತ್ತಿದೆ. ಹೊಸದಿಲ್ಲಿಯಲ್ಲಿ ಬಂದಿರುವ ಸ್ಥಿತಿ ರಾಜ್ಯಕ್ಕೂ ಬರಬಾರದು, ಈ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಜವಾಬ್ದಾರಿ ಗುರುತರವಾಗಿದೆ. ಇಲಾಖೆ ಮತ್ತು ಅಧಿಕಾರಿಗಳು ಈಗ ನಿರ್ಲಕ್ಷ್ಯ ವಹಿಸಿದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಹಿಜಾಬ್ ವಿಚಾರವಾಗಿ ಕೆಲವೊಂದು ಕಾನೂನು ತೊಡಕುಗಳಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳುತ್ತೇವೆ. ಶಾಲೆಗಳು ಪ್ರಾರಂಭ ಹಿನ್ನೆಲೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಶಿವಮೊಗ್ಗ ಗ್ರಾಮಾಂತರ ಶಾಲೆಗೆ ಭೇಟಿ ನೀಡುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಸರ್ಜರಿ ಬೆಂಗಳೂರು ಕಮೀಷನರ್ ವರ್ಗಾವಣೆಪ್ರತಾಪ ರೆಡ್ಡಿ ವರ್ಗಾವಣೆ ಮಾಡಿ ಆದೇಶ ಆಂತರಿಕ ಭದ್ರತಾ ವಿಭಾಗಕ್ಕೆ ಡಿಜಿಪಿಯಾಗಿ ಪ್ರತಾಪ ರೆಡ್ಡಿ ವರ್ಗಾವಣೆ. ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಬಿ ದಯಾನಂದ ನೇಮಕ ಸಂಚಾರಿ ಸ್ಪೆಷಲ್ ಕಮಿಷನರ್ ಆಗಿದ್ದ ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ) ವಿಭಾಗಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು: ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಮುಂದುವರಿಸಿ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಪರಿಸರ ರಾಯಭಾರಿಯಾಗಿ ಸಾಲುಮರದ ತಿಮ್ಮಕ್ಕ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.