Author: Prajatv Kannada

ಬೆಂಗಳೂರು:  ರಾಜ್ಯ ಸರ್ಕಾರವು ವಾಹನ ಸವಾರರಿಗೆ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ್ದು, ಸಂಚಾರಿ ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ ನೀಡಿದೆ. ಸಂಚಾರಿ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಅವಕಾಶವನ್ನು ಮತ್ತೊಮ್ಮೆ ನೀಡಲಾಗಿದ್ದು, ಸೆಪ್ಟೆಂಬರ್ 9ರವರೆಗೂ ದಂಡ ಪಾವತಿಗೆ ಅವಕಾಶವಿರಲಿದೆ. ಆದರೆ, ಕೇವಲ ಫೆಬ್ರವರಿ 11ಕ್ಕೂ ಮೊದಲು ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ಉಲ್ಲಂಘನೆ ಪ್ರಕರಣಗಳಿಗೆ ಮಾತ್ರವೇ ಈ ರಿಯಾಯತಿ ಅವಕಾಶ ಅನ್ವಯವಾಗಲಿದೆ. ಇಂದಿನಿಂದ ದಂಡ ಪಾವತಿಸಲು ಅವಕಾಶ ಆರಂಭವಾಗಲಿದೆ ಎಂಬುದರ ಕುರಿತು ಸಂಚಾರಿ ಪೊಲೀಸ್ ಇಲಾಖೆಯಿಂದ ಮಾಹಿತಿ ಲಭ್ಯವಾಗಬೇಕಿದೆ. ಆ ಬಳಿಕ‌ ವಾಹನ ಸವಾರರು ಸಂಚಾರಿ ಪೊಲೀಸ್ ಪೊಲೀಸ್ ಆಯುಕ್ತರ ಕಚೇರಿ, ಬೆಂಗಳೂರು ಒನ್, ಪೇಟಿಎಂ, ಬೆಂಗಳೂರು ಸಂಚಾರಿ ಪೊಲೀಸ್ ವೆಬ್‌ಸೈಟ್ ಮೂಲಕ ವಾಹನ ಸವಾರರು ದಂಡ ಪಾವತಿಸಬಹುದಾಗಿದೆ. ಸಂಚಾರಿ ದಂಡ ಪಾವತಿಸಲು ಈ ಹಿಂದೆ ನೀಡಲಾಗಿದ್ದ ಅರ್ಧದಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ಜಾರಿಗೆ ತರುವ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

Read More

ಬೆಂಗಳೂರು: ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

Read More

ಬೆಂಗಳೂರು: ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸೂಚಿಸಲಾಗಿದೆ. ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗಿದ್ದು, ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಲಾಗಿದೆ.

Read More

ಬೆಂಗಳೂರು: ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ಆದೇಶ ಪತ್ರ ನೀಡದ ವಿಚಾರವಾಗಿ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕರಾದ ಬಿವೈ ‌ವಿಜಯೇಂದ್ರ, ಮಹೇಶ್ ತೆಂಗಿನಕಾಯಿ ಅವರು ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ‌ ಮಧು‌ ಬಂಗಾರಪ್ಪ, ಕಾನೂನಿನಲ್ಲಿ ಒಂದೇ ಒಂದು ತೊಡಕಿದೆ. ಪತಿಯ ಆದಾಯ ಯಾರದ್ದು ತೆಗೆದುಕೊಳ್ಳಬೇಕು ಎಂಬ ತೊಡಕಿದೆ. ಸದ್ಯ ಅದು‌ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತನಾಡಲ್ಲ. ಯಾವುದಕ್ಕೂ ಆದೇಶ ಕೊಡಬೇಡಿ, ಪ್ರಕ್ರಿಯೆ ನಿಲ್ಲಿಸಬೇಡಿ ಅಂತಾ‌‌ ನ್ಯಾಯಾಲಯ ಹೇಳಿದೆ. ಕೋರ್ಟ್ ಆದೇಶ ಮಾಡಿದರೆ ಕಣ್ಣುಮುಚ್ಚಿ ನೇಮಕಾತಿ ಪತ್ರ ನೀಡುತ್ತೇವೆ. ಜುಲೈ 17ರೊಳಗೆ ಕೋರ್ಟ್ ಆದೇಶ ಪಡೆದು ತೀರ್ಮಾನಿಸುತ್ತೇವೆ ಎಂದರು.

Read More

ಬೆಂಗಳೂರು: ವಿಧಾನಸಭೆಯಲ್ಲಿ ಕೆ.ಜೆ.ಜಾರ್ಜ್, ಕುಮಾರಸ್ವಾಮಿ ನಡುವೆ ವಾಗ್ವಾದ ನಡೆದಿದೆ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂಬ ಆರೋಪಕ್ಕೆ ಕೆ.ಜೆ.ಜಾರ್ಜ್ ತಿರುಗೇಟು ಕೊಟ್ಟಿದ್ದಾರೆ. ನನ್ನ ಬಳಿ ಪೆನ್​ಡ್ರೈವ್ ಇದೆ, ಅದರಲ್ಲಿ ಸಾಕ್ಷ್ಯವಿದೆ ಎಂದು ಹೇಳುತ್ತೀರಿ. ನಿಮ್ಮ ಬಳಿ ಯಾವ ಸಾಕ್ಷ್ಯವಿದೆ, ಅದನ್ನು ಸ್ಪೀಕರ್​ಗೆ ನೀಡಿ ಎಂದು ವಿಧಾನಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಕೆ.ಜೆ.ಜಾರ್ಜ್​ ಮನವಿ ಮಾಡಿದರು. ಅದಕ್ಕೆ ಪೆನ್​ಡ್ರೈವ್​ನಲ್ಲಿರುವ ಸಾಕ್ಷ್ಯ ವೀಕ್ಷಣೆಗೆ ಸದನದಲ್ಲಿ ವ್ಯವಸ್ಥೆ ಮಾಡಿ. ಸ್ಪೀಕರ್ ಒಪ್ಪಿಗೆ ಕೊಟ್ಟರೆ ಸದನದಲ್ಲೇ ಪೆನ್ ಡ್ರೈವ್ ಪ್ರದರ್ಶನ ಮಾಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

Read More

ಬೆಂಗಳೂರು: ಸಂಭ್ರಮ ಶನಿವಾರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೇ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ದಪಡಿಸಲಾಗಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ.

Read More

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಷಯಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ವಿಷಯ ಪ್ರಸ್ತಾಪಿಸಿದರು. ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಚಾಲಕ ವರ್ಗಾವಣೆಯಿಂದ ಬೇಸತ್ತು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು, ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಬರೆದ ಪತ್ರದಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕ ಸಚಿವರ ಹೆಸರು ಉಲ್ಲೇಖಿಸಿದ್ದಾರೆ. ಎಫ್​ಐಆರ್​ನಲ್ಲಿ ಸಚಿವರ ಹೆಸರು ಉಲ್ಲೇಖಿಸಬೇಕು. ಸಚಿವ ಎನ್.ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದರು.

Read More

ಬೆಂಗಳೂರು: ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್​ ಕನ್ನಡ ಬಗ್ಗೆ ಚರ್ಚೆ ಹಿನ್ನೆಲೆ ಯು.ಟಿ.ಖಾದರ್​ ಮಾತನಾಡುತ್ತ, ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ, ಆದ್ರೆ ನಮ್ಮ ಪ್ರೀತಿಯ ಭಾಷೆ. ಕನ್ನಡ ಪ್ರೀತಿ, ಸೋದರತೆ, ಸಾಮರಸ್ಯದ ಭಾಷೆ. ಅದಕ್ಕೆ ನಾನು ಕೃತಜ್ಞತೆ ಹೇಳುತ್ತಿದ್ದೇನೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ BJP ಶಾಸಕ ಬಸನಗೌಡ ಯತ್ನಾಳ್, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ, ಹೈದರಾಬಾದ್ ಕನ್ನಡ ಬೇರೆ. ಮೈಸೂರು ಕನ್ನಡ ಬೇರೆ, ಮಂಗಳೂರು ಕನ್ನಡ ಬೇರೆ, ಮುಂಬೈ ಕನ್ನಡ ಬೇರೆ, ನಮಗೆ ನಿಮ್ಮ ಭಾಷೆ ಅರ್ಥ ಆಗಬೇಕು, ಅದಕ್ಕೆ ಆ್ಯಪ್​ ಹಾಕಿಕೊಡಿ. ಮೊಬೈಲ್​​ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ. ಲೋಕಸಭೆಯಲ್ಲಿ ಹಿಂದಿ‌ ಟು ಕನ್ನಡ, ಕನ್ನಡ ಟು ಹಿಂದಿ‌ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಆ್ಯಪ್​​ ಮಾಡಿ ಎಂದು ಕಾಲೆಳೆದರು.

Read More

ಬೆಂಗಳೂರು: ನಾಗಮಂಗಲ KSRTC ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ನಿಯಮ 60ರ ಅಡಿ ಚರ್ಚೆಗೆ ಅವಕಾಶ ಕೊಡುವಂತೆ ಸ್ಪೀಕರ್​​ಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ಮನವಿ ಪತ್ರ ನೀಡಿದ್ದಾರೆ. ಚರ್ಚೆಗೆ ಸಮಯ ಕೊಡುವಂತೆ JDS ಸದಸ್ಯರು ಪಟ್ಟು ಹಿಡಿಯಲಿದ್ದು ಪ್ರಕರಣದ ಹಿಂದೆ ಚಲುವರಾಯಸ್ವಾಮಿ ಇದ್ದಾರೆ. ಅವರ ರಾಜೀನಾಮೆಗೆ JDS ಶಾಸಕರು ಒತ್ತಾಯಿಸಲಿದ್ದಾರೆ. ಆತ್ಮಹತ್ಯೆ ಯತ್ನಿಸಿದ KSRTC ನೌಕರ ವೆಂಟಿಲೇಟರ್‌ನಲ್ಲಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ 48 ಗಂಟೆ ಐಸಿಯುನಲ್ಲೇ ಇಡಬೇಕಾಗುತ್ತದೆ ಅಂತಾ ವೈದ್ಯರು ಹೇಳಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದು 50 ದಿನ ಆಗಿಲ್ಲ. ಆಗಲೇ ಇಷ್ಟು ದ್ವೇಷದ ರಾಜಕಾರಣ ಶುರುವಾಗಿದೆ. ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡ್ತಿದ್ದಾರೆ. ಚುನಾವಣೆಗೆ ಖರ್ಚು ಮಾಡಿದ ಹಣ ಮತ್ತೆ ವಾಪಸ್ ಪಡೆಯೋದಕ್ಕೆ ವರ್ಗಾವಣೆ ದಂಧೆ ಶುರುಮಾಡಿದ್ದಾರೆ. ಆದ್ರೆ ಜೀವಗಳ ಜೊತೆ ಚೆಲ್ಲಾಟ ಆಡುವ ಇಂತಹ ಚಿಲ್ಲರೆ ರಾಜಕಾರಣ ಮಾಡೋದು ಸರಿಯಲ್ಲ. ಇದನ್ನ ಸುಮ್ಮನೆ ಬಿಡಲ್ಲ ಎಂದು ಗುಡುಗಿದರು.

Read More

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಧಮ್, ತಾಕತ್ತು ಇದ್ರೆ ಪೆನ್ ಡ್ರೈವ್​ನಲ್ಲಿ ಏನಿದೆ ಎಂದು ಬಹಿರಂಗ ಪಡಿಸಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯಿಲಿ ಸವಾಲು ಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತು ಹೆಚ್​ಡಿಕೆ ಹತಾಶರಾಗಿದ್ದಾರೆ. ಅವರು ಸಿಎಂ ಆಗಿದ್ದಾಗಿನ ದಾಖಲೆ ಪೆನ್ ಡ್ರೈವ್​ನಲ್ಲಿ ಇರಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಲ್ಲ. ತಪ್ಪಿನಲ್ಲಿ ಸಿಲುಕಿಸಲು ಬಿಜೆಪಿ ಜೆಡಿಎಸ್ ಯತ್ನಿಸುತ್ತಿದೆ. ಅವರ ಕನಸ್ಸು ಹಿಡೇರಲ್ಲ ಎಂದರು. ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಪೆನ್  ಡ್ರೈವ್ ಬಾಂಬ್ ಹಾಕಿದ್ದಾರೆ. ವರ್ಗಾವಣೆ ದಂಧೆ ಬಗ್ಗೆ ಸದನದಲ್ಲಿ ಗುಡುಗುತ್ತಿದ್ದ ಕುಮಾರಸ್ವಾಮಿ, ಸಾಕ್ಷ್ಯ ಸಮೇತ ವಿಧಾನಸೌಧಕ್ಕೆ ಎಂಟ್ರಿ ಕೊಟ್ರು ಸಚಿವರೊಬ್ಬರು ವರ್ಗಾವಣೆಗೆ ಹಣ ಡಿಮ್ಯಾಂಡ್ ಮಾಡಿರೋ ಆಡಿಯೋ ಅದಾಗಿದ್ದು ಎಂದು ತನ್ನ ಜೇಬಿನಿಂದ ಪೆನ್ ಡ್ರೈವ್ ತೆಗೆದು ಮಾಧ್ಯಮಗಳ ಎದುರು ತೋರಿಸಿದ್ದಾರೆ.

Read More