ಬೆಳಗಾವಿ: ನಗರದಲ್ಲಿ ತಹಶೀಲ್ದಾರ್ (Tahsildar) ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ (Death Note) ಪತ್ತೆಯಾಗಿದೆ. ಬೆಳಗಾವಿ (Belagavi) ನಗರದ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಜೂನ್ 20ರಂದು ಬರೆದಿಟ್ಟಿದ್ದ ಪತ್ರ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಸಾವಿಗೆ ಪತ್ನಿಯ ಕಿರುಕುಳವೇ (Harassment) ಕಾರಣ ಎಂದು ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಹಶೀಲ್ದಾರ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆಯಲು ಸಿದ್ಧಪಡಿಸಿದ್ದ ಪತ್ರ ಕೂಡ ಪರಿಶೀಲನೆ ವೇಳೆ ಪತ್ತೆಯಾಗಿದೆ. ಮನೆಯವರ ವಿರೋಧದ ನಡುವೆ ಪ್ರೀತಿಸಿ ಅಶೋಕ್ ಮದುವೆಯಾಗಿದ್ದರು. ಬೆಳಗಾವಿ ಉಪವಿಭಾಗ ಕಚೇರಿಯಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಸದ್ಯ ಜೂನ್ 29ರಂದು ಮನೆಯಲ್ಲಿ ಹೃದಯಾಘಾತದಿಂದ ಸಾವು ಎಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪತ್ನಿ ಭೂಮಿ ಹಾಗೂ ಪತ್ನಿಯ ಸಹೋದರ ಸ್ಯಾಮುವಲ್ ವಿರುದ್ಧ ಕೇಸ್ ದಾಖಲಾಗಿದೆ.…
Author: Prajatv Kannada
ಹುಬ್ಬಳ್ಳಿ: ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ನಾರ್ತ್ ಸ್ಥಾಪನಾ ಪದಗ್ರಹಣ ಸಮಾರಂಭವು ಜು. ,6 ರಂದು ಸಂಜೆ ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ ಸಭಾಂಗಣದಲ್ಲಿ ನಡೆಯಲಿದೆ.2023-24ನೇ ಸಾಲಿನ ಅಧ್ಯಕ್ಷರಾಗಿ ಡಾ.ನಾಗರಾಜ್ ಪಿ.ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಕಾಶ್ ಇರಕಲ್ ಹಾಗೂ ಖಜಾಂಚಿಯಾಗಿ ರವಿ ಬಾಕಳೆ ಆಯ್ಕೆಯಾಗಿದ್ದು, ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆರ್.ಟಿ.ಎನ್.ಅರುಣ್ ಭಂಡಾರೆ, ಜಿಲ್ಲಾ ಗವರ್ನರ್ ನಾಮಿನಿ, ಸುರೇಂದ್ರ ಪೋರವಾಲ್ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಂಡ್ಯ: ಸಚಿವ ಚಲುವರಾಯಸ್ವಾಮಿ ಸೂಚನೆ ಮೇರೆಗೆ ವರ್ಗಾವಣೆ ಆದ KSRTC ಬಸ್ ಡ್ರೈವರ್ ಕಮ್ ಕಂಡಕ್ಟರ್ ಒಬ್ಬರು ಡಿಪೋದಲ್ಲೇ ವಿಷ ಸೇವಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ KSRTC ಬಸ್ ಡಿಪೋನಲ್ಲಿ ನಡೆದಿದೆ. ಎಚ್.ಆರ್.ಜಗದೀಶ್, ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ ಮತ್ತು ನಿರ್ವಾಹಕನಾಗಿದ್ದು, ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ಅಧಿಕಾರಿಗಳು ವರ್ಗಾವಣೆ ಮಾಡಿದ್ದರು ಎಂದು ತಿಳಿದುಬಂದಿದೆ. ವಿಷಯ ತಿಳಿದು ವರ್ಗಾವಣೆ ಆದೇಶ ತೆಗೆದುಕೊಳ್ಳದೆ ಕ್ರಿಮಿನಾಶಕ ತಂದು ಡಿಪೋದಲ್ಲೇ ಸೇವನೆ ಮಾಡಿದ್ದಾನೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಕಂಡಕ್ಟರ್ ಜಗದೀಶ್ ಡೆತ್ ನೋಟ್ ಬರೆದಿರುವುದು ಬೆಳಕಿಗೆ ಬಂದಿದೆ. ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್ ಕೇಳಿದೆ. ನಿಯಂತ್ರಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನ ಕೇಳಿದಾಗ ಕೃಷಿ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಎಂದ್ರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪವೆಂದು ತಿಳಿಯದೆ ನೊಂದಿದ್ದೇನೆ. ಈ ಒತ್ತಡ, ಅವಮಾನವನ್ನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ…
ಮೈಸೂರು: ಪಕ್ಷ ಸೂಚಿಸಿದರೆ ಆದೇಶ ಪಾಲಿಸಲು ಸಿದ್ದ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಚುನಾವಣೆಗೆ ಇನ್ನು 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದರೇ ಪಾಲನೆ ಮಾಡಬೇಕಾಗುತ್ತದೆ ಎಂದು ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯ ವಿಚಾರವಾಗಿ ಡಾ. ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಅಭಿಪ್ರಾಯ ವ್ಯಕ್ತಪಿಡಿಸಿದರು.
ಚಿಕ್ಕಬಳ್ಳಾಪುರ: ಕಾಲೇಜು ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಫದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ (Nagarjuna College of Engineering)ನಡೆದಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ 21 ವರ್ಷದ ಪ್ರೀತಿ ಸಾವನ್ನಪ್ಪಿರುವ ವಿದ್ಯಾರ್ಥಿನಿ. ಅಂದಹಾಗೆ ಇಂದು ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೀತಿ ಪತ್ತೆಯಾಗಿದ್ದು.,ಕೂಡಲೇ ಕಾಲೇಜು ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಆದಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಸಿದ್ದಾರೆ. ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಕಾರಣ ತಿಳಿದುಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಮೃತಳ ಪೋಷಕರು ಸಹ ಏನಾಗಿದೆ ಎಂಬುದು ನಮಗೂ ಗೊತ್ತಿಲ್ಲ ಕಾಲೇಜಿನವರು ನಿಮ್ಮ ಮಗಳಿಗೆ ತುಂಬಾ ಹುಷಾರಿಲ್ಲ ಬೇಗ ಬನ್ನಿ ಅಂತ ಹೇಳಿದ್ರು . ನಾವ್ ಬಂದಾದ ಮೇಲೆ ಮೃತಪಟ್ಟಿದ್ದಾಳೆ ಎನ್ನುತ್ತಿದ್ದಾರೆ ಅಂತ ತಿಳಿಸಿದರು ಅಂತಾರೆ. ಸದ್ಯ ವಿಜಯಪುರ ಪೊಲೀಸ್ ಠಾಣೆಗೆ ಮೃತಳ ತಂದೆ ಹೋಗಿ…
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಅಬ್ಬರದ ಮಳೆ (Rain) ಮುಂದುವರೆದಿದ್ದು, ಭಟ್ಕಳದಲ್ಲಿ (Bhatkal) ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 (NH 66) ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಸುರಿದ ಪರಿಣಾಮ ಭಟ್ಕಳದ ರಂಗಿನಕಟ್ಟೆ, ಸಂಶುದ್ದೀನ್ ವೃತ್ತ, ಶಿರಾಲಿಯಲ್ಲಿ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ಭಟ್ಕಳದಲ್ಲಿ ಮಂಗಳವಾರ 112.1 ಮಿಲಿ ಮೀಟರ್ ದಾಖಲೆ ಮಳೆ ಸುರಿದಿದ್ದು, ರಾತ್ರಿಯ ವೇಳೆ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಗಾಳಿ, ಮಳೆಯ ಅಬ್ಬರಕ್ಕೆ ಹೊನ್ನಾವರದ ಪ್ರಭಾತ್ ನಗರದ ಪ್ರಕಾಶ್ ಮೇಸ್ತಾ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದಿದೆ. ಮೋಳ್ಕೊಡು ಗ್ರಾಮದ ಮಣಿಕಂಠ ನಾಯ್ಕರ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರೆಯುತಿದ್ದು, ಇನ್ನೂ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ…
ಮಂಗಳೂರು: ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕದ (Physical Relation) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆದ ಹಿನ್ನೆಲೆ ಮನನೊಂದು ಪುತ್ರ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನಲ್ಲಿ ನಡೆದಿದೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ತಂದೆ ಪರ ಸ್ತ್ರೀ ಜೊತೆ ದೈಹಿಕ ಸಂಪರ್ಕ ಮಾಡುವಾಗ ಸಿಕ್ಕಿಬಿದ್ದಿದ್ದರು. ಸ್ಥಳೀಯ ಯುವಕನೊಬ್ಬ ಇವರಿಬ್ಬರ ದೈಹಿಕ ಸಂಪರ್ಕದ ವಿಡಿಯೋ ರೆಕಾರ್ಡ್ ಮಾಡಿದ್ದು, ಬಳಿಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದರಿಂದ ಇಳಿ ವಯಸ್ಸಿನ ಮಹಿಳೆ ಮತ್ತು ಯುವಕನ ತಂದೆ ಮುಜುಗರಕ್ಕೆ ಒಳಗಾಗಿದ್ದರು. ಆ ಬಳಿಕ ಸುಮಂತ್ ತಂದೆಯ ಜೊತೆ ಜಗಳ ಮಾಡಿದ್ದು, ತಂದೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ ತೀವ್ರ ಮುಜುಗರ ಅನುಭವಿಸಿದ್ದ. ಇದರಿಂದ ತೀವ್ರ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ದೊರೆತಿದೆ. ಸದ್ಯ ವಿಡಿಯೋ ವೈರಲ್ ಮಾಡಿದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು…
ಮೈಸೂರು: ವರುಣ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ಸಮಯ ನೀಡದ ಹಿನ್ನೆಲೆ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ತಂದೆ ಸಿಎಂ ಆಗಿರುವುದರಿಂದ ಕ್ಷೇತ್ರದ ಜನರಿಗೆ ಸಮಯ ನೀಡಲಾಗುತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಅಗತ್ಯ. ಹೀಗಾಗಿ ಚಿಕ್ಕ ಸ್ಥಾನಮಾನ ನೀಡಿದರೂ ಸಹಕಾರಿ ಆಗಲಿದೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ ಆದರೂ ಅಂತಹದ್ದೇ ಸಣ್ಣ ಹುದ್ದೆ ನೀಡಿದರೇ ಜನರ ಸೇವೆ ಮಾಡಲು ನಾನು ಸಿದ್ಧನಿದ್ದೇನೆ ಎಂದರು.
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಕುಟುಂಬದಲ್ಲಿ ಮತ್ತೆ ಸಂಭ್ರಮ ಮನೆ ಮಾಡಿದೆ. ಪವನ್ ಪತ್ನಿ ಅಪೇಕ್ಷಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಮನೆಗೆ ಮುದ್ದು ಮಗಳ ಆಗಮನವಾಗಿದ್ದು, ಈ ಖುಷಿಯ ಸುದ್ದಿಯನ್ನು ಪವನ್ ಒಡೆಯತ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಜೋಡಿಗೆ ಶೌರ್ಯ ಎಂಬ ಮುದ್ದಾದ ಗಂಡು ಮಗನಿದ್ದು, ಇದೀಗ ಅಪೇಕ್ಷಾ ಹೆಣ್ಣು ಮಗುವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ತಾಯಿ- ಮಗು ಕ್ಷೇಮವಾಗಿದ್ದಾರೆ ಎಂದು ಪವನ್ ಬರೆದುಕೊಂಡಿದ್ದಾರೆ. ಇತ್ತೀಚಿಗೆ ಅಪೇಕ್ಷಾ ಬೇಬಿ ಬಂಪ್ ಫೋಟೋಶೂಟ್ ಮೂಲಕ ತಾವು ಪ್ರಗ್ನೆಂಟ್ ಎಂಬ ಸಿಹಿ ಸುದ್ದಿ ನೀಡಿದ್ದರು. ಕಪ್ಪು ಬಣ್ಣದ ಉಡುಗೆಯಲ್ಲಿ ನಟಿ ಅಪೇಕ್ಷಾ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದರು. ಸದ್ಯ ಹೊಸ ಅತಿಥಿಯ ಆಗಮನದ ಖುಷಿಯಲ್ಲಿರುವ ಜೋಡಿಗೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸಿನಿಮಾ ರಂಗದವರು ಶುಭ ಹಾರೈಸಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರೀಲ್ ನಲ್ಲಿ ಮಾತ್ರವಲ್ಲ, ರಿಯಲ್ ಹೀರೋ ಕೂಡ ಹೌದು. ಕಷ್ಟ ಎಂದು ಬಂದ ಯಾರನ್ನು ಕೂಡ ಸುದೀಪ್ ಬರಿಗೈಯಲ್ಲಿ ಕಳಿಸಿದ್ದೇ ಇಲ್ಲ. ಇದೀಗ ಸುದೀಪ್ ಅವರನ್ನು ಒಮ್ಮೆಯಾದರೂ ಭೇಟಿ ಮಾಡಬೇಕು ಎಂದು ಕಾದು ಕೂತಿದ್ದ ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ಸುದೀಪ್ ಭೇಟಿ ಮಾಡುವ ಮೂಲಕ ಬಾಲಕಿಯ ಆಸೆಯನ್ನು ಈಡೇರಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದ್ರೂ ಸುದೀಪ್ ಅವರನ್ನು ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆಯಾಗಿತ್ತು. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ನೀಡಿದ್ದಾರೆ. ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ…