ಹುಬ್ಬಳ್ಳಿ: ಕಲಘಟಗಿ ಶಾಸಕ ಸಂತೋಷ ಲಾಡ್‌ಗೆ ಸಚಿವ ಸ್ಥಾನ ಸಿಕ್ಕ ಹಿನ್ನಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ನಲ್ಲಿ ಸಂತೋಷ ಲಾಡ್ ಅಭಿಮಾನಿಗಳ ಬಳಗದಿಂದ ವಿಜಯೋತ್ಸವ ಆಚರಣೆ ಮಾಡಿದರು. ಧಾರವಾಡ ಜಿಲ್ಲೆಯಲ್ಲಿ ಸಚಿವ ಸ್ಥಾನ ಪಡೆದ ಸಂತೋಷ ಲಾಡ್ ಪರ ಜಯಘೋಷ ಕೂಗಿದ ಅಭಿಮಾನಿಗಳು, ಪಟಾಕಿ ಸಿಡಿಸಿ, ಸಹಿ ಹಂಚಿ ವಿಜಯೋತ್ಸವ ಮಾಡಿದರು. ಅಷ್ಟೆ ಅಲ್ದೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನಲೆಯಲ್ಲಿ, ಹುಬ್ಬಳ್ಳಿಯ ಗದಗ ರಸ್ತೆಯ ಅಂಬೇಡ್ಕರ್ ಪ್ರತಿಮೆ ಬಳಿ, ಪರಸ್ಪರ ಬಣ್ಣ ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಮಹಿಳಾ ಮಣಿಗಳು.
Author: Prajatv Kannada
ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ, ಕೆರೆ ಅಭಿವೃದ್ಧಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು. ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಭಿವೃದ್ಧಿ ಮಾಡುವುದು ಅಗತ್ಯವಾಗಿದೆ. ಕೆರೆಯ ಆವರಣದಲ್ಲಿರುವ ಜಾಗಿಂಗ್ ಟ್ರ್ಯಾಕ್ ಅಭಿವೃದ್ಧಿಗೆ, ಕಸ, ಬಲೆ ಹಾಗೂ ತ್ಯಾಜ್ಯ ವಿಲೇವಾರಿ, ವಾಸನೆ ಬರುತ್ತಿರುವ ಭಾಗದಲ್ಲಿ ಹೂಳೆತ್ತುವುದು ಹಾಗೂ ಕೆರೆ ಸ್ವಚ್ಛಗೊಳಿಸಲು, ಬೋಟ್ ದುರಸ್ತಿ ಮಾಡಿಸಿ ಅದರ ಚಾಲನೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಹೇಳಿದರು. ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು. ವಾಯು ವಿಹಾರ ಮಾರ್ಗದ ಸೇತುವೆ ಕಬ್ಬಿಣಕ್ಕೆ ಫೇಯಿಂಟ್ ಮಾಡಿಸಬೇಕು. ವಾಯುವಿಹಾರಿಗಳ ಅನುಕೂಲಕ್ಕಾಗಿ ಬೇಕಾಗುವ ಸೌಕರ್ಯಗಳ ಬಗ್ಗೆ ಗಮನಹರಿಸಲಾಗುವುದು ಎಂದು ತಿಳಿಸಿದರು. ಈ ಸಂಬಂಧ ಕುಕ್ಕರ ಹಳ್ಳಿಕೆರೆ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ಹಾಗೂ ಸೂಕ್ಷ್ಮ ಯೋಜನೆ ತಯಾರಿಸಿ ಮೈಕ್ರೋ ಪ್ಲಾಂಟ್ಸ್ ನಿರ್ವಹಣೆ ಮತ್ತು ಇಂಪ್ರೂವ್ಮೆಂಟ್ ಗೆ ವಿಶ್ವವಿದ್ಯಾನಿಲಯದಿಂದ ಸಿಎಸ್ ಆರ್ ಅನುದಾನ ಬಳಸಿಕೊಳ್ಳಲು ಕ್ರಮವಹಿಸಲಾಗುವುದು. ಕೆರೆಯ ಅಭಿವೃದ್ಧಿ ಮತ್ತು ಸರಿಯಾದ ನಿರ್ವಹಣೆಯಲ್ಲಿ ಸಾರ್ವಜನಿಕರ…
ಮಂಗಳೂರು: ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದಿದ್ದಾರೆ. ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ.…
ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ (Rikki Rai) ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು(Srinivas Naidu)ವಿರುದ್ದ ದೂರು ದಾಖಲಾಗಿದೆ. ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ಅವರು ದೂರು ನೀಡಿದ್ದಾರೆ. ನಿನ್ನೆ(ಮೇ.26) ರಾತ್ರಿ ಊಟಕ್ಕೆಂದು ರಿಕ್ಕಿ ರೈ ಲ್ಯಾವೆಲ್ಲಿ ರಸ್ತೆಯ ಖಾಜಿ ಬಾರ್ ಅಂಡ್ ಕಿಚನ್ ಹೋಟೆಲ್ಗೆ ಹೋಗಿದ್ದರು. ಈ ವೇಳೆ ಶ್ರೀನಿವಾಸ್ ನಾಯ್ಡು ಮೂರು ನಾಲ್ಕು ಜನರೊಂದಿಗೆ ಬಂದು, ಏಕಾಏಕಿ ಅಟ್ಯಾಕ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ರಿಕ್ಕಿ ರೈ ಹಣೆಗೆ ಪೆಟ್ಟು ಬಿದ್ದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿಲಾಯ್ತು. ಪೊಲೀಸರು ಬಂದಿದ್ದೇ ಶ್ರೀನಿವಾಸ ನಾಯ್ಡು ಅವರ ಜೊತೆ ಇದ್ದವರು ಎಸ್ಕೇಪ್ ಆಗಿದ್ದಾರೆ ಎಂದು ದೂರು ನೀಡಿದ್ದಾರೆ. ಇನ್ನು ಸೋಮಶೇಖರ್ ದೂರಿನನ್ವಯ ಎಫ್ ಐ ಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸಂಪುಟದ 24 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ಗುಪ್ತಚರ, ಡಿಪಿಎಆರ್ ಸೇರಿದಂತೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಳಿಯೇ ಉಳಿಸಿಕೊಂಡಿದ್ದರೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್‌ಗೆ (DK Shivakumar) ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ ಖಾತೆ ಸಿಕ್ಕಿದೆ. ಯಾರಿಗೆ ಯಾವ ಖಾತೆ? ಸಿದ್ದರಾಮಯ್ಯ – ಹಣಕಾಸು, ಗುಪ್ತಚರ, ಡಿಪಿಎಆರ್, ಹಂಚಿಕೆಯಾಗದ ಎಲ್ಲಾ ಖಾತೆಗಳು ಡಿಕೆಶಿ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ ಪರಮೇಶ್ವರ್ – ಗೃಹ ಕೆ.ಜೆ.ಜಾರ್ಜ್ – ಇಂಧನ ಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಐಟಿ ಬಿಟಿ ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಮಲಿಂಗಾರೆಡ್ಡಿ – ಸಾರಿಗೆ ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಕೃಷ್ಣಬೈರೇಗೌಡ – ಕಂದಾಯ ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸತೀಶ್ ಜಾರಕಿಹೊಳಿ –…
ಬೆಂಗಳೂರು: ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ. ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ. ಮುಂದಿನ ಸಂಪುಟದಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ. ಈ ಹಿಂದೆಯೂ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ. ವಿರೋಧ ಪಕ್ಷದವರು ಜನರಿಗೆ ಕೊಟ್ಟ ಭರವಸೆ ಈಡೇರಿಸಿರಲಿಲ್ಲ ಎಂದರು.
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಅವಕಾಶ ಕೊಡಬೇಕಿತ್ತು ಎಂದುಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಆಗ್ರಹಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸಚಿವರಾಗಲು ಅರ್ಹರಾಗಿರುತ್ತಾರೆ ಆದರೆ ಅವರಿಗೆ ಸಚಿವ ಸ್ಥಾನ ಕೊಡಬೇಕಿತ್ತು ಇನ್ನು ಮುಂದಾದರೂ ಅವರಿಗೆ ಸಚಿವ ಸ್ಥಾನ ಕೊಡಬೇಕು ಅನ್ನೋದು ಅವರ ಧರ್ಮ ಎಂದ ಸ್ವಾಮೀಜಿ ಅವರು, ಜಗದೀಶ್ ಶೆಟ್ಟರ್ ಹಾಗೂ ಸವದಿ ಒಳ್ಳೆ ಅನುಭವಿ ರಾಜಕಾರಣಿಗಳು. ಸಜ್ಜನ,ಸಾತ್ವಿಕ ರಾಜಕಾರಣಿಗಳು ಆಗಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರ ಅನುಭವವನ್ನು ಮಾರ್ಗದರ್ಶನವನ್ನು ಪಕ್ಷ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನಾನು ಇನ್ನೂಂದು ಸಲ ನಾನು ಅವರಿಗೆ ಸಚಿವ ಸ್ಥಾನ ಕೊಡಲು ಒತ್ತಾಯ ಮಾಡ್ತೀನಿ ಎಂದರು. ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಲಿಂಗಾಯತರನ್ನು ಕಡೆಗಣಿಸಿದ ಹಾಗೆ ಕಾಣಲ್ಲ ಇನ್ನು ಅವಕಾಶ ಇದೆ,…
ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದರಿಂದ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯದ ಜನತೆಗೆ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿದ್ದೀರಿ. ಕೂಡಲೆ ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಕಾಂಗ್ರೆಸ್ ಮಾಡಲಿ ಎಂದು ಬಿಜೆಪಿ ಮುಖಂಡ ಕಿರಣಕುಮಾರ ದೇಸಾಯಿ ಒತ್ತಾಯಿಸಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ ಅದು ಬರಿ ಘೋಷಣೆಯಾಗಿ ಉಳಿಯಬಾರದು ಕರ್ನಾಟಕದ ಜನರಿಗೆ ತಲುಪಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಲಿ ಎಂದರು. ಪ್ರಕಾಶ ಕುಂಬಾರ
ಧಾರವಾಡ: ತಡರಾತ್ರಿಯಷ್ಟೇ ಧಾರವಾಡ ಹೊರವಲಯದ ಕಮಲಾಪುರದಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧಿಸಿದಂತೆ ನಾಲ್ಕು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರೌಡಿ ಶೀಟರ್ ಆಗಿದ್ದ ಫ್ರೂಟ್ ಇರ್ಫಾನ್ ಮಗ ಅರಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿದಂತೆ ನಾಲ್ಕು ಜನರನ್ನು ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿಯನ್ನು ಹತ್ಯೆ ಮಾಡಲು ಐದು ಜನರ ತಂಡ ನಿನ್ನೆ ರಾತ್ರಿ ಅವರ ಮನೆಗೆ ನುಗ್ಗಿತ್ತು. ತಾವು ಅಂದುಕೊಂಡಂತೆ ಮಹ್ಮದ್‌ನನ್ನು ಹತ್ಯೆ ಮಾಡಿದ ಆರೋಪಿಗಳು, ಹತ್ಯೆ ಮಾಡುವ ಅವಸರದಲ್ಲಿ ತಮ್ಮ ಸಹಚರ ಗಣೇಶ ಕಮ್ಮಾರನ ಕಾಲಿಗೆ ಮಾರಕಾಸ್ತ್ರಗಳಿಂದ ಬಲವಾಗಿ ಹೊಡೆದಿದ್ದರು. ಇದರಿಂದ ಗಣೇಶ, ಮಹ್ಮದನ ಮನೆಯಿಂದ ಅನತಿ ದೂರ ಓಡಿ ಹೋಗಿ ಸಾವನ್ನಪ್ಪಿದ್ದ. ಉಳಿದ ನಾಲ್ಕು ಜನ ಆರೋಪಿಗಳು ಗಣೇಶನನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ರೌಡಿ ಶೀಟರ್ ಆಗಿದ್ದ ಫ್ರೂಟ್ ಇರ್ಫಾನ್ ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿ ಜೊತೆ ವ್ಯವಹಾರ ಮಾಡುತ್ತಿದ್ದ. ತನ್ಮ ತಂದೆ ಫ್ರೂಟ್ ಇರ್ಫಾನ್…
ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ (Fire) ಹಾಕಿರುವ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ (PSI) ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.