ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನ (New Parliament Building) ಉದ್ಘಾಟನೆ ಯಾಗುವುದನ್ನು (inauguration) ವಿರೋಧಿಸಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ್ದ ವಿಪಕ್ಷ ನಾಯಕರಿಗೆ ಭಾರೀ ಮುಖಭಂಗವಾಗಿದೆ. ರಾಷ್ಟ್ರಪತಿಯವರಿಂದಲೇ ಉದ್ಘಾಟನೆಯಾಗಬೇಕು ಎಂದು ಲೋಕಸಭೆ ಕಾರ್ಯಾಲಯಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಸುಪ್ರೀಂ ಕೋರ್ಟ್ ನ ಈ ನಿರ್ಧಾರ ವಿಪಕ್ಷಗಳಿಗೆ ಮಾಡಿದ ಕಪಾಳಮೋಕ್ಷದಂತಿದೆ ಎಂದಿದ್ದಾರೆ. ಸುಪ್ರೀಂ ಕೋರ್ಟ್ ನ ತೀರ್ಪಿನ ಬೆನ್ನಲ್ಲೇ ಟ್ವೀಟರ್ ಮೂಲಕ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಸಂಸತ್ ಭವನದ ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಮಾಡಿದ ವಿಪಕ್ಷಗಳಿಗೆ ನ್ಯಾಯಾಲಯ ಪಾಳಮೋಕ್ಷ ಮಾಡಿದೆ ಎಂದಿದ್ದಾರೆ. ನೂತನ ಸಂಸತ್ ಕಟ್ಟಡ ರಾಷ್ಟ್ರಪತಿಗಳಿಂದ ಉದ್ಘಾಟಿಸುವಂತೆ ನಿರ್ದೇಶನ ಕೋರಿ ಅಡ್ವೋಕೇಟ್ ಜಯಾ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಲೋಕಸಭೆ ಕಾರ್ಯಾಲಯಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆರ್ಟಿಕಲ್ 79ಕ್ಕೂ, ಪಾರ್ಲಿಮೆಂಟ್ ಮತ್ತು…
Author: Prajatv Kannada
ನವದೆಹಲಿ: ಸಾರ ವರ್ಧಿತ ಪ್ಯಾರಾ ಬಾಯಿಲ್ಡ್ ಅಕ್ಕಿ ಖರೀದಿ ವಿಚಾರದಲ್ಲಿ (Fortified Parboiled Rice) ಕೇಂದ್ರ ಸರ್ಕಾರವು ತೆಲಂಗಾಣದ ರೈತರಿಗೆ ನಿರಂತರವಾಗಿ ಬೆಂಬಲ ನೀಡುತ್ತಿದೆ. ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಖಾರಿಫ್ ಮಾರ್ಕೆಟಿಂಗ್ ಸೀಸನ್ (KMS) 2022-2023 ಅವಧಿಗಾಗಿ ಹೆಚ್ಚುವರಿ 6.80 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (G Kishan Reddy) ಹೇಳಿದ್ದಾರೆ. 2021-22 ರಾಬಿ ಹಂಗಾಮಿಗೆ ಮತ್ತು 2022-23 ಖಾರಿಫ್ ಹಂಗಾಮಿಗೆ 13.73 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಸಂಗ್ರಹಣೆಗೆ ಅನುಮೋದಿಸಲಾಗಿತ್ತು. ಅದಕ್ಕೆ ಪೂರಕವಾಗಿ ಹೆಚ್ಚುವರಿಯಾಗಿ ಈಗ 6.80 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದರು. ತೆಲಂಗಾಣದ ರೈತರಿಗೆ ಬೆಂಬಲ ನೀಡಲು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಜಿ ಕಿಶನ್ ರೆಡ್ಡಿ, ಕೇಂದ್ರ ಸರ್ಕಾರದ ಈ ನಿರ್ಧಾರವು ಇತ್ತೀಚಿನ ಅಕಾಲಿಕ ಮಳೆಯಿಂದ ನಷ್ಟಕ್ಕೊಳಗಾದ ರೈತರಿಗೆ ಸಹಾಯ ಮಾಡಲಿದೆ ಎಂದು ಹೇಳಿದರು. ತೆಲಂಗಾಣ ಸರ್ಕಾರವು ಕೇಂದ್ರ ಸರ್ಕಾರ ನೀಡಿದ ಸಹಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕು…
ಚಂಡೀಗಢ: 11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಘಟನೆ ಚಂಡೀಗಢದಲ್ಲಿ (Chandigarh) ನಡೆದಿದೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅತ್ಯಾಚಾರಗೈದ ನಾಲ್ವರು ಅಪ್ರಾಪ್ತ ಆರೋಪಿಗಳಲ್ಲಿ ಓರ್ವ ಆಕೆಯ ಸಹಪಾಠಿಯಾಗಿದ್ದು, ಉಳಿದ ಮೂವರು ಸರ್ಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಅತ್ಯಾಚಾರಗೈದ ಅಪ್ರಾಪ್ತ ಆರೋಪಿಗಳು ಕಳೆದ 6 ತಿಂಗಳಿನಿಂದ ಸಂತ್ರಸ್ತೆಗೆ ಬೆದರಿಕೆ (Black Mail) ಹಾಕುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ 15 ದಿನಗಳ ಹಿಂದೆ ನಡೆದಿದ್ದು, ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲಾಗಿದೆಯೇ ಎಂದು ತಿಳಿದು ಬಂದಿಲ್ಲ. ನಾಲ್ವರು ಅಪ್ರಾಪ್ತರು ತನ್ನ ಮಗಳ ಮೇಲೆ ಶಾಲೆಯ ಆವರಣದ ಪೊದೆಯ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಅಲ್ಲದೇ ಅಪ್ರಾಪ್ತರು ಬಾಲಕಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಅತ್ಯಾಚಾರ ನಡೆದ ಬಳಿಕ ಸಂತ್ರಸ್ತೆ ತೀವ್ರ ಆಘಾತಕ್ಕೊಳಗಾಗಿದ್ದಳು.…
ಲಕ್ನೋ: ಪರಾರಿಯಾಗಲು ಯತ್ನಿಸಿದ ವರನನ್ನು 20 ಕಿ.ಮೀ ಚೇಸ್ ಮಾಡಿ ವಧು ಮಂಟಪಕ್ಕೆ ಕರೆತಂದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಹೌದು. ಎರಡು ವರ್ಷ ಪ್ರೀತಿಸಿ (Love) ಇನ್ನೇನು ತಾಳಿ ಕಟ್ಟಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ವರ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗೆ ವರ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆಯೇ ವಧು (Bride) 20 ಕಿ.ಮೀ ಚೇಸ್ ಮಾಡಿ ವರ (Groom) ನನ್ನು ಮಂಟಪಕ್ಕೆ ಕರೆತರುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ. ಏನಿದು ಘಟನೆ..?: ಯುವತಿ ಹಾಗೂ ಬದೌನ್ ಜಿಲ್ಲೆಯ ನಿವಾಸಿ ಕಳೆದ ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೊನೆಗೆ ಎರಡೂ ಕುಟುಂಬಗಳ ನಡುವೆ ಸಾಕಷ್ಟು ಮಾತುಕತೆಯ ನಂತರ ಮದುವೆಯ ದಿನಾಂಕವನ್ನು ನಿಗದಿಪಡಿಸಲಾಯಿತು. ಅಂತೆಯೇ ಭಾನುವಾರ ಭೂತೇಶ್ವರನಾಥ ದೇವಾಲಯದಲ್ಲಿ ಮದುವೆ ಮಾಡುವುದಾಗಿ ನಿರ್ಧರಿಸಲಾಯಿತು. ಇತ್ತ ವಧು ಕಡೆಯವರು ಹಾಗೂ ಅತಿಥಿಗಳು ಎಲ್ಲರೂ ಮಂಟಪಕ್ಕೆ ಹಾಜರಾಗಿದ್ದಾರೆ. ವಧು ಕೂಡ ರೆಡಿಯಾಗಿ ಕುಳಿತಿದ್ದಳು. ಆದರೆ ವರ ಮಾತ್ರ ಮಂಟಪಕ್ಕೆ ಬಾರದೇ ಇರುವುದರಿಂದ ಕೆಲವೊಂದು ಅನುಮಾನಗಳು ಹುಟ್ಟಿಕೊಂಡವು. ಬಂದವರೆಲ್ಲ ಗುಸುಗುಸು ಮಾತನಾಡಲು ಆರಂಭಿಸಿದರು. ಈ ವೇಳೆ ವರನಿಗೆ…
ಶಿಮ್ಲಾ: ಸಾಮಾನ್ಯವಾಗಿ ಯಾರಿಗಾದ್ರೂ ಎರಡು ಮೂರು ಬಾರಿ ಹಾವು ಕಚ್ಚಿರೋ ಬಗ್ಗೆ ಕೇಳಿದ್ರೇನೇ ಆಶ್ಚರ್ಯಪಡ್ತೀವಿ. ಅದ್ರೆ ಹಿಮಾಚಲಪ್ರದೇಶದ 18 ವರ್ಷದ ಮನಿಷಾ ಎಂಬ ಈ ಯುವತಿ ಕಳೆದ 3 ವರ್ಷದಲ್ಲಿ 34 ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ. ಈ ಮೂರು ವರ್ಷದಲ್ಲೂ ಹಲವು ವಿಧದ ಹಾವುಗಳು ಈಕೆಯನ್ನ ಕಚ್ಚಿವೆ. “ನನಗೆ ಕಳೆದ 3 ವರ್ಷಗಳಲ್ಲಿ 30ಕ್ಕೂ ಹೆಚ್ಚು ಬಾರಿ ಹಾವುಗಳು ಕಚ್ಚಿವೆ. ಮೊದಲ ಬಾರಿಗೆ ಗ್ರಾಮದಲ್ಲಿರುವ ನದಿ ಬಳಿ ನನಗೆ ಹಾವು ಕಚ್ಚಿತ್ತು. ಇತ್ತೀಚೆಗಷ್ಟೆ ನನಗೆ ಬಿಳಿ ಬಣ್ಣದ ಹಾವು ಕಚ್ಚಿತು. ಹಾವುಗಳನ್ನ ನೋಡಿದಾಗಲೆಲ್ಲಾ ನಾನು ಮಂತ್ರಮುಗ್ಧಳಾಗುತ್ತೇನೆ. ಆಗ ನನಗೆ ಅದು ಕಚ್ಚುತ್ತದೆ. ಎರಡು ವರ್ಷದ ಹಿಂದೆ ಮಾತ್ರ ಹಾವು ನನಗೆ ಕಚ್ಚಿರಲಿಲ್ಲ. ಶಾಲೆಯಲ್ಲಿದ್ದಾಗ ನನಗೆ ಪದೇ ಪದೇ ಹಾವು ಕಚ್ಚುತ್ತಿತ್ತು. ಕೆಲವೊಮ್ಮೆ ಒಂದೇ ದಿನದಲ್ಲಿ ಎರಡರಿಂದ ಮೂರು ಬಾರಿ ಹಾವು ಕಡಿತಕ್ಕೊಳಗಾಗಿದ್ದೇನೆ. ನನಗೂ ನಾಗದೇವತೆಗೂ ಏನೋ ಬಂಧವಿದೆ ಅಂತಾ ಜ್ಯೋತಿಷ್ಯರು ಹೇಳಿದ್ದಾರೆ ಅಂತಾ ಮನಿಷಾ ಹೇಳಿದ್ದಾಳೆ 4ನೇ ಬಾರಿಗೆ ಹಾವಿನಿಂದ ಕಚ್ಚಿಸಿಕೊಂಡು ಆಸ್ಪತ್ರೆಗೆ…
ಚಿಕ್ಕಬಳ್ಳಾಪುರ: ದ್ವೇಷ ರಾಜಕಾರಣದ ಮೂಲಕವೇ ಕಾಂಗ್ರೆಸ್ (Congress) ಸರ್ಕಾರದ ಆಡಳಿತ ಆರಂಭ ಆಗುತ್ತಿದೆ. ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಬಿವೈ ವಿಜಯೇಂದ್ರ (BY Vijayendra) ಹೇಳಿಕೆ ನೀಡಿದ್ದಾರೆ. ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ಅಶ್ವಥ್ ನಾರಾಯಣ್ ಹಾಗೂ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ ಕೆಲಸ ಕಿತ್ತುಕೊಂಡಿದೆ. ಈ ತರಹದ ಕೀಳುಮಟ್ಟಕ್ಕೆ ಸರ್ಕಾರ ಇಳಿಯುತ್ತದೆ ಎಂಬ ನೀರಿಕ್ಷೆಯನ್ನು ನಾನು ಮಾಡಿರಲಿಲ್ಲ. ಬರುವಂತಹ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ಪ್ರಶ್ನೆ ಮಾಡುತ್ತೇವೆ ಎಂದರು. ಕಾಂಗ್ರೆಸ್ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನವರು ಚುನಾವಣೆ ವೇಳೆ ಸಾಕಷ್ಟು ನೀರಿಕ್ಷೆಗಳನ್ನು ಜನರಲ್ಲಿ ಮೂಡಿಸಿದ್ದಾರೆ. ಅಪೇಕ್ಷೆಗಳು ಸಾಕಷ್ಟಿವೆ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸುತ್ತದೆ ಎಂದು ಜನ ಕಾಯುತ್ತಿದ್ದಾರೆ ಎಂದರು. ತಡವಾಗಿ ಆದರೂ ಸಂಪೂರ್ಣ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದು ಸಂತೋಷ.…
ಬೆಂಗಳೂರು, ಮೇ 27: ದೇಶದ ಪ್ರಥಮ ಪ್ರಧಾನಿಗಳಾದ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇಯ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಜವಾಹರಲಾಲ್ ನೆಹರೂ ಅವರು ಈ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲನೇ ಪ್ರಧಾನಿಯಾಗಿ 17 ವರ್ಷಗಳ ಕಾಲ ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ಪ್ರಮುಖ ಪಾತ್ರ ವಹಿಸಿದ್ದರು. ಅದಕ್ಕಾಗಿಯೇ ಆಧುನಿಕ ಭಾರತ ನಿರ್ಮಾತೃ ಎಂದು ಕರೆಯುತ್ತೇವೆ. ಬ್ರಿಟಿಷರು ದೇಶವನ್ನು ಲೂಟಿ ಮಾಡಿ ಬಿಟ್ಟು ಹೋಗಿದ್ದ ದೇಶವನ್ನು ಪ್ರಧಾನಿಗಳಾಗಿ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದರು. ದೇಶದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಗೊಂಡಿದ್ದರೆ, ಸಾರ್ವಭೌಮತ್ವ ಉಳಿದಿದ್ದರೆ ಅದಕ್ಕೆ ಜವಾಹರಲಾಲ್ ನೆಹರೂ ಅವರು ಕಾರಣ. ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದರು ಎಂದರು. ಆಧುನಿಕತೆಯ ಅಡಿಪಾಯ ಅವರು ಹಾಕಿದ…
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ರಹೀಂ ಖಾನ್ ಅವರು ಇಂಗ್ಲಿಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.