Author: Prajatv Kannada

ಬೆಂಗಳೂರು: ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದಿಲ್ಲ. ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ, ಇರೋದು ಕಾಂಗ್ರೆಸ್​ ಬಣ. ನಮ್ಮ ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ ಎಂದು ಡಾ.ಹೆಚ್​.ಸಿ.ಮಹದೇವಪ್ಪ(HC Mahadevappa) ಹೇಳಿದ್ದಾರೆ.

Read More

ಬೆಂಗಳೂರು: ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಬೆಂಗಳೂರಿನಲ್ಲಿ ಶಾಸಕ ದಿನೇಶ್ ಗುಂಡೂರಾವ್(Dinesh Gundurao) ಹೇಳಿದ್ದಾರೆ.  ​

Read More

ಬೆಂಗಳೂರು : ಸಂತೋಷ್‌ ಲಾಡ್‌ ಅವರು ಕಲಘಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಈ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮಾಹಿತಿ ಮತ್ತು ಮೂಲಸೌಕರ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಜತೆಗೆ ಬಳ್ಳಾರಿಯ ಉಸ್ತುವಾರಿಯಾಗಿಯೂ 2013ರ ಸಿದ್ದರಾಮಯ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಇವರ ತಂದೆ ದಿವಂಗತ ಶ್ರೀ ಶಿವಾಜಿ ವಿ ಲಾಡ್‌, ತಾಯಿ ಶೈಲಜಾ ಎಸ್ ಲಾಡ್, 1975 ರಂದು ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಜನಿಸಿದ್ದಾರೆ. ಪತ್ನಿ ಕೀರ್ತಿ ಎಸ್ ಲಾಡ್, ಒಬ್ಬ ಮಗ ಇದ್ದು ಆತನ ಹೆಸರು ಕರಣ್ ಎಸ್ ಲಾಡ್. ಹಿಂದೂ ಮರಾಠ ಸಮುದಾಯದ ನಾಯಕ. ಸಂತೋಷ್ ಲಾಡ್ ರಾಜಕೀಯ ಜೀವನ 2002 – ಸಂಡೂರ್ ಪಟ್ಟಣ ಪಂಚಾಯತ ಅಧ್ಯಕ್ಷ 2004 ರಲ್ಲಿ ಸಂಡೂರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ. 2008 ರಲ್ಲಿ ಕಲಘಟಗಿಯಿಂದ ಶಾಸಕರಾಗಿ ಆಯ್ಕೆ.. 2010 ರಲ್ಲಿ ಕೆಪಿಸಿಸಿ ಜನರಲ್ ಸೆಕ್ರೆಟರಿ ಆಗಿ ಆಯ್ಕೆ.. 2013 ರಲ್ಲಿ ಕಲಘಟಗಿಯಿಂದ ಶಾಸಕರಾಗಿ ಆಯ್ಕೆ.. 2013 ರ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದ ಸಂತೋಷ್ ಲಾಡ್… 2016 ರಲ್ಲಿ ಕಾರ್ಮಿಕ ಸಚಿವರಾಗಿ ಸಂತೋಷ್…

Read More

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ (BJP) ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ (Praveen Nettaru) ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ. ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು. ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ…

Read More

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಕರಾವಳಿಯಲ್ಲಿ ಬಿಲ್ಲವ ಸಮುದಾಯ ದೊಡ್ಡ ಮಟ್ಟದಲ್ಲಿ ಇರುವುದಿಂದ ಈ ಭಾಗದವರಾಗಿರುವ ಬಿ.ಕೆ ಹರಿ ಪ್ರಸಾದ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಹರಿಪ್ರಸಾದ್ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು. ಹರಿಪ್ರಸಾದ್…

Read More

ಮಾಜಿ ಮುಖ್ಯಮಂತ್ರಿ ಸೋಲಿಲ್ಲದ ಸರದಾರ ಬಂಗಾರಪ್ಪ ಅವರಿಗೆ ತಮ್ಮ ಕಿರಿಯ ಪುತ್ರ ಮಧುಬಂಗಾರಪ್ಪರನ್ನು ತಮ್ಮ ಜೀವಿತ ಅವಧಿಯಲ್ಲಿಯೇ ರಾಜಕೀಯವಾಗಿ ಬಲಗೊಳಿಸಬೇಕೆಂಬ ಇಚ್ಚೆಯಿತ್ತು. ಈ ಕಾರಣದಿಂದ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಹಿರಿಯ ಮಗನನ್ನು ಶಾಸಕ ಮತ್ತು ಸಚಿವರನ್ನಾಗಿ ಮಾಡಿದ್ದರೂ, ಅವರೊಂದಿಗೆ ರಾಜಕೀಯವಾಗಿ ಭಿನ್ನಾಭಿಪ್ರಾಯ ಬಂದಿತ್ತು. ಆ ಹೊತ್ತಿನಲ್ಲಿಯೇ ಕಿರಿಯ ಪುತ್ರ ಮಧುಬಂಗಾರಪ್ಪರನ್ನು ಸೋದರನ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದ್ದರು. ೨೦೦೪ ವಿಧಾನ ಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಂಗಾರಪ್ಪ ಅವರನ್ನು ಕಡೆಗಣಿಸಲಾಗಿತ್ತು. ಕುಮಾರ್ ಬಂಗಾರಪ್ಪ ಅವರು ಪಕ್ಷದಲ್ಲಿ ಮೇಲುಗೈ ಸಾಧಿಸಿದ್ದರು. ಆ ಹೊತ್ತಿನಲ್ಲಿ ತಮಗೆ ಸೈದ್ಧಾಂತಿಕವಾಗಿ ವಿರುದ್ಧವಾಗಿದ್ದ ಬಿಜೆಪಿಗೆ ಬಂಗಾರಪ್ಪ ಅವರು ಹೋಗಿದ್ದರು. ಇದರ ಹಿಂದೆ ತಮ್ಮ ರಾಜಕೀಯ ಅಸ್ತಿತ್ವಕ್ಕಿಂತ ಮಗ ಮಧು ಬಂಗಾರಪ್ಪ ಅವರಿಗೆ ರಾಜಕೀಯ ಶಕ್ತಿನೀಡುವ ಉದ್ದೇಶವೇ ಹೆಚ್ಚಿತ್ತು. ಆದರೂ ಅಂದಿನ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಸೋಲಾಗಿತ್ತು. ಹೋರಾಟ ಹಾದಿಗೆ: ಮಧುಬಂಗಾರಪ್ಪ ಅವರು ಒಟ್ಟು ಮೂರು ವಿಧಾನ ಸಭೆ, ಎರಡು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದು,…

Read More

ಬೆಳಗಾವಿ: ತುಂಬಾ ದಿನಗಳ ಜಿದ್ದಾಜಿದ್ದಿನ ನಂತರ ಕಾಂಗ್ರೆಸ್​ ನೂತನ 24 ಸಚಿವರ ಪಟ್ಟಿ ಬಿಡುಗಡೆ ಮಾಡಿದ್ದು, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar)ಗೆ ಸಚಿವ ಸ್ಥಾನ ಒದಗಿ ಬಂದಿದೆ. ಇಂದು(ಮೇ.27) ರಾಜಭವನದಲ್ಲಿ 24 ಸಚಿವರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಇದೇ ಖುಷಿಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇದೀಗ ಮತ್ತೊಂದು ಗುಡ್​ ನ್ಯೂಸ್​ ಸಿಕ್ಕಿದೆ. ಹೌದು ಸಚಿವ ಸ್ಥಾನ ದಕ್ಕಿದ ದಿನವೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹಿತಾ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕಳೆದ(ಮೇ.26) ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿನ ಜನನವಾಗಿದೆ. ಪುತ್ರ ಮೃಣಾಲ್, ಸೊಸೆ ಹಿತಾಗೆ ಹೆಣ್ಣುಮಗು ಜನಿಸಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಖುಷ್ ಆಗಿದ್ದು, ಸಚಿವಗಿರಿ ಜೊತೆಗೆ ಮನೆಗೆ ಮಹಾಲಕ್ಷ್ಮೀ ಬಂದ ಖುಷಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಳಿಕ ಹೆಬ್ಬಾಳ್ಕರ್ ಕುಟುಂಬ ಬೆಂಗಳೂರಿಂದ ನೇರವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಇನ್ನು ಬೆಂಗಳೂರು ಹೊರತುಪಡಿಸಿದರೇ ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು…

Read More

ಯಾದಗಿರಿ: ವಿದ್ಯುತ್ ಬಿಲ್ (Electricity bill) ಕಟ್ಟಿಲ್ಲ ಎಂದು ಕನೆಕ್ಷನ್ ಅನ್ನೇ ಕತ್ತರಿಸಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಜೆಸ್ಕಾಂ (JESCOM) ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗುಕೊಂಡಿರುವ ಘಟನೆ ಯಾದಗಿರಿಯಲ್ಲಿ (Yadgir) ನಡೆದಿದೆ. ತಾಲೂಕಿನ ಅಬ್ಬೆತುಮಕೂರ ಗ್ರಾಮದಲ್ಲಿ ವಿದ್ಯುತ್ ಕನೆಕ್ಷನ್ ಕಟ್ ಮಾಡಿದ್ದಕ್ಕೆ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ನವರು ಕರೆಂಟ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದಾರೆ. Video Player 00:00 01:12 ಅದಕ್ಕೆ ನಾವ್ಯಾರೂ ಬಿಲ್ ಕಟ್ಟೋದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ 6-7 ಕುಟುಂಬಸ್ಥರು 5-10 ಸಾವಿರದಷ್ಟು ವಿದ್ಯುತ್ ಬಿಲ್ ಅನ್ನು ಬಾಕಿ ಇಟ್ಟಿದ್ದಾರೆ. ಈ ಕಾರಣಕ್ಕೆ ಜೆಸ್ಕಾಂ ಸಿಬ್ಬಂದಿ ಲೈನ್ ಕಟ್ ಮಾಡಿದ್ದಾರೆ. ವಯರ್ ಅನ್ನು ಕತ್ತರಿಸಿ ತಮ್ಮ ವಾಹನದಲ್ಲಿ ಇರಿಸಿದಾಗ ಮಹಿಳೆಯರು ಸ್ಥಳದಲ್ಲಿ ಗಲಾಟೆ ನಡೆಸಿ ವಾಹನದಲ್ಲಿದ್ದ ವಯರ್‌ಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಮಹಿಳೆಯರ ರಂಪಾಟಕ್ಕೆ ಜೆಸ್ಕಾಂ ಸಿಬ್ಬಂದಿ ಸುಸ್ತಾಗಿದ್ದಾರೆ.

Read More

ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ (Lakshmana Savadi)ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಿಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿ  ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ.

Read More

ಚಾಮರಾಜನಗರ: ಉಪ್ಪಾರ ಸಮುದಾಯದ ಶಾಸಕ ಪುಟ್ಟರಂಗಶೆಟ್ಟಿಗೆ(Puttarangashetty) ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಪತ್ರ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಕಾಂಗ್ರೆಸ್ ಪಕ್ಷ ಉಪ್ಪಾರ ಸಮುದಾಯಕ್ಕೆ ನಂಬಿಕೆ ದ್ರೋಹ ಮಾಡಿದೆ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೇ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಆತ್ಮಹತ್ಯೆಗೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಾರಣ ಎಂದು ಕಾರ್ಯಕರ್ತ ಚಂದ್ರಶೇಖರ್ ಪತ್ರ ಬರೆದು ಪತ್ರ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ.

Read More