ಕೋಲಾರ: ಕೆ.ಬಿ ಹೊಸಹಳ್ಳಿಯ (KB Hosahalli) ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ವೇಳೆ ಕಾರ್ಮಿಕ ಸಾವಿಗೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ (Quarry) ಮಾಲೀಕ ಸೇರಿ ಏಳು ಜನರನ್ನು ವೇಮಗಲ್ ಪೊಲೀಸರು ಬಂಧಿಸಿದ್ದಾರೆ. ಕ್ವಾರಿ ಮಾಲೀಕ ಅಬ್ದುಲ್ ರೆಹಮಾನ್, ಮ್ಯಾನೇಜರ್ ದೇವರಾಜ್ ಸೇರಿ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಉಳಿದ ನಾಲ್ಕು ಜನರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ (Department of Mines and Earth Sciences) ಅಧಿಕಾರಿಗಳು ಹಾಗೂ ಕೋಲಾರ (Kolar) ಎಸ್‍ಪಿ ನಾರಾಯಣ್ ಪರಿಶೀಲನೆ ನಡೆಸಿದ್ದಾರೆ. ಬುಧವಾರ ರಾತ್ರಿ ನಡೆದ ಸ್ಫೋಟದಲ್ಲಿ ಯಾದಗಿರಿ (Yadgir) ಮೂಲದ ಕಾರ್ಮಿಕ ಸೋಮು ಜಾದವ್ ಎಂಬ ಕಾರ್ಮಿಕ ಸಾವನ್ನಪ್ಪಿದ್ದ. ಘಟನೆಯಲ್ಲಿ ಗೋಪಿ ಎಂಬುವರಿಗೆ ಗಂಭೀರ ಗಾಯವಾಗಿತ್ತು. ಈ ಸಂಬಂಧ ಜಿಲೆಟಿನ್ ಸ್ಫೋಟದಲ್ಲಿ ನಿರ್ಲಕ್ಷ್ಯ ವಹಿಸಿದ್ದ ಕ್ವಾರಿ ಮಾಲೀಕ ಸೇರಿದಂತೆ ಎಂಜಿನಯರ್‍ಗಳು ಹಾಗೂ ಇನ್ನಿತರ 11…
Author: Prajatv Kannada
ರಾಯಚೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೇ ಇದ್ದರೂ ರಾಯಚೂರಿನ (Raichuru) ಎನ್.ಎಸ್.ಬೋಸರಾಜುಗೆ (NS Boseraju) ಸಚಿವ ಸ್ಥಾನ ಒಲಿದು ಬಂದಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಅನ್ನೋ ಕೂಗು ಜೋರಾಗಿದ್ದಕ್ಕೆ ರಾಯಚೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್.ಎಸ್.ಬೋಸರಾಜುಗೆ ಟಿಕೆಟ್ ಕೈ ತಪ್ಪಿತ್ತು. ಆದರೆ ಹೈಕಮಾಂಡ್ (Congress High Command) ಜೊತೆ ಉತ್ತಮ ಸಂಬಂಧ ಹೊಂದಿರುವ ಬೋಸರಾಜು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊರಿಸಿ ಬೋಸರಾಜು ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಅಸ್ಲಂಪಾಶಾ ಪತ್ರ ಬರೆದ ಬೆನ್ನಲ್ಲೇ ಬೋಸರಾಜು ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ. 1999 ಹಾಗೂ 2004 ರಲ್ಲಿ ಮಾನ್ವಿ ಕ್ಷೇತ್ರದಲ್ಲಿ ಗೆದ್ದು ಶಾಸಕರಾಗಿದ್ದ ಇವರು 2014ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಸದ್ಯ ಎಐಸಿಸಿ…
ಮಂಡ್ಯದ ನೂತನ ಶಾಸಕ ರವಿಕುಮಾರ್ ಗೌಡ(Ravikumar Gowda) ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಶಾಸಕರು, ಆಸ್ಪತ್ರೆಯ ಕಾರ್ಯವೈಖರಿ ಯನ್ನು ಪರಿಶೀಲಿಸಿ, ರೋಗಿಗಳಿಂದ ಅಹವಾಲು ಸ್ವೀಕರಿಸಿದರು. ಆಸ್ಪತ್ರೆಯ ವಾರ್ಡ್ ಗಳನ್ನು ವೀಕ್ಷಿಸಿದ ಶಾಸಕರು, ರೋಗಿಗಳಿಗೆ ತೊಂದರೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಖಡಕ್ ಸೂಚನೆ ನೀಡಿದರು. ಬೆಳಿಗ್ಗೆಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿದ ಶಾಸಕ ರವಿಕುಮಾರ್ ಗೌಡ, ಮಂಡ್ಯ ನಗರದ ಪೇಟೆಬೀದಿ ಬಳಿ ಇರುವ ರೈಲ್ವೇ ಗೇಟ್ ಗೆ ನಿರ್ಮಿಸಲು ಉದ್ದೇಶಿಸಿರುವ ಕೆಳಸೇತುವೆ ಬಗ್ಗೆ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಹಾಗೂ ನಗರಸಭೆ ಆಯುಕ್ತರಾದ ಮಂಜುನಾಥ್ ಜೊತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ಷೇತ್ರದ ರಸ್ತೆ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ನಂತರ ಕ್ಷೇತ್ರ ಪ್ರವಾಸದಲ್ಲಿದ್ದ ಶಾಸಕರು ಯಾವುದೇ ಮುನ್ಸೂಚನೆ ನೀಡದೆ ಬಿ.ಹೊಸೂರು…
ಸೂರ್ಯೋದಯ: 05.53 AM, ಸೂರ್ಯಾಸ್ತ : 06.41 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಸಪ್ತಮಿ 07:42 AM ತನಕ ನಂತರ ಅಷ್ಟಮಿ ನಕ್ಷತ್ರ: ಇವತ್ತು ಮಖ 11:43 PM ತನಕ ನಂತರ ಪುಬ್ಬಾ ಯೋಗ: ಇವತ್ತು ವ್ಯಾಘಾತ07:58 PM ತನಕ ನಂತರ ಹರ್ಷಣ ಕರಣ: ಇವತ್ತು ವಣಿಜ 07:42 AM ತನಕ ನಂತರ ವಿಷ್ಟಿ 08:51 PM ತನಕ ನಂತರ ಬವ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೆ ಅಮೃತಕಾಲ: 09.02 PM to 10.50 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:47 ನಿಂದ ಮ.12:39 ವರೆಗೂ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ…
ಬೆಂಗಳೂರು: ಇಂದು ಕಾಂಗ್ರೆಸ್‌ನ (Congress) 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು ಕೆಲ ಹಿರಿಯ ನಾಯಕರಿಗೆ ಸಚಿವ ಸ್ಥಾನ ತಪ್ಪಿದೆ. ಹಲವು ಹಿರಿಯ ನಾಯಕರು ಮಂತ್ರಿಗಿರಿಗೆ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್ (High Command) ಯಾವುದೇ ಲಾಬಿಗೆ ಬಗ್ಗದೇ ತನ್ನದೇ ಮಾನದಂಡ ಬಳಸಿ ಮಂತ್ರಿ ಸ್ಥಾನಕ್ಕೆ ಶಾಸಕರನ್ನು ಆಯ್ಕೆ ಮಾಡಿದೆ. ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ನಿರಾಸೆಯಾಗಿದೆ. ಎಂಎಲ್‍ಸಿ ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಬಿಜೆಪಿಗೆ ರಾಜೀನಾಮೆ ನೀಡಿ ಸ್ಪರ್ಧಿಸಿ ಸೋತಿದ್ದ ಶೆಟ್ಟರ್ ಅವರಿಗೆ ಪರಿಷತ್ ಸ್ಥಾನ ನೀಡಿ ಮಂತ್ರಿ ಮಾಡಬಹುದು ಎಂದು ನಿರೀಕ್ಷೆ ಇತ್ತು. ಅದೇ ರೀತಿಯಾಗಿ ಅಥಣಿಯಿಂದ ಗೆದ್ದಿದ್ದ ಲಕ್ಷ್ಮಣ ಸವದಿ ಅವರಿಗೂ ಮಂತ್ರಿ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಇಬ್ಬರಿಗೂ ಮಂತ್ರಿ ಸ್ಥಾನ ನೀಡಿಲ್ಲ. ಸಿದ್ದರಾಮಯ್ಯ (Siddaramaiah) ಸಂಪುಟದ ಎಲ್ಲ 34 ಸ್ಥಾನಗಳು ಭರ್ತಿಯಾಗಿದ್ದು ಇಂದು 24 ಶಾಸಕರು ಬೆಳಗ್ಗೆ 11:45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮಾಣವಚನ…
ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಒಟ್ಟು ಏಳು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಬಣಜಿಗರಲ್ಲಿ ಈಶ್ವರ್ ಖಂಡ್ರೆ, ಪಂಚಮಸಾಲಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಕುರು ಒಕ್ಕಲಿಗರಲ್ಲಿ ಎಂ.ಬಿ.ಪಾಟೀಲ್, ಸಾದ ಲಿಂಗಾಯತರಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್, ಆದಿ ಬಣಜಿಗರಲ್ಲಿ ಶರಣ ಪ್ರಕಾಶ ಪಾಟೀಲ್ ರೆಡ್ಡಿಲಿಂಗಾಯತರಲ್ಲಿ ದರ್ಶನಾಪುರ ಮತ್ತು ವೈಷ್ಣವ ರೆಡ್ಡಿಯ ಪ್ರತಿನಿಧಿಯಾಗಿ ಹೆಚ್.ಕೆ.ಪಾಟೀಲ್ ಅವರಿಗೆ ಪ್ರಾತಿನಿಧ್ಯ ದೊರೆತಿದೆ. ಒಕ್ಕಲಿಗರಲ್ಲಿ ಗಂಗಟಕಾರ್ ಒಕ್ಕಲಿಗರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ ಅವರುಗಳು ಇದ್ದಾರೆ. ಪಿರಿಯಾಪಟ್ಟಣ ವೆಂಕಟೇಶ್ ಕುಂಚಟಿಗರು, ದಾಸ ಒಕ್ಕಲಿಗರಲ್ಲಿ ಕೃಷ್ಣ ಬೈರೇಗೌಡ ಸೇರಿ ನಾಲ್ಕು ಮಂದಿಗೆ ಪ್ರಾತಿನಿಧ್ಯ ದೊರೆತಿದೆ. ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 24 ಸಚಿವರಿಗೆ ರಾಜ್ಯಪಾಲರು ಶನಿವಾರ ಬೆಳಗ್ಗೆ 11:45ಕ್ಕೆ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಬೋಧಿಸುವಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮಾಡಿದ್ದ ಮನವಿಯನ್ನು ಅವರು ಪುರಸ್ಕರಿಸಿದ್ದು, ಸಮಾರಂಭಕ್ಕೆ ರಾಜಭವನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಿಎಂ ಡಿಸಿಎಂ ಸೇರಿದಂತೆ ಒಟ್ಟು 34 ಸಚಿವ ಸ್ಥಾನಗಳ ಪೈಕಿ ಈಗಾಗಲೇ 10 ಸ್ಥಾನಗಳನ್ನ ಭರ್ತಿ ಮಾಡಲಾಗಿದೆ. ಉಳಿದ ಎಲ್ಲ 24 ಸ್ಥಾನಗಳ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ರಾಜಭವನಕ್ಕೆ ನೂತನ ಸಚಿವರ ಪಟ್ಟಿ ರವಾನೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನ ತಲುಪಿದ ಸಚಿವರ ಪಟ್ಟಿಯಲ್ಲಿ ಹೊಸದಾಗಿ ಸಂಪುಟ ಸೇರಲಿರುವ 24 ಭಾವಿ ಸಚಿವರ ಹೆಸರು ಒದಗಿಸಲಾಗಿದೆ. ಸಂಪುಟ ಸೇರುವ ಅವಕಾಶ ವಂಚಿತರಾಗಿರುವ ಹಿರಿಯ ಕಾಂಗ್ರೆಸ್ ನಾಯಕರ ಆರ್ ವಿ ದೇಶಪಾಂಡೆ, ಬಿಕೆ ಹರಿಪ್ರಸಾದ್, ಟಿಬಿ ಜಯಚಂದ್ರ, ವಿನಯ್ ಕುಲಕರ್ಣಿ ಮತ್ತಿತರು ಬೇಸರಗೊಂಡಿದ್ದಾರೆ. ಇಂದು 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಭವನದಲ್ಲಿ ಅದ್ಧೂರಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೆ ಅಗತ್ಯ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ.
ಬೆಂಗಳೂರು: ಇಂದು 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ.ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಮೂರು ದಿನಗಳಿಂದ ನಡೆದ ಸಭೆಯಲ್ಲಿ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದ್ದು, ಹಿರಿಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ, ಬಸವರಾಜ ರಾಯರೆಡ್ಡಿ, ಬಿ.ಕೆ. ಹರಿಪ್ರಸಾದ್ ಮೊದಲಾದವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಹಿರಿಯ ನಾಯಕರಾಗಿರುವ ಆರ್.ವಿ. ದೇಶಪಾಂಡೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು, ಸ್ಪೀಕರ್ ಹುದ್ದೆ ನಿರಾಕರಿಸಿ ಸಚಿವ ಸ್ಥಾನ ಬಯಸಿದ್ದರು. ಅವರಿಗೆ ಸಚಿವ ಸ್ಥಾನ ತಪ್ಪಿದೆ. ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್ ಅವರಿಗೂ ಸಚಿವ ಸ್ಥಾನ ಮಿಸ್ ಆಗಿದೆ. ಹಿರಿಯ ಶಾಸಕ ಶಿರಾ ಕ್ಷೇತ್ರದ ಟಿ.ಬಿ. ಜಯಚಂದ್ರ, ಧಾರವಾಡದ ಶಾಸಕ ವಿನಯ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಬಿ.ಕೆ. ಸಂಗಮೇಶ್ ಅವರಿಗೂ ಸಚಿವ ಸ್ಥಾನ ತಪ್ಪಿದ್ದು, 23 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಪಟ್ಟಿ: ಕೃಷ್ಣ ಬೈರೇಗೌಡ ದಿನೇಶ ಗುಂಡೂರಾವ್ ಸಂತೋಷ್ ಲಾಡ್…
ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ (BJP) ಮುಖಂಡ ದಿ.ಪ್ರವೀಣ್ ನೆಟ್ಟಾರ್ (Praveen Nettaru) ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು. ಅಲ್ಲದೆ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ…
ಮಂಡ್ಯ: ಮಂಡ್ಯದ ನೂತನ ಶಾಸಕ ರವಿಕುಮಾರ್ ಗೌಡ(Ravikumar Gowda) ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಶಾಸಕರು, ಆಸ್ಪತ್ರೆಯ ಕಾರ್ಯವೈಖರಿ ಯನ್ನು ಪರಿಶೀಲಿಸಿ, ರೋಗಿಗಳಿಂದ ಅಹವಾಲು ಸ್ವೀಕರಿಸಿದರು. ಆಸ್ಪತ್ರೆಯ ವಾರ್ಡ್ ಗಳನ್ನು ವೀಕ್ಷಿಸಿದ ಶಾಸಕರು, ರೋಗಿಗಳಿಗೆ ತೊಂದರೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಖಡಕ್ ಸೂಚನೆ ನೀಡಿದರು. ಬೆಳಿಗ್ಗೆಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿದ ಶಾಸಕ ರವಿಕುಮಾರ್ ಗೌಡ, ಮಂಡ್ಯ ನಗರದ ಪೇಟೆಬೀದಿ ಬಳಿ ಇರುವ ರೈಲ್ವೇ ಗೇಟ್ ಗೆ ನಿರ್ಮಿಸಲು ಉದ್ದೇಶಿಸಿರುವ ಕೆಳಸೇತುವೆ ಬಗ್ಗೆ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಹಾಗೂ ನಗರಸಭೆ ಆಯುಕ್ತರಾದ ಮಂಜುನಾಥ್ ಜೊತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ಷೇತ್ರದ ರಸ್ತೆ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ನಂತರ ಕ್ಷೇತ್ರ ಪ್ರವಾಸದಲ್ಲಿದ್ದ ಶಾಸಕರು ಯಾವುದೇ ಮುನ್ಸೂಚನೆ ನೀಡದೆ…