Author: Prajatv Kannada

ಕಂಪ್ಲಿ:  ಕಂಪ್ಲಿ ಪಟ್ಟಣದ ಅತಿಥಿ ಗೃಹದಲ್ಲಿ ದಲಿತ ಹಿಂದುಳಿದ ಅಲ್ಪಸಂಖ್ಯಾತ ಅಹಿಂದಾ ಮಹಾ ಒಕ್ಕೂಟ ಕಲ್ಬುರ್ಗಿ ವಿಭಾಗೀಯ ಘಟಕ ಬಳ್ಳಾರಿ ಕಾಂಗ್ರೆಸ್ ಕಟ್ಟಾಳು ಅಹಿಂದಾ ನಾಯಕರಾಗಿ ಡಾ!! ಎಚ್ ಸಿ ಮಾದೇವಪ್ಪ ಬಸವರಾಜ ರಾಯರೆಡ್ಡಿ ಬಿ ನಾಗೇಂದ್ರ ಕೆ ಎನ್ ರಾಜಣ್ಣ ಕಂಪ್ಲಿ ಶಾಸಕರಾದ ಜೆ ಎನ್ ಗಣೇಶ ರವರಿಗೆ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು ಒಕ್ಕೂಟದ ಅಧ್ಯಕ್ಷರಾದ ಸಿ ನರಸಪ್ಪ ಗೌರವಾಧ್ಯಕ್ಷರಾದ ಡಾ. ಎಸಿ ದಾನಪ್ಪ ರವರು ಸರ್ಕಾರಕ್ಕೆ ಪತ್ರಿಕೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ, ಒಕ್ಕೂಟದ ಅಧ್ಯಕ್ಷರು ಸಿ ನರಸಪ್ಪ, ಗೌರವ ಅಧ್ಯಕ್ಷರಾದ ಡಾ!! ಎ.ಸಿ ದಾನಪ್ಪ ರವರು ನಂತರ ಮಾತನಾಡಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಈ ಚುನಾವಣೆಯ ನಡೆದ ಎಲ್ಲಾ ಸರ್ವರ್ತಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬಹುಮತ ಲಭಿಸಿದೆ. ಇದರಿಂದ 30 ನಾಲ್ಕು ವರ್ಷಗಳ ಇತಿಹಾಸ ಮತ್ತೊಮ್ಮೆ ಮರು ಕಳುಹಿಸಿದಂತಾಗಿದೆ. ರಾಜ್ಯದಲ್ಲಿ ದಶಕಗಳ ಕಾಲ ಹೈದ ಸಮುದಾಯ ಗಳು ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದೆ ಅದರಂತೆ ಪ್ರಸ್ತುತ 2023ರ ರಾಜ್ಯ…

Read More

ಮಂಡ್ಯ :- ವ್ಯಕ್ತಿಯೊಬ್ಬರಿಂದ ಇ-ಸ್ವತ್ತು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆ, ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಜರುಗಿದೆ. ಮಂಡ್ಯ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಯಾನಂದ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಂಧಿತ ಆರೋಪಿಯಾಗಿದ್ದು, ಲಂಚ ಸ್ವೀಕರಿಸಿದ್ದ 5 ಸಾವಿರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನು ಮಂಡ್ಯ ನಗರದ ಮಂಜುನಾಥ್ ಎಂಬುವರ ಮನೆ, ಖಾಲಿ ನಿವೇಶನದ ಇ-ಸ್ವತ್ತು ಮಾಡಿಕೊಡಲು‌ ದಯಾನಂದ್ 40,000 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಬುಧವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಮುಂಗಡವಾಗಿ 5 ಸಾವಿರ ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ, ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ದಾಳಿ ವೇಳೆ ಲೋಕಾಯುಕ್ತ ಇನ್ಸ್ಪೆಕ್ಟರ್ ಗಳಾದ…

Read More

ಹುಬ್ಬಳ್ಳಿ: ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚನ್ನಪೇಟ, ತೋರವಿ ಹಕ್ಕಲ, ಖರಾದಿ ಓಣಿ, ಮೊಯಿನ್ ಪ್ಲಾಟ್, ಹಾಗೂ ಇನ್ನಿತರ ಪ್ರದೇಶಗಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ, ಸಾರ್ವಜನಿಕರ ಆಸ್ತಿ, ಪಾಸ್ತಿಗಳಿಗೆ ಹಾನಿಯುಂಟಾಗಿರುವ ಬಗ್ಗೆ ನಾಗರಿಕರಿಗೆ ಸಾಂತ್ವನ ಹೇಳಿದರು‌. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ, ಸದರಿ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ನಾಲಾ ಹಾಗೂ ರಾಜಕಾಲುವೆಗಳ ಒತ್ತುವರಿಕೆಯನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಹಾಗೂ ಒತ್ತುವರಿ ಮಾಡಿದವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀಮತಿ ಚಂದ್ರಿಕಾ ಮೇಸ್ತ್ರಿ ರವರು, ಮಾಜಿ ಮಹಾಪೌರರಾದ ವೆಂಕಟೇಶ ಮೇಸ್ತ್ರಿ ರವರು, ಪಾಲಿಕೆಯ ಅಧಿಕಾರಿಗಳಾದ ಕಾಂಬ್ಳೆ ರವರು, ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Read More

ಧಾರವಾಡ: ಜಾತ್ರೆಗಳಂದರೇ ಏನೋ ಒಂಥರ ವಿಶಿಷ್ಟ ಅಚರಣೆಗಳೇ ಇರುತ್ತವೆ. ಒಂದೊಂದು ಜಾತ್ರೆಯಲ್ಲಿ ಒಂದೊಂದು ತೆರನಾದ ಆಚರಣೆ.. ಈ ಆಚರಣೆಗೆ ಅದರದೇ ಆದ ಹಿನ್ನೆಲೆ ಇರುತ್ತೆ…ಇಲ್ಲೊಂದು ಜಾತ್ರೆ ನಡೆಯುತ್ತೆ. ಈ ಜಾತ್ರೆಯಲ್ಲಿ ಭಂಡಾರ ತೂರಿ ಹರಕೆ ತೀರಿಸೋದು ನಡೆದು ಬಂದ ಸಂಪ್ರದಾಯ. ಹೌದು…ತಾಲೂಕಿನ ಮಂಡಿಹಾಳ ಗ್ರಾಮದಲ್ಲಿ ಗ್ರಾಮ ದೇವತೆಯರಾದ ದ್ಯಾಮವ್ವ ಹಾಗೂ ದುರ್ಗಾದೇವಿಯರ ಜಾತ್ರಾ ಮಹೋತ್ಸವ ಅದ್ಧೂರಿಯಿಂದ ನಡೆಯುತ್ತಿದೆ. ಮಂಡಿಹಾಳ ಗ್ರಾಮದ ಪ್ರತಿಯೊಂದು ಗ್ರಾಮದಲ್ಲಿ ಗ್ರಾಮ ದೇವಿಯರ ಮೂರ್ತಿ ಮೆರವಣಿಗೆ ನಡೆಯುತ್ತಿದ್ದು, ಗ್ರಾಮಸ್ಥರು ಸಂಭ್ರಮದಿಂದ ಹೊನ್ನಾಟವಾಡುತ್ತಿದ್ದಾರೆ. ಮಂಡಿಹಾಳ ಗ್ರಾಮದಲ್ಲಿ ಗ್ರಾಮ ದೇವಿಯರ ಜಾತ್ರೆ ನಡೆಯುತ್ತಿರುವುದರಿಂದ ಯಾರೂ ಕೂಡ ಚಪ್ಪಲಿ ಹಾಕಿಕೊಂಡು ಬರದಂತೆ ನಿರ್ಬಂಧ ಹೇರಲಾಗಿದೆ. ಇದರಿಂದ ಯಾರೂ ಕೂಡ ಪಾದರಕ್ಷೆ ಧರಿಸದೇ ಅದ್ಧೂರಿಯಿಂದ ಗ್ರಾಮ ದೇವಿಯರ ಜಾತ್ರೆ ನಡೆಸುತ್ತಿದ್ದಾರೆ. ದೇವರ ಪಲ್ಲಕ್ಕಿಯ ಮೇಲೆ ಜನರು ಭಂಡಾರ ತೂರುವ ಮೂಲಕ ತಮ್ಮ ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು. ಕೆಲವರು ಭಂಡಾರ ಹಾರಿಸಿ ವರವ ಕೊಡು ದೇವರೇ ಎಂದು ತಮ್ಮ ನಿವೇದನೆಯನ್ನು ದೇವರ ಮುಂದೆ ಇಟ್ಟರೆ, ಇನ್ನು…

Read More

ಮಂಗಳೂರು: ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ (Hindu) ಕಠಿಣ ದಿನವಾಗಲಿದೆ. ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾರ್ಯತಂತ್ರಗಳು ರೂಪುಗೊಂಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪೊಲೀಸರಿಗೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸೋ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಹೈಕಮಾಂಡ್ ಅಂಗಳದಲ್ಲಿ ಹೈವೋಲ್ಟೇಜ್ ಮೀಟಿಂಗ್ ಫಿಕ್ಸ್ ಆಗಿದ್ದು, ಇಂದೇ(ಮೇ 24) ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಈ ನಡುವೆ ಖಾತೆ ಹಂಚಿಕೆ ಸರ್ಕಸ್ ಜೋರಾಗೇ ನಡೆಯುತ್ತಿದೆ. ಬುಧವಾರದ ವೇಳೆಗೆ ಎಲ್ಲವೂ ಫೈನಲ್ ಆಗುತ್ತೆ. ಎಲ್ಲಾ ಸಚಿವ ಸ್ಥಾನ ಭರ್ತಿ ಆಗುತ್ತೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಡಿಕೆ ಶಿವಕುಮಾರ್ ಹೇಳಿಕೆಯಂತೆ ಸಂಪುಟ ಸರ್ಕಸ್ ಶುರುವಾಗಿದೆ. ಇವತ್ತು ಸಂಜೆ 6.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ರಾತ್ರಿಯೇ ಹೈಕಮಾಂಡ್ ನಾಯಕರ ಜೊತೆ ಮೀಟಿಂಗ್ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವಿನ ಹಗ್ಗ-ಜಗ್ಗಾಟದಿಂದಾಗಿ ಮೊದಲ ಹಂತದಲ್ಲಿ ಕೇವಲ ಎಂಟು ಮಂದಿ ಮಾತ್ರ…

Read More

ಮಂಡ್ಯ: ಹಳೇಬೂದನೂರು ಗ್ರಾಮದ ಎಚ್‌.ಪಿ.ಮನೋಜ್‌ 2022ನೇ ಸಾಲಿನ ಯುಪಿಎಸ್‌ಪಿ ಪರೀಕ್ಷೆಯಲ್ಲಿ 929ನೇ ರ‍್ಯಾಂಕ್‌ ಪಡೆದಿದ್ದಾರೆ. ಡಾ.ಬಿ.ಎಸ್‌.ಪುಟ್ಟಸ್ವಾಮಿ- ಹೇಮಾ ದಂಪತಿಯ ಪುತ್ರನಾದ ಮನೋಜ್‌ ಮೊದಲ ಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಒಡಿಶಾ, ಭುವನೇಶ್ವರ್‌ ಐಐಟಿಯಲ್ಲಿ ಎಂ.ಟೆಕ್‌ ಪದವಿ ಪಡೆದಿದ್ದಾರೆ. ಬೆಂಗಳೂರು ವಿವಿಯಲ್ಲಿ ಬಿ.ಟೆಕ್‌ ಪದವಿ ಪೂರೈಸಿದ್ದಾರೆ. ಸದ್ಯ ಮನೋಜ್‌ ದೆಹಲಿಯ ವಿದ್ಯುಚ್ಛಕ್ತಿ ನಿಗಮದಲ್ಲಿ ಐಇಎಸ್‌ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ತಂದೆ ವಿವಿ ಪುರಂ ವಿಜ್ಞಾನ ಮತ್ತು ಕಲಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Read More

ಮಂಡ್ಯ: ದುದ್ದ ಹೋಬಳಿ, ಮಾಚಹಳ್ಳಿ ಗ್ರಾಮದ ಎಂ.ಎಸ್‌.ತನ್ಮಯ್‌ ಅವರು 2022ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ 690ನೇ ರ‍್ಯಾಂಕ್‌ ಗಳಿಸಿದ್ದಾರೆ. ಕೆಎಎಸ್‌ ಪರೀಕ್ಷೆಯಲ್ಲೂ ಉತ್ತೀರ್ಣರಾಗಿರುವ ಅವರು ಹಾವೇರಿಯಲ್ಲಿ ಪ್ರೊಬೇಷನರಿ ತಹಶೀಲ್ದಾರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರೌಢಶಾಲೆ ಶಿಕ್ಷಕರಾಗಿದ್ದ ತನ್ಮಯ್‌ ತಂದೆ ಎಂ.ಶಿವರಾಂ 2018ರಲ್ಲಿ ನಿಧನರಾಗಿದ್ದಾರೆ. ತಂದೆ ಸಾವನ ನೋವಿನಲ್ಲೂ ಅವರು ಕೆಎಎಸ್‌, ಯುಪಿಎಸ್‌ಸಿ ಪರೀಕ್ಷೆ ಎದುರಿಸಿ ಯಶಸ್ವಿಯಾಗಿದ್ದಾರೆ. ತಾಯಿ ಡಿ.ಸಿ.ಇಂದಿರಾ ಅವರ ಪ್ರೋತ್ಸಾಹವನ್ನು ಅವರು ನೆನೆಯುತ್ತಾರೆ. ತನ್ಮಯ್‌, ನಗರದ ಮಂಡ್ಯ ಎಜುಕೇಷನ್‌ ಸೊಸೈಟಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದರು. ಹಾಸನದ ಮಲ್ನಾಡ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಪೂರೈಸಿದರು. ತನ್ಮಯ್‌ ತಮ್ಮ ಕೂಡ ಎಂಜಿನಿಯರ್‌ ಆಗಿದ್ದಾರೆ. ಯುಪಿಎಸ್‌ಸಿ 6ನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ. ಪಿಎಸ್​ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆ ಘನತೆಯನ್ನು ನೀವು ಹಾಳು‌ ಮಾಡಿದ್ದೀರಿ. ಇದನ್ನು ನಾವು ಸಹಿಸುವುದಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರೂ ನಮಗೆ ಹಣ ಕೊಡುವುದು ಬೇಡ. ಉತ್ತಮವಾಗಿ ಕೆಲಸ ಮಾಡಿದರೆ ಸಾಕು ಎಂದು ಹಿರಿಯ ಪೊಲೀಸರಿಗೆ ಡಿಕೆ ಶಿವಕುಮಾರ್ ಖಡಕ್ ಸಂದೇಶ ರವಾನಿಸಿದರು.

Read More

ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಹಿಂದೆ ಇದ್ದ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದರು. ನಳಿನ್ ಕುಮಾರ್ ಕಟೀಲು​​ ವಾಹನವನ್ನು ಹೋಗಲು ಬಿಟ್ಟಿರಲಿಲ್ಲ. ಇಡೀ ಪೊಲೀಸ್​ ಇಲಾಖೆಯನ್ನೇ ಕೇಸರೀಕರಣ ಮಾಡಲಾಗಿತ್ತು. ಯಾವ ಮಟ್ಟಕ್ಕೆ ಇದೆ ಅಂದ್ರೆ ಪೊಲೀಸರೇ ಕೇಸರಿ ಶಾಲು ಹಾಕಿದ್ರು. ಸರ್ಕಾರಿ ಕೆಲಸ ಮಾಡ್ತಿದ್ರಾ ಅಥವಾ RSSನಲ್ಲಿ ಕೆಲಸ ಮಾಡ್ತಿದ್ರಾ? ಹೀಗಾಗಿ ನಿನ್ನೆ ಸರ್ಕಾರಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಸೂಚಿಸಿದ್ದಾರೆ ಎಂದರು.

Read More