Author: Prajatv Kannada

ಬೆಳ್ತಂಗಡಿ : 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ(Harish Poonja) ವಿವಾದಾತ್ಮಕ ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಯಲ್ಲಿ  ಸಿಎಂ ವಿರುದ್ಧ ಕೊಲೆ ಆರೋಪವನ್ನು ಶಾಸಕ ಹರೀಶ್ ಪೂಂಜಾ ಮಾಡಿದ್ದಾರೆ. ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ ಪೂಂಜಾ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ.  24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ  ಎಂದ ಕಾಂಗ್ರೆಸ್ ಪರ  ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ.

Read More

ರಾಮನಗರ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​ಸಿ) 2022ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯ (ಸಿಎಸ್​ಇ) ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 933 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅರ್ಹತೆ ಪಡೆದಿದ್ದಾರೆ. ಅಗ್ರ ನಾಲ್ಕು ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಕರ್ನಾಟಕದ ಟಾಪರ್ ಕೂಡ ಮಹಿಳೆಯೇ ಆಗಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಯುವತಿ ದಾಮಿನಿ ಎಂ.ದಾಸ್, ಯುಪಿಎಸ್​ಸಿ ಪರೀಕ್ಷೆ ಪಾಸ್ ಮಾಡಿದ ತಾಲೂಕಿನ ಮೊದಲ ಯುವತಿ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ. ರೈತಾಪಿ ಕುಟುಂಬದ ಧಾಮಿನಿ ಎಂ. ದಾಸ್ ಗೆ 345ನೇ ರ‌್ಯಾಂಕ್ ಪಡೆದಿದ್ದಾರೆ. ಮಳೂರುಪಟ್ಟಣ ಗ್ರಾಮದ ಶೈಲಜಾ ಹಾಗೂ ಮೋಹನ್ ದಾಸ್ ದಂಪತಿ ಪುತ್ರಿಯಾದ ದಾಮಿನಿ, ಇಂಜಿನಿಯರ್ ಪದವೀಧರೆ. ಆನ್​ಲೈನ್ ತರಬೇತಿಯ ಮೂಲಕವೇ ಈ ಸಾಧನೆ ಮಾಡಿರುವುದು ವಿಶೇಷ. ದಾಮಿನಿ ಅವರ ತಂದೆ ಮೋಹನ್​ದಾಸ್ ಕೃಷಿಕರು ಆಗಿದ್ದಾರೆ.

Read More

ರಾಮನಗರ: ಮಂಗಳವಾರ ಪ್ರಕಟವಾದ ಯುಪಿಎಸ್ ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆಯ ರೈತ ಕುಟುಂಬ ಅಭ್ಯರ್ಥಿ 238ನೇ ರ್ಯಾಂಕ್ ಪಡೆದು ಉತ್ತೀರ್ಣನಗಿದ್ದಾನೆ. ಉತ್ತೀರ್ಣನಾದ ಅಭ್ಯರ್ಥಿ ಹಾರೋಹಳ್ಳಿ ತಾಲ್ಲೂಕಿನ ದೊಡ್ಡಬಾದಿಗೆರೆ ನಿವಾಸಿ ಚೆಲುವರಾಜು .ಸತತ ಮೂರನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದು .ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವೀಧರರಾಗಿರುವ  ಚಲುವರಾಜುರವರು. ಪ್ರಾಥಮಿಕ ಶಿಕ್ಷಣದಿಂದ ದ್ವಿತೀಯ ಪಿ.ಯು.ವರೆಗೂ ಸರ್ಕಾರಿ ಶಾಲೆಯಲ್ಲೇ ವಿದ್ಯಾಭ್ಯಾಸ ಈ ಹಿಂದಿನಿಂದಲೂ ನಾನು ಐಎಎಸ್ ಅಧಿಕಾರಿ ಆಗ ಬೇಕೆಂಬ ಕನಸು ಕಂಡಿದ್ದೆ..ಚಿಕ್ಕ ವಯಸ್ಸಿನಿಂದಲೂ ಸಮಾಜದ ಸೇವೆಗೆ ತೊಡಗಿಸಕೊಳ್ಳಬೇಕು ಎಂಬ ಆಸೆ ಹೊಂದಿದ್ದೆ ಈಗ ನನ್ನ ಆಸೆ ಈಡೇರಿದೆ. Video Player 00:00 00:23 ಇದರ ಮುಂಚೆ ನಾನು ಎರಡು ಬಾರಿ ಪ್ರಯತ್ನದಲ್ಲಿ ಸೋಲನ್ನು ಕಂಡು ಮೂರನೆಯ ಬಾರಿ ಯಶಸ್ಸನ್ನು ಕಂಡಿದ್ದೇನೆ..ನನ್ನ ಯಶಸ್ಸಿಗೆ ನನ್ನ ಅಣ್ಣ ನನ್ನ ಸ್ನೇಹಿತರು ಮತ್ತು ಡಾ. ರಾಜ ಕುಮಾರ್ ಐಎಎಸ್ ತರಭೇತಿ ಕೇಂದ್ರದ ಉಪನ್ಯಾಸಕರು ತುಂಬಾ ಸಹಾಯ ಮಾಡಿದ್ದಾರೆ.ಆದ್ದರಿಂದ ನನ್ನ ಪ್ರಯತ್ನದಲ್ಲಿ ಯಶಸ್ಸನ್ನು ಕಂಡಿದ್ದೇನೆ. ನಾನು ಮುಂದೆ ಜನ ಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸಬೇಕೆಂಬ…

Read More

ಹುಬ್ಬಳ್ಳಿ: ಕಳೆದ ಅರ್ಧ ಗಂಟೆಯಿಂದಲೂ ನಗರದಲ್ಲಿ ಆಲಿಕಲ್ಲು ಮಳೆ ಸುರಿಯುತ್ತಿದೆ. ಮಳೆರಾಯನ ಆರ್ಭಟಕ್ಕೆ ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಆಲಿಕಲ್ಲು ಮಿಶ್ರಿತ ಮಳೆಯಿಂದ ಜನರು ಪರದಾಡಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ ಮರಗಳು ಉರುಳಿ ಬೀಳುತ್ತಿವೆ. ಮನೆಗಳ ಮೇಲೆ ಮರ ಬೀಳುವುದನ್ನು ಕಂಡು ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಹಲವು ಮನೆಗಳ ಮೇಲ್ಚಾವಣಿ ಹಾರಿಹೋಗಿ ಬೀದಿಗೆ ಬಿದಿವೆ.

Read More

ಸೂರ್ಯೋದಯ: 05.53 AM, ಸೂರ್ಯಾಸ್ತ : 06.40 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಚೌತಿ 12:57 AM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಪುನರ್ವಸು 03:06 PM ತನಕ ನಂತರ ಪುಷ್ಯ ಯೋಗ: ಇವತ್ತು ಗಂಡ05:20 PM ತನಕ ನಂತರ ವೃದ್ಧಿ ಕರಣ: ಇವತ್ತು ವಿಷ್ಟಿ 12:57 AM ತನಕ ನಂತರ ಬವ 01:56 PM ತನಕ ನಂತರ ಬಾಲವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 12.28 PM to 02.13 PM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ಮೇಷ ರಾಶಿ: ಈ ರಾಶಿಯವರಿಗೆ ಅಧಿಕಾರ ಸಂಪತ್ತು ತಾನಾಗಿಯೇ ಸಿಗಲಿದೆ, ಉದ್ಯೋಗದಲ್ಲಿ ಸಮಸ್ಯೆ ದಿಂದ ಉದ್ಯೋಗ ಬಿಡುವ ಸಾಧ್ಯತೆ, ಈ ದಿನ…

Read More

ಸಿಎಂ ಸಿದ್ದರಾಮಯ್ಯ ನೇತೃತ್ವದ ಶಾಸಕಕಾಂಗ ಪಕ್ಷದ ಸಭೆ ಆರಂಭವಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇಂದಿನ CLP ಸಭೆಗೆ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ಇಲ್ಲ. ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಸಿಎಲ್​ಪಿ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು * ರಾಜ್ಯದ ಜನತೆ ಅಪಾರ ನಿರೀಕ್ಷೆಗಳ ಜತೆಗೆ ನಮಗೆ ಅಪಾರ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಈಡೇರಿಸಿ. * ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ. * ಬಿಜೆಪಿಯವರು ಮಾಡುವ ಸುಳ್ಳು ಅಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲಾ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು. * ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ…

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರ್‌ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಪ್ರಾಮಾಣಿಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಿದ್ದೆವು. ಶೇ.50ಕ್ಕೂ ಹೆಚ್ಚು ಒತ್ತುವರಿಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿದ್ದೆವು. ಇದೀಗ ಮತ್ತೆ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದರು.  ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಆಗುವ ಹಾನಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೀರು ನಿಂತ ಕೆಳ ಸೇತುವೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸುವಂತೆ ಸೂಚನೆ ನೀಡಲಾಗಿದೆ. ಜತೆಗೆ ಅವುಗಳನ್ನು ವೈಜ್ಞಾನಿಕವಾಗಿ ಸರಿಪಡಿಸುವಂತೆಯೂ ತಿಳಿಸಲಾಗಿದೆ. ಚರಂಡಿ ಮಾರ್ಗಗಳಲ್ಲಿ ಹೂಳೆತ್ತಿ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ಮಾಡಬೇಕು ಎಂದು ಹೇಳಿದರು.

Read More

ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯ ಕಾಚೋಹಳ್ಳಿ ಅಂಡರ್‌ ಪಾಸ್‌ ನಲ್ಲಿ(Underpass Water) ಬೈಕ್ ಸವಾರ ಮೃತಪಟ್ಟಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಸವಾರ ಫಕ್ರುದ್ದೀನ್ ಎಂಬವರು ಮೃತಪಟ್ಟಿದ್ದಾರೆ. ಇನ್ನೂ ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಕಾಚೋಹಳ್ಳಿ ಅಂಡರ್‌ಪಾಸ್ ಮೂಲಕ ರಾಮನಗರ ಕಡೆ ಹೋಗುತ್ತಿದ್ದರು. ಇದೇ ವೇಳೆ ಭಾರೀ ಮಳೆ ಬೀಳುತ್ತಿದ್ದರಿಂದ ಅಂಡರ್‌ಪಾಸ್‌ನಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಮಾರ್ಗ ಮಧ್ಯೆಯೇ ಫಕ್ರುದ್ದೀನ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಅಂತಾ ಸಂಚಾರ ಪೊಲೀಸರು ಹೇಳಿದ್ದಾರೆ.

Read More

ಬೆಂಗಳೂರು: ವಿಧಾನಸಭಾ ಕಲಾಪ ಇಂದು ಕೊನೆಗೊಳ್ಳಲಿದ್ದು ಆ ನಂತರ ಇಂದು ಸಂಜೆ 6.30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಐದು ವರ್ಷ ಪೂರ್ತಿ ಸಿದ್ದರಾಮಯ್ಯರೇ ಸಿಎಂ ಆಗಿರ್ತಾರಾ, ಅಥವಾ ಬದಲಾಗ್ತಾರಾ. ಡಿಸಿಎಂ ಆಗಿರೋ ಡಿಕೆಶಿ ಮುಂದೆ ಸಿಎಂ ಆಗ್ತಾರಾ. ಈ ರೀತಿ ಅನೇಕ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಲೇ ಇದ್ವು. ಆದ್ರೆ, ಸಚಿವ ಎಂ.ಬಿ.ಪಾಟೀಲ್(MB Patil) ಸಿಡಿಸಿರುವ ಬಾಂಬ್, ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೆ ಏರಿರೋ ಕಾಂಗ್ರೆಸ್ ಮನೆಯಲ್ಲಿ ಕಂಪನ ಎಬ್ಬಿಸಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ವರುಣ ಅಬ್ಬರಿಸಿದ್ದು ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ(Karnataka Rain). ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ಮರ-ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಮಳೆ ನೀರು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿಯಾಗುತ್ತಿದೆ. ಹೊಲ-ಗದ್ದೆ ಕೆರೆಯಂತಾಗಿದೆ

Read More

ಬೆಂಗಳೂರು: ಡಿಸಿಎಂ ಹಾಗೂ 5 ಮಂದಿ ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೊನೆಗೂ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದ ಲಕ್ಕಿ ನಿವಾಸವೆಂದು ಅದೇ ನಿವಾಸವನ್ನು ಈಗ ಹಾಲಿ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದ ನಿವಾಸವನ್ನೇ ಪಡೆದ ಡಿ.ಕೆ.ಶಿವಕುಮಾರ್. ಬೆಂಗಳುರಿನ ಗಾಂಧಿ ಭವನ ರಸ್ತೆಯಲ್ಲಿರುವ ಕುಮಾರಕೃಪ ನಿವಾಸ ಪಡೆದುಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ. ಜ್ಯೋತಿಷಿಗಳ ಸಲಹೆ ಪಡೆದು ಸಿಎಂ ಸಿದ್ದರಾಮಯ್ಯ  ನಿವಾಸವಿದ್ದ ಕುಮಾರಕೃಪಾಗೆ ಶಿಫ್ಟ್ ಆಗಿರುವ ಕನಕಪುರ ಬಂಡೆ. ಅಂದ ಹಾಗೆ ಇನ್ನುಳಿದ ಐವರು ನೂತನ ಸಚಿವರು ರೇಸ್ ವ್ಯೂ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಪಡೆದ ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೆ ಸದಾಶಿವನಗರದ ಸರ್ಕಾರಿ ನಿವಾಸವನ್ನು ಡಾ.ಜಿ ಪರಮೇಶ್ವರ್ ಗೆ ನಿವಾಸ ಹಂಚಿಕೆಯಾಗಿ ನೀಡಲಾಗಿದೆ

Read More