ರಾಜ್ಯದಲ್ಲಿ ಇನ್ನೂ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ದೇವರ ಚಿಕ್ಕನಹಳ್ಳಿಯಲ್ಲಿ ಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಚರಂಡಿಯಲ್ಲಿ ಹರಿದು ಹೋಗುತ್ತಿದ್ದ ನೀರು ಮನೆಗೆ ಬಂದಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳೆಲ್ಲವೂ ಮುಳುಗಿ ಹೋಗಿದೆ. ಸಮಸ್ಯೆಯಾದರೂ ಬಿಬಿಎಂಪಿ ಅಧಿಕಾರಿಗಳು ಬಂದಿಲ್ಲವೆಂದು ಆಕ್ರೋಶ ಹೊರ ಹಾಕಿದರು. ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 24ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಕರಾವಳಿಯ ದಕ್ಷಿಣ…
Author: Prajatv Kannada
ಬೆಂಗಳೂರು: ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರುವಾಗಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಗೆ ಸಾರಿಗೆ ಇಲಾಖೆ ಸಿದ್ಧತೆ ನಡೆಸುತ್ತಿದೆ. ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಕಲ್ಪಿಸಲು ಸರ್ಕಾರ ಸಿದ್ದತೆ ನಡೆಸಿದ್ದು, ಫ್ರೀ ಬಸ್ ಭಾಗ್ಯಕ್ಕೆ ಕಂಡೀಷನ್ ಹಾಕಿಯೇ ಫ್ರೀ ಬಸ್ ಸೇವೆ ನೀಡಲು ಪ್ಲಾನ್ ಮಾಡಿದೆ. ಶೀಘ್ರದಲ್ಲೇ ಷರತ್ತು ಮತ್ತು ನಿರ್ಬಂಧ ಗಳಿಗ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಆಗಲಿದ್ದು, ಒಂದೆರಡು ದಿನದಲ್ಲಿ ಫ್ರೀ ಬಸ್ ಸ್ಕೀಂ ಮಾರ್ಗಸೂಚಿಯು, ಸರ್ಕಾರದ ಕೈ ಸೇರಲಿದೆ. ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಮಾರ್ಗಸೂಚಿಯ ರೆಡಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದು, ಈ ಯೋಜನೆಯ ಫಲಾನುಭವಿಗಳು, ಐಷಾರಾಮಿ ಬಸ್ ಗಳಲ್ಲಿ ಫ್ರೀ ಓಡಾಟ ಮಾಡುವಂತಿಲ್ಲ. ಸರ್ಕಾರಿ ಬಸ್ ನಲ್ಲಿ ಓಡಾಟ ನಡೆಸುವ ಮಹಿಳೆಯರಿಗೆ ಪ್ರತ್ಯೇಕ ಪಾಸ್ ನೀಡಲಾಗುತ್ತದೆ. ಇನ್ನೂ ಉಚಿತ ಪ್ರಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಉಚಿತ ವೆಚ್ಚದ ಬಸ್…
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿ ಇನ್ನೂ ನಾಲ್ಕು ದಿನ ಕಳೆದಿಲ್ಲ.. ಆಗಲೇ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ರಂಪಾಟ ಜೋರಾಗಿಬಿಟ್ಟಿದೆ. ಸಿದ್ದರಾಮಯ್ಯನವ್ರು ಐದು ವರ್ಷವೂ ಸಿಎಂ ಆಗಿರ್ತಾರೆ ಎಂಬ ಒಂದೇ ಒಂದು ಹೇಳಿಕೆ, ಡಿ.ಕೆ. ಶಿವಕುಮಾರ್ ಆಪ್ತ ಬಣವನ್ನ ರೊಚ್ಚಿಗೆಬ್ಬಿಸಿದೆ. ಕೆಲವರು ಬಹಿರಂಗವಾಗಿಯೇ ತೊಡೆ ತಟ್ಟುತ್ತಿದ್ರೆ, ಇನ್ನೂ ಕೆಲವರು ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ. ಬೂದಿ ಮುಚ್ಚಿದ ಕೆಂಡದಂತಿದ್ದ ಕಾಂಗ್ರೆಸ್ ಸಿಎಂ ಕುರ್ಚಿ ಕಿತ್ತಾಟ, ಈಗ ಹೊತ್ತಿಕೊಂಡಂತೆ ಕಾಣ್ತಿದೆ. ಸಿಎಂ ಕುರ್ಚಿ ಮೇಲೆ ಕಣ್ಣಾಕಿದ್ದ ಡಿ.ಕೆ. ಶಿವಕುಮಾರ್ ಗೆ, ಸಿದ್ದು ಆಪ್ತ ಬಣ ಟಕ್ಕರ್ ಕೊಟ್ಟಿತ್ತು. ಆಗಿನಿಂದ ಇಬ್ಬರ ನಡುವಿನ ಬಣ ಎಸ್ ರಾಜಕೀಯ ತಾರಕಕ್ಕೇರಿಬಿಟ್ಟಿದೆ. ಹೈಕಮಾಂಡ್ ಹಂತದಲ್ಲಿ ಅಧಿಕಾರ ಹಂಚಿಕೆ ಮಾತಾಗಿದೆ. ಎರಡೂವರೆ ವರ್ಷ ಆದ್ಮೇಲೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ ಕಾಲರ್ ಎಗರಾಕಿಕೊಂಡು ಮಾತಾಡ್ತಿದ್ದ ಡಿಕೆಶಿ ಆಪ್ತರಿಗೆ, ಸಿದ್ದು ಟೀಂ ಸಿಡಿಲಿನಂತ ಮಾತಿನೇಟು ಕೊಟ್ಟಿದೆ. ಐದು ವರ್ಷವೂ ಸಿದ್ದರಾಮಯ್ಯನವ್ರೇ ಸಿಎಂ ಆಗಿರ್ತಾರೆ. ಹೈಕಮಾಂಡ್ ನಾಯಕರೂ ನಮಗೆ ಇದನ್ನೇ ಹೇಳಿದ್ದಾರೆ ಅಂತಾ…
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಎಂಬ ಚರ್ಚೆ ಜೋರಾಗಿದೆ. ಅದಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ಕರ್ನಾಟಕ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದು ಕಂಡುಬಂದಿದೆ. ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಆರ್ ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕ ಸ್ಥಾನದ ರೇಸ್ನಲ್ಲಿ ಮುಂದೆ ಇದ್ದಾರೆ. ವಿಪಕ್ಷ ನಾಯಕನ ಸ್ಥಾನ…
ಗದಗ: ಕಪ್ಪತಗುಡ್ಡ ವನ್ಯಜೀವಿಧಾಮ ಪ್ರದೇಶದ ಅಂಚಿನಲ್ಲಿರುವ ಶೆಟ್ಟಿಕೆರೆ ಪ್ರದೇಶದಲ್ಲಿ ನಕ್ಷತ್ರಾಕಾರದ ಕೂರ್ಮ ಪ್ರತ್ಯಕ್ಷ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರೆ ಪ್ರದೇಶ ವ್ಯಾಪ್ತಿಯಲ್ಲಿ ಟೆಸ್ಟುಡಿನಿಡೆ ಕುಟುಂಬಕ್ಕೆ ಸೇರಿದ ನಕ್ಷತ್ರ ಆಮೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ಪ್ರತ್ಯಕ್ಷವಾಗಿರೋ ವಿಶೇಷ ತಳಿಯ ಆಮೆ ಇದರ ವೈಜ್ಞಾನಿಕ ಹೆಸರು ಜಿಯೋಚಲೋನ್ ಎಲಗನ್ಸ್ ಅವಾಸ ಸ್ಥಾನ ನಾಶ ಮತ್ತು ಕಳ್ಳಬೇಟೆಯಿಂದಾಗಿ ಅಳಿವಿನಂಚಿನಲ್ಲಿರುವ ಆಮೆ 10 ಇಂಚಿನವರೆಗೂ ಉದ್ದದಷ್ಟು ಬೆಳೆಯುವ ನಕ್ಷತ್ರ ಆಮೆ ದೇಹದ ಮೇಲೆ ನಕ್ಷತ್ರ ಆಕಾರದ ಗಾಢವಾದ ಬಣ್ಣದ ವಿನ್ಯಾಸ. ಇವುಗಳನ್ನ ಮನೆಯಲ್ಲಿ ಸಾಕಿದರೆ ಮನೆಯಲ್ಲಿ ಸಂಪತ್ತು ವೃದ್ಧಿ ಎಂಬ ನಂಬಿಕೆ.ಆದ್ರೆ ಮನೆಯಲ್ಲಿ ಸಾಕಿದರೆ ಬಹಳಷ್ಟು ದಿನ ಇದು ಬದಕೋದಿಲ್ಲ.ಕೆಲವರು ಚಿಪ್ಪು ಮತ್ತು ಅದರ ಮಾಂಸಕ್ಕಾಗಿ ಕಳ್ಳಭೇಟೆಯಾಡ್ತಾರೆ.ಹೀಗಾಗಿ ಈ ಪ್ರಾಣಿ ಅಳಿವಿನಂಚಿನಲ್ಲಿರುವುದು ಎಂಬ ಅರಣ್ಯ ಇಲಾಖೆಯ ಮಾಹಿತಿ ಇಂದು ವಿಶ್ವ ಆಮೆ ದಿನ ಹೀಗಾಗಿ ಅದರ ಬಗ್ಗೆ ಜಾಗೃತಿ ಮೂಡಿಸಿ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರದು ಎಂಬ ಅಭಿಪ್ರಾಯ ಅರಣ್ಯ ಇಲಾಖೆಯದು
ಬೆಂಗಳೂರು: ಇತ್ತೀಚೆಗೆ ಸಚಿವರುಗಳ ಪ್ರಮಾಣವಚನ ಟೈಮಲ್ಲಿ ಮಧು ಬಂಗಾರಪ್ಪ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ಹೊರಹಾಕಿದ್ದರು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ದಂಪತಿ ಕೂಡ ಬೇಸರಪಟ್ಟಿದ್ದರು. ಹಾಗಾಗಿ ಇಂದು ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ಕುಮಾರ್ ನಿವಾಸಕ್ಕೆ ಸುರ್ಜೇವಾಲ ಭೇಟಿ ನೀಡಿದ್ದಾರೆ. ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ ಬೇಸರ ವ್ಯಕ್ತಪಡಿಸಿದ್ದರು. ಬೇಸರಗೊಂಡಿದ್ದ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಪಕ್ಷಕ್ಕೆ ಪ್ರಚಾರ ಸಮಯದಲ್ಲಿ ಕೈಗೂಡಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯ ಸೇವೆಯಿಂದ ಬಿಡುಗಡೆ ಹಿನ್ನೆಲೆ ಪ್ರವೀಣ್ ಸೂದ್ ( Praveen Sood) ಅವರು ಸಹೋದ್ಯೋಗಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ರಾಜ್ಯ ಪೊಲಿಸ್ ಇಲಾಖೆಯ ಮುಖ್ಯಸ್ಥನಾಗಿ ಭಾರವಾದ ಹೃದಯದಿಂದ ಈ ಕೊನೆಯ ಪತ್ರ ಬರೆಯುತ್ತಿದ್ದೇನೆ. ಮೂರು ವರ್ಷಗಳ ಕಾಲ ಮಾರಿಷನ್ ದೇಶದಲ್ಲಿ ಪೊಲೀಸ್ ಸಲಹೆಗಾರನಾಗಿ ಸೇವೆ ಸಲ್ಲಿಸಿದ್ದರ ಹೊರತಾಗಿ ಇಲಾಖೆಯಲ್ಲಿ 37 ವರ್ಷ ಹಾಗೂ ಇಲಾಖಾ ಮುಖ್ಯಸ್ಥನಾಗಿ ಮೂರೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಇಲಾಖೆಯ ವಿವಿಧ ಹುದ್ದೆಗಳಲ್ಲಿ ವೃತ್ತಿಪರತೆ ಮತ್ತು ಸೇವಾ ಮನೋಭಾವದಿಂದ ನನ್ನನ್ನು ಅರ್ಪಿಸಿಕೊಂಡಿದ್ದೇನೆ’ ಎಂದು ತಿಳಿಸಿದ್ದಾರೆ ಪ್ರತಿಯೊಬ್ಬ ಐಪಿಎಸ್ ಅಧಿಕಾರಿಗೆ ನಾಯಕತ್ವ ಮೂಲಗುಣ ಎಂಬುದು ನೆನಪಿರಬೇಕು. ಐಪಿಎಸ್ ಅಧಿಕಾರಿಗಳು ಇಲಾಖೆಯ ಸುಧಾರಣೆಗಾಗಿ ಯಾವುದೇ ನಿರ್ದಿಷ್ಟಹುದ್ದೆಯನ್ನು ಅಲಂಕರಿಸಲು ಕಾಯಬಾರದು. ಜಿಲ್ಲಾ ವರಿಷ್ಠಾಧಿಕಾರಿ, ಆಯುಕ್ತರು ಅಥವಾ ಮಹಾನಿರ್ದೇಶಕರ ಹುದ್ದೆಯನ್ನೇರಿದರೆ ಮಾತ್ರ ಬದಲಾವಣೆ ಸಾಧ್ಯವೆಂದು ಕಾಯುತ್ತಾ ಕೂರುವುದು ಸಮಂಜಸವಲ್ಲ. ಪೊಲೀಸ್ ಪಡೆಯ ಸುಧಾರಣೆಗೆ ಪ್ರತಿಯೊಂದು ಹುದ್ದೆಯು ನಮಗೆ ಉತ್ತಮ ಅವಕಾಶ ಕಲ್ಪಿಸಿಕೊಡುತ್ತದೆ. ಮಾಧ್ಯಮಗಳು ಕೆಲವೊಂದು ಹುದ್ದೆಗಳನ್ನು ಎಲ್ಲರ ಹುಬ್ಬೇರುವಂತೆ ವರ್ಣರಂಜಿತವಾಗಿ ಬಿಂಬಿಸುತ್ತವೆ.…
ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ರಣ ಮಳೆ ಸಿಲಿಕಾನ್ ಸಿಟಿಯಲ್ಲಿ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ(Bengaluru Rain). ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಇನ್ನು 2 ಸಾವಿನ ಬಳಿಕ ಬುದ್ದಿ ಕಲಿತ ಬಿಬಿಎಂಪಿ(BBMP) IISC ತಜ್ಞರ ಮೊರೆ ಹೋಗಿದೆ. ಬಿಬಿಎಂಪಿಯ 18 ಅಂಡರ್ ಪಾಸ್ಗಳ ಕಾರ್ಯಕ್ಷಮತೆ ಬಗ್ಗೆ ವರದಿ ನೀಡಲು ತಜ್ಞರಿಗೆ ಸೂಚಿಸಿದೆ. ಹಾಗೂ ಅಂಡರ್‌ಪಾಸ್‌ಗಳಲ್ಲಿ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅಂಡರ್‌ಪಾಸ್‌ಗಳಲ್ಲಿ ಬಿಬಿಎಂಪಿ ತೆಗೆದುಕೊಳ್ಳಲು ಉದ್ದೇಶಿಸಲಾಗಿರುವ ಪ್ರಮುಖ ಕ್ರಮಗಳು 1 – ರಸ್ತೆಯ ಅಕ್ಕ ಪಕ್ಕದಲ್ಲಿ ಬೀಳುವ ಎಲ್ಲಾ ಮಳೆ ನೀರು ಕೆಳಸೇತುವೆಗೆ ಹೋಗದಂತೆ ಕೆಳಸೇತುವೆಯ ಏರುವ ಮತ್ತು ಇಳಿಯುವ ರಾಂಪ್ ಮುಂಭಾಗದಲ್ಲಿ ಪ್ರತ್ಯೇಕ ಚರಂಡಿಯನ್ನು ನಿರ್ಮಿಸಿ ನೇರವಾಗಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವುದು 2 – ರಸ್ತೆಯ ಮೇಲೆ ಭಾಗದ ಮಳೆ ನೀರು ಕೆಳಸೇತುವೆಗೆ ಹೋಗದಂತೆ ರಾಂಪ್ ಮುಂಭಾಗದಲ್ಲಿ ಪ್ರತ್ಯೇಕವಾಗಿ ಚರಂಡಿಯನ್ನು ನಿರ್ಮಿಸುವ ಜೊತೆಗೆ ಒಂದು ರಸ್ತೆ ಉಬ್ಬರವನ್ನು ಸಹ ನಿರ್ಮಿಸುವುದು 3- ಕೆಳಸೇತುವೆಯ ಕೆಳಭಾಗದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಗಳನ್ನು ಅಳವಡಿಸುವುದು 4- …
ಬೆಂಗಳೂರು: ರೋಣ ಶಾಸಕ ಜಿ.ಎಸ್ ಪಾಟೀಲರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಕಾರ್ಯಕರ್ತರು ಸಿಎಂ ಮನೆ ಮುಂದೆ ಜಮಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮನೆ ಮುಂದೆ ರೋಣ ಶಾಸಕ ಜಿ.ಎಸ್. ಪಾಟೀಲಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡುವ ರೂಪದಲ್ಲಿ ನೂರಾರು ಕಾರ್ಯಕರ್ತರು ಬಂದು ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲಾ ಕೂಡ ಆಗಮಿಸಿದ್ದು ಅವರ ಕಾರನ್ನು ಅಡ್ಡಗಟ್ಟಿ ಜಿ.ಎಸ್ ಪಾಟೀಲಗೆ ಸಚಿವ ಸ್ಥಾನ ನೀಡಬೇಕೆಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ನೂರಾರು ಜೆ.ಎಸ್ ಪಾಟೀಲ ಅಭಿಮಾನಿಗಳು, ತಮ್ಮ ನೆಚ್ಚಿನ ನಾಯಕನೂ ಸಚಿವನಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯ ಮಾಡುತ್ತಿದ್ದಾರೆ. ಇನ್ನೂ ಸಂಪೂರ್ಣ ಬಹುಮತವನ್ನು ಈ ಬಾರಿ ಕಾಂಗ್ರೆಸ್ ಪಕ್ಷ ಪಡೆದಿದ್ದು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಈಗಾಗಲೇ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ, ಸಚಿವ ಸ್ಥಾನ ತನಗೂ ಸಿಗಬೇಕು ಎಂದುಕೊಂಡಿರುವ ಶಾಸಕರು, ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ಜಯನಗರ ಡಿವಿಜನ್ನ ಕೆಪಿಟಿಸಿಎಲ್ ಸಬ್ ಸ್ಟೇಷನ್‌ನಲ್ಲಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ನಗರದ ಹಲವೆಡೆ ಪವರ್ ಕಟ್ ಇರಲಿದೆ. ಅಶೋಕ ನಗರ, ಗರುಡಾ ಮಾಲ್ ಸುತ್ತಮುತ್ತ, ಬ್ರೆಂಟನ್ ರಸ್ತೆ, ಐಸಿಐಸಿಐ ಬ್ಯಾಂಕ್, ಎಂಬಸ್ಸಿ ಹೈಟ್ಸ್, ಅರ್ಬನ್ ಲೈಫ್ಸ್, ಅಸ್ಟಿನ್ ಟೌನ್, ವಿಮಾನ ನಿಲ್ದಾಣ ರಸ್ತೆ, ವಿವೇಕ ನಗರ, ವಿಕ್ಟೋರಿಯಾ ಲೇಔಟ್, ಟ್ರಿನಿಟಿ ಚರ್ಚ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಲೆವೆಲ್ಲಿ ರೋಡ್,ಸೇಂಟ್ ಮಾರ್ಕ್ಸ್ ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇನ್ನು ರಿಚ್ಮಂಡ್ ಟೌನ್, ಲಾಂಗ್ಫೋರ್ಟ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್ ವರ್ಡ್ ರಸ್ತೆಗಳು, ಬ್ರಿಗೇಡ್ ರಸ್ತೆ, ವಿಠಲ್ ಮಲ್ಯ ರಸ್ತೆ, ಶಾಪರ್ ಸ್ಟಾಪ್, ನೀಲಸಂದ್ರ, ಆನೇಪಾಳ್ಯ, ಸಿದ್ದಯ್ಯ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ತೆಗೆಯಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.