Author: Prajatv Kannada

ಬೆಂಗಳೂರು: 8 ಜನರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಇನ್ನುಳಿದ ಶಾಸಕರು ಒಳಗೊಳಗೆ ಲಾಭಿ ನಡೆಸುತ್ತಿದ್ದು ಮನಸ್ಥಾಪಗಳು ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ನಮ್ಮ ವಿಚಾರಗಳ ಬಗ್ಗೆ ನಾವು ಕೂಡ ಹೇಳಿದ್ದೇವೆ. ಅಂತಿಮವಾಗಿ ಅವ್ರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದು ಬೆಂಗಳೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ಖಾತೆ ಹಂಚಿಕೆ ಸಂಬಂಧ ಪ್ರತಿಕ್ರಿಯೆ ನೀಡಿದರು. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ವರಿಷ್ಠರು ಹೇಳಿದ್ದನ್ನೇ ನಾನು ಹೇಳಿದ್ದೇನೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವೇಣುಗೋಪಾಲ್ ಏನು ಹೇಳಿದ್ದಾರೋ ಅದನ್ನೇ ನಾನು ಹೇಳಿದ್ದೆ. ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ನನಗೆ ಗೊತ್ತಿಲ್ಲ. ಪವರ್ ಶೇರಿಂಗ್ ಇದ್ದರೆ ಜನರ ಜತೆ ಮಾತ್ರ ಅಂತಾ ಹೇಳಿದ್ದಾರೆ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದಿದ್ದರು ಎಂದು ಬೆಂಗಳೂರಿನಲ್ಲಿ ನೂತನ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

Read More

ನವದೆಹಲಿ: ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಿರೋಷಿಮಾದಲ್ಲಿ ಬ್ರೆಜಿಲ್ ಅಧ್ಯಕ್ಷ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಭೇಟಿ ಮಾಡಿದರು. ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ, ವಿಶೇಷವಾಗಿ ರಕ್ಷಣಾ ಉತ್ಪಾದನೆ, ವ್ಯಾಪಾರ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳ ಕುರಿತು ಚರ್ಚಿಸಿದರು. “ಅಧ್ಯಕ್ಷ ಲೂಲಾ ಅವರೊಂದಿಗಿನ ಮಾತುಕತೆ ಸಕಾರಾತ್ಮಕವಾಗಿದ್ದು, ವ್ಯಾಪಾರ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ಭಾರತ ಮತ್ತು ಬ್ರೆಜಿಲ್ ಒಟ್ಟಾಗಿ ಕೆಲಸ ಮಾಡುತ್ತವೆ. ನಾವು ಕೃಷಿ, ರಕ್ಷಣೆ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಬಯಸಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‌ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರೋಷಿಮಾದಲ್ಲಿ ಬ್ರೆಜಿಲ್ ಅಧ್ಯಕ್ಷ ಲುಲಾ ಅವರನ್ನು ಭೇಟಿ ಮಾಡಿದ್ದು. ಭಾರತ-ಬ್ರೆಜಿಲ್ ರಕ್ಷಣಾ ಉತ್ಪಾದನೆ, ವ್ಯಾಪಾರದ ಕ್ಷೇತ್ರ. ಫಾರ್ಮಾಸ್ಯುಟಿಕಲ್ಸ್, ಕೃಷಿ, ಡೈರಿ ಮತ್ತು ಪಶುಸಂಗೋಪನೆ ಮತ್ತು ನವೀಕರಿಸಬಹುದಾದ ಶಕ್ತಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More

ಮಾಸ್ಕೋ: ರಷ್ಯಾ ದೇಶದ ಸೈನಿಕರ ಬೆಂಬಲದೊಂದಿಗೆ ಖಾಸಗಿ ಮಿಲಿಟರಿ ಸಂಸ್ಥೆಯಾದ ವ್ಯಾಗ್ನರ್ ಸೇನೆಯ ಪಡೆಗಳು ಉಕ್ರೇನ್ ನಗರವಾದ ಬಖ್ಮುತ್ ಅನ್ನು ವಶಪಡಿಸಿಕೊಂಡಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ಟೆಲಿಗ್ರಾಮ್ ಚಾನೆಲ್‌ನಲ್ಲಿ ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಹೇಳಿಕೆ ನೀಡಿದ ಸುಮಾರು ಎಂಟು ಗಂಟೆಗಳ ನಂತರ ರಕ್ಷಣಾ ಸಚಿವಾಲಯ ಈ ಮಾಹಿತಿ ನೀಡಿತು. ಇದೇ ಸಮಯದಲ್ಲಿ ಉಕ್ರೇನಿಯನ್ ಅಧಿಕಾರಿಗಳು ಬಖ್ಮುತ್ ನಗರದಲ್ಲಿ ಹೋರಾಟ ಮುಂದುವರೆಸಿರುವುದಾಗಿ ಹೇಳಿದ್ದಾರೆ. ಪೂರ್ವ ಉಕ್ರೇನ್‌ನಲ್ಲಿ ಬಖ್ಮುತ್ ನಗರ ವಶಪಡಿಸಿಕೊಂಡ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವ್ಯಾಗ್ನರ್ ಖಾಸಗಿ ಮಿಲಿಟರಿ ಮತ್ತು ರಷ್ಯಾದ ಪಡೆಗಳ ಆಕ್ರಮಣ ತಂಡಗಳನ್ನು ಅಭಿನಂದಿಸಿದ್ದಾರೆ. ಆರ್ಟಿಯೊಮೊವ್ಸ್ಕ್ ಅನ್ನು ಸ್ವತಂತ್ರಗೊಳಿಸುವ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವುದರೊಂದಿಗೆ, ಅಗತ್ಯವಿರುವ ನೆರವು ನೀಡುವುದಾಗಿ ಪುಟೀನ್ ಹೇಳಿದ್ದಾರೆ. ಪೂರ್ವ ಉಕ್ರೇನ್‌ನಲ್ಲಿರುವ ಈ ನಗರಕ್ಕಾಗಿ ಕಳೆದ ಎಂಟು ತಿಂಗಳುಗಳಿಂದ ನಡೆಯುತ್ತಿರುವ ಈ ಸಂಘರ್ಷ ಅತ್ಯಂತ ಭೀಕರವಾಗಿದೆ. ಟೆಲಿಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ಶನಿವಾರ ಮಧ್ಯಾಹ್ನದ ಹೊತ್ತಿಗೆ ನಗರವು ಸಂಪೂರ್ಣ…

Read More

ಹಿರೋಷಿಮಾ: ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹಿರೋಷಿಮಾ ಶಾಂತಿ ಸ್ಮಾರಕ ಉದ್ಯಾನಕ್ಕೆ ಭೇಟಿ ನೀಡಿ ಪುಷ್ಟ ನಮನ ಸಲ್ಲಿಸಿದರು. ಎರಡನೇ ಮಹಾಯುದ್ಧ ಸಂದರ್ಭದಲ್ಲಿ ಪರಮಾಣು ದಾಳಿಗೆ ಬಲಿಯಾದವರ ನೆನಪಿಗಾಗಿ ಹಿರೋಷಿಮಾದಲ್ಲಿ ಶಾಂತಿ ಸ್ಮಾರಕ ನಿರ್ಮಿಸಲಾಗಿದೆ. ಇದೀಗ ಶಾಂತಿ ಸ್ಮಾರಕ ಉದ್ಯಾನಕ್ಕೆ ಭೇಟಿ ನೀಡಿ ಪುಷ್ಟ ನಮನ ಸಲ್ಲಿಸಿದ್ದಾರೆ. ಜಿ7 ಶೃಂಗದಲ್ಲಿ ಭಾಗವಹಿಸಿದ ಇತರ ದೇಶಗಳ ನಾಯಕರು ಶಾಂತಿ ಸ್ಮಾರಕಕ್ಕೆ ಗೌರವ ಸೂಚಿಸಿದ್ದಾರೆ. ಶಾಂತಿ ಸ್ಮಾರಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋಗಳನ್ನು ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ, ‘ ಪ್ರಧಾನಿ ನರೇಂದ್ರ ಮೋದಿ ಅವರು ಹಿರೋಷಿಮಾ ಶಾಂತಿ ಸ್ಮಾರಕ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ತಮ್ಮ ದಿನವನ್ನು ಪ್ರಾರಂಭಿಸಿದ್ದಾರೆ. ಹಿರೋಷಿಮಾ ಸಂತ್ರಸ್ತರಿಗೆ ಪ್ರಧಾನಿ ಅವರು ಗೌರವ ಸೂಚಿಸಿದ್ದಾರೆ. ಮ್ಯೂಸಿಯಂನಲ್ಲಿರುವ ದಾಖಲಾತಿಗಳನ್ನು ವೀಕ್ಷಿಸಿದರು. ಸಂದರ್ಶಕರ ಪುಸ್ತಕದಲ್ಲಿ ಪ್ರಧಾನಿ ಅವರು ಸಹಿ ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಮೇ 19ರಿಂದ 21ರವರೆಗೆ ಜಪಾನ್‌ನ…

Read More

ಸ್ಯಾನ್ ಸಾಲ್ವಡೋರ್: ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. ‘ಕಸಕಾಟ್ಲನ್ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ಧಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಈ ಪೈಕಿ ಹಲವ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಲಿಯಾಂಜಾ ಮತ್ತು ಎಫ್ಎಎಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ರಾಜಧಾನಿ ಸ್ಯಾನ್ ಸಾಲ್ವಡಾರ್ನ ಕ್ರೀಡಾಂಗಣದ ಬಳಿ ಸಾಕಷ್ಟು ಜನರು ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Read More

ನವದೆಹಲಿ: ಮೇಕೆದಾಟು ಜಲ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕರ್ನಾಟಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಭಾಗಿ ಆಗಿದ್ದಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಆಕ್ಷೇಪಿಸಿದ್ದಾರೆ. ‘ಡಿಕೆಶಿ ಅವರು ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಭರವಸೆ ನೀಡಿದ್ದರು.ಈ ಸಂಬಂಧ ಅವರು ಪಾದಯಾತ್ರೆಯನ್ನೂ ಕೈಗೊಂಡಿದ್ದರು. ಈ ಯೋಜನೆಯು ತಮಿಳುನಾಡಿನ ಹಿತಾಸಕ್ತಿಗೆ ವಿರುದ್ಧವಾಗಿದೆ. ಹೀಗಿದ್ದರೂ ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸ್ಟಾಲಿನ್‌ ಹೋಗಿದ್ದೇಕೆ?’ ಎಂದು ಅಣ್ಣಾಮಲೈ ಪ್ರಶ್ನಿಸಿದ್ದಾರೆ. ಇದೇ ವೇಳೆ, 2000 ರು. ನೋಟು ರದ್ದತಿಗೆ ಸ್ಟಾಲಿನ್‌ ಆಕ್ಷೇಪಿಸಿದ್ದಕ್ಕೂ ಕಿಡಿಕಾರಿರುವ ಅಣ್ಣಾಮಲೈ, ‘ಬಹುಶಃ 2024ರ ಲೋಕಸಭೆ ಚುನಾವಣೆಗೆ ಈ ನೋಟು ಹಂಚಲು ಆಗುವುದಿಲ್ಲ ಎಂದು ಸ್ಟಾಲಿನ್‌ಗೆ ನಿರಾಶೆಯಾಗಿರಬೇಕು’ ಎಂದು ವ್ಯಂಗ್ಯವಾಡಿದ್ದಾರೆ. ಮಣಿಕಂಠ ಆಡಿಯೋ ತುಣುಕು ತಿರುಚಲಾಗಿದೆ: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆ ಕುಟುಂಬದ ಕೊಲೆಗೆ ಸಂಚು ಸಂಬಂಧ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್‌ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಆಡಿಯೋ ತುಣುಕನ್ನು ತಿರುಚಲಾಗಿದೆ.…

Read More

ನವದೆಹಲಿ: ಆರ್ ಬಿಐ 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಗಳ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಮತ್ತೊಂದು “ತುಘಲಕಿ ನೋಟು ಅಮಾನ್ಯೀಕರಣ ಡ್ರಾಮ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಇದು ಎರಡನೇ “ನೋಟುಬಂಡಿ” ಕಸರತ್ತು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದು ನೋಟು ಅಮಾನ್ಯೀಕರಣ ಅಲ್ಲ ಎಂದಿರುವ ಬಿಜೆಪಿ, ಮನಮೋಹನ್ ಸಿಂಗ್ ಆಳ್ವಿಕೆಯಲ್ಲಿಯೂ ಹಳೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗಿತ್ತು ಎಂದು ಕಾಂಗ್ರೆಸ್ ನೆನಪಿಸಿದೆ. 2000 ರೂಪಾಯಿ ನೋಟ್ ನಿಷೇಧ ಕ್ರಮವು “ಸಾಮಾನ್ಯ ಜನರನ್ನು ಮತ್ತೊಮ್ಮೆ ತೀವ್ರ ಸಂಕಷ್ಟಕ್ಕೆ ಸಿಲುಕಿಸಲಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “2000 ರೂಪಾಯಿ ನೋಟ್ ನಿಷೇಧ ಮತ್ತೊಂದು ವಿಚಿತ್ರ ಮತ್ತು ತುಘಲಕಿ ನೋಟು ಅಮಾನ್ಯೀ ಕರಣದ ನಾಟಕವಾಗಿದ್ದು, ಇದು ಸಾಮಾನ್ಯ ಜನರನ್ನು ಮತ್ತೊಮ್ಮೆ ತೀವ್ರ ಸಂಕಷ್ಟಕ್ಕೆ ಸಿಲುಕಿಸಲಿದೆ. ಈ ದುಷ್ಕೃತ್ಯದ ಕ್ರಮಗಳು ಮೂಲಭೂತವಾಗಿ ಜನವಿರೋಧಿ…

Read More

ನವದೆಹಲಿ: ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಕೇಂದ್ರದ “ಅಸಂವಿಧಾನಿಕ” ಸುಗ್ರೀವಾಜ್ಞೆಯನ್ನು ತಮ್ಮ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಆದರೆ ದೆಹಲಿಯ ಸಾಮಾನ್ಯ ಪ್ರಜೆಯ ಹಿತದೃಷ್ಟಿಯಿಂದ ಈ ಕ್ರಮ ಅಗತ್ಯ ಎಂದು ಪ್ರತಿಪಾದಿಸಿದ ಭಾರತೀಯ ಜನತಾ ಪಕ್ಷ, ಅಧಿಕಾರಿಗಳನ್ನು “ಬೆದರಿಸುವುದು” ಮತ್ತು ಅಧಿಕಾರ “ದುರುಪಯೋಗ” ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು “ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರ”ಕ್ಕೆ “ನೇರ ಸವಾಲು ಹಾಕಿದೆ” ಎಂದು ಹೇಳಿದ್ದಾರೆ. ಶುಕ್ರವಾರ ರಾತ್ರಿ ಹೊರಡಿಸಲಾದ ಸುಗ್ರೀವಾಜ್ಞೆಯಲ್ಲಿ, ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಸೇವೆಗಳ ವಿಷಯದ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಮೇ 11 ರ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಈ ಬೆಳವಣಿಗೆಯು ಅರವಿಂದ್ ಕೇಜ್ರಿವಾಲ್ ಆಡಳಿತ, ಕೇಂದ್ರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ತೀವ್ರ ಘರ್ಷಣೆಗೆ ವೇದಿಕೆ ಸಿದ್ಧಪಡಿಸಿದೆ.ಈ…

Read More

ನವದೆಹಲಿ: ಸಂಸತ್ ಭವನ ಉದ್ಘಾಟನೆಗೆ ಕೇವಲ ಒಂದು ವಾರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮೇ 28 ರಂದು ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿದೆ. ಭಾರತದ ಮಹಾನ್ ಪುತ್ರ ವಿನಾಯಕ ದಾಮೋದರ್ ಸಾವರ್ಕರ್ ಅವರ 140ನೇ ಜನ್ಮದಿನವಾದ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ’ ಎಂದು ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ. ವೀರ್ ಸಾವರ್ಕರ್ ಅವರು 1883ರ ಮೇ 28ರಂದು ಭಾಗೂರಿನಲ್ಲಿ ಜನಿಸಿದರು. ಹೊಸ ಸಂಸತ್ತು ಕನಿಷ್ಠ 150 ವರ್ಷಗಳ ಕಾಲ ಬಾಳಿಕೆ ಬರುವಂತೆ ವಿನ್ಯಾಸಗೊಳಿಸಲಾಗಿದೆ. ಸದ್ಯದ, ಸಂಸತ್ ಕಟ್ಟಡ 100 ವರ್ಷಗಳಿಗೆ ಬಾಳಿಕೆ ಬರುತ್ತದೆ…

Read More

ಜೈಪುರ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಪಕ್ಷದ ನಾಯಕ ಸಚಿನ್ ಪೈಲಟ್ ಭಾನುವಾರ, ಪಕ್ಷವು ಜನರಿಗಾಗಿ ಕೆಲಸ ಮಾಡುತ್ತದೆ ಮತ್ತು ನಿರೀಕ್ಷೆಗಳನ್ನು ಈಡೇರಿಸುತ್ತದೆ ಎಂದು ಹೇಳಿದ್ದಾರೆ. ಉತ್ತಮ ಬಹುಮತದೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚಿಸಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಚಾರ ಮಾಡುವಾಗ, ಬಿಜೆಪಿ ಭ್ರಷ್ಟ ಪಕ್ಷ ಎಂದು ಹೇಳಿತು ಮತ್ತು ಜನರು ಅದನ್ನು ಒಪ್ಪಿಕೊಂಡರು. ಪರಿಣಾಮವಾಗಿ ನಾವು ರಾಜ್ಯದಲ್ಲಿ ಸರ್ಕಾರವನ್ನು ರಚಿಸಿದ್ದೇವೆ ಎಂದು ಪೈಲಟ್ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು. ‘ನಾವು ಜನರಿಗಾಗಿ ಕೆಲಸ ಮಾಡುತ್ತೇವೆ ಮತ್ತು ಸಾರ್ವಜನಿಕ ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತೇವೆ ಎಂದು ನಾನು ನಂಬುತ್ತೇನೆ’ ಎಂದು ಅವರು ಹೇಳಿದರು.

Read More