ಬೆಂಗಳೂರು: ಹಿಂದಿನ ಸರ್ಕಾರಗಳ ಹಗರಣಗಳ ತನಿಖೆಗೆ ಆಯೋಗ ರಚಿಸಬೇಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರಿ ಗುತ್ತಿಗೆ ನಿರ್ವಹಣೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಏಕಾಏಕಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಒಂದು ತನಿಖಾ ಆಯೋಗ ರಚಿಸಬೇಕು. ಸಮಗ್ರ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. ಹಲವಾರು ಇಲಾಖೆಗಳಲ್ಲಿ ಭ್ರಷ್ಟಾಚಾರಗಳು ಮಿತಿಮೀರಿದ್ದವು ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬಂದಿವೆ. ನಾವು ಚುನಾವಣೆ ವೇಳೆ ಈ ಬಗ್ಗೆ ಹೆಚ್ಚು ಪ್ರಚಾರ ಮಾಡಿದ್ದೇವೆ. ನಮ್ಮ ಭರವಸೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣವೂ ಒಂದು ಎಂದು ಹೇಳಿದರು. ಇನ್ನೂ ಲಿಂಗಾಯತ ಸಮುದಾಯದಲ್ಲಿ ನಾನು ಹೆಚ್ಚು ಬಾರಿ ಗೆದ್ದಿದ್ದೇನೆ. ಜಾತಿ ಆಧಾರದ ಮೇಲೆ ಅವಕಾಶ ಕೇಳುವುದಿಲ್ಲ. ಆದರೆ, ಹಿರಿತನವನ್ನು ಆಧರಿಸಿ ತಮಗೂ ಉಪಮುಖ್ಯಮಂತ್ರಿ ಹುದ್ದೆ ಕೊಡಬೇಕು. ಆದರೆ, ಸಂಪುಟದಲ್ಲಿ ಅವಕಾಶ ಕಲ್ಪಿಸುವ ಅಥವಾ ಬಿಡುವ ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ. ಬಹುತೇಕ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡುವ ಸಾಧ್ಯತೆ ಇದೆ…
Author: Prajatv Kannada
ಬೆಂಗಳೂರು : ಕರ್ನಾಟಕದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Comgress) ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ನಂತರ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಬಗ್ಗೆ ಘೋಷಣೆ ಮಾಡಿದ್ದಾರೆ ಕಾಂಗ್ರೆಸ್ ಚುನಾವಣೆಗೂ ಮುನ್ನ ನೀಡಿದ್ದ ಗ್ಯಾರಂಟಿಗಳಿಗೆ ಈಗ ಷರತ್ತುಗಳು ಅನ್ವಯ ಎಂಬಂತೆ ನಡೆದುಕೊಳ್ಳುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಚುನಾವಣೆಗೂ ಮುನ್ನ ಕಾಂಗ್ರೆಸ್ ಭರಪೂರ ಗ್ಯಾರಂಟಿಗಳ ನೀಡಿತ್ತು. ಆದರೆ ಈಗ ಪ್ರತಿಯೊಂದಕ್ಕೂ ‘ಷರತ್ತುಗಳು ಅನ್ವಯ’ ಎಂಬಂತೆ ನಡೆದುಕೊಳ್ಳುತ್ತಿದೆ. ಜನಾಧಿಕಾರ ನೀಡಿದ್ದು ಷರತ್ತುಗಳ ಮೇಲೆ ಸರ್ಕಾರ ನಡೆಸುವುದಕ್ಕಲ್ಲ ಎಂಬುದನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅರಿತುಕೊಳ್ಳಬೇಕು ಎಂದು ಕಿಡಿಕಾರಿದೆ. ಆದರೆ ಈಗ ಪ್ರತಿಯೊಂದಕ್ಕೂ ‘ಷರತ್ತುಗಳು ಅನ್ವಯ’ ಎಂಬಂತೆ ನಡೆದುಕೊಳ್ಳುತ್ತಿದೆ. ಜನಾಧಿಕಾರ ನೀಡಿದ್ದು ಷರತ್ತುಗಳ ಮೇಲೆ ಸರ್ಕಾರ ನಡೆಸುವುದಕ್ಕಲ್ಲ ಎಂಬುದನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ…
ಬೆಂಗಳೂರು: ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ನೇಮಕ. ವಿಧಾನಸಭೆ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಹಳಿಯಾಳ ಶಾಸಕ. ಸದನದ ಸಭಾಧ್ಯಕ್ಷರ ಆಯ್ಕೆಯಾಗುವ ವರೆಗೆ ವಿಧಾನ ಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ಶಾಸಕರಾದ ಆರ್.ವಿ ದೇಶಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಟು ಸಚಿವರೂ ಪ್ರಮಾಣ ವಚನ ಸ್ವೀಕರಿಸಿದ್ದರು
ಬೆಂಗಳೂರು: ಶನಿವಾರ ಎಂಟು ಸಚಿವರ ಪ್ರಮಾಣವಚನ ಆದಾಗಿನಿಂದ ಕಾಂಗ್ರೆಸ್ ಒಳಗೊಳಗೆ ಹೊಗೆಯಾಡಲು ಶುರುವಾಗಿದೆ. ಒಬ್ಬರ ನಡುವೆ ಒಬ್ಬರು ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮ ತಮ್ಮಲ್ಲೇ ಕುದಿಯುತ್ತಿದ್ದಾರೆ ಹಾಗಾಗಿ ಈ ಬಗ್ಗೆ ಡಿಕೆಶಿ ಮಾತನಾಡಿ ಅವಕಾಶಗಳು ಎಲ್ಲರಿಗೂ ಸಿಗುತ್ತೆ, ತಾಳ್ಮೆಯಿಂದ ಇರಿ ಎಂದು ಸಚಿವ ಸ್ಥಾನಾಕಾಂಕ್ಷಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದ ಇಂದಿರಾ ಗಾಂಧಿ ಭವನದಲ್ಲಿ ನಡೆಯುತ್ತಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು. ನಿಮ್ಮ ಗುರಿ ಮುಂದಿನ ಚುನಾವಣೆ, ನೀವು ಸರಿಯಾಗಿ ಕೆಲಸ ಮಾಡಬೇಕು. ನಿಮ್ಮ ಬೂತ್ ಸಿದ್ದಪಡಿಸಿಕೊಳ್ಳಿ ಎಂದರು. ಲೋಸಭಾ ಚುನಾವಣೆಗೂ ಅಸೆಂಬ್ಲಿ ಚುನಾವಣೆಗೂ ವ್ಯತ್ಯಾಸ ಇರುತ್ತೆ ಚುನಾವಣೆಯಲ್ಲಿ ತಿಳಿದುಕೊಳ್ಳಿ ಅಂತ ಕಾರ್ಯಕರ್ತರಿಗೆ ಡಿಕೆಶಿ ಹೇಳಿದ್ದಾರೆ. ಸುಮ್ಮನೆ ಒನ್ ಮ್ಯಾನ್ ಆರ್ಮಿ ರೀತಿ ಬಂದು ಮಾತನಾಡುವದಲ್ಲ, ನೀವು ಲೋಕಲ್ ನಲ್ಲಿ ಕೆಲಸ ಮಾಡಬೇಕು. ಮುಂದೆ ಲೋಕಸಭಾ ಚುನಾವಣೆಯಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ಅವಕಾಶಗಳು ಎಲ್ಲರಿಗೂ…
ಬೆಂಗಳೂರು: ಬಿಜೆಪಿ ಇರುವವರೆಗೆ ಶಾಂತಿ,ನೆಮ್ಮದಿ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿರಾ ಗಾಂಧಿ ಭವನದಲ್ಲಿ ರಾಜೀವ್ ಗಾಂಧಿ ಅವರ 32ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ರಾಜೀವ್ ಗಾಂಧಿ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ. ಮೋದಿ ಭಯೋತ್ಪಾದನೆ ತೊಲಗಬೇಕು ಎಂದು ಹೇಳುತ್ತಾರೆ. ಮೊದಲೇ ಕಾಂಗ್ರೆಸ್ ಈ ವಿಚಾರವಾಗಿ ಹೋರಾಟ ಮಾಡಿತ್ತು. ಭಯೋತ್ಪಾದನೆಗೆ, ಖಲಿಸ್ತಾನ ಉಗ್ರರಿಗೆ ಇಂದಿರಾ ಗಾಂಧಿ ಬಲಿಯಾಗಿದ್ದಾರೆ ಎಂದಿದ್ದಾರೆ. ಬ್ರಿಟಿಷ್ ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ. ನೆಹರು ಪ್ರಜಾಪ್ರಭುತ್ವ ಬುನಾದಿ ಹಾಕಿದ್ದಾರೆ. ಆದರೆ ನರೇಂದ್ರ ಮೋದಿ ಅಂತಹ ನಾಟಕಾರ ಎಲ್ಲಿ ಸಿಗಲ್ಲ. ಮಾತಿಗೆ ಮಾತ್ರ ಸಭ್ ಕಾ ಸಥ್ ಎನ್ನುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಬಿಜೆಪಿಯವರು ಯಾರು ಕೂಡ ಸ್ವತಂತ್ರ ಹೋರಾಟದಲ್ಲಿ ಸತ್ತಿಲ್ಲ. ಎಲ್ಲಿಯವರೆಗೆ ಬಿಜೆಪಿ ಇರುವವರೆಗೆ ಶಾಂತಿ,ನೆಮ್ಮದಿ ಇರಲ್ಲ. ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ ಇಡಿ ದೇಶದಲ್ಲಿ…
ಬೆಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿಯ ಅಂಗವಾಗಿ ಭಾನುವಾರ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರ ರಾಜಧಾನಿಯ ವೀರ ಭೂಮಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ನಿಧನರಾದ ತಮ್ಮ ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ‘ಅಪ್ಪಾ, ನೀವು ಸ್ಫೂರ್ತಿಯಾಗಿ, ನೆನಪುಗಳಲ್ಲಿ ಯಾವಾಗಲೂನನ್ನೊಂದಿಗಿದ್ದೀರಿ!’ ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿ ರಾಜೀವ್ ಗಾಂಧಿ ಅವರ ವಿವಿಧ ಕ್ಷಣಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 1944 ರ ಆಗಸ್ಟ್…
ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಮುಗಿದರೂ ಒಬ್ಬರ ಮೇಲೆ ಒಬ್ಬರು ಆರೋಪ ಮಾಡೋದು ಮಾತ್ರ ಿನ್ನೂ ಕಮ್ಮಿ ಆಗಿಲ್ಲ. ಅದೇ ರೀತಿ ಭದ್ರಾವತಿ ಶಾಸಕ ಸಂಗಮೇಶ್ವರ್ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ನನಗೂ ಸಚಿವ ಸ್ಥಾನಕ್ಕೆ ಬಿಜೆಪಿ ಕೋಟಿ ಕೋಟಿ ಆಫರ್ ನೀಡಿತ್ತು, ಆದ್ರೆ ನಾನು ಹೋಗಿಲ್ಲ ಎಂದು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ‘ಬಿಜೆಪಿಯಿಂದ ನನಗೆ ಸಚಿವ ಸ್ಥಾನಕ್ಕೆ ಕೋಟಿ ಕೋಟಿ ಆಫರ್ ಬಂದಿತ್ತು, ಆದರೆ ನಾನು ಪಕ್ಷ ನಿಷ್ಟೆಯಿಂದ ಹೋಗಲಿಲ್ಲ. ನನಗೆ ಸಚಿವ ಸ್ಥಾನ ಸಿಗದಿದ್ದರೂ ಕಾಂಗ್ರೆಸ್ ನಲ್ಲೇ ಇರುತ್ತೇನೆ. ನಾನು ಹಿರಿಯ ಎಂಬುದನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವ ವಿಶ್ವಾಸದಲ್ಲಿದ್ದೇನೆ ಎಂದರು. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ನಾನು 4 ಬಾರಿ ಗೆದ್ದಿದ್ದೇನೆ ನನಗೂ ಸಚಿವ ಸ್ಥಾನ ನೀಡಿ ಎಂದು ಹೇಳಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಭದ್ರಾವತಿ ಕ್ಷೇತ್ರದ ಬಿಕೆ ಸಂಗಮೇಶ್ವರ್…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಹೆಚ್ ಡಿಕೆ, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ಇನ್ನೂ ಇಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇಂತಹ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ.
ಚೆನ್ನೈ: 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದು, ‘500 ಅನುಮಾನಗಳು, 1,000 ನಿಗೂಢಗಳು ಮತ್ತು 2,000 ಪ್ರಮಾದಗಳು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ದಯನೀಯ ವೈಫಲ್ಯವನ್ನು ಮುಚ್ಚಿಹಾಕಲು ಇದೊಂದು ತಂತ್ರ’ ಎಂದಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಸ್ಟಾಲಿನ್, ಬಿಜೆಪಿಯನ್ನು ದ್ರಾವಿಡ ಭೂದೃಶ್ಯದಿಂದ ನಿರ್ನಾಮ ಮಾಡಲಾಗಿದೆ ಎಂದು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ನೋಟು ಅಮಾನ್ಯೀಕರಣದ ಪ್ರಯತ್ನ ಇದಾಗಿದೆ ಎಂದು ಅವರು ಹೇಳಿದರು
ಬೆಂಗಳೂರು: ನಮ್ಮ ಯೋಜನೆಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರುತ್ತದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ಆದರೆ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ ಎಂದರು.ನ್ಯಾಯಯುತವಾಗಿ ಕರ್ನಾಟಕಕ್ಕೆ ಸಿಗಬೇಕಿದ್ದ 5495 ಕೋಟಿ ರೂ.ವನ್ನು ಬಿಜೆಪಿ ರಾಜ್ಯ ಸರ್ಕಾರ ಕೇಳಿಲ್ಲ. ರಾಜ್ಯದ ಸಂಸದರು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ದೇಶದ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ ದೇಶದ ಮೇಲೆ 155 ಲಕ್ಷ ಕೋಟಿ ಆಗಿದೆ. ಬೊಮ್ಮಾಯಿ ಯಡಿಯೂರಪ್ಪ ಸರ್ಕಾರದಲ್ಲಿ 4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ನಾನು ಐದು ವರ್ಷಗಳ ಕಾಲ ಸರ್ಕಾರ ನಡೆಸಿದಾಗಲೂ ಇಷ್ಟೊಂದು ಸಾಲ ಮಾಡಿರಲಿಲ್ಲ.…