Author: Prajatv Kannada

ಬೆಂಗಳೂರು: ನಮ್ಮ ಯೋಜನೆಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರುತ್ತದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ಆದರೆ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ ಎಂದರು.ನ್ಯಾಯಯುತವಾಗಿ ಕರ್ನಾಟಕಕ್ಕೆ ಸಿಗಬೇಕಿದ್ದ 5495 ಕೋಟಿ ರೂ.ವನ್ನು ಬಿಜೆಪಿ ರಾಜ್ಯ ಸರ್ಕಾರ ಕೇಳಿಲ್ಲ. ರಾಜ್ಯದ ಸಂಸದರು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ದೇಶದ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ ದೇಶದ ಮೇಲೆ 155 ಲಕ್ಷ ಕೋಟಿ ಆಗಿದೆ. ಬೊಮ್ಮಾಯಿ ಯಡಿಯೂರಪ್ಪ ಸರ್ಕಾರದಲ್ಲಿ 4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ನಾನು ಐದು ವರ್ಷಗಳ ಕಾಲ ಸರ್ಕಾರ ನಡೆಸಿದಾಗಲೂ ಇಷ್ಟೊಂದು ಸಾಲ ಮಾಡಿರಲಿಲ್ಲ.…

Read More

ಇಂದು ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ Jr NTR ನಟನೆಯ 30ನೇ ಸಿನಿಮಾದ ಹೆಸರು, ಪೋಸ್ಟರ್ ಹಾಗೂ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಟೈಟಲ್ ರಿಲೀಸ್ ಆಗುತ್ತಿದ್ದಂತೆ ಆ ಸಿನಿಮಾದ ಟೈಟಲ್ ನನ್ನದು, ನನ್ನಿಂದ ಟೈಟಲ್ ಕದ್ದಿದ್ದಾರೆ ಎಂದು ತೆಲುಗು ಖ್ಯಾತ ನಟ ಹಾಗೂ ನಿರ್ಮಾಪಕ ಬಂಡ್ ಗಣೇಶ್ ಆರೋಪಿಸಿದ್ದಾರೆ. ಜೂನಿಯರ್ ಎನ್ ಟಿ ಆರ್ ನಟನೆಯ 30ನೇ ಸಿನಿಮಾಗೆ ದೇವರ ಎಂದು ಟೈಟಲ್ ಇಡಲಾಗಿದೆ. ಈ ಟೈಟಲ್ ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಂಡ್ಲ ಗಣೇಶ್, ‘ದೇವರ’ ನನ್ನ ಟೈಟಲ್ ನಾನು ಅದನ್ನು ರಿಜಿಸ್ಟರ್ ಮಾಡಿಸಿದ್ದೆ. ಆದರೆ ಬಹಳ ಕಾಲವಾದ್ದರಿಂದ ಮರೆತು ಹೋಗಿದ್ದೆ, ಈಗ ಅವರು ಟೈಟಲ್ ಅನ್ನು ಕದ್ದಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ಜೊತೆಗೆ ಸಿಟ್ಟಿನ ಇಮೋಜಿಯನ್ನೂ ಹಂಚಿಕೊಂಡಿದ್ದರು. ಬಂಡ್ಲ ಗಣೇಶ್ ಟ್ವೀಟ್​ಗೆ ಹಲವು ಸಿಟ್ಟಿನನ ಪ್ರತಿಕ್ರಿಯೆ ನೀಡಿದ್ದರು, ಜೂ ಎನ್​ಟಿಆರ್ ಅಭಿಮಾನಿಗಳು ಬಂಡ್ಲ ಗಣೇಶ್ ವಿರುದ್ಧ ಕಮೆಂಟ್​ಗಳನ್ನು ಮಾಡಿದ್ದರು.…

Read More

ನವದೆಹಲಿ: ಶೀಘ್ರದಲ್ಲೇ 500 ನೋಟು ಹಿಂಪಡೆಯಲಾಗುವುದು ಎಂದು ನಾವು ನಿರೀಕ್ಷಿಸಬಹುದೇ ಎಂದು ಎಐಎಂಐಎಂ ರಾಷ್ಟ್ರೀಯ ಅಧ್ಯಕ್ಷ ಅಸಾ ದುದ್ದೀನ್ ಓವೈಸಿ (Asaduddin Owaisi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪ್ರಶ್ನೆ ಕೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಆರ್ಥಿಕ ತಜ್ಞ ಎಂದು ಸಂಬೋಧಿಸಿದ ಓವೈಸಿ 2000 ರೂ. ನೋಟು ಹಿಂದಕ್ಕೆ ಪಡೆದ ನಿರ್ಧಾರದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಓವೈಸಿ ಪ್ರಶ್ನೆಗಳು 1. ಮೊದಲು ನೀವು 2000 ನೋಟನ್ನು ಪರಿಚಯಿಸಿದ್ದು ಯಾಕೆ? 2. ಶೀಘ್ರದಲ್ಲೇ 500 ನೋಟು ಹಿಂಪಡೆಯಲಾಗುವುದು ಎಂದು ನಾವು ನಿರೀಕ್ಷಿಸಬಹುದೇ? 3. 70 ಕೋಟಿ ಭಾರತೀಯರ ಬಳಿ ಸ್ಮಾರ್ಟ್ ಫೋನ್ ಇಲ್ಲ, ಅವರು ಡಿಜಿಟಲ್ ಪಾವತಿ ಮಾಡುವುದು ಹೇಗೆ? 4. ಅಮಾನ್ಯೀಕರಣ 1.0 ಮತ್ತು 2.0 ಮಾಡುವಂತೆ ಮಾಡುವಲ್ಲಿ ಬಿಲ್ ಗೇಟ್ಸ್‌ ಅವರ ಪಾತ್ರವೇನು? 5. ಎನ್‌ಪಿಸಿಐಯನ್ನು ಚೀನಾದ ಹ್ಯಾಕರ್‌ಗಳು ಹ್ಯಾಕ್ ಮಾಡುತ್ತಿದ್ದಾರೆಯೇ? ಹಾಗಿದ್ದಲ್ಲಿ, ಯುದ್ಧ ಸಂಭವಿಸಿದಾಗ ಪಾವತಿ ಮಾಡುವಾಗ ಏನಾಗಬಹುದು?

Read More

ಬೆಂಗಳೂರು: ಬೆಂಗಳೂರಿನ ಹರಿಶ್ಚಂದ್ರ ಘಾಟ್​ನಲ್ಲಿ ಡಾ. ಕೆ ಭುಜಂಗ ಶೆಟ್ಟಿ ಅವರ ಅಂತ್ಯಕ್ರಿಯೆ ನೆರವೇರಿದೆ. ಇಂದು ರಾಜಾಜಿನಗರದಲ್ಲಿನ ಇಸ್ಕಾನ್ ಬಳಿಯಿರುವ ನಾರಾಯಣ ನೇತ್ರಾಲಯದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ನೇತ್ರದಾನದ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದ ಡಾಕ್ಟರ್ ಭುಜಂಗ ಶೆಟ್ಟಿ ಅವರ ಪಾರ್ಥಿವ ಶರೀರಕ್ಕೆ ಸಿಬ್ಬಂದಿ, ಅಭಿಮಾನಿಗಳು ಕುಟುಂಬಸ್ಥರು ಅಂತಿಮ ನಮನವನ್ನು ಅವರ ಕನಸಿನ ಕೂಸಾದ ನಾರಾಯಣ ನೇತ್ರಾಲಯದಲ್ಲಿ ಸಲ್ಲಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ, ಚಿತ್ರನಟ ದೊಡ್ಡಣ್ಣ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ನಂತರ ಮಧ್ಯಾಹ್ನ 3.30ರ ಸುಮಾರಿಗೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ಸಕಲ ವಿಧಿ ವಿಧಾನದೊಂದಿಗೆ ನೆರೆವೇರಿತು.

Read More

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ರಚನೆಯಾದ ನಂತರ ಸೋಮವಾರದಿಂದ (ಮೇ 22) ಮೊದಲ ವಿಧಾನಸಭೆ ಅಧಿವೇಶನ (Karnataka Assembly Session) ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು. ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

Read More

ಬೆಂಗಳೂರು: ಸಚಿವ ಸಂಪುಟ ಸಭೆ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಸರ್ಕಾರ ರಚನೆ ಮೇಲೆ ಇದು ಮೊದಲ ಸುದ್ದಿಗೋಷ್ಠಿ. ನಾನು, ಡಿಕೆ ಶಿವಕುಮಾರ್, 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಬೇರೆ ರಾಜ್ಯಗಳ ಸಿಎಂಗಳು, ವಿಪಕ್ಷ ನಾಯಕರು ಬಂದಿದ್ದರು. ಬಿಜೆಪಿಯೇತರ ಪಕ್ಷಗಳ ಅಧ್ಯಕ್ಷರು ಬಂದು ಶುಭಕೋರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್​, ಸುರ್ಜೇವಾಲ ಶುಭ ಕೋರಿದ್ದಾರೆ. ನಾವು ಸಹ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದರು. ಕಟ್ಟು ನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ​​ ವಿದ್ಯುತ್​ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ…

Read More

ಹೈದರಾಬಾದ್‌: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ಸನ್‌ರೈಸರ್ಸ್‌ ಹೈದರಾಬಾದ್ ಎದುರಿನ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಮಂಗಳವಾರ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸನ್‌ರೈಸರ್ಸ್‌ ಹೈದರಾಬಾದ್‌ ನೀಡಿದ್ದ 187 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಮೊದಲ ವಿಕೆಟ್‌ಗೆ ಫಾಫ್ ಡು ಪ್ಲೆಸಿಸ್‌(71) ಹಾಗೂ ವಿರಾಟ್ ಕೊಹ್ಲಿ(100) ಜೋಡಿ 172 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇನ್ನೂ 4 ಎಸೆತ ಬಾಕಿ ಇರುವಂತೆಯೇ 8 ವಿಕೆಟ್‌ ಭರ್ಜರಿ ಜಯ ಸಾಧಿಸಿತು. ಇದರ ಜತೆಗೆ ಅಂಕಪಟ್ಟಿಯಲ್ಲಿ 14 ಅಂಕಗಳ ಸಹಿತ ನಾಲ್ಕನೇ ಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಯಿತು. ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ,…

Read More

ಡಾ ಜಿ ಪರಮೇಶ್ ರ ಅವರು ಭಾರತೀಯ ರಾಜಕಾರಣಿ ಮತ್ತು ಕರ್ನಾಟಕದ 7 ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೊರಟಗೆರೆ ಕ್ಷೇತ್ರದಿಂದ ಐಎನ್‌ಸಿ ಪಕ್ಷದ ಅಭ್ಯರ್ಥಿಯಾಗಿ ಶಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನವೀಕರಣದ ಪ್ರಕಾರ, ಪರಮೇಶ್ವರ ಅವರು ಸಿದ್ದರಾಮಯ್ಯ  ಸರ್ಕಾರದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಗೊಂದಿದ್ದಾರೆ ಇವರು 1951 ಆಗಸ್ಟ್ 6ರಂದು ತುಮಕೂರು ತಾಲೂಕಿನ ಗೊಲ್ಲಳ್ಳಿಯಲ್ಲಿ ತಂದೆ-ಗಂಗಾಧರಯ್ಯ, ತಾಯಿ-ಗಂಗಮಾಳಮ್ಮ ಮಗನಾಗಿ ಜನಿಸಿದ್ದು. ಬಳಿಕ ಪ್ರಾರಂಭಿಕ ವಿದ್ಯಾಭ್ಯಾಸದಿಂದ ಪಿಯುಸಿವರೆಗೆ ತಮ್ಮ ಸ್ವಂತ ಊರಿನಲ್ಲಿಯೇ ಓದಿದ್ದಾರೆ. ಆನಂತರ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿಯಲ್ಲಿ ಎಂಎಸ್ಸಿ ಪದವಿ ಮುಗಿಸಿ, ನಂತರ ಅದೇ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಗಿಸುತ್ತಾರೆ. ಬಳಿಕ ಸಸ್ಯ ಶರೀರಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿ, ನಂತರ, ಪರಮೇಶ್ವರ ಅವರು ವಿದೇಶಕ್ಕೆ ಹೋದರು. ಅಲ್ಲಿ ಸಸ್ಯ ಶರೀರಶಾಸ್ತ್ರದಲ್ಲಿ ಅಡಿಲೇಡ್ ವಿಶ್ವವಿದ್ಯಾಲಯದ ವೈಟ್ ಕೃಷಿ ಸಂಶೋಧನಾ ಕೇಂದ್ರದಿಂದ ಪಿಎಚ್‌ಡಿ ಪದವಿ ಪಡೆದರು. ಡಾ ಜಿ ಪರಮೇಶ್ವರ ಅವರ ಬಗ್ಗೆ ಕುತೂಹಲಕಾರಿ ಸಂಗತಿಗಳು : ಅವರು ಚಿಕ್ಕ…

Read More

ಕೋಲಾರ: ಕಾಂಗ್ರೆಸ್ ನಾಯಕ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಪಡೆದಿದ್ದು, ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಇದರ ಬೆನ್ನಲ್ಲೇ ಕೋಲಾರ ಜಿಲ್ಲೆಯ, ಶ್ರೀನಿವಾಸಪುರ ಮೂಲದ ಅಭಿಮಾನಿಯೊಬ್ಬರು ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರಿಗೆ ಅನ್ನೋ ಜಾನಪದ ಶೈಲಿಯ ಗೀತೆಗೆ, ಸಿಎಂ ಸಿದ್ದರಾಮಯ್ಯ ಅವರ ಕುರಿತು ಸಾಹಿತ್ಯದ ಸಾಲುಗಳನ್ನು ಜೋಡಿಸಿ ಹಾಡಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಯಡಗಾನಪಲ್ಲಿ ಗ್ರಾಮದ ಹಾಡುಗಾರ ಅಕ್ಬರ್ ಸಿದ್ದು ಅವರ ಮೇಲೆ ಹಾಡನ್ನು ರಚಿಸಿದವರು, ಅಕ್ಬರ್ ಮೂಲತ: ಒಳ್ಳೆಯ ಹಾಡುಗಾರ, ರಾಜ್ಯದ ಹಲವು ಬಾಗಗಳಲ್ಲಿ ವಿವಿಧ ಸಂಗೀತ ಕಾರ್ಯಕ್ರಮಗಳ ಮೂಲಕ ಪ್ರಖ್ಯಾತಿ ಪಡೆದಿದ್ದಾರೆ. ಅದರಲ್ಲೂ ಹೆಚ್ಚಾಗಿ ಪೊಲೀಸ್ ಇಲಾಖೆಯ ಕಾರ್ಯಕ್ರಮಗಳಲ್ಲಿ ಅಕ್ಬರ್ ಅವರ ಹಾಡುಗಾರಿಕೆ ಇದ್ದೇ ಇರುತ್ತದೆ. ಅದೆಲ್ಲದಕ್ಕೂ ಮುಖ್ಯವಾಗಿ ಸಂಗೀತ ಲೋಕದ ದೈತ್ಯ ಹಾಡುಗಾರ ಪ್ರಪಂಚದಲ್ಲೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಎಸ್.ಪಿ.ಬಾಲಸುಭ್ರಮಣ್ಯಂ ಅವರ ಶಿಷ್ಯ ಅನ್ನೋದು ವಿಶೇಷ, ಅವರೊಟ್ಟಿಗೆ ಅಕ್ಬರ್ ಶಂಕರಾಭರಣಂ ಹಾಡು ಹಾಡಿದ್ದರು ಅನ್ನೋ ಕೋಲಾರ ಇಲ್ಲೆಯ ಮಟ್ಟಿಗೆ ಹೆಮ್ಮೆಯ ವಿಚಾರ. ಹೀಗೆ…

Read More

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾದ ಕೆಲಸಗಳಲ್ಲಿ ಬ್ಯೂಸಿಯಾಗಿದ್ದಾರೆ. ಸದ್ಯ ರಜನಿ ಪುತ್ರಿ ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಮ್’ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರಕ್ಕೆ ಕ್ರಿಕೆಟರ್ ಕಪಿಲ್ ದೇವ್ ಎಂಟ್ರಿಕೊಟ್ಟಿದ್ದಾರೆ. 7 ವರ್ಷಗಳ ಬಳಿಕ ಐಶ್ವರ್ಯ ರಜನಿಕಾಂತ್ ನಿರ್ದೇಶನಕ್ಕೆ ಕಮ್ ಬ್ಯಾಕ್ ಮಾಡಿದ್ದು ‘ಲಾಲ್ ಸಲಾಮ್’ ಚಿತ್ರದ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿದ್ದಾರೆ. ಇದೇ ಮೊದಲ ಭಾರಿಗೆ ಮಗಳ ಸಿನಿಮಾದಲ್ಲಿ ರಜನಿಕಾಂತ್ ಬಣ್ಣ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ಚಿತ್ರದ ತಲೈವಾ ಲುಕ್ ರಿವೀಲ್ ಮಾಡಲಾಗಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ‘ಲಾಲ್ ಸಲಾಮ್’ ಚಿತ್ರದಲ್ಲಿ ಕಪಿಲ್ ದೇವ್ ನಟಿಸಿರುವ ಬಗ್ಗೆ ರಜನಿಕಾಂತ್ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಈ ಬಗ್ಗೆ ರಜನಿಕಾಂತ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕಪಿಲ್ ದೇವ್ ಜೊತೆ ಕೆಲಸ ಮಾಡಿರೋದು ಖುಷಿ ಕೊಟ್ಟಿದೆ ಎಂದು ತಲೈವಾ ಟ್ವೀಟ್ ಮೂಲಕ ಖುಷಿ ಹಂಚಿಕೊಂಡಿದ್ದಾರೆ.

Read More