Author: Prajatv Kannada

ಹುಬ್ಬಳ್ಳಿ:  ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (Swearing-in Ceremony) ಸ್ವೀಕರಿಸಲಿದ್ದಾರೆ. ಈ ಹಿಂದೆಯೂ ಇವರು ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಿಭಾಯಿಸಿ ಯಶಸ್ವಿಯಾಗಿದ್ದರು, ಇದೀಗ ಎರಡನೇ ಭಾರಿ ಮತ್ತೆ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. Video Player 00:00 00:26 ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಂಭ್ರಮ ಮನೆಮಾಡಿದ್ದು ಕಾರ್ಯಕರ್ತರು ಡೊಳ್ಳು ಕುಣಿತ ಮೂಲಕ ಹಬ್ಬದ ವಾತಾವರಣವೇ ನಿರ್ಮಾಣ ಮಾಡಿದ್ದಾರೆ. ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾರ್ಯಕರ್ತ ಹರ್ಷಕ್ಕೆ ಕೊನೆಯೇ ಇಲ್ಲದಂತಾಗಿದ್ದು. ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಂತಸಕ್ಕೆ ಹುಬ್ಬಳಿಯ ವಾತಾವರಣ ಸಾಕ್ಷಿಯಾಗಿದೆ

Read More

ಸೂರ್ಯೋದಯ: 05.53 AM, ಸೂರ್ಯಾಸ್ತ : 06.39 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಪಾಡ್ಯ 09:30 PM ತನಕ ನಂತರ ಬಿದಿಗೆ ನಕ್ಷತ್ರ: ಇವತ್ತು ಕೃತ್ತಿಕ 08:03 AM ತನಕ ನಂತರ ರೋಹಿಣಿ ಯೋಗ: ಇವತ್ತು ಅತಿಗಂಡ05:18 PM ತನಕ ನಂತರ ಸುಕರ್ಮಾ ಕರಣ: ಇವತ್ತು ಕಿಂಸ್ತುಘ್ನ 09:22 AM ತನಕ ನಂತರ ಬವ 09:30 PM ತನಕ ನಂತರ ಬಾಲವ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00bವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 05.35 AM to 07.13 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:46 ನಿಂದ ಮ.12:38 ವರೆಗೂ ಜಾತಕ ಆಧಾರದ ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ…

Read More

ಬೆಂಗಳೂರು: ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮಾಜಿ ಸಂಸದೆ ರಮ್ಯ, ಸೇರಿದಂತೆ ಕಾಂಗ್ರೆಸ್‌ ಶಾಸಕರು, ಸಾವಿರಾರು ಜನತೆ ಆಗಮಿಸಿದ್ದರು. ನಟ, ರಾಜಕಾರಣಿ ಕಮಲ್‌ ಹಾಸನ್‌ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್‌ಗಢ ಸಿಎಂ ಭೂಪೇಶ್ ಬಫೇಲ್, ಹಿಮಾಚಲ ಪ್ರದೇಶ ಸಿಎಂ ಸುಖೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಹಾಜರಿದ್ದರು. ಇನ್ನೂ ಸಮಾರಂಭ ಮುಗಿದ ಬಳಿಕ ಕ್ಯಾಬಿನೆಟ್‌ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ ಐದು ಗ್ಯಾರಂಟಿಗಳ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.

Read More

ಬೆಂಗಳೂರು : ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.

Read More

ಬೆಂಗಳೂರು : ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister)  ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ.  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಟ ಮತ್ತು ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು ಪದಗ್ರಹಣ ಸಮಾರಂಭದಲ್ಲಿ ಸಿನಿಮಾ ನಟ…

Read More

ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೆಸರು ತೆಗೆದು ಸಿಎಂ ಸಿದ್ದರಾಮಯ್ಯ ಎಂದು ಹೆಸರು ಬದಲಾಯಿಸಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ. ವಿಧಾನ ಸೌಧದ ಮೂರನೇ ಮಹಡಿಯಲ್ಲಿ ರೂಂ ನಂಬರ್ 323ರ ಸಿಎಂ ಕಚೇರಿ ಬಳಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ.

Read More

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಿಜೆಪಿ ಮೇ 21ರಂದ ಅವಲೋಕನಾ ಸಭೆ (Review Meeting) ಕರೆದಿದೆ. ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಈ ಸಭೆ ಕರೆಯಲಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷರು, ವಿಭಾಗ ಉಸ್ತುವಾರಿಗಳು, ಸಹ ಉಸ್ತುವಾರಿಗಳು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಹ ಸಂಘಟನಾ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಸಮೀಕ್ಷೆಗಳ ವರದಿಗಳನ್ನು ಮೀರಿ ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗೆಲುವು ಸಾಧಿಸಿದ್ದು, ಬಿಜೆಪಿ ನಿರೀಕ್ಷೆ ಮಾಡದಂತಹ ಸೋಲು ಕಂಡಿದೆ. 135 + ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಮೇ 20ರಂದು ಸಿಎಂ ಡಿಸಿಎಂ ಮತ್ತು ಕೆಲ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇತ್ತ 65 ಸ್ಥಾನಗಳನ್ನು ಗೆದ್ದ ಬಿಜೆಪಿ ಆತ್ಮಾವಲಕೋನ ನಡೆಸಲು ಮುಂದಾಗಿದೆ. ಈಗಾಗಲೇ ಸೋಲಿನ ಕೆಲವು ನಿಖರ ಕಾರಣಗಳನ್ನು ಬಿಜೆಪಿ ಹುಡುಕಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ…

Read More

ಬೆಂಗಳೂರು: ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ ಕೆ.ಸುಧಾಕರ್ (K Sudhakar)​​ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದು H​. ವಿಶ್ವನಾಥ್​ ಹೇಳಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ ಎಂಬ ಮಾಜಿ ಸಚಿವ ಸುಧಾಕರ್​ ಆರೋಪಕ್ಕೆ ಅವರು​​ ತಿರುಗೇಟು ನೀಡಿದರು. ನಾನು ಬಿಜೆಪಿ, ಕಾಂಗ್ರೆಸ್ ಅಂತಲ್ಲ ಜನರ ಮಧ್ಯೆ ಇರೋನು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ​ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು. ಸುಧಾಕರ್ ಆರೋಪ ಸತ್ಯಕ್ಕೆ ದೂರವಾದದ್ದು. ಚುನಾವಣೆ ಸಂದರ್ಭದಲ್ಲಿ ಹೇಳಿದ್ದರೆ ಗೌರವ ಇರುತ್ತಿತ್ತು. ಈಗ ಏನೋ ಸತ್ಯ ಹೇಳುತ್ತಿದ್ದೇನೆ ಅಂತಾ ಪೋಸು ಕೊಡ್ತಿದ್ದಾರೆ. ಸೋತು ಸುಣ್ಣ ಆದ ಮೇಲೆ ಈ ರೀತಿ ಹೇಳುತ್ತಿರುವುದು ನಗೆ ಪಾಟಲು. ಮಾಜಿ ಸಚಿವ ಸುಧಾಕರ್​ ಜೊತೆ ಬಿಜೆಪಿ ಸರ್ವನಾಶದತ್ತ ಬಂದಿದೆ. ಡಾ.ಕೆ.ಸುಧಾಕರ್​​ರನ್ನು ದುಡ್ಡು ಇಲ್ಲದ ಯುವಕ ಸೋಲಿಸಿದ್ದಾನೆ ಎಂದು ಕಿಡಿಕಾರಿದ್ದಾರೆ.…

Read More

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕೆಲವೇ ಕ್ಷಣಗಳಲ್ಲಿ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಮೊದಲ ಬಾರಿಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Read More

ಗೆಲುವಿಗೆ ನೂರಾರು ಅಪ್ಪಂದಿರು.. ಸೋಲು ಅನಾಥ ಎಂಬ ಮಾತಿದೆ. ಈ ಮಾತನ್ನು ಜೆಡಿಎಸ್ ಪಕ್ಷಕ್ಕೆ ಅನ್ವಯಿಸಬಹುದೇ? ಸದ್ಯದ ರಾಜಕೀಯ ಸ್ಥಿತಿಗತಿ ಹಾಗೂ ‘ತೆನೆ’ ಪಕ್ಷದ ಭವಿಷ್ಯವೇನು ಎಂಬ ಪ್ರಶ್ನೆ ಎದ್ದಾಗ ಹಲವು ಆಯಾಮಗಳಲ್ಲಿ ಪ್ರಶ್ನೆಗಳು ಎದುರಾಗುತ್ತವೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ವರ್ಷ ಮುನ್ನವೇ ಹಲವು ಯಾತ್ರೆಗಳನ್ನು ಸಂಘಟಿಸಿ ಹುರುಪಿನಿಂದ ಮುನ್ನುಗ್ಗಿದ್ದ ಜೆಡಿಎಸ್‌ಗೆ ಚುನಾವಣಾ ಫಲಿತಾಂಶ ಮರ್ಮಾಘಾತವನ್ನೇ ನೀಡಿದೆ. ಹಳೇ ಮೈಸೂರಿನ ಜೆಡಿಎಸ್ ಕೋಟೆ ‘ಕೈ’ ವಶ, ಮುಸ್ಲಿಂ ವೋಟುಗಳನ್ನು ಕಳೆದುಕೊಂಡಿದ್ದು, ನಿಖಿಲ್, ಸಾರಾ ಮಹೇಶ್‌ರಂಥಾ ನಾಯಕರ ಸೋಲು.. ಹೀಗೆ ಹಲವು ಕಾರಣಗಳು ಪಕ್ಷದ ನೈತಿಕ ಸ್ಥೈರ್ಯ ಉಡುಗಿಸುವಂತೆ ಮಾಡಿಬಿಟ್ಟಿವೆ. ಆದ್ರೆ, ಕಾರ್ಮೋಡದಂಚಿನ ಬೆಳ್ಳಿ ರೇಖೆ ಎಂಬಂತೆ ಜೆಡಿಎಸ್‌ ಪಾಲಿಗೆ ಹಲವು ಆಶಾಕಿರಣಗಳೂ ಇವೆ. ಸ್ವರೂಪ್, ಶರಣ ಗೌಡ, ಹರೀಶ್ ಗೌಡರಂಥಾ ಯುವ ಉತ್ಸಾಹಿಗಳ ಗೆಲುವು ಪಕ್ಷಕ್ಕೆ ಹೊಸ ಭರವಸೆ ಮೂಡಿಸಿದೆ. ಇವೆಲ್ಲದರ ನಡುವೆ, ಮುಂದಿನ 6 ತಿಂಗಳಲ್ಲಿ ರಾಜಕೀಯ ಚಿತ್ರಣ ಬದಲಾಗಬಹುದು ಅನ್ನೋ ಎಚ್ಡಿಕೆ ನಿರೀಕ್ಷೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ!…

Read More