ಬೆಂಗಳೂರು ;- ವಿಪಕ್ಷ ನಾಯಕನ ಆಯ್ಕೆ ಕಸರತ್ತು ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದಕ್ಕಾಗಿಯೇ ಕೇಂದ್ರದ ಇಬ್ಬರು ವೀಕ್ಷಕರು ಆಗಮಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿ ಭೇಟಿ ವೇಳೆಯಲ್ಲಿ ಕರ್ನಾಟಕದ ವಿರೋಧ ಪಕ್ಷದ ನಾಯಕನ ಘೋಷಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ನಿನ್ನೆ ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕವೂ ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಒಮ್ಮತ ಮೂಡಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ನಡೆದ ಸರಣಿ ಸಭೆಗಳ ಬಳಿಕವು ಯಾವುದೇ ಘೋಷಣೆಯಾಗಿಲ್ಲ. ಕರ್ನಾಟಕದಲ್ಲಿ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಭಾಷಣ ಮಾಡಲಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕನೇ ಇಲ್ಲದೇ ಪ್ರತಿಪಕ್ಷ ಬಿಜೆಪಿ ಕಲಾಪವನ್ನು ಎದುರಿಸಲಿದೆ. ಸಂಜೆಯ ವೇಳೆಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
Author: Prajatv Kannada
ಬೆಂಗಳೂರು ;– ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ವಿಧಾನಸೌಧದಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮೂವರಿಗೂ ಪ್ರಮಾಣವಚನ ಬೋಧಿಸಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದರೂ ಬಳಿಕ ವಿಧಾನ ಪರಿಷತ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಶೆಟ್ಟರ್ ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯದ ಎರಡನೇ ಆರಂಭಿಸುತ್ತಿದ್ದಾರೆ.
ಬೆಂಗಳೂರು ;- ರಾಜಧಾನಿ ಬೆಂಗಳೂರಿನಾದ್ಯಂತ ಇಂದು ಗುರುಪೂರ್ಣಿಮೆಯ ಸಂಭ್ರಮ ಮನೆ ಮಾಡಿದೆ. ಹೀಗಾಗಿ ನಗರದ ಗಣೇಶ ಹಾಗೂ ಸಾಯಿಬಾಬ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಬೆಳ್ಳಗ್ಗೆಯಿಂದಲೇ ವಿಶೇಷ ಪೂಜೆ ಹಾಗೂ ಅಲಂಕಾರ ಆರಂಭವಾಗಿದ್ದು, ನಗರದ ಮಲ್ಲೇಶ್ವರಂ ನಾ ಸಾಯಿಬಾಬ ದೇವಸ್ಥಾನಲ್ಲಿ ವಿಶೇಷ ಪೂಜೆ ನೆರವೇರಿದೆ. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು, ಬರುವ ಭಕ್ತದಿಗಳಿಗೆ ಪ್ರಸಾಧ ವಿತರರಣೆ ಮಾಡಲಾಗುತ್ತದೆ. ಇಂದು ಸಂಜೆಯವರೆಗೂ ಭಕ್ತದಿಗಳಿಗೆ ದರ್ಶನ ಸಿಗಲಿದ್ದು, ಪ್ರಸಾದ ವ್ಯವಸ್ಥೆ ಕೂಡ ಇರಲಿದೆ.
ಇತ್ತೀಚೆಗಷ್ಟೇ ಹಾಂಗ್ ಕಾಂಗ್ ನಲ್ಲಿ ಮುಕ್ತಾಯಗೊಂಡ ಮಹಿಳಾ ಉದಯೋನ್ಮುಖ ಏಷ್ಯಾ ಕಪ್ ಟೂರ್ನಿಯಲ್ಲಿ ತಮ್ಮ ಬೌಲಿಂಗ್ ಮೋಡಿ ಪ್ರದರ್ಶಿಸಿ 9 ವಿಕೆಟ್ ಪಡೆದು ಟೂರ್ನಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಶ್ರೇಯಾಂಕ, ಬಾಂಗ್ಲಾದೇಶ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3 ವಿಕೆಟ್ ಪಡೆದು ಟೀಮ್ ಇಂಡಿಯಾ 31 ರನ್ ಗಳಿಂದ ಗೆಲುವು ಸಾಧಿಸಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಪರ ಆಡಿ ತಮ್ಮ ಸ್ಪಿನ್ ಮೋಡಿಯಿಂದ 9.84 ರ ಸರಾಸರಿಯಲ್ಲಿ 7 ಪಂದ್ಯಗಳಿಂದ 6 ವಿಕೆಟ್ ಪಡೆದು ಗಮನ ಸೆಳೆದ ಕನ್ನಡತಿ ಶ್ರೇಯಾಂಕ ಪಾಟೀಲ್, ತಮ್ಮ ಈ ಪ್ರದರ್ಶನದಿಂದಲೇ ಕೆರಿಬಿಯನ್ ಪ್ರೀಮಿಯರ್ ಲೀಗ್ ನಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಪರ ಆಡಲು ಒಪ್ಪಂದ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಆಡುವ ಮುನ್ನವೇ ವಿದೇಶಿ ಲೀಗ್ ನಲ್ಲಿ ಆಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ದಾಖಲೆಗೆ…
ಕರಾಚಿ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಆಡಲು ಪಾಕಿಸ್ತಾನ ತಂಡಕ್ಕೆ ಅಲ್ಲಿನ ಸರ್ಕಾರದಿಂದ ಇನ್ನಷ್ಟೇ ಅನುಮತಿ ಸಿಗಬೇಕಿದ್ದು, ಅದಕ್ಕೂ ಮುನ್ನ ಪಾಕ್ ನಿಯೋಗ ಭಾರತದಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ಆಗಮಿಸಲಿದೆ. ಪಾಕ್ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ ಶೀಘ್ರವೇ ನೂತನ ಮುಖ್ಯಸ್ಥರ ನೇಮಕವಾಗಲಿದ್ದು, ಬಳಿಕ ಪಿಸಿಬಿ ಪ್ರತಿನಿಧಿಯನ್ನೊಳಗೊಂಡ ಭದ್ರತಾ ಅಧಿಕಾರಿಗಳ ನಿಯೋಗ ಭಾರತಕ್ಕೆ ಆಗಮಿಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಿದೆ. ಪಾಕ್‌ನ ಪಂದ್ಯ ನಡೆಯಲಿರುವ ಬೆಂಗಳೂರು, ಚೆನ್ನೈ, ಅಹಮದಾಬಾದ್, ಕೋಲ್ಕತಾ, ಹೈದರಾಬಾದ್ ಕ್ರೀಡಾಂಗಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಅವಲೋಕಿಸಿ, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಬಳಿಕ ಸರ್ಕಾರ ವಿಶ್ವಕಪ್‌ಗೆ ಅನುಮತಿ ಬಗ್ಗೆ ನಿರ್ಧರಿಸಲಿದೆ. ಪಾಕ್ ಮನವಿ ತಿರಸ್ಕೃತ ಟೂರ್ನಿಯ ತನ್ನ ಕೆಲ ಪಂದ್ಯಗಳ ಸ್ಥಳ ಬದಲಾವಣೆ ಮಾಡುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಾಡಿದ್ದ ಮನವಿಯನ್ನು ಐಸಿಸಿ, ಬಿಸಿಸಿಐ ತಿರಸ್ಕರಿಸಿದೆ. ಅಹಮದಾಬಾದ್ ಜೊತೆಗೆ ಇತರ 4 ಕ್ರೀಡಾಂಗಣಗಳಲ್ಲೂ ಪಾಕ್ ತನ್ನ ಪಂದ್ಯಗಳನ್ನಾಡಲಿದೆ. ಈ ಪೈಕಿ ಆಸ್ಟ್ರೇಲಿಯಾ(ಅ.20) ಹಾಗೂ ನ್ಯೂಜಿಲೆಂಡ್(ನ.04) ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಡಲಿದ್ದು, ಕೋಲ್ಕತಾ, ಹೈದರಾಬಾದ್, ಚೆನ್ನೈನಲ್ಲೂ ತಲಾ 2…
ಸದ್ಯದಲ್ಲೇ ಹಸೆಮಣೆ ಏರಲಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಯುವ ರಾಜಕಾರಣಿ ರಾಘವ್ ಚಡ್ಡಾಇದೀಗ ಅಮೃತ ಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್ ಮೆಂಟ್ ಮಾಡಿಕೊಂಡಿರುವ ಜೋಡಿ ಆ ಬೆನ್ನಲ್ಲೆ ಕೈ ಕೈ ಹಿಡಿದು ಸುತ್ತಾಡುತ್ತಿದ್ದು ಇದೀಗ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜಕಾರಣಿ ರಾಘವ್ ಚಡ್ಡಾ ಜೊತೆ ಪರಿಣಿತಿ ಚೋಪ್ರಾ ಪ್ರೀತಿಸಿ ಇದೀಗ ಹೊಸ ಕಾಲಿಡಲು ಸಜ್ಜಾಗುತ್ತಿದ್ದಾರೆ. ಮೇ 13ರಂದು ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಸದ್ಯದಲ್ಲೇ ಹಸೆಮಣೆಗೆ ಏರಲಿದ್ದಾರೆ. ಈ ಬೆನ್ನಲ್ಲೇ ಅಮೃತಸರ ಗೋಲ್ಡನ್ ಟೆಂಪಲ್ ಭೇಟಿ ನೀಡಿದ್ದು ಈ ವೇಳೆ ದೇವಸ್ಥಾನದಲ್ಲಿ ಪಾತ್ರೆ ತೊಳೆದು ಸೇವೆ ಸಲ್ಲಿಸಿದ್ದಾರೆ. ಮದುವೆಗೂ ಮೊದಲು ಪರಿಣಿತಿ ಮತ್ತು ರಾಘವ್ ಚಡ್ಡಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. ಸದ್ಯ ವೈರಲ್ ಆಗಿರುವ ಹೊಸ ವಿಡಿಯೋದಲ್ಲಿ ಪರಿಣೀತಿ ಮತ್ತು ರಾಘವ್ ಇಬ್ಬರೂ ಪಾತ್ರೆಗಳನ್ನು ತೊಳೆಯುತ್ತಿದ್ದಾರೆ. ದೇವಸ್ಥಾನದಲ್ಲಿ ಪಾತ್ರೆ ತೊಳೆಯುವ…
‘ಅಲ ವೈಕುಂಠಪುರಮುಲೋ’ ಸಿನಿಮಾದ ಮೂಲಕ ಹಿಟ್ ಜೋಡಿ ಎಂದೇ ಹೆಸರು ಮಾಡಿದ್ದ ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ತ್ರಿವಿಕ್ರಮ್ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಶುಭ ಸುದ್ದಿಯನ್ನು ಗುರು ಪೂರ್ಣಿಮೆ ದಿನದಂದು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನಟ ಅಲ್ಲು ಅರ್ಜುನ್ ಸದ್ಯ ಪುಷ್ಪ-2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕಂಪ್ಲೀಟ್ ಆದ ಬಳಿಕ ತ್ರಿವಿಕ್ರಮ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ. ಬಾಲಿವುಡ್ ನಟ ರಣವೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ ಈ ಚಿತ್ರ ಮೂಡಿಬರಲಿದೆ. ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಸಿನಿಮಾಗಳಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳನ್ನು ನೀಡಿರುವ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಇದೀಗ ನಾಲ್ಕನೇ ಭಾರಿಗೆ ಒಂದಾಗುತ್ತಿದ್ದಾರೆ. ಬಹಳ ದಿನಗಳಿಂದಲೂ ಅಲ್ಲು-ತ್ರಿವಿಕ್ರಮ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ…
ಮಣಿಪುರದ ಜನಾಂಗೀಯ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕಿಡಿಕಾರಿದ್ದಾರೆ. ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತಿ ಸರಳ, ಕಾಮನ್ ಸೆನ್ಸ್ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು? ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್ 2023 ರಲ್ಲಿ ಮಣಿಪುರ, ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ. ಇತಿಹಾಸಕ್ಕೆ ಮರೆವಿಲ್ಲ, ನೆನಪಿರಲಿ” ಎಂದು ಎಂದಿದ್ದಾರೆ. ಮಣಿಪುರದ ಸಿಎಂ ಬಿರೇನ್ ಸಿಂಗ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೇ, ಬಿರೇನ್ ಸಿಂಗ್ ಸ್ವತಃ ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳಿಂದ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದರು. ಬಳಿಕ ಆ ನಿರ್ಧಾರವನ್ನು ಅವರು ಹಿಂಪಡೆದಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮಣಿಪುರಕ್ಕೆ…
ಸ್ವಚ್ಛತೆಗಾಗಿ, ಪಾನೀಯಕ್ಕಾಗಿ, ಔಷಧೀಯ ಪ್ರಯೋಜನಕ್ಕಾಗಿ ಹಾಗೂ ಸೌಂದರ್ಯ ಕ್ಕಾಗಿ ಬಳಕೆಯಾಗುವ ನಿಂಬೆ ಹಣ್ಣನ್ನು ಫ್ರಿಜ್ ನಲ್ಲಿ ಇಡುವಾಗ ಹೀಗೆ ಮಾಡಿ. ಅಂಗಡಿಯಿಂದ ತಂದ ನಿಂಬೆಹಣ್ಣನ್ನು ಸ್ವಚ್ಛವಾಗಿ ತೊಳೆದು ತೇವಾಂಶ ಹೋಗುವಂತೆ ಒರೆಸಿ. ಬಳಿಕ ಗಾಳಿಯಾಡದ ಕವರ್ ನಲ್ಲಿ ಹಾಕಿ ಫ್ರಿಜ್ ನಲ್ಲಿಡಿ. ಫ್ರೀಜರ್ ನಲ್ಲಿಟ್ಟರೆ ಬಹುಕಾಲ ತಾಜಾ ಆಗಿ ಹಾಳಾಗದೆ ಉಳಿಯುತ್ತದೆ. ನಿಂಬೆ ಹೋಳುಗಳನ್ನು ತೆಳುವಾಗಿ ಕತ್ತರಿಸಿದ್ದು, ಇವುಗಳನ್ನೇ ಸಂಗ್ರಹಿಸಿ ಇಡಬೇಕಾದರೆ ಗಾಳಿಯಾಡದ ಪ್ಲಾಸ್ಟಿಕ್ ಕವರ್ ನಲ್ಲೇ ಹಾಕಿಡಬಹುದು. ನಿಂಬೆ ಹಿಂಡಿದ ಬಳಿಕ ಉಳಿಯುವ ಭಾಗವನ್ನು ಸಣ್ಣ ಹೋಳುಗಳಾಗಿ ಕತ್ತರಿಸಿ ಉಪ್ಪು ಹಾಕಿಟ್ಟರೆ ಬೇಕಿದ್ದಾಗ ಉಪ್ಪಿನಕಾಯಿಯಾಗಿ ಮಾಡಿಕೊಳ್ಳಬಹುದು. ನಿಂಬೆ ಹಿಂಡಿದ ಬಳಿಕ ಉಳಿಯುವ ಸಿಪ್ಪೆಯನ್ನು ಕಂಕುಳ ಅಡಿ ಭಾಗ ಕಪ್ಪಾಗಿದ್ದರೂ ಇದನ್ನು ಉಜ್ಜಬಹುದು. ದೇವರಿಗೆ ಬಳಸುವ ಹಿತ್ತಾಳೆ ಪಾತ್ರೆಗಳನ್ನು ಪಳ ಪಳನೆ ಹೊಳೆಯುವಂತೆ ಮಾಡಬೇಕಿದ್ದರೆ ನಿಂಬೆಸಿಪ್ಪೆಯಿಂದ ತಿಕ್ಕಿ ನೋಡಿ.
ಇಂಫಾಲ: ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಖೋಯ್ಜುಮಂತಬಿ ಗ್ರಾಮದಲ್ಲಿ ಹಿಂಸಾಚಾರನ ನಡೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಕೂಡಾ ಗ್ರಾಮದಲ್ಲಿ ಸ್ವಯಂಸೇವಕರಾಗಿದ್ದು, ತಾತ್ಕಾಲಿಕ ಬಂಕರ್ ಪ್ರದೇಶವನ್ನು ಕಾಪಾಡುತ್ತಿದ್ದರು ಎನ್ನಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಮೂವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದು, ಆ ಪೈಕಿ ಗಾಯಗೊಂಡಿರುವ ದಂಪತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಉಳಿದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. . ಈ ನಡುವೆ ಕುಕಿ ಸಮುದಾಯದ ಸಂಘಟನೆಗಳಾದ ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಹಾಗೂ ಕುಕಿ ನ್ಯಾಷನಲ್ ಆರ್ಗನೈಸೇಶನ್ 2 ತಿಂಗಳ ಬಳಿಕ ಮಣಿಪುರದ ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 2 ರಲ್ಲಿ ರಸ್ತೆ ತಡೆಯನ್ನು ಹಿಂತೆಗೆದುಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನವಿ…