ಬೆಂಗಳೂರು: ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟ (Cabinet) ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ಇದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದಾರೆ. ಕರ್ನಾಟಕ ಸಿಎಂ ಗಾದಿಗಾಗಿ ಕಳೆದ 4-5 ದಿನಗಳಿಂದ ದೆಹಲಿಯಲ್ಲಿ ಭಾರೀ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಎಷ್ಟು ಮನವೊಲಿಸಿದರೂ ಬಗ್ಗಿರಲಿಲ್ಲ. ಕೆಲ ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು. ಅತ್ತ ಸಿದ್ದರಾಮಯ್ಯ ಸಿಎಂ ಎಂಬುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್ (Dr G Parameshwar) ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆ ಕುರಿತು ಮಾಹಿತಿ ನೀಡಿದರು. ಇದೇ ಮೇ 20 ರಂದು ಸಿದ್ದರಾಮಯ್ಯ ಅವರು…
Author: Prajatv Kannada
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಶುಭಹಾರೈಸಿದ್ದಾರೆ. ಟ್ವೀಟ್ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆಶಿವಕುಮಾರ್‌ರವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಆಶಿಸಿದ್ದಾರೆ. ಕರ್ನಾಟಕ ಸಿಎಂ ಫೈಟ್ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರಿಂದಲೇ ಘೋಷಣೆ ಮಾಡಿಸಲಾಯಿತು.
ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ. ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ (Bengaluru) 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 592 ಅಬ್ಸವರ್ಸ್‌ಗಳು, 1,184 ವಿಶೇಷ ಸ್ಕ್ವಾಡ್ ಸಿಬ್ಬಂದಿ, 592 ಕಸ್ಟೋಡಿಯನ್, 10,900 ಇನ್ವಿಜಿಲೇಟರ್‌ಗಳು ಸೇರಿ 23,050 ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದಾರೆ. ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರು ಪರೀಕ್ಷಾ ಅಭ್ಯರ್ಥಿಗಳಿಗೆ ಟ್ರಾಫಿಕ್ ಆತಂಕ: ಸಿಇಟಿ ಪರೀಕ್ಷೆ ನಡೆಯಲಿರುವ ಮೊದಲ ದಿನ ಶನಿವಾರದಂದೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.…
ಬೆಂಗಳೂರು: ಸಿದ್ದರಾಮಯ್ಯ (Siddaramaiah)ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು, ನಾಳೆ ಅಂದರೆ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ಸರ್ಕಸ್ ಬಳಿಕ ಕೈ ಪಾಳಯದಲ್ಲಿ ಸಚಿವ ಸಂಪುಟ(Siddu Cabinet) ಕಸರತ್ತು ಶುರುವಾಗಿದ್ದು, ಆಯ್ಕೆ ಮಾಡಿರುವ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿರುವ ಹಲವು ಶಾಸಕರು ಇದೀಗ ನೂತನ ಸಚಿವ ಸಂಪುಟ ಸೇರುವ ಆಶಯ ವ್ಯಕ್ತಪಡಿಸಿದ್ದಾರೆ. ಕೆಲವರು ತಮ್ಮ ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್ ಕಲಿಗಳಿಗೆ ಪಟ್ಟಾಭಿಷೇಕ ನಡೆಯಲಿದೆ. ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ 2ನೇ ಬಾರಿಗೆ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ಇದೆ. ಆದ್ರೆ ಎಷ್ಟು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನುವುದೇ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಂದು ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸಿಎಲ್‌ಪಿ ಸಭೆ ನಡೆಸಿದ ಬಳಿಕ ರಾಜಭವನಕ್ಕೆ ‘ಕೈ’ ನಾಯಕರು ತೆರಳಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಇವರಿಗೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು. ಕರ್ನಾಟಕ ಸಿಎಂ ಗಾದಿಗಾಗಿ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಎಷ್ಟು ಮನವೊಲಿಸಿದರೂ ಬಗ್ಗಿರಲಿಲ್ಲ. ಕೆಲ ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು. ಅತ್ತ ಸಿದ್ದರಾಮಯ್ಯ ಸಿಎಂ ಎಂಬುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್…
ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಖಚಿತವಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟಿನ್ಗಳಿಗೆ ಮರುಜೀವ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.’ ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿಗೆ ಮರುಜೀವ ನೀಡಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಕ್ಯಾಂಟಿನ್ಗಳನ್ನು ಮುಚ್ಚಿಸುವ ಹುನ್ನರ ಮಾಡಲಾಗಿತ್ತು. ಆದರೆ, ಅದನ್ನು ತಡೆಯಲಾಗಿದೆ. ಆದಾಗ್ಯೂ ಕ್ಯಾಂಟೀನ್ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ…
ಬೆಂಗಳೂರು: ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾದ ಅಪರಾಧಿಗೆ 9 ವರ್ಷದಿಂದ ಪ್ರೀತಿಸುತ್ತಿರುವ ಯುವತಿಯನ್ನು ವರಿಸಲು 15 ದಿನ ಪೆರೋಲ್ ನೀಡಿದ್ದ ಹೈಕೋರ್ಟ್, ಇದೀಗ ಜ್ಯೋತಿಷಿಗಳ ಸಲಹೆ ಮೇರೆಗೆ ಹಿಂದೂ ಸಂಪ್ರದಾಯದಂತೆ ಮದುವೆ ನೆರವೇರಿಸಲು ಪೋಷಕರು ನಿಶ್ಚಯಿಸಿದ ಹಿನ್ನೆಲೆಯಲ್ಲಿ ಮದುವೆ, ಮಧುಚಂದ್ರ ಮತ್ತು ಇತರೆ ಧಾರ್ಮಿಕ ಆಚರಣೆ ಮಾಡಲು 60 ದಿನಗಳ ಕಾಲ ಪೆರೋಲ್ ಅವಧಿ ವಿಸ್ತರಿಸಿದೆ. ಪೆರೋಲ್ ವಿಸ್ತರಣೆ ಕೋರಿ ನವವಿವಾಹಿತ ಕೈದಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಪ್ರಕರಣದಲ್ಲಿ ಏ.5ರಿಂದ ಏ.20ರ ಸಂಜೆ 6 ಗಂಟೆಯವರೆಗೆ ಅರ್ಜಿದಾರನಿಗೆ ಪೆರೋಲ್ ನೀಡಲಾಗಿತ್ತು. ಆತ, ವಿವಾಹ ನೋಂದಣಿ ಕಚೇರಿಯಲ್ಲಿ ಏ.6ರಂದೇ ವಿವಾಹ ನೋಂದಾಯಿಸಿ ಏ.11ರಂದು ವಿವಾಹವಾಗಿದ್ದನು. ಸದ್ಯ 60 ದಿನ ಪೆರೋಲ್ ವಿಸ್ತರಣೆಗೆ ಕೋರಿ, ಮಧ್ಯಂತರ ಅರ್ಜಿ ಸಲ್ಲಿಸಿದ್ದ. ಅದರಲ್ಲಿ ಉಲ್ಲೇಖಿಸಿದ ಅಂಶಗಳನ್ನು ಪರಿಶೀಲಿಸಿದ ಹೈಕೋರ್ಟ್ ಪೆರೋಲ್ ಅವಧಿಯನ್ನು ವಿಸ್ತರಿಸಿ ಅದೇಶಿಸಿದೆ. ಅಲ್ಲದೆ, ಪುನಃ ಇದೇ ರೀತಿಯ ಕಾರಣ ನೀಡಿ…
ಬೆಂಗಳೂರು: ಕರ್ನಾಟಕ ಸಿಎಂ ಫೈಟ್ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರಿಂದಲೇ ಘೋಷಣೆ ಮಾಡಿಸಲಾಯಿತು. ಕರ್ನಾಟಕ ಸಿಎಂ ಸಿದ್ದರಾಮಯ್ಯ ಎಂದು ಡಿಕೆಶಿ ಘೋಷಿಸಿ, ನಂತರ ಸಿದ್ದು ಕೈ ಕುಲುಕಿ ವಿಶ್ ಮಾಡಿದರು. ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸಿದರು. ಆ ಮೂಲಕ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ರವಾನೆ ಮಾಡಿದರು. ಇದಕ್ಕೂ ಮುನ್ನ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಕ್ಕ ಪಕ್ಕ ಕುಳಿತಿರಲಿಲ್ಲ. ಸಭೆಯಲ್ಲಿ ಮೊದಲು ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸರ್ಕಾರ ತರುವಲ್ಲಿ ಟೀಂ ಕಾಂಗ್ರೆಸ್ ಪಾತ್ರ ಬಹಳ ದೊಡ್ಡದು. ಸಿದ್ದರಾಮಯ್ಯ, ಡಿಕೆಶಿ ಕೂಡ ಸಮರ್ಥವಾಗಿ ಮುನ್ನಡೆಸಿದ್ದಾರೆ. ಇದೊಂದು ದೊಡ್ಡ ಮಟ್ಟದ ವಿಜಯ. ಕರ್ನಾಟಕದ ಜನ, ನಮ್ಮ ಕಾರ್ಯಕರ್ತರನ್ನ ಮರೆಯದಿರಿ. ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಎಂದು ಹೈಕಮಾಂಡ್ ತೀರ್ಮಾನ ಆಗಿದೆ. ಸರ್ವಾನುಮತದಿಂದ ಆಯ್ಕೆ ಮಾಡೋಣ ಎಂದು…
ವಟ ಸಾವಿತ್ರಿ ವ್ರತ,ಶನಿ ಜಯಂತಿ,ಅಮವಾಸೆ ಸೂರ್ಯೋದಯ: 05.54 AM, ಸೂರ್ಯಾಸ್ತ : 06.39 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ವೈಶಾಖ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಅಮವಾಸ್ಯೆ 09:22 PM ತನಕ ನಂತರ ಪಾಡ್ಯ ನಕ್ಷತ್ರ: ಇವತ್ತು ಭರಣಿ 07:29 AM ತನಕ ನಂತರ ಕೃತ್ತಿಕ ಯೋಗ: ಇವತ್ತು ಶೋಭಾನ 06:17 PM ತನಕ ನಂತರ ಅತಿಗಂಡ ಕರಣ: ಇವತ್ತು ಚತುಷ್ಪಾದ 09:29 AM ತನಕ ನಂತರ ನಾಗವ 09:22 PM ತನಕ ನಂತರ ಕಿಂಸ್ತುಘ್ನ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 02.40 AM to 04.16 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:46 ನಿಂದ ಮ.12:38 ವರೆಗೂ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ…
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections 2023) ಹಿನ್ನೆಲೆ ಜಾರಿಯಾಗಿದ್ದ ನೀತಿ ಸಂಹಿತೆ(Code of Conduct) ಮುಗಿಯುತ್ತಿದ್ದಂತೆ ಅಧಿಕಾರಿಗಳಿಗೆ ಬಿಬಿಎಂಪಿ(BBMP) ಚಾಟಿ ಬೀಸಿದೆ. ಹೀಗಾಗಿ ಈಗ ಅಕ್ರಮವಾಗಿ ಎ ಖಾತ ಮಾಡಿ ಕೊಟ್ಟ ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಮಾರ್ಚ್ 29ರಂದು ಜಾರಿಯಾದ ನೀತಿ ಸಂಹಿತೆ ಮೇ 16ರಂದು ಮುಗಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ತಮ್ಮ ರೆಗ್ಯುಲರ್ ಕೆಲಸಗಳಿಗೆ ಮರಳಿದ್ದಾರೆ. ಸದ್ಯ ಅಕ್ರಮವಾಗಿ ಎ ಖಾತಗಳ ವಿಚಾರದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್(Tushar Girinath) ಮುಂದಾಗಿದ್ದಾರೆ. ಕಳೆದ ಎರಡು ತಿಂಗಳಲ್ಲಿ ದಾಖಲಾದ ಬಿ ಖಾತ ಟೂ ಎ ಖಾತ ಆಸ್ತಿಗಳ ಬಗ್ಗೆ ವಿವರಣೆ ಕೇಳಿ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ, ಮಹಾದೇವಪುರ, ಯಲಹಂಕ, ಆರ್ಆರ್ ನಗರ, ದಾಸರಹಳ್ಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಎ ಖಾತೆಗಳು ದಾಖಲಾಗಿವೆ. ಅಧಿಕಾರಿಗಳು ಎರಡು ತಿಂಗಳಲ್ಲಿ ಬೊಮ್ಮನಹಳ್ಳಿ ವಲಯದಲ್ಲಿ ಬರೋಬರಿ 600ಕ್ಕೂ ಹೆಚ್ಚಿನ ಬಿ ಖಾತ ಆಸ್ತಿಗಳನ್ನು ಎ ಖಾತಗೆ ವರ್ಗಾವಣೆ ಮಾಡಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಯಾವುದೇ ಫೀಸ್ ಪಡೆಯದೆ. ಬಿ ಖಾತ ಟೂ ಎ ಖಾತ ಮಾಡಲಾಗಿದೆ. ಹೀಗಾಗಿ ಜೆಸಿ ಜಯರಾಮ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಅಕ್ರಮವಾಗಿ ಮಾಡಿರುವ ಖಾತಗಳ ಬಗ್ಗೆ ಸಮಿತಿ ವರದಿ ನೀಡಲಿದೆ. ಸಮಿತಿಗೆ ಈಗಾಗಲೇ ಡೆಡ್ ಲೈನ್ ನೀಡಲಾಗಿದೆ. ನಿನ್ನೆ(ಮೇ 16) ಸಭೆ ನಡೆಸಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ನಗರದ ಹೊರ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಎ ಖಾತ ಆಗಿರುವ ಮಾಹಿತಿ ಬಂದಿದೆ. ಈ ತಿಂಗಳಲ್ಲಿ ಅಧಿಕಾರಿಗಳಲ್ಲಿ ಈ ಬಗ್ಗೆ ಸ್ವಯಂ ಮಾಹಿತಿ ನೀಡಿ ಸರಿ ಮಾಡಿಕೊಡುವಂತೆ ಆದೇಶಿಸಲಾಗಿದೆ. ಇಲ್ಲ ಅಂದ್ರೆ ತನಿಖೆ ಆದಾಗ ಶಿಕ್ಷೆ ಅನುಭವಿಸಬೇಕಾಗುತ್ತೆ. ಅಧಿಕಾರಿಗಳು ಶಾಮೀಲ್ ಆಗದಿದ್ರೆ ಇದು ಆಗಲು ಸಾಧ್ಯವಿಲ್ಲ. ತನಿಖೆಯಲ್ಲಿ ಯಾವ ಅಧಿಕಾರಿಗಳು ಶಾಮಿಲಾಗಿದ್ದಾರೆ, ಯಾವ ವಲಯಗಳಲ್ಲಿ ಎಷ್ಟು ಅಕ್ರಮ ಖಾತೆ ಮಾಡಿಕೊಡಲಾಗಿದೆ ಎಲ್ಲವು ಬೆಳಕಿಗೆ ಬರಲಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.