Author: Prajatv Kannada

ಸಿಎಂ ಯಾರಾಗುತ್ತಾರೆ ಅನ್ನೋ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಡಿ. ಕೆ. ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ದಿಗ್ವಿಜಯ ಸಾಧಿಸಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಭಾಗ್ಯ ಸಿದ್ದರಾಮಯ್ಯ ಅವರಿಗೆ ಒಲಿದು ಬಂದಿದೆ. ಆದ್ರೆ, ಸಿದ್ದರಾಮಯ್ಯ ಅವರು ಕೂರುವ ಸಿಎಂ ಸೀಟಿನಲ್ಲಿ ಹೂವಿಗಿಂತಾ ಮುಳ್ಳುಗಳೇ ಜಾಸ್ತಿ ಇರುತ್ತಾ ಅನ್ನೋ ಪ್ರಶ್ನೆ ಇದೀಗ ಎದುರಾಗಿದೆ. ಯಾಕಂದ್ರೆ ಕಾಂಗ್ರೆಸ್ ಪಕ್ಷ ಬರೋಬ್ಬರಿ 135 ಸ್ಥಾನ ಗಳಿಸಿದರೂ ಕೂಡಾ ಕಳೆದ ಬಾರಿಯಂತೆ ಈ ಬಾರಿ ಸಿದ್ದರಾಮಯ್ಯ ನಿರಾತಂಕವಾಗಿ 5 ವರ್ಷ ಪೂರ್ಣಾವಧಿ ಸಿಎಂ ಆಗಿ ಇರ್ತಾರಾ ಅನ್ನೋದೇ ದೊಡ್ಡ ಪ್ರಶ್ನೆ.. ಈ ಪ್ರಶ್ನೆ ಮೂಡಿದ್ದು ಏಕೆ? ಸಿದ್ದರಾಮಯ್ಯ ಮುಂದಿರೋ ಸವಾಲುಗಳೇನು? ಸಿಎಂ ಪಟ್ಟಕ್ಕೆ ಪೈಪೋಟಿ ನಡೆಸಿ ಇದೀಗ ಡಿಸಿಎಂ ಹುದ್ದೆಗೆ ತೃಪ್ತಿ ಪಟ್ಟಿರುವ ಡಿ. ಕೆ. ಶಿವಕುಮಾರ್ ಅವರಿಂದ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಸಹಕಾರ ಸಿಗುತ್ತಾ? ಸಿದ್ದು – ಡಿಕೆಶಿ ಕುಚಿಕುಗಳಾಗಿ ಸರ್ಕಾರ ನಡೆಸ್ತಾರಾ? ಈ ಕುರಿತ ಸಮಗ್ರ ವಿಶ್ಲೇಷಣೆ ಇಲ್ಲಿದೆ: ಸವಾಲು…

Read More

ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ಮನಗಂಡ ಪಾಲಿಕೆ ಈ ಬಗ್ಗೆ ಒಂದು ನಿರ್ಧಾರಕ್ಕೆ ಬಂದಿದೆ. ಪಾಠ ಮಾಡಲು ಬೇಕಾದ ಅರ್ಹತೆಯಿಲ್ಲದ 200ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ. ಬಿಬಿಎಂಪಿ ಸೂಚನೆ ನೀಡಿದರೂ ಕೂಡ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪಾಸ್ ಮಾಡದ ಹೊರ ಗುತ್ತಿಗೆ ಶಿಕ್ಷಕರಿಗೆ ಕೊಕ್ ನೀಡಲಿದೆ.ಕಳೆದ ವರ್ಷವೇ ಅನರ್ಹ ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಬಿಬಿಎಂಪಿ ಮುಂದಾಗಿತ್ತು. ಆದ್ರೆ ಹೊರ ಗುತ್ತಿಗೆ ಶಿಕ್ಷಕರು ಕಾಲಾವಕಾಶ ಕೇಳಿದ ಕಾರಣ ಒಂದು ವರ್ಷ ಮುಂದೂಡಲಾಗಿತ್ತು. ಸದ್ಯ ಬಿಬಿಎಂಪಿಯ ಶಾಲೆ ಹಾಗೂ ಪಿಯು ಕಾಲೇಜುಗಳು ಜೂನ್ ತಿಂಗಳಲ್ಲಿ ಪುನಾರಂಭ ಆಗಲಿವೆ. ಪಾಲಿಕೆಯ 163 ಶಾಲಾ ಕಾಲೇಜುಗಳಲ್ಲಿ 728 ಹೊರ ಗುತ್ತಿಗೆ ಶಿಕ್ಷಕರಿದ್ದಾರೆ. ಈ ಪೈಕಿ 200ಕ್ಕೂ ಹೆಚ್ಚು ಬೋಧಕರು ಅರ್ಹತೆ ಹೊಂದಿಲ್ಲ. ಹೀಗಾಗಿ ದಾಖಲಾತಿ ಪರಿಶೀಲನೆಗೆ ಬಿಬಿಎಂಪಿ ಮುಂದಾಗಿದ್ದು 15 ದಿನ ದಾಖಲೆ ಪರಿಶೀಲನೆ ನಡೆಸಿ, ಅರ್ಹತೆಯಿಲ್ಲದವರಿಗೆ ಗೇಟ್ ಪಾಸ್ ನೀಡಲು…

Read More

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ (AICC) ಅಧಿಕೃತವಾಗಿ ತಿಳಿಸಿದೆ. ಇದೀಗ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬೆಳಗಾವಿ ಕಾಂಗ್ರೆಸ್‌ ಶಾಸಕರು ಲಾಭಿ ನಡೆಸಿದ್ದಾರೆ. ಬೆಂಗಳೂರಲ್ಲೇ ಬೀಡು ಬಿಟ್ಟಿರುವ ಬೆಳಗಾವಿ ಕಾಂಗ್ರೆಸ್‌ ನಾಯಕರು ಸಚಿವ ಸ್ಥಾನ ಪಡೆದೇ ಬೆಳಗಾವಿಗೆ ಹೋಗೋಣವೆಂದು ಕಸರತ್ತು ನಡೆಸಿದ್ದಾರೆ. ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕಾಶ್ ಹುಕ್ಕೇರಿ ಅಥವಾ ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ ಈಗ ಕಾಂಗ್ರೆಸ್ ಪಾರುಪತ್ಯ ಶುರುವಾಗಿದೆ. ಇನ್ನು ಸಿದ್ದರಾಮಯ್ಯ ಶಿಷ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದೆ. ಆದ್ರೆ, ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಬೆಳಗಾವಿಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಲಿಂಗಾಯತ 7, ಎಸ್ಸಿ 1, ಬ್ರಾಹ್ಮಣ1, ಎಸ್ಟಿ 1, ಮುಸ್ಲಿಂ 1 ಸೇರಿ 11 ಕೈ ಶಾಸಕರು, ಇಬ್ಬರು ಎಂಎಲ್‌ಸಿಗಳು ಇದ್ದು, ಲಿಂಗಾಯತ ನಾಯಕರ ಮಧ್ಯೆಯೇ ಸಚಿವರಾಗಲು ಹೆಚ್ಚಿನ ಪೈಪೋಟಿ ನಡೆಯುತ್ತಿದೆ. ಐವರು ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಐವರು ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಶುರುವಾಗಿದೆ. ಹೌದು ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ, ಪ್ರಕಾಶ್ ಹುಕ್ಕೇರಿ, ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ್ ಮಧ್ಯೆ ಸಚಿವ ಸ್ಥಾನಕ್ಕೆ ಫೈಟ್ ಶುರುವಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಅಥಣಿ ಜೊತೆ ಕಾಗವಾಡ, ಕುಡಚಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿರುವ ಲಕ್ಷ್ಮಣ್ ಸವದಿ ಪ್ರಬಲ ಹುದ್ದೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿಗೆ ಸೆಡ್ಡು ಹೊಡೆದು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಜಯ ಸಾಧಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಕೋಟಾದಡಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಜೊತೆಗೆ ಸತತ ಮೂರು ಬಾರಿ ಚಿಕ್ಕೋಡಿಯಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಂಎಲ್‌ಸಿ ಪ್ರಕಾಶ್​ ಹುಕ್ಕೇರಿ ತಮಗೆ ಇಲ್ಲವೇ, ತಮ್ಮ ಮಗ ಗಣೇಶ್ ಹುಕ್ಕೇರಿಗೆ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಮನವಿ ಕೂಡ ಮಾಡಿದ್ದಾರೆ. ಇನ್ನು 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ತ್ಯಜಿಸಿ ಲೋಕಸಭೆಗೆ ಸ್ಪರ್ಧಿಸಿದ್ದರು. ಹೀಗಾಗಿ ಈ ಬಾರಿ ತಮಗೆ ಇಲ್ಲ ತಮ್ಮ ಮಗನಿಗೆ ಸಚಿವ ಸ್ಥಾನ ನೀಡಲು ಪ್ರಕಾಶ್ ಹುಕ್ಕೇರಿ ಬೇಡಿಕೆ ಇಟ್ಟಿದ್ದಾರೆ. ಮತ್ತೊಂದೆಡೆ ಮೂರನೇ ಬಾರಿ ಶಾಸಕರಾಗಿರುವ ರಾಮದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿದ್ದರಾಮಯ್ಯ ಆಪ್ತ ಅಶೋಕ್ ಪಟ್ಟಣ್ ಬೈಲಹೊಂಗಲ ಕಾಂಗ್ರೆಸ್‌ ಶಾಸಕ ಮಹಾಂತೇಶ ಕೌಜಲಗಿ ಸಹ ಸಚಿವ ಸ್ಥಾನದ ರೇಸ್‌ನಲ್ಲಿದ್ದಾರೆ. ಈ ನಡುವೆ ಬೆಳಗಾವಿ ಜಿಲ್ಲೆಗೆ ಕನಿಷ್ಠ ‌ಮೂರು ಮಂತ್ರಿ ಸ್ಥಾನ ಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೇಳಿದ್ದಾರೆ. ಒಟ್ಟಿನಲ್ಲಿ ಐವರು ಲಿಂಗಾಯತ ಶಾಸಕರ ಪೈಕಿ ಯಾರಿಗೆ ಸಿಗುತ್ತೆ ಮಂತ್ರಿ ಭಾಗ್ಯ ಕಾದುನೋಡಬೇಕಿದೆ.

Read More

ಇಡೀ ದೇಶದ ಕುತೂಹಲ ಕೆರಳಿಸಿದ್ದ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ. ಎಲ್ಲರ ನಿರೀಕ್ಷೆಯಂತೆ, ಬಹುತೇಕರ ಅಪೇಕ್ಷೆಯಂತೆ ಸಿದ್ದರಾಮಯ್ಯನವರೇ 2ನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಉಳಿದಂತೆ, ಸಿಎಂ ಗಾದಿಗೆ ತೀವ್ರ ಪೈಪೋಟಿ ನೀಡಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆ. ಜೊತೆಗೆ, ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ. ಇಷ್ಟು ತೀವ್ರ ಪೈಪೋಟಿಯ ನಡುವೆಯೂ ಸಿದ್ದರಾಮಯ್ಯನವರ ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಗೆ ಇದ್ದ ಐದು ಪ್ರಮುಖ ಕಾರಣಗಳನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ. ಡಿಕೆಶಿ ವಿರುದ್ಧದ ಪ್ರಕರಣಗಳು ಬಾಕಿ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅಕ್ರಮದ ಆರೋಪಗಳಿವೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿಪಾಸ್ತಿ ಹೊಂದಿರುವ ಆರೋಪದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಸದ್ಯಕ್ಕೆ ಆ ಕುರಿತ ಪ್ರಕರಣಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ಸದ್ಯಕ್ಕೆ ತಡೆಯಾಜ್ಞೆ ನೀಡಿದೆ. ಅದರ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್…

Read More

ಹದಿನಾರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಪ್ಲೇಆಫ್‌ಗೆ ಅರ್ಹತೆ ಪಡೆಯಲು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್‌ ಕೊಹ್ಲಿ ನೆರವಾಗಲಿದ್ದಾರೆಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಟಾಮ್‌ ಮೂಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ 2023ರ ಐಪಿಎಲ್‌ ಟೂರ್ನಿಯು ನಿರ್ಣಾಯಕ ಹಂತ ತಲುಪಿದೆ. ಅದರಂತೆ ಫಾಫ್‌ ಡುಪ್ಲೆಸಿಸ್‌ ನಾಯಕತ್ವದ ಆರ್‌ಸಿಬಿ ಐಪಿಎಲ್‌ ಪ್ಲೇಆಫ್‌ಗೆ ಅರ್ಹತೆ ಪಡೆಯಬೇಕೆಂದರೆ ಕೊನೆಯ ಎರಡೂ ಪಂದ್ಯಗಳಲ್ಲಿ ಗೆಲುವು ಅನಿವಾರ್ಯವಾಗಿದೆ. ಗುರುವಾರ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಕಾದಾಟ ನಡೆಸಲಿದೆ. ಈ ಪಂದ್ಯದಲ್ಲಿ ಸೋತರೆ ಆರ್‌ಸಿಬಿ ಪಾಲಿನ ಐಪಿಎಲ್‌ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಅಂದಹಾಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್‌ ಕಿಂಗ್ಸ್ ಸೋಲು ಅನುಭವಿಸಿದ ಬಳಿಕ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಅನುಕೂಲವಾಗಿದೆ. ಒಂದು ವೇಳೆ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ದ ಗುರುವಾರದ ಪಂದ್ಯದಲ್ಲಿ ಆರ್‌ಸಿಬಿ ಸೋತರೆ, ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ತಂಡಗಳು ಪ್ಲೇಆಫ್‌ಗೆ ಅಧಿಕೃತವಾಗಿ ಅರ್ಹತೆ…

Read More

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ನಟಿ ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್ ಎಂದೇ ಖ್ಯಾತಿ ಘಳಿಸಿದ್ದಾರೆ. ಸಾಲು ಸಾಲು ಚಿತ್ರಗಳು ಹಿಟ್ ಆದ ಹಿನ್ನೆಲೆಯಲ್ಲಿ 2020ರಲ್ಲಿ ಗೂಗಲ್ ನ್ಯಾಷನಲ್ ಕ್ರಶ್ ಟ್ರೆಂಡಿಂಗ್ ಪಟ್ಟವನ್ನು ರಶ್ಮಿಕಾಗೆ ನೀಡಿತ್ತು. ಇದೀಗ  ಆ ಪಟ್ಟವನ್ನು ಮತ್ತೋರ್ವ ನಟಿ ಕಿತ್ತುಕೊಂಡಿದ್ದಾರೆ. ಈ ಬಾರಿಯ ಕಾನ್ ಚಿತ್ರೋತ್ಸವದಲ್ಲಿ ಮೃಣಾಲ್ ಭಾಗಿಯಾಗಿದ್ದಾರೆ. ಕಾನ್ ಫೆಸ್ಟಿವೆಲ್ ನಲ್ಲಿ ಭಾಗಿಯಾದ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ವೈರಲ್ ಆಗಿದ್ದು, ನೆಟ್ಟಿಗರು ಮೃಣಾಲ್ ಗೆ ನ್ಯಾಷನಲ್ ಕ್ರಶ್ ಎಂದು ಕರೆದಿದ್ದಾರೆ. ಅದು ಟ್ರೆಂಡ್ ಕೂಡ ಆಗಿದೆ. ಹೀಗಾಗಿ ರಶ್ಮಿಕಾ ಹೆಸರಿನಲ್ಲಿದ್ದ ಆ ಪಟ್ಟ ಇದೀಗ ಮೃಣಾಲ್ ಪಾಲಾಗಿದೆ. ಟಾಲಿವುಡ್ ನ ಸೀತಾ ರಾಮಂ  ಸಿನಿಮಾದ ಮೂಲಕ ಗಮನ ಸೆಳೆದವರು ಮೃಣಾಲ್ ಮೊದಲ ಚಿತ್ರದಲ್ಲೆ , ಸಾಕಷ್ಟು ಖ್ಯಾತಿ ಘಳಿಸಿದ್ದರು. ಈ ಸಿನಿಮಾದಲ್ಲಿನ ನಟನೆಗೆ ಬಹುತೇಕರು ಫಿದಾ ಆಗಿದ್ದರು. ಆ ಸಿನಿಮಾನೇ ಇಂದು ಕಾನ್ ಚಿತ್ರೋತ್ಸವಕ್ಕೆ ಹೋಗುವಂತೆ ಮಾಡಿದೆ. ಅಲ್ಲದೇ, ಮೃಣಾಲ್…

Read More

ಝೀ ಕನ್ನಡದ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ‘ಜೊತೆ ಜೊತೆಯಲಿ’ ಧಾರವಾಹಿ ಅಂತ್ಯವಾಗಿದೆ. ಅನು ಸಿರಿಮನೆ ಪಾತ್ರದ ಮೂಲಕ ಮನೆ ಮಾತಾದ ನಟಿ ಮೇಘಾ ಶೆಟ್ಟಿ ಇದೀಗ ಧಾರವಾಹಿ ನಿಲ್ಲುತ್ತಿರುವ ಕುರಿತು ಪ್ರತಿಕ್ರಿಯೆನೀಡಿದ್ದಾರೆ. ಜೊತೆ ಜೊತೆಯಲಿ ಧಾರವಾಹಿ ಬಳಿಕ ಮುಂದೇನು.? ಎಂದು ಮೇಘಾ ಶೆಟ್ಟಿ ಹೇಳಿದ್ದಾರೆ. ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಸೀರಿಯಲ್ ಕಥೆ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿತ್ತು. ಆರ್ಯ- ಅನು ಸಿರಿಮನೆ ಲವ್ ಸ್ಟೋರಿಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಈ ಶುಕ್ರವಾರ (ಮೇ 19)ಕ್ಕೆ ಸೀರಿಯಲ್ ಅಂತ್ಯವಾಗುತ್ತಿದೆ. ಈ ಬಗ್ಗೆ ಮೇಘಾ ಶೆಟ್ಟಿ ಮಾತನಾಡಿದ್ದಾರೆ. ‘ಜೊತೆ ಜೊತೆಯಲಿ’ ಸೀರಿಯಲ್ ಮೊದಲ ಶಾಟ್ ಎದುರಿಸಿದ್ದು ನಾನೇ, ಕೊನೆಯ ಶಾಟ್ ಕೂಡ ನನ್ನದೆ. ಈ ಎರಡರ ನಡುವೆ ಸಾಕಷ್ಟು ದಿನಗಳ ಅಂತರವಿದೆ. ಯಾರೂ ಪರಿಚಯವಿಲ್ಲದೇ ಈ ತಂಡಕ್ಕೆ ಕಾಲಿಟ್ಟ ನನಗೆ ಈಗ ಈ ತಂಡ ಎರಡನೇ ಕುಟುಂಬ. ಈ ಕುಟುಂಬದೊಂದಿಗಿನ ನಂಟನ್ನು ಮುಗಿಸುತ್ತಿದ್ದೇನೆ. ನಿರ್ದೇಶಕ ಜಗದೀಶ್, ಎಪಿಸೋಡ್ ನಿರ್ದೇಶಕರು ಸೇರಿದಂತೆ ಇಡೀ…

Read More

ಖ್ಯಾತ ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಗೀತ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಎಂಟ್ರಿಕೊಡ್ತಿದ್ದಾರೆ. ಈಗಾಗಲೇ ನಟಿ ರಮ್ಯಾ, ನಟರಾದ ಡಾಲಿ ಧನಂಜಯ್, ಪ್ರೇಮ್, ಮಂಡ್ಯ ರಮೇಶ್ ಸೇರಿದಂತೆ ಹಲವು ಸಾಧಕರ ಕುರ್ಚಿಯನ್ನ ಅಲಂಕರಿಸಿದ್ದಾರೆ. ಈ ವಾರ ನಾಗೇಂದ್ರ ಪ್ರಸಾದ್ ಅತಿಥಿಯಾಗಿ ಭಾಗಿಯಾಗಿದ್ದಾರೆ. ಮಂಡ್ಯ ಜಿಲ್ಲೆಯವರಾದ ನಾಗೇಂದ್ರ ಪ್ರಸಾದ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಎರಡು ದಶಕ ಕಳೆದಿದ್ದು ಗೀತ ಸಾಹಿತಿಯಾಗಿ ಖ್ಯಾತಿ ಘಳಿಸಿದ್ದಾರೆ. 2000ರಲ್ಲಿ ಮೊದಲ ಬಾರಿಗೆ ಸಿನಿಮಾ ಒಂದಕ್ಕೆ ಗೀತ ರಚನೆ ಮಾಡಿದ್ದ ನಾಗೇಂದ್ರ ಪ್ರಸಾದ್ ಆ ಬಳಿಕ ಸಾಲು ಸಾಲು ಕನ್ನಡದ ಸೂಪರ್ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ನೀಡಿದ್ದಾರೆ. ಸದ್ಯ ಕಾರ್ಯಕ್ರಮ ಪ್ರೋಮೋ ಕೂಡ ರಿವೀಲ್ ಆಗಿದೆ. ನಾನು ಯಾವ ಉದ್ಯೋಗ ಬಯಸಿದ್ದೆನೋ ಅದೇ ಉದ್ಯೋಗ ನನಗೆ ಸಿಕ್ಕಿದ್ದು ಇದೇ ನನ್ನ ಗೆಲುವು ಎಂದು ನಾಗೇಂದ್ರ ಪ್ರಸಾದ್ ಹೇಳಿದ್ದಾರೆ . ವಿ.ನಾಗೇಂದ್ರ ಪ್ರಸಾದ್ ಅವರ ಎಪಿಸೋಡ್‌ಗೆ…

Read More

ಮಹಾನಟಿ ಸಿನಿಮಾದ ಮೂಲಕ ಖ್ಯಾತಿ ಘಳಿಸಿರುವ ನಟಿ ಕೀರ್ತಿ ಸುರೇಶ್ ಸದ್ಯ ಸೌತ್ ಸಿನಿಮಾ ರಂಗದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ಹೀರೋಗಳ ಸಿನಿಮಾಗಳಿಗೆ ನಾಯಕಿಯಾಗುತ್ತಿರುವ ಕೀರ್ತಿ ಸುರೇಶ್ ಇದೀಗ ತಮ್ಮ ಬಾಯ್ ಫ್ರೆಂಡ್ ನನ್ನು ಪರಿಚಯಿಸಿದ್ದಾರೆ. ಸ್ಟಾರ್ ನಟಿಯಾಗಿ ಮಿಂಚುತ್ತಿರುವ ಹೊತ್ತಿನಲ್ಲೇ ಕೀರ್ತಿ ಸುರೇಶ್ ಮದುವೆ ವಿಷ್ಯವಾಗಿ ಸದ್ದು ಮಾಡ್ತಿದ್ದಾರೆ. ದಳಪತಿ ವಿಜಯ್ ಜೊತೆ ಕೀರ್ತಿ ಸುರೇಶ್ ಡೇಟಿಂಗ್ ಮಾಡುತ್ತಿದ್ದು ಇಬ್ಬರು ಮದುವೆ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಈ ಎಲ್ಲಾ ಊಹಾಪೋಹಗಳಿಗೂ ಕೀರ್ತಿ ತಾಯಿ ಬ್ರೇಕ್ ಹಾಕಿದ್ದರು. ಈಗ ಉದ್ಯಮಿಯೊಬ್ಬರ ಜೊತೆ ಕೀರ್ತಿ ಸುರೇಶ್ ಇರುವ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ. ಕೀರ್ತಿ ಸುರೇಶ್ ಉದ್ಯಮಿಯ ಪ್ರೀತಿಯಲಲ್ಲಿ ಬಿದ್ದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ಆಕೆ ಹಂಚಿಕೊಂಡಿದ್ದ ಫೋಟೊವೊಂದು ಇಂತಹದೊಂದು ಚರ್ಚೆಗೆ ಕಾರಣವಾಗಿದೆ. ಈತನ ಜೊತೆ ಕೀರ್ತಿ ಬಹಳ ಆತ್ಮೀಯವಾಗಿ ಕಾಣಿಸಿಕೊಂಡಿದ್ದಾರೆ. ಆತನ ಬರ್ತ್‌ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದು, ಆತನೊಟ್ಟಿಗೆ ಇರುವ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ…

Read More

ಟಾಲಿವುಡ್ ಯಂಗ್ ಹೀರೋ ವರುಣ್ ತೇಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸಾಕಷ್ಟು ಸಮಯದಿಂದ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ವರುಣ್ ತೇಜ್ ಫ್ಯಾನ್ಸ್ ಗೆ ಶುಭ ಸುದ್ದಿ ನೀಡಿದ್ದು ಸದ್ಯದಲ್ಲೇ ಲಾವಣ್ಯ ಜೊತೆ ಹಸೆಮಣೆ ಏರುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶ್ರೀಜಾ- ನಿಹಾರಿಕಾ ಇಬ್ಬರ ಡಿವೋರ್ಸ್ ಆಗಿರುವ ನೋವು ಮೆಗಾ ಫ್ಯಾಮಿಲಿಗೆ ಕಾಡುತ್ತಿದೆ. ಈ ಮಧ್ಯೆ ನಿಹಾರಿಕಾ ಸೋದರ ವರುಣ್ ತೇಜ್ ಮದುವೆ ಮಾಡಲು ಕುಟುಂಬಸ್ಥರು ನಿರ್ಧಾರಿಸಿದ್ದಾರೆ. ಇತ್ತೀಚಿಗೆ ಚಿರಂಜೀವಿ ಸಹೋದರ ನಾಗ ಬಾಬು ಪುತ್ರ ವರುಣ್ ತೇಜ್ ಮದುವೆ ಬಗ್ಗೆ ಮಾತನಾಡಿದ್ದರು. ಸದ್ಯದಲ್ಲೇ ಮದುವೆ ಬಗ್ಗೆ ಅಧಿಕೃತವಾಗಿ ಹೇಳೋದಾಗಿ ತಿಳಿಸಿದ್ದರು. ಇದೀಗ ಮತ್ತೆ ಈ ಸುದ್ದಿಗೆ ಪುಷ್ಟಿ ಸಿಕ್ಕಿದೆ. ನಟಿ ಲಾವಣ್ಯ ತ್ರಿಪಾಠಿ ಜೊತೆ ಮದುವೆಗೆ ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಹಲವು ವರ್ಷಗಳಿಂದ ವರುಣ್- ಲಾವಣ್ಯ ಪ್ರೀತಿಸುತ್ತಿದ್ದು, ಇಬ್ಬರ ಪ್ರೀತಿಗೆ ಎರಡು…

Read More