ದೆಹಲಿ: ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ (swearing-in ceremony) ನಡೆಸಲು ಅವಕಾಶ ಮಾಡಿಕೊಡಬೇಕಾಗಿ ಕರ್ನಾಟಕದ ರಾಜ್ಯಪಾಲರಿಗೆ (governor) ಕಳೆದ ರಾತ್ರಿ ತಾವೇ ಖುದ್ದಾಗಿ ಪತ್ರ ಬರೆದಿರುವುದಾಗಿ ಶಿವಕುಮಾರ್ ಹೇಳಿದರು. ಉಪಮುಖ್ಯಮಂತ್ರಿ ಸ್ಥಾನ ನೀಡಿರುವ ಬಗ್ಗೆ ತೃಪ್ತಿ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಅವರು ಆ ಪ್ರಶ್ನೆಗೆ ಉತ್ತರಿಸುವ ಬದಲು, ಜನರು ನಮಗೆ ದೊಡ್ಡ ಮ್ಯಾಂಡೇಟ್ ನೀಡಿದ್ದಾರೆ, ಅವರ ಆಸೆ ಆಶೋತ್ತರಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುವುದು ನಮ್ಮ ಕರ್ತವ್ಯವಾಗಿದೆ, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
Author: Prajatv Kannada
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಇದೇ ತಿಂಗಳ 19 ರಿಂದ 24 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಗ್ರೂಪ್ ಆಫ್ ಸೆವೆನ್ ಜಿ – 7 ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕ್ವಾಡ್ ಸೇರಿದಂತೆ ಮೂರು ಪ್ರಮುಖ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಆರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಜಪಾನ್ ಅಧ್ಯಕ್ಷ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಆ ದೇಶಕ್ಕೆ ಪ್ರಯಾಣಿಸುತ್ತಿದ್ದು, ತಮ್ಮ ಪ್ರವಾಸದ ಮೊದಲ ಹಂತದಲ್ಲಿ, ಪ್ರಧಾನಿ ಅವರು ಮೇ 19 ರಿಂದ 21 ರವರೆಗೆ ಜಪಾನಿನ ನಗರವಾದ ಹಿರೋಷಿಮಾಕ್ಕೆ ಭೇಟಿ ನೀಡಲಿದ್ದು, ಜಿ-7 ಮುಂದುವರಿದ ಆರ್ಥಿಕತೆಗಳ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ. ಈ ಸಭೆಯಲ್ಲಿ ಆಹಾರ, ರಸಗೊಬ್ಬರ ಮತ್ತು ಇಂಧನ ಭದ್ರತೆ ಸೇರಿದಂತೆ ಜಾಗತಿಕವಾಗಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡುವ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.. ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸಾಧನೆಯ ಪೂರ್ವಭಾವಿಯಾಗಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ವಿಜಯವನ್ನು ತಪ್ಪಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ. IPAC ಸಂಸ್ಥಾಪಕರೂ ಕೂಡ ಆಗಿರುವ ಪ್ರಶಾಂತ್ ಕಿಶೋರ್ ತಮ್ಮ ತವರು ರಾಜ್ಯವಾದ ಬಿಹಾರದಲ್ಲಿ ಪ್ರಾರಂಭಿಸಿದ ರಾಜಕೀಯ ಅಭಿಯಾನವಾದ ‘ಜನ್ ಸೂರಾಜ್’ ಅವರ ಹೇಳಿಕೆಯನ್ನು ಹಂಚಿಕೊಂಡಿದ್ದು, 2013 ರ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದರೂ ಸಹ ಅದು 2014 ರ ಸಂಸತ್ತಿನ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಸೋಲು ಕಂಡಿತ್ತು. ಒಂದು ವರ್ಷದ ಹಿಂದೆ ಮೂರು ಪ್ರಮುಖ ರಾಜ್ಯಗಳಲ್ಲಿ ಗೆದ್ದ ನಂತರ 2019 ರ ಲೋಕಸಭಾ ಚುನಾವಣೆಯಲ್ಲಿ ಹಳೆಯ ಪಕ್ಷವು ಸೋತಿತ್ತು ಎಂದು ಹೇಳಿದ್ದಾರೆ.ಕರ್ನಾಟಕದಲ್ಲಿ ಕಾಂಗ್ರೆಸ್‌ನ ಯಶಸ್ಸಿಗೆ ನಾನು ಅಭಿನಂದಿಸುತ್ತೇನೆ. ಆದರೆ ಲೋಕಸಭೆ ಚುನಾವಣೆಯಲ್ಲಿ…
ರಾಮನಗರ: ಚುನಾವಣೆಯ ಪ್ರಚಾರದ ಹಿನ್ನೆಲೆ ಬಿಜೆಪಿ ಮತದಾರರಿಗೆ ಹಣದ ಆಮಿಷವೊಡ್ಡಿದಕ್ಕಾಗಿಯೇ ಇಂದು ಜೆಡಿಎಸ್ ಸೋಲಲು ಕಾರಣ ಎಂದು ಪರೋಕ್ಷವಾಗಿಯೇ ಹೇಳುವ ಮೂಲಕ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‍ಗೆ ಹೀನಾಯ ಸೋಲು ವಿಚಾರದ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಮ್ಮ ಮನಸ್ಥಿತಿಯನ್ನು ಹೊರದುಮ್ಮಿದ್ದಾರೆ. ಚನ್ನಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡುತ್ತಾ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳನ್ನು ಈಡೇರಿಸ್ತಾರ? ಎಂಬ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದರು. ನೋಡೋಣ, ನಮಗಿಂತ ಅವರು ದೊಡ್ಡವರಲ್ವೆ. ಎಲ್ಲಾ ಲೆಕ್ಕಾಚಾರ ಮಾಡಿಯೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕ್ತಿದ್ದಾರೆ. ಹಾಗೇ ಕೆಲಕಾಲ ನೋಡೋಣ ಮುಂದೆ ಏನ್ ಮಾಡ್ತಾರೆ ಅಂತ ೆನ್ನುವ ಮೂಲಕ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಸವಲಾಕುವ ರೀತಿ ಮಾತನಾಡಿದ್ದಾರೆ.
ರಾಮನಗರ: 2023 ಚುನಾವಣ ಕಣದಲ್ಲಿ ಸೋಲನುಭವಿಸಿದ ನಿಖಿಲ್ ಕುಮಾರಸ್ವಾಮಿಯವರು ಚನ್ನಪಟ್ಟಣದಲ್ಲಿ (Channapatna Constituency) ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿ . ಕಾಂಗ್ರೆಸ್‌ನವರು ಎಲ್ಲರೂ ಮಲಗಿರುವ ಮಧ್ಯರಾತ್ರಿಯಂದು ಗ್ರಾಮಸ್ಥರಿಗೆ 3 ಸಾವಿರ ರೂ. ಕೂಪನ್ ಕಾರ್ಡ್ ಕೊಟ್ಟು ಆರ್ಥಿಕವಾಗಿ ಹಿಂದುಳಿದವರಿಗೆ ಹಣದ ಆಮಿಷವೊಡ್ಡಿ ಮತ ಪಡೆದು ಅವರನ್ನ ದಿಕ್ಕುತಪ್ಪಿಸಿದ್ದಾರೆ. ಈ ರೀತಿಯ ಕುತಂತ್ರದಿಂದ ನನ್ನನ್ನ ಸೋಲಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನನ್ನ ತಂದೆ ನಿಮ್ಮನ್ನೆಲ್ಲ ನಂಬಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು ನೀವು ಅವರ ಕೈಹಿಡಿದ್ರಿ, ಪಕ್ಷ ಅಧಿಕಾರಕ್ಕೆ ತರಲು ಪಂಚರತ್ನ ಯಾತ್ರೆಯೂ ಕೂಡ ನಿಮ್ಮ ಸಮ್ಮುಖದಲ್ಲಿ ಮಾಡಿದರು. ಅವರ ಅನುಪಸ್ಥಿತಿಯಲ್ಲಿ ಇಲ್ಲಿನ ಜನ ಅವರನ್ನು ಕೈ ಬಿಡದೆ ಗೆಲ್ಲಿಸಿದರು. ಯುವಕರು, ರೈತರು ಎಲ್ಲರೂ ಕುಮಾರಣ್ಣನ ಕೈಹಿಡಿದಿದ್ದಾರೆ. ಕುಮಾರಣ್ಣನ (HD Kumaraswamy) ಮೇಲೆ ಜನರ ಪ್ರೀತಿ ಕಂಡು ನಾನೇ ನಿಬ್ಬೆರಗಾದೆ. ಇಡೀ ರಾಮನಗರ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗೆ ಹೋಲಿಸಿಕೊಂಡ್ರೆ ಅತಿಹೆಚ್ಚು ನಿಷ್ಠಾವಂತ ಕಾರ್ಯಕರ್ತರು ಇರುವುದು ಈ ನಮ್ಮ ಚನ್ನಪಟ್ಟಣದಲ್ಲೆ. ನಾನು…
ಬೆಂಗಳೂರು : ಜನರು ವಿದ್ಯುತ್ ಬಿಲ್ ಕಟ್ಟಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಸರ್ಕಾರ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂಬ ಮಾತನ್ನು ಸಿದ್ದರಾಮಯ್ಯ(Siddaramaiah) ಅವರೇ ಹೇಳಿದ್ದರು. ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದಿದ್ದರು. ಹೀಗಾಗಿ, ಜನರು ಯಾಕೆ ಬಿಲ್ ಕಟ್ಟುತ್ತಾರೆ ಹೇಳಿ. ಕಟ್ಟಬಾರದು. ಕಟ್ಟುವ ಅಗತ್ಯವಿಲ್ಲ. ಜನರಿಗೂ ವಿನಂತಿ ಮಾಡುತ್ತೇನೆ. ನನ್ನ ಲೆಕ್ಕದಲ್ಲಿ ಯಾರಿಗೂ ಬಿಲ್ ಕಟ್ಟುವ ಅವಶ್ಯಕತೆಯಿಲ್ಲ ಎಂದು ಪ್ರತಿಪಾದಿಸಿದರು. ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಅವರು, ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು. ಮುಂದಿನ ವಾರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ: ಮುಂದಿನ ವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಒಂದು ವಾರ ನೂತನ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು ಜನರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ…
ಬೆಂಗಳೂರು: ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್(Governor Thawar Chand) ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಹಿರಿಯ ಮುಖಂಡ ಡಾ. ಜಿ ಪರಮೇಶ್ವರ್ ಅವರು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರತಿನಿಧಿಯಾಗಿ ಜಿ ಪರಮೇಶ್ವರ್ ರಾಜ್ಯಪಾಲರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ಪತ್ರ ನೀಡಿದ್ದಾರೆ. ಅಲ್ಲದೇ ಮೇ 20 ರಂದು ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಸಲು ಮನವಿ ಸಲ್ಲಿಸಿದ್ದಾರೆ. ಇನ್ನೂ ಇನ್ನೇರಡು ದಿನದಲ್ಲಿ ಕಾಂಗ್ರೆಸ್ನಿಂದ ನೂತನ ರಾಜ್ಯ ಸರ್ಕಾರ ರಚನೆಯಾಗಲಿದ್ದು, ಮೂಲಕ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಅಂತಿಮವಾಗಿದೆ. ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ 30-30 ಸೂತ್ರದ ಅಡಿಯಲ್ಲಿ ಸಿಎಂ ಆಯ್ಕೆ ಮಾಡಲಾಗಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಅವರು ಸಿಎಂ ಆಗಿ, ನಂತರದ 30 ತಿಂಗಳು ಶಿವಕುಮಾರ್ ಸಿಎಂ ಆಗಿ ಅಡಳಿತವನ್ನು ನಡೆಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಮೇ 20ರಂದು ಸಿಎಂ ಆಗಿ ರಾಜ್ಯವನ್ನು ಮುನ್ನೆಡಸಿಲಿದ್ದಾರೆ.
ಬೆಂಗಳೂರು: ದೆಹಲಿಯ ವಿಶೇಷ ವಿಮಾನವೊಂದರಲ್ಲಿ ಹೊರಟಿರುವ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇನ್ನು ಸ್ನಲ್ಪ ಹೊತ್ತಿನಲ್ಲಿ ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ (HAL airport) ಲ್ಯಾಂಡ್ ಆಗಲಿದ್ದಾರೆ. ಅವರನ್ನು ಸ್ವಾಗತಿಸಲು ಭರ್ಜರಿ ತಯಾರಿಗಳು ನಡೆದಿವೆ. ತಲೆ ಮೇಲೆ ದೇವರನ್ನು ಹೊತ್ತು ಕುಣಿಯುವ ತಂಡ, ಡೊಳ್ಳು ಕುಣಿತದ ತಂಡಗಳು ಸಾಂಪ್ರದಾಯಿಕ ಉಡುಗೆ ಮತ್ತು ವಾದ್ಯಮೇಳಗಳೊಂದಿಗೆ ಏರ್ಪೋಟ್ ಹೊರಗಡೆ ರೆಡಿಯಾಗಿ ನಿಂತಿವೆ. ಟ್ರಕ್ ಗಟ್ಟಲೆ ಬಗೆಬಗೆಯ ಹೂಗಳನ್ನು ತರಿಸಲಾಗಿದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಯೋಜನೆಯೂ ಇದೆ ಅಂತ ಹೇಳಲಾಗುತ್ತಿದೆ.
ದೇವನಹಳ್ಳಿ: ದೆಹಲಿಯಿಂದ ಆಗಮಿಸಿ ಏರ್ಪೋಟ್ ನಲ್ಲಿ ಕೆಹೆಚ್ ಮುನಿಯಪ್ಪ (KH Muniappa) ಅವರು, ಹೈಕಮಾಂಡ್ ಸೂತ್ರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಾವು ಏನು ಹೇಳಲು ಆಗುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದಲಿತ ಡಿಸಿಎಂ ರೇಸ್ನಲ್ಲಿ ನಾನೇನು ಇಲ್ಲ. ನಾನು ದೇಶದಲ್ಲಿ ಮಂತ್ರಿಯಾಗಿದ್ದವನು. ರಾಜ್ಯದಲ್ಲಿ ನನಗೆ ಮಂತ್ರಿಸ್ಥಾನ ಬೇಕು ಅಂತೇನಿಲ್ಲ. ನೀವು ರಾಜ್ಯದಲ್ಲಿ ಸ್ಪರ್ಧೆ ಮಾಡಿ ಅಂತ ಹೈಕಮಾಂಡ್ ಹೇಳಿತ್ತು. ಅದ್ರಂತೆ ನಾನು ಸ್ವರ್ಧಿಸಿ ಗೆದ್ದೀದ್ದೇನೆ. ಉಳಿದದ್ದು ಹೈಕಮಾಂಡ್ಗೆ ಬಿಟ್ಟದ್ದು ಎಂದರು.
ಬೆಂಗಳೂರು: ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಹೇಳಿದರು. ಈ ಸಂಬಂಧ ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಚುನಾವಣಾ ಸೋಲಿನ ಪರಾಮರ್ಶೆ ವಿಚಾರಕ್ಕೆ ಸಂಬಂಧಿಸಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ತೇವೆ. ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಗೆ ಇಡಿಸಲಿಲ್ಲ ಅನ್ಸುತ್ತೆ. ಕಾಂಗ್ರೆಸ್ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ. ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನೊದರ ಬಗ್ಗೆ ಮಾಹಿತಿ ಕಲೆ ಹಾಕ್ತೇನೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸ್ತಾರೆ ಎಂದು ಹೆಚ್ಡಿ ಕುಮಾರಸ್ವಾಮಿ ತಿಳಿಸಿದರು.