ಬೆಂಗಳೂರು: ರಾಜ್ಯದ ಜನರ ಭವಿಷ್ಯತ್ತಿಗಾಗಿ ಕಾಂಗ್ರೆಸ್ ಕುಟುಂಬ ನುಡಿದಂತೆ ನಡೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ (BK Hariprasad)ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು,, ನೂತನವಾಗಿ ಆಯ್ಕೆಯಾದ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಅಭಿನಂದಿಸಿದ್ದಾರೆ. ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಜನರ ನಿರೀಕ್ಷೆ ಹಾಗೂ ನಮ್ಮ ಭರವಸೆಯನ್ನ ಈಡೇರಿಸುವ ಮೂಲಕ ದೇಶಕ್ಕೆ ಮಾದರಿ ಆಡಳಿತವನ್ನ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಜನರ ಭವಿಷ್ಯತ್ತಿಗಾಗಿ ಕಾಂಗ್ರೆಸ್ ಕುಟುಂಬ ನುಡಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Author: Prajatv Kannada
ಬೆಂಗಳೂರು: ಇನ್ನೂ ಮುಂಗಾರು ಪ್ರಾರಂಭ ಆಗಿಲ್ಲ, ಈಗಾಗಲೇ ಬಿತ್ತನೆ ಬೀಜ, ಗೊಬ್ಬರ, ಕೃಷಿ ಸಾಲಕ್ಕೆ ಅರ್ಜಿ ಕರೆಯಬೇಕಾಗಿತ್ತು. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಅದರ ಕಡೆ ಗಮನ ಕೊಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ ಅವರ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆಪಾದನೆ ಮಾಡಿದೆ. ಬಿಜೆಪಿ ಮೇಲೆ ಗೂಬೆ ಕೂರಿಸುವುದು ಬಿಟ್ಟು ತಕ್ಷಣವೇ ಸರ್ಕಾರ ರಚನೆ ಮಾಡಿ. ಕಾಂಗ್ರೆಸ್ ಹೇಳಿರುವ ಐದು ಗ್ಯಾರಂಟಿಗಳನ್ನು ತಕ್ಷಣ ಜಾರಿ ಮಾಡಬೇಕು. ಜನರಲ್ಲಿ ಇರುವ ಗೊಂದಲವನ್ನು ಪರಿಹರಿಸಬೇಕು ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆಂದು ನೋಡೊಣ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನಕ್ಕೂ ಮೊದಲು ಲಿಂಗಾಯತ ಸಮುದಾಯದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಬಹಳ ಮಾತನಾಡಿದ್ದಾರೆ. ಅವರು ಲಿಂಗಾಯತ ನಾಯಕರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾವ ಯಾವ ಹುದ್ದೆಗಳನ್ನು ಕೊಡುತ್ತಾರೆಂದು ಕಾದು ನೋಡೋಣ ಎಂದರು. ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರು ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಪಕ್ಷದಲ್ಲಿ ಹೊಂದಾಣಿಕೆ ಸರಿ ಇಲ್ಲ ಎನ್ನುವುದನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ.ಸರ್ಕಾರ ರಚಿಸುವ ಮೂಲಕ ಜನರ ಸೇವೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಮೇ.13 ರಂದು ಬಂದಿದ್ದು, ಅದರಂತೆ ಸಿದ್ದರಾಮಯ್ಯ(Siddaramaiah) 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(Dk Shivakumar) ಎಂದು ಘೋಷಿಸಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್(G Parameshwara) ‘ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಈ ಹಿಂದೆ ಕೂಡ ಉಪ ಮುಖ್ಯಮಂತ್ರಿಯಾಗಿದ್ದೆ. ಎಲ್ಲ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಸ್ಥಾನ ಕೊಡಬೇಕಾಗುತ್ತದೆ. ಒಬ್ಬರು ಮಾತ್ರ ಅಧಿಕಾರದಲ್ಲಿ ಇರಬೇಕೆಂಬುದು ಸೂಕ್ತವಲ್ಲ, ಎಲ್ಲರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು(HD Deve Gowda) ಮಣ್ಣಿನ ಮಗ ಎಂದೆ ಪ್ರಖ್ಯಾತಿ. ರೈತರ ಅಳುವಿಗೆ ಧ್ವನಿ ಕೊಟ್ಟ ನೇಕಾರ, ಹೌದು ಒಂದು ಸಣ್ಣ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನ ಅಲಂಕರಿಸುವ ಮಟ್ಟಕ್ಕೆ ಬೆಳೆದಿರುವ ನಾಯಕ. ಇಂದು(ಮೇ 18) ಅವರು 91ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕಂತಿ ಪರಂಪರೆಯ ಪ್ರಶಂಸಕರು. ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀ ದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು. ದೇಶದ ಪ್ರಧಾನಿಯಾಗುವ ಮೂಲಕ ಕರ್ನಾಟಕದ ಕೀರ್ತಿಯನ್ನ ದೇಶಕ್ಕೆ ಪರಿಚಯಿಸಿದ್ದ ದೇವೇಗೌಡರು. ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ, ರೈತ ನಾಯಕನಾಗಿ, ಹೋರಾಟಗಾರನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಹೆಚ್ಡಿ ದೇವೇಗೌಡ ಅವರು ಇಂದು…
ಬೆಂಗಳೂರು: ಎಐಸಿಸಿಯಿಂದ (AICC) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ (Siddaramaiah) ಹೆಸರು ಘೋಷಣೆಯಾದ ಬೆನ್ನಲ್ಲೇ ಸಿದ್ದರಾಮಯ್ಯನವರು ಈ ಕುರಿತು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಟ್ವೀಟ್ (Tweet) ಮಾಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಆಡಳಿತವನ್ನು ನೀಡಲಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಅವರು ತನಗೇ ಸಿಎಂ ಪಟ್ಟ ನೀಡಬೇಕು ಎಂದು ಪಣತೊಟ್ಟಿದ್ದರಾದರೂ ಕೊನೆಗೆ ಹೈಕಮಾಂಡ್ ಒತ್ತಾಯಕ್ಕೆ ಮಣಿದು ಡಿಸಿಎಂ ಆಗಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದ ಹಿನ್ನಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಈ ಕುರಿತು ಟ್ವೀಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಫೋಟೋ ಪೋಸ್ಟ್ ಮಾಡುವ ಮೂಲಕ ಸಂತೋಷವನ್ನು ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಏನಿದೆ? ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ…
ನಮ್ಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಉಂಟುಮಾಡುತ್ತಿದೆ. ನಮ್ಮಆಹಾರ ಪದ್ಧತಿಯು ಬದಲಾಗಿದ್ದು ಇದರಿಂದ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಈ ಸಮಸ್ಯೆಗಳಲ್ಲಿ ಮೂತ್ರಕೋಶದಲ್ಲಿ ಕಲ್ಲು (ಕಿಡ್ನಿ ಸ್ಟೋನ್) ಕಾಣಿಸಿಕೊಳ್ಳುವುದು ಒಂದಾಗಿದೆ. ಕಿಡ್ನಿ ಸ್ಟೋನ್ ಉಂಟಾಗುವುದು ಹೇಗೆ? ಮೂತ್ರದಲ್ಲಿ ಹೆಚ್ಚು ಲವಣಾಂಶಗಳು ಶೇಖರಣೆಯಾಗಿ ಘನರೂಪಕ್ಕೆ ಮಾರ್ಪಟ್ಟು ಮೂತ್ರಕೋಶದಲ್ಲಿ ಕಲ್ಲುಗಳು ಉಂಟಾಗುತ್ತವೆ. ಈ ಕಲ್ಲುಗಳು ಹರಳುಗಳ ರೂಪದಲ್ಲಿ ಅಥವಾ ಕಲ್ಲಿನಂತೆಯೇ ಕಾಣಿಸಿಕೊಳ್ಳಬಹುದು. ಕಲ್ಲುಗಳು ಮೂತ್ರನಾಳದಲ್ಲಿ ಸೇರಿಕೊಂಡು ಮೂತ್ರ ಹರಿವನ್ನು ತಡೆದಾಗ ನೋವು ಕಾಣಿಸಿಕೊಳ್ಳುತ್ತದೆ. ಹೆಂಗಸರಿಗಿಂತ ಗಂಡಸರಲ್ಲಿ ಈ ಸಮಸ್ಯೆಯು ಹೆಚ್ಚು. ಮೂತ್ರಕೋಶದಲ್ಲಿ ಕಲ್ಲು ಉಂಟಾದ ಬಳಿಕ ಒತ್ತಡದ ಕಾರಣದಿಂದಾಗಿ ನೋವು ಕಾಣಿಸಿಕೊಳ್ಳುವುದು. ಬೆನ್ನು, ಕಿಬ್ಬೊಟ್ಟೆ ಮತ್ತು ಹೊಟ್ಟೆಯ ಇತರ ಭಾಗದಲ್ಲಿ ನೋವು ಕಂಡುಬರುವುದು. ಕಲ್ಲು ದೊಡ್ಡದಾಗಿದ್ದರೆ ಆಗ ಭಾಗ ಊದಿಕೊಳ್ಳುತ್ತದೆ. ಮೂತ್ರ ವಿಸರ್ಜಿಸುವಾಗ ನೋವಾಗುತ್ತದೆ. ಆಗಾಗ ಮೂತ್ರ ವಿಸರ್ಜನೆಗೆ ಅವಸರವಾಗುತ್ತದೆ. ಮೂತ್ರಚೀಲ ಸಂಪೂರ್ಣ ಖಾಲಿಯಾಗಿಲ್ಲ ಎಂಬ ಅನುಭವವಾಗುತ್ತದೆ. ಮೂತ್ರ ವಿಸರ್ಜನೆ ಮಾಡುವಾಗ ನೋವಾಗುತ್ತದೆ. ಕೆಲವೊಮ್ಮೆ ಮೂತ್ರದಿಂದ ದುರ್ವಾಸನೆ ಬರುತ್ತದೆ. ವಾಂತಿ/ವಾಕರಿಕೆಯೂ ಉಂಟಾಗಬಹುದು.…
ಅಬುಜಾ(ನೈಜೀರಿಯಾ): ಗಿನ್ನಿಸ್ ದಾಖಲೆ ಮಾಡಬೇಕು ಎಂದು ಹಲವರು ಹಲವಾರು ರೀತಿಯಲ್ಲಿ ಪ್ರಯತ್ನಿಸುತ್ತಿರುತ್ತಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ನೈಜೀರಿಯಾದ ಬಾಣಸಿಗಳಾದ ಹಿಲ್ಡಾ ಎಫಿಯಾಂಗ್ ಬಸ್ಸಿ ಎಂಬಾಕೆ ಸತತ 100 ಗಂಟೆಗಳ ಕಾಲ ಯಾವುದೇ ವಿಶ್ರಾಂತಿ ಪಡೆಯದೇ ಅಡುಗೆಯನ್ನು ಮಾಡುವ ಮೂಲಕ ಗಿನ್ನೆಸ್ ವಿಶ್ವದಾಖಲೆಗೆ ಭಾಜನರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಲ್ಡಾ ಬಾಸಿ ಎಂದೇ ಖ್ಯಾತಿ ಘಳಿಸಿರುವ ಈಕೆ ಗುರುವಾರ ಅಡುಗೆಯನ್ನು ಮಾಡಲು ಆರಂಭಿಸಿದ್ದು, ಸೋಮವಾರದವರೆಗೂ ಸತತ 100 ಗಂಟೆಗಳ ಕಾಲಾವಧಿಯಲ್ಲಿ 55ಕ್ಕೂ ಹೆಚ್ಚು ರೆಸಿಪಿಗಳು ಹಾಗೂ 100ಕ್ಕೂ ಅಧಿಕ ಊಟವನ್ನು ತಯಾರಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ನಾಲ್ಕು ದಿನಗಳ ಕಾಲ ಹಿಲ್ಡಾ ಹಲವಾರು ಬಗೆಯ ನೈಜೀರಿಯನ್ ರೆಸಿಪಿಗಳನ್ನು ತಯಾರಿಸಿದ್ದು, ಹಿಲ್ಡಾ ಅವರಿಗೆ ನೈಜೀರಿಯನ್ ಕಲಾವಿದರು, ಸೆಲೆಬ್ರಿಟಿಗಳು, ರಾಜಕಾರಣಿಗಳು, ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿ ಪ್ರೋತ್ಸಾಹ ನೀಡಿದ್ದರು. ನಿನ್ನ ಸಾಹಸಕ್ಕೆ ಇಡೀ ನೈಜೀರಿಯಾವೇ ನಿನ್ನೊಂದಿಗೆ ಇದೆ ಎಂದು ನಟಿ, ಮಹಿಳಾ ಉದ್ಯಮಿ ಬಕ್ಕೈ ರೈಟ್ ಇನ್ಸ್ ಟಾಗ್ರಾಮ್ ನಲ್ಲಿ ಸಂದೇಶ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.…
ಭಾರತದಲ್ಲಿ ನಡೆಯುವ ಹೆಚ್ಚಿನ ವಿಚ್ಛೇದನಗಳಿಗೆ (divorce) ಪ್ರೇಮ ವಿವಾಹಗಳೇ (Love marriage) ಪ್ರಮುಖ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್‌ನ (Supreme Court of India) ದ್ವಿಸದಸ್ಯ ಪೀಠದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ವೈವಾಹಿಕ ಸಂಬಂಧದ ಅರ್ಜಿಯೊಂದರ ವಿಚಾರಣೆ ವೇಳೆ ಈ ರೀತಿ ಹೇಳಿದೆ. ಅವರದು ಪ್ರೇಮ ವಿವಾಹ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿ ಗವಾಯಿ ಹೆಚ್ಚಿನ ವಿಚ್ಛೇದನಗಳಿಗೆ ಪ್ರೇಮ ವಿವಾಹಗಳೇ ಕಾರಣ ಎಂದು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.ಅಂತಿಮವಾಗಿ ಪೀಠವು ದಂಪತಿಗಳ ನಡುವೆ ಮಧ್ಯಸ್ಥಿಕೆಗೆ ಕರೆ ನೀಡಿತು. ಈ ತಿಂಗಳ ಆರಂಭದಲ್ಲಿ ಪರಸ್ಪರ ಒಪ್ಪಿಗೆ ಇದ್ದರೇ ವಿವಾಹ ವಿಚ್ಛೇದನ ಪಡೆಯಲು ಸಂವಿಧಾನದ ಪರಿಚ್ಛೇದ 142ರ ಅಡಿಯಲ್ಲಿ ಮುರಿದುಹೋದ ವಿವಾಹಗಳನ್ನು ವಿಸರ್ಜಿಸುವ ಅಧಿಕಾರ ಇದೆ. ಆರ್ಟಿಕಲ್ 142ರ ಮೂಲಕ ಪರಿಸ್ಥಿತಿಗನುಗುಣವಾಗಿ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯ ಕಾಯುವ ಅವಧಿಯನ್ನು ತೆಗೆದುಹಾಕಬಹುದು ಎಂದು ಸುಪ್ರೀಂ ಹೇಳಿತ್ತು. ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು. ಮದುವೆ ಎಂಬುದು ಸರಿಪಡಿಸಲಾಗದಂತೆ ಮುರಿದುಹೋಗಿದೆ ಎಂದು ನ್ಯಾಯಾಲಯವು ಹೇಳಿತು.ಇದಕ್ಕಾಗಿ ಹಲವಾರು ಅಂಶಗಳನ್ನು ಪರಿಗಣಿಸಬೇಕು. ಮದುವೆಯ ನಂತರ ಪಕ್ಷಗಳು ಸಹಬಾಳ್ವೆ ನಡೆಸಿದ ಅವಧಿ, ಇಬ್ಬರು ಕೊನೆಯದಾಗಿ ಸಹಬಾಳ್ವೆ ನಡೆಸಿದಾಗ ಪರಸ್ಪರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾಡಿದ ಆರೋಪಗಳ ಸ್ವರೂಪ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ. ಪರಿಗಣಿಸಬೇಕಾದ ಇತರ ಅಂಶಗಳು ಕಾಲಕಾಲಕ್ಕೆ ಕಾನೂನು ಪ್ರಕ್ರಿಯೆಯಲ್ಲಿ ಹೊರಡಿಸಿದ ಆದೇಶಗಳನ್ನು ಒಳಗೊಂಡಿವೆ, ವೈಯಕ್ತಿಕ ಸಂಬಂಧದ ಮೇಲೆ ಸಂಚಿತ ಪರಿಣಾಮ, ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಥವಾ ಮಧ್ಯಸ್ಥಿಕೆಯ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಎಷ್ಟು ಪ್ರಯತ್ನಗಳನ್ನು ಮಾಡಲಾಗಿದೆ? ಕೊನೆಯದು ಯಾವಾಗ ಪ್ರಯತ್ನಿಸಲಾಯಿತು ಎಂಬುದನ್ನು ನ್ಯಾಯಾಲಯ ಕೇಳಿದೆ.
ಹೊಸದಿಲ್ಲಿ: ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸಿಎಂ ರೇಸ್‌ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಆಗಿದ್ದಾರೆ. ಅದಲ್ಲದೇ ಮುಂದಿನ ಲೋಕಸಭಾ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರಿಯಲಿದ್ದಾರೆ. ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನು ಘೋಷಣೆ ಮಾಡಿದರು. ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಅವರು ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಡಿಕೆ ಶಿವಕುಮಾರ್ ಡಿಸಿಎಂ ಆಗಿ, ಕೆಲ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು. ಇನ್ನು, ಕರ್ನಾಟಕದಲ್ಲಿ ಅಭೂತ ಪೂರ್ವ ಗೆಲುವು ಸಾದಿಸಿದ್ದೇವೆ. ಈ ಗೆಲುವಿಗೆ ಪಕ್ಷದ ಎಲ್ಲ ನಾಯಕರ ಕೊಡುಗೆಯಿದೆ. ಎಐಸಿಸಿ ಅಧ್ಯಕ್ಷರು ಒಂದು ತಿಂಗಳು ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬೀಡು ಬಿಟ್ಟು ಕೆಲಸ ಮಾಡಿದ್ದಾರೆ. ರಾಹುಲ್ ಗಾಂಧಿ…