ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕನಕಪುರ ಬಂಡೇ ಎಂದೇ ಪ್ರಖ್ಯಾತರಾಗಿರುವ ಡಿಕೆ ಶಿವಕುಮಾರ್ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಕೆಪಿಸಿಸಿ ಚುಕ್ಕಾಣಿ ವಹಿಸಿಕೊಂಡವರು. ಅನೇಕ ಎಡರು ತೊಡರುಗಳ ನಡುವೆಯೇ ಇಂದು ಪಕ್ಷವನ್ನು ಗೆಲುವಿನ ದಡ ಸೇರಿಸಿರುವ ಅವರಿಗೆ ಇದೀಗ ಸಿಎಂ ಪಟ್ಟ ಒಲಿದು ಬಂದಿದೆ. ಡಿಕೆ ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಈ ಹಂತದಲ್ಲಿ ಅವರ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿತು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಎದೆಗುಂದದೆ ಮುನ್ನುಗ್ಗುವ ಅವರ ಗುಣವೇ ಈ ನಿರ್ಧಾರಕ್ಕೆ ಕಾರಣ. ಮೈತ್ರಿ ಸರಕಾರದ ಅವಧಿಯಲ್ಲಿ ಸರಕಾರವನ್ನು ಉಳಿಸಲು ಅವರು ಮಾಡಿದ್ದ ಪ್ರಯತ್ನ ಸಹ ಹೈಕಮಾಂಡ್ ಗಮನ ಸೆಳೆದಿತ್ತು. ಕನಕಪುರದಿಂದ 8ನೇ ಬಾರಿಗೆ ದಾಖಲೆ ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಆದ ವರ್ಚಸ್ಸು ಇದೆ. ಕಳೆದ ವಿಧಾನಸಭೆ ಮತ್ತು ಲೋಕಸಭಾ…
Author: Prajatv Kannada
ಬೆಂಗಳೂರು: ನಾನು ಕೂಡ ಸಿಎಂ, ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಈಗ ಹೈಕಮಾಂಡ್ನವರು ಸಿಎಂ, ಡಿಸಿಎಂ ಘೋಷಣೆ ಮಾಡಿದ್ದಾರೆ. ಮುಂದೆ ಏನಾದರೂ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ನೋಡೋಣ ಎಂದು ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ (Parameshwar)ತಿಳಿಸಿದರು. ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿ 2ನೇ ಬಾರಿಗೆ ಸಿಎಂ ಆಗುತ್ತಿದ್ದಾರೆ. ಅವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಲಿ. ದಲಿತ ಸಮುದಾಯದ ನಿರೀಕ್ಷೆ ಬಹಳ ದೊಡ್ಡದಿದೆ. ಅದನ್ನು ಅರ್ಥಮಾಡಿಕೊಂಡು ವರಿಷ್ಠರು ತೀರ್ಮಾನ ಮಾಡುತ್ತಾರೆ. ಮಾಡದಿದ್ದರೆ ಸ್ವಾಭಾವಿಕವಾಗಿ ಸಮುದಾಯ ಪ್ರತಿಕ್ರಿಯೆ ಇದ್ದೇ ಇರುತ್ತೆ. ಪ್ರತಿಕ್ರಿಯೆ ಬರುವ ಮೊದಲೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎಂದು ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ವರಿಷ್ಠರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದರು.
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ (AICC General Secretary Venugopal)ಘೋಷಣೆ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’ ಆಯ್ಕೆ ಆಗಿದ್ದಾರೆ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ ಎಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಸಿದ್ದರಾಮಯ್ಯ ಡಿಕೆಶಿ ಪ್ರಬಲ ನಾಯಕರು. ಕಾಂಗ್ರೆಸ್ ಎನ್ನುವುದು ಪ್ರಜಾಪ್ರಭುತ್ವದ ಪಕ್ಷ ಎಂದು ಹೇಳಿದರು.
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಸರತ್ತು ಅಂತಿಮ ಹಂತಕ್ಕೆ ತಲುಪಿದ್ದು, ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಕೈಹಿಡಿದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಗ್ಗಟ್ಟಿನ ಸಂದೇಶ ರವಾನೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಸಿಎಂ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಗೊಂದಲ ಸೃಷ್ಟಿ ಆಗಿತ್ತು. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ನಿರಂತರವಾಗಿ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ ನಡೆಸಿದ್ದರು. ಆದರೆ ತಡ ರಾತ್ರಿಯಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಜೊತೆಗೆ ರಾಷ್ಟ್ರೀಯ ನಾಯಕರು ಮಾತುಕತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಉಭಯ ನಾಯಕರ ಕೈ ಎತ್ತಿ ಹಿಡಿದು ಮಲ್ಲಿಕಾರ್ಜುನ ಖರ್ಗೆ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಈ ಫೋಟೋವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿ, The winning team ! ಎಂದು ಹೇಳಿದ್ದಾರೆ. ಸಿಎಂ ಆಯ್ಕೆ ಕಸರತ್ತು ಹಿನ್ನಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಆಯ್ಕೆ ಬಹುತೇಕ ಖಚಿತವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿಕಾರ ಹಂಚಿಕೆ ಸೂತ್ರದಲ್ಲಿ ಮೊದಲಾರ್ಧ ಸಿದ್ದರಾಮಯ್ಯ ಸಿಎಂ ಆದರೆ, ದ್ವಿತೀಯಾರ್ಧದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ತಿಳಿದುಬಂದಿದೆ. ಬುಧವಾರದವರೆಗೂ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು. ಉಭಯ ನಾಯಕರನ್ನು ಹೈಕಮಾಂಡ್ ಎಷ್ಟೇ ಮನವೊಲಿಸಲು ಪ್ರಯತ್ನಿಸಿದರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ಪಟ್ಟು ಸಡಿಲಿಸಿದ್ದಿಲ್ಲ. ಆದರೆ, ಬುಧವಾರ ತಡರಾತ್ರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಮಧ್ಯಪ್ರವೇಶದಿಂದ ನೂತನ ಸಿಎಂ ಆಯ್ಕೆ ಸುಖಾಂತ್ಯ ಕಂಡಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಸಿಎಂ ಸ್ಥಾನ ಬೇಕೆ ಬೇಕು ಎಂದು ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಬುಧವಾರ ಸಂಜೆ ಸೋನಿಯಾ ಗಾಂಧಿ ಅವರು ಮಾತನಾಡಿದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿದೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಅವರು…
ತುಮಕೂರು: ನಾವು ಕರೆಂಟ್ ಬಿಲ್ ಕಟ್ಟಲ್ಲ. ಅದ್ಯಾವ್ ನನ್ಮಗ ಬರ್ತಾನೋ ಬರಲಿ ನೋಡೋಣ ಎಂದು ಬೆಸ್ಕಾಂ (BESCOM) ಸಿಬ್ಬಂದಿಗೆ ವೃದ್ಧೆ ಅವಾಜ್ ಹಾಕಿದ ಘಟನೆ ನಡೆದಿದೆ. ಜಿ.ಪರಮೇಶ್ವರ್ (G Parameshwar) ಕ್ಷೇತ್ರ ಕೊರಟಗೆರೆ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು. ಬೆಸ್ಕಾ ಸಿಬ್ಬಂದಿಯು ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ. ಈ ವೇಳೆ ವೃದ್ಧೆ, ಕಾಂಗ್ರೆಸ್ (Congress) ನವರು ಫ್ರೀ ವಿದ್ಯುತ್ ಕೊಡ್ತಿನಿ ಅಂದಿದ್ರು. ಈಗ ನೀವು ಬಿಲ್ ಕೇಳೋಕೆ ಬಂದಿದ್ದೀರಾ?. ನಾವು ಬಿಲ್ ಕಟ್ಟಲ್ಲ. ರಾಹುಲ್ ಗಾಂಧಿ (Rahul Gandhi), ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ರನ್ನು ಕೇಳಿ ಹೋಗಿ ಎಂದು ಕಿಡಿಕಾರಿದ್ದಾರೆ. ಸರ್ಕಾರ ಬಂದರೆ ಕರೆಂಟ್ ಫ್ರೀ ಅಂದಿದ್ರು. ಈಗ ನೀವು ಬಿಲ್ ಕೇಳಬೇಡಿ. ಇನ್ಮೆಲಿಂದ ನಮ್ಮೂರಿಗೆ ಬಿಲ್ ಕೇಳೋಕೆ ಬರಬೇಡಿ ಬಂದ್ರೆ ಅಷ್ಟೇ ಆಮೇಲೆ ಎಂದು ವೃದ್ಧೆ ಮತ್ತು ಮಹಿಳೆಯರು ಬೆಸ್ಕಾಂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಪತನ ಆಗೋಕೆ ಸಿದ್ದರಾಮಯ್ಯನವರೇ ಪರೋಕ್ಷವಾಗಿ ಎಂದು ಬರೆದುಕೊಂಡಿದ್ದ ಮಾಜಿ ಸಚಿವ ಸುಧಾಕರ್ ಟ್ವೀಟ್‌ಗೆ ಚಿಕ್ಕಬಳ್ಳಾಪುರ (Chikkaballapur) ನೂತನ ಕಾಂಗ್ರೆಸ್ (Congress) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ ಎಂದು ಟಾಂಗ್ ನೀಡುವ ಮೂಲಕ ಬಾಯಿ ಮುಚ್ಚಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮೈಲಪನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ನಿಮ್ಮದೇ ಪಕ್ಷದ ಎಂಟಿಬಿ ನಾಗರಾಜ್ ಅವರೇ ನಿಮ್ಮ ಟ್ವೀಟ್‌ಗೆ ಕೌಂಟರ್ ಕೊಟ್ಟಿದ್ದಾರೆ ಇದು ಸಾಲದೇ . ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಬೇಡಿ, ಬಾಯಿ ಮುಚ್ಚಿಕೊಂಡು ಇರಿ. ನಮ್ಮ ಪಕ್ಷದ ಆತಂರಿಕ ವಿಚಾರ ನಿಮಗ್ಯಾಕೆ ಬೇಕು? 3 ವರ್ಷದಿಂದ ಕಡಲೆಬೀಜ ತಿಂತಿದ್ರಾ ಎಂದು ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನ ತಂದೆ-ತಾಯಿ ಇದ್ದಂತೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಯಾರೇ ಸಿಎಂ ಆದರೂ ಕೂಡ ನನಗೆ ಸಂತೋಷ. ಅವರಿಬ್ಬರು ನನಗೆ ಎರಡು ಕಣ್ಣುಗಳಿದ್ದಂತೆ ಎಂದರು. ಗ್ರಾಮದ ಮನೆ ಮನೆಗೂ ಭೇಟಿ ನೀಡಿದ ಪ್ರದೀಪ್ ಈಶ್ವರ್: ಚುನಾವಣಾ ಪ್ರಚಾರದ ವೇಳೆ ಕೊಟ್ಟ ಮಾತಿನಂತೆ…
ಬಾಲಿವುಡ್ ನಟ ಹೃತಿಕ್ ರೋಷನ್ ಹೋದಲ್ಲಿ ಬಂದಲ್ಲೆಲ್ಲಾ ಗರ್ಲ್ ಫ್ರೆಂಡ್ ಜೊತೆ ಕಾಣಿಸಿಕೊಳ್ಳುತ್ತಿರುತ್ತಾರೆ. ಹೃತಿಕ್ ‘ಫೈಟರ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು ಹೆಚ್ಚು ಹೆಚ್ಚು ಸದ್ದು ಮಾಡುತ್ತಿರುವುದು ಗೆಳತಿ ಸಬಾ ಕಾರಣದಿಂದಾಗಿ. ಇದೀಗ ಸಬಾ ಜೊತೆ ವಾಸಿಸಲು ಮದುವೆಗೂ ಮುನ್ನವೇ ಐಷಾರಾಮಿ ಅಪಾರ್ಟ್‌ಮೆಂಟ್‌ವೊಂದನ್ನ ಹೃತಿಕ್ ಖರೀದಿಸಿದ್ದಾರೆ. 2014ರಲ್ಲಿ ಪತ್ನಿ ಸುಸೇನ್ ಖಾನ್ ಗೆ ಡಿವೋರ್ಸ್ ನೀಡಿದ ಬಳಿಕ ಹೃತಿಕ್ ಸಬಾ ಆಜಾದ್ ಜೊತೆ ಡೇಟಿಂಗ್‌ನಲ್ಲಿದ್ದಾರೆ. ಈಗಾಗಲೇ ಇಬ್ಬರು ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಸಬಾಗಾಗಿ ಹೃತಿಕ್ ದುಬಾರಿ ಮನೆ ಉಡುಗೊರೆಯಾಗಿ ನೀಡಿದ್ದಾರೆ. ಹೃತಿಕ್ ರೋಷನ್ ಮತ್ತು ಸಬಾ ಆಜಾದ್ ಇಬ್ಬರೂ ಒಟ್ಟಿಗೆ ಇರಲು ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ್ದಾರಂತೆ. ಇಬ್ಬರೂ ಸದ್ಯದಲ್ಲೇ ಹೊಸ ಮನೆಗೆ ಶಿಫ್ಟ್ ಆಗುತ್ತಿದ್ದಾರೆ ಎನ್ನಲಾಗಿದೆ. ಮುಂಬೈನ ಜುಹು – ವರ್ಸೋವ ರಸ್ತೆಯಲ್ಲಿ ಹೃತಿಕ್ ಮತ್ತು ಸಬಾ ಹೊಸ ಮನೆ ಇದ್ದು 3 ಫ್ಲೋರ್ ಇರುವ ಅಪಾರ್ಟ್‌ಮೆಂಟ್ ಇದಾಗಿದೆ. ಬರೋಬ್ಬರಿ 100 ಕೋಟಿ ರೂಪಾಯಿಗೆ ಈ ಹೊಸ ಮನೆ…
ಶಿಮ್ಲಾ: ರಿಲೀ ರೆಸ್ಸೋ, ಪೃಥ್ವಿ ಶಾ ಸ್ಫೋಟಕ ಅರ್ಧ ಶತಕ ಹಾಗೂ ಇಶಾಂತ್ ಶರ್ಮಾ ಮತ್ತು ನಾರ್ಟ್ಜೆ ಬಿಗಿ ಬೌಲಿಂಗ್ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತು. ಇದರಿಂದ ಪಂಜಾಬ್‌ನ ಪ್ಲೇ ಆಫ್ ಕನಸು ಭಗ್ನಗೊಂಡಿತು. ಬುಧವಾರ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 213 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆ ಬಳಿಕ ಧವನ್ ಪಡೆಯನ್ನು 8 ವಿಕೆಟ್‌ಗಳಿಗೆ 198 ರನ್‌ಗಳಿಗೆ ಕಟ್ಟಿಹಾಕಿ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವಾರ್ನರ್ ಪಡೆ ಉತ್ತಮ ಬ್ಯಾಟಿಂಗ್ ಮಾಡಿತು. ಆರಂಭಿಕರಾಗಿ ಫೀಲ್ಡಿಗಿಳಿದ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಉತ್ತಮ ಶುಭಾರಂಭ ನೀಡಿದರು. ಮೊದಲ ವಿಕೆಟ್‌ಗೆ 94 ರನ್ ಜೊತೆಯಾಟವಾಡಿ ತಂಡಕ್ಕೆ ನೆರವಾದರು. 46 ರನ್ ಪೇರಿಸಿದ್ದ ವಾರ್ನರ್ ಚೆಂಡನ್ನು ಬೌಂಡರಿಗೆ ಅಟ್ಟಲು ಮುಂದಾಗಿ…
ಲಖನೌ: ಮಂಗಳವಾರ ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಮೈದಾನದಲ್ಲಿ ನಡೆದಿದ್ದ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಲಖನೌ ಸೂಪರ್ ಜಯಂಟ್ಸ್ ತಂಡ 5 ರನ್‌ಗಳಿಂದ ಗೆಲುವು ಸಾಧಿಸಿತು. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಲಖನೌ ಸೂಪರ್ ಜಯಂಟ್ಸ್ ತಂಡ, ಐಪಿಎಲ್ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಯಿತು. ಈ ಪಂದ್ಯದ ಸೋಲು ಮುಂಬೈ ಇಂಡಿಯನ್ಸ್‌ಗೆ ಭಾರಿ ಹಿನ್ನಡೆಯನ್ನು ತಂದೊಡ್ಡಿದೆ. ಈ ಪಂದ್ಯದಲ್ಲಿ ಗೆಲುವು ಪಡೆದಿದ್ದರೆ ಮುಂಬೈ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಅವಕಾಶವಿತ್ತು. ಅಂದ ಹಾಗೆ ಮುಂಬೈ ಇಂಡಿಯನ್ಸ್ ತಂಡದ (-0.128) ರನ್‌ರೇಟ್ ಕಡಿಮೆ ಇದೆ. ಒಂದು ವೇಳೆ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಗೆಲುವು ಪಡೆದರೂ ಕಡಿಮೆ ರನ್‌ರೇಟ್‌ನಿಂದಾಗಿ ಮುಂಬೈಗೆ ಐಪಿಎಲ್ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (+0.166) ಹಾಗೂ ಪಂಜಾಬ್ ಕಿಂಗ್ಸ್ (-0.268) ತಂಡಗಳು ತಮ್ಮ ಮುಂದಿನ ಎರಡೂ ಪಂದ್ಯಗಳಲ್ಲಿ ಗೆದ್ದರೆ ಮುಂಬೈ ಇಂಡಿಯನ್ಸ್ ತನ್ನ ಕೊನೆಯ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ…