Author: Prajatv Kannada

2023ರಲ್ಲಿ ಯುವ ಬ್ಯಾಟರ್‌ ಶುಭಮನ ಗಿಲ್‌ ಮುಟ್ಟಿದ್ದೆಲ್ಲವೂ ಚಿನ್ನ. ಈ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಿರುವ 23 ವರ್ಷದ ಯುವ ಬ್ಯಾಟರ್‌, ಇದೀಗ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲೂ ಶತಕದ ಖಾತೆ ತೆರೆದಿದ್ದಾರೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಶುಭಮನ್ ಗಿಲ್‌, 58 ಎಸೆತಗಳಲ್ಲಿ 101 ರನ್‌ ಬಾರಿಸಿ ಮಿಂಚಿದರು. ಇದರ ಬೆನ್ನಲ್ಲೇ ಗಿಲ್‌ ಆಟಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಟೀಮ್ ಇಂಡಿಯಾ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಕೂಡ ಗುಣಗಾನ ಮಾಡಿದ್ದು, ಯುವ ತಾರೆಯ ಬ್ಯಾಟಿಂಗ್‌ ಸಾಮರ್ಥ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿರಾಟ್‌ ವಿಶೇಷ ಸಂದೇಶವನ್ನೂ ಬರೆದಿದ್ದಾರೆ. ಸನ್‌ರೈಸರ್ಸ್‌ ವಿರುದ್ಧದ ಪಂದ್ಯದದಲ್ಲಿ ಗಿಲ್‌ ಬಾರಿಸಿದ ಶತಕದ ಬಲದಿಂದ ಟೈಟನ್ಸ್‌ 188/9 ರನ್‌ಗಳ ದೊಡ್ಡ ಮೊತ್ತ ದಾಖಲಿಸಿ, ನಂತರ ಎದುರಾಳಿಯನ್ನು 154/9 ರನ್‌ಗಳಿಗೆ ನಿಯಂತ್ರಿಸಿ ಜಯ ದಕ್ಕಿಸಿಕೊಂಡಿತು. ಈ ಮೂಲಕ ಅಂಕಪಟ್ಟಿಯಲ್ಲಿ 18…

Read More

ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ನಟನೆಯ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾ ಸೂಪರ್ ಹಿಟ್ ಆಗಿದ್ದು ಈ ಚಿತ್ರದಿಂದ ಶಾರುಖ್ ಖಾನ್ ಕೀರ್ತಿ ಮತ್ತಷ್ಟು ಹೆಚ್ಚಾಗಿತ್ತು. ಈ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಫರ್ಹಾನ್ ಅಖ್ತರ್ ಇದೀಗ ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಸಿನಿಮಾ ತಂಡದ ಕಡೆಯಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ.  ‘ಡಾನ್ 3’ ಸಿನಿಮಾದಿಂದ ನಟ ಶಾರುಖ್ ಖಾನ್ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಭಾವನೆ ವಿಚಾರದಲ್ಲಿ ಕಿರಿಕ್ ಆದ ಕಾರಣದಿಂದಾಗಿ ಶಾರುಖ್ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಫರ್ಹಾನ್ ಅಖ್ತರ್ ಹಾಗೂ ರಿತೇಶ್ ಸಿದ್ವಾನಿ ಸೇರಿ ‘ಎಕ್ಸೆಲ್ ಎಂಟರ್​ಟೇನ್​ಮೆಂಟ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ರಿತೇಶ್ ಅವರು ‘ಡಾನ್ 3’ ಬಗ್ಗೆ ಅಪ್​ಡೇಟ್ ನೀಡಿದ್ದರು. ಫರ್ಹಾನ್ ಅವರು ಸದ್ಯ ‘ಡಾನ್ 3’ ಕೆಲಸಗಳಲ್ಲಿ ಬ್ಯುಸಿ ಇರುವ ವಿಚಾರವನ್ನು ಅವರು ಖಚಿತಪಡಿಸಿದ್ದರು. ಶಾರುಖ್ ಖಾನ್ ‘ಡಾನ್…

Read More

ವಿವಾದದ ಮೂಲಕವೇ ತೆರೆಗೆ ಬಂದ ದಿ ಕೇರಳ ಸ್ಟೋರಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ದೇಶದ ಅನೇಕ ಕಡೆಗಳಲ್ಲಿ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದ್ದು ಇದುವರೆಗೂ 156 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಸುದೀಪ್ತೋ ಸೇನ್ ನಿರ್ದೇಶನದ ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಟಿ ಅದಾ ಶರ್ಮಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಪ್ರತಿ ದಿನವೂ ಈ ಚಿತ್ರ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್​ 200 ಕೋಟಿ ರೂಪಾಯಿ! ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ. ಈ ಮಧ್ಯೆ ಸಿನಿಮಾದ ಸೀಕ್ವೆಲ್​ ಬಗ್ಗೆ ಸುದ್ದಿ ಕೇಳಿಬಂದಿದೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​…

Read More

ಬಾಲಿವುಡ್ ನಟಿ ನೇಹಾ ಧೂಪಿಯಾ ಮದುವೆಯಾಗಿ 8 ವರ್ಷಗಳ ಬಳಿಕ ತೆರೆ ಹಿಂದಿನ ತಮ್ಮ ಮದುವೆಯ ವಿಷಯವನ್ನು ಮಾತನಾಡಿದ್ದಾರೆ. ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನೇಹಾ ಧೂಪಿಯಾ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಟಾರ್ ನಟರಿಗೆ ನಾಯಕಿಯಾಗಿ ಮಿಂಚಿದ್ದ ನಟಿ, ಸಿನಿಮಾ ಕೆರಿಯರ್‌ನಲ್ಲಿ ಬೇಡಿಕೆ ಇರೋವಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಷ್ಟೊಂದು ಗಡಿ ಬಿಡಿಯಲ್ಲಿ ಮದುವೆಯಾಗಿದ್ಯಾಕೆ.? ಎಂದು ನಟಿ ಇದೀಗ ಪ್ರತಿಕ್ರಿಯಿಸಿದ್ದಾರೆ. ಬೇಡಿಕೆ ಇರುವಾಗಲೇ ನೇಹಾ ಧೂಪಿಯಾ, ಅಂಗದ್ ಬೇಡಿ ಅವರನ್ನು ಮೇ 10, 2018ರಲ್ಲಿ ಮದುವೆಯಾದರು. ನೇಹಾ ಸಿಖ್ ಸಂಪ್ರದಾಯದಂತೆ ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆಯಾದರು. ಮದುವೆಗೂ ಮುನ್ನವೇ ತಾನು ಪ್ರೆಗ್ನೆಂಟ್ ಆಗಿದ್ದೆ, ಹಾಗಾಗಿ ಆತುರದಲ್ಲಿ ಮದುವೆಯಾಗುವ ಸಂದರ್ಭ ಎದುರಾಯಿತು ಎಂದಿದ್ದಾರೆ. ನಾನು ಪ್ರೆಗ್ನೆಂಟ್ ಆಗಿರುವ ವಿಷಯ ತಿಳಿದ ಪೋಷಕರು 2 ದಿನದಲ್ಲಿ ಮದುವೆಯಾಗಬೇಕು ಎಂದು ತಾಕೀತು ಮಾಡಿದರು. ಬಳಿಕ 72 ಗಂಟೆಯಲ್ಲಿ ನನ್ನ – ಅಂಗದ್‌ ಮದುವೆ ಆಪ್ತರ ಸಮ್ಮುಖದಲ್ಲಿ ನೆರವೇರಿತ್ತು.…

Read More

ವಿವಾದದ ನಡುವೆಯೂ ತೆರೆಗೆ ಬಂದ ದಿ ಕೇರಳ ಸ್ಟೋರಿ ಸಿನಿಮಾ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದೆ. ಈ ಮಧ್ಯೆ ತಮಿಳಿನಲ್ಲೂ ಇಂಥದ್ದೇ ಮಾದರಿಯ ಚಿತ್ರವೊಂದು ರೆಡಿಯಾಗಿದ್ದು, ಈ ಚಿತ್ರ ಕೂಡ ವಿವಾದಕ್ಕೆ ಕಾರಣವಾಗಿದೆ. ಆ ಚಿತ್ರವನ್ನು ತಡೆಯಬೇಕು ಎಂದು ಮುಸ್ಲಿಂ ಸಮುದಾಯ ಆಗ್ರಹಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ತಮಿಳಿನ ಫರ್ಹಾನಾ ಸಿನಿಮಾ ಮುಸ್ಲಿಂ ವಿರೋಧ ಧೋರಣೆಯನ್ನು ತೋರುತ್ತಿದೆ. ಹಾಗಾಗಿ ಮೂಲಭೂತವಾದಿಗಳು ಚಿತ್ರವನ್ನು ವಿರೋಧಿಸುತ್ತಿದ್ದಾರೆ. ಈ ಚಿತ್ರ ಮುಸ್ಲಿಂ ಮಹಿಳೆಯ ಮತ್ತೊಂದು ಮುಖವನ್ನು ಅನಾವರಣ ಮಾಡಿದ್ದು ಇದೇ ಕಾರಣಕ್ಕೆ ಮುಸ್ಲಿಂ ಸಮುದಾಯ ಸಾಕಷ್ಟು ವಿರೋದ ಹುಟ್ಟುಹಾಕಿದೆ. ಮುಸ್ಲಿಂ ಮಹಿಳೆಯೊಬ್ಬರು ಬಡತನದ ಕಾರಣದಿಂದಾಗಿ ಲೈಂಗಿಕತೆ ಕುರಿತಾಗಿ ಮಾತನಾಡುವ ಕಾಲ್ ಸೆಂಟರ್ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಆಕೆ ವೃತ್ತಿಗೆ ಸಂಬಂಧಿಸಿದ ಸಂಕಟಗಳು ಏನು, ಬ್ಲಾಕ್ ಮೇಲರ್ ಒಬ್ಬನ ಕಿರುಕುಳದಿಂದ ಆಕೆ ಹೇಗೆ ಪಾರಾಗುತ್ತಾಳೆ ಹೀಗೆ ಕಥೆಯನ್ನು ಒಳಗೊಂಡಿದೆ. ಈ ಕಥೆಗೆ ಇಂಡಿಯನ್ ನ್ಯಾಷನಲ್ ಲೀಗ್…

Read More

ಚಿತ್ರದುರ್ಗ: 2023ರ ರಾಜ್ಯ ವಿಧಾನಸಭಾ ಚುನಾವಣೆ ದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಯಶಸ್ಸು ತಂದುಕೊಟ್ಟಿದೆ. ಚಾಮರಾಜನಗರದಿಂದ ಆರಂಭಗೊಂಡ ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಸಾಗಿತು. ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಸಾಗಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ರಾಜ್ಯದಲ್ಲಿ ಸುಮಾರು 21 ದಿನಗಳ ಕಾಲ ಸಂಚರಿಸಿತು. ಸೆಪ್ಟೆಂಬರ್ 31, 2022ರಿಂದ ಆರಂಭವಾದ ಯಾತ್ರೆ ಅಕ್ಟೋಬರ್ 19, 2022ರವರೆಗೆ ರಾಜ್ಯದ ಒಟ್ಟು ಏಳು ಜಿಲ್ಲೆಗಳನ್ನು ಒಳಗೊಂಡ 511 ಕಿಲೋಮೀಟರ್ ದೂರವನ್ನು ಪ್ರಯಾಣಿಸಿದರು. ಚಾಮರಾಜನಗರ ಜಿಲ್ಲೆಯಿಂದ ಯಾತ್ರೆ ಆರಂಭಿಸಿದ ಕೇಂದ್ರ ನಾಯಕ ರಾಹುಲ್, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಂಚರಿಸಿದರು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಗಡಿಭಾಗದ ಮೂಲಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೋಡೋ…

Read More

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡುತ್ತೇವೆ ಅಂದರು. ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗಣಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾಧ್ಯಕ್ಷ ಇವತ್ತಿಂದ ನಿಮ್ಮ ಪೆನ್ನು ಪೇಪರ್ ಕೆಲಸ ಮಾಡಲಿ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕಿತ್ತು ಹಾಕಲಿ ಎಂದು ಚಾಮರಾಜನಗರ ಕ್ಷೇತ್ರ ಸೋಲಿನ ಕುರಿತು ಸೋಮಣ್ಣ ಪರೋಕ್ಷವಾಗಿ ಒಬ್ಬರ ವಿರುದ್ಧ ವಾಗ್ದಾಳಿ ನಡೆಸಿದರು. ಕ್ಷೇತ್ರಕ್ಕೆ ಅವನು ಮೊದಲು ಬಂದಾಗಲೇ ಒಳಕ್ಕೆ ಬಿಡಬಾರದಿತ್ತು. ಮಠಗಳಿಗೆ ಅನುದಾನ ನೀಡಿ ಅದರಲ್ಲೇ ಕಮಿಷನ್ ಪಡೆದ. ನನ್ನ ವಿರುದ್ಧ ಜಾತಿ ಎತ್ತಿಕಟ್ಟಿದ, ನನ್ನ‌ ಮಗ ಇಲ್ಲಿಗೆ ಬರುತ್ತಾನೆ ಎಂದು ಕಥೆ ಕಟ್ಟಿದ‌. ನನ್ನ ವಿರುದ್ಧ ಅಪಪ್ರಚಾರ ಮಾಡಿದ. ಅವನ ಮಾತು ಕೇಳಿಕೊಂಡು ನನ್ನ ವಿರುದ್ಧ ಕೆಲವರು ಕುತಂತ್ರ ಮಾಡಿದರು. ಅವನಿಗೆ ಯಾರು ಹೇಳಿ ಕೊಟ್ಟರು ಎಂದು ನನಗೆ ಗೊತ್ತು. ಯಥಾರಾಜ…

Read More

ನವದೆಹಲಿ : ಕರ್ನಾಟಕ ಸಿಎಂ ಆಯ್ಕೆ ಇನ್ನೂ ಆಯ್ಕೆಯಾಗಿಲ್ಲ ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಇಂದು ಅಥವಾ ನಾಳೆ ಸಿಎಂ ಆಯ್ಕೆ ಆಗಲಿದೆ. ಸಿಎಂ ಹುದ್ದೆ ಆಯ್ಕೆಯಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ. ಆ ರೀತಿಯ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಣ ಕ್ಷಣಕ್ಕೂ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತೊಂದು ಪಟ್ಟು ಹಿಡಿದಿದ್ದಾರೆ. ಈ ಮೂಲಕ ಮಾಡಲು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರೇ ಧರ್ಮ ಸಂಕಟದಲ್ಲಿ ಸಿಲುಕಿದ್ದಾರೆ. ಹೌದು. ಮಲ್ಲಿಕಾರ್ಜುನ ಖರ್ಗೆ ಮೂಲಕ ರಾಹುಲ್ ಗಾಂಧಿ ಮೇಲೆ ಒತ್ತಡ ಹೇರಲು ಡಿ.ಕೆ ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ರಾಹುಲ್ ಗಾಂಧಿ (Rahul Gandhi) ಜೊತೆಗಿನ ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಖರ್ಗೆ ನಿವಾಸಕ್ಕೆ ಡಿಕೆಶಿ ಆಗಮಿಸಿ ದ್ದಾರೆ. ರಾಹುಲ್ ಗಾಂಧಿಗೆ ಪರಿಸ್ಥಿತಿ ಮನವರಿಕೆ ಮಾಡುವಂತೆ ಖರ್ಗೆಗೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಭವಿಷ್ಯದಲ್ಲಿ ಸಮಸ್ಯೆಯಾಗಬಹುದು. ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ಇದನ್ನು ಅರ್ಥ ಮಾಡಿಸಿ ಎಂದು ಮನವಿ ಮಾಡಿಕೊಂಡಿರುವ ಅವರು, ನೀವು ಸಿಎಂ ಆಗಿ ಇಲ್ಲ ಪರಿಸ್ಥಿತಿ ಅರ್ಥ ಮಾಡಿಸಿ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಿನಲ್ಲಿ ಈಗ ಖರ್ಗೆಯನ್ನ ಡಿಕೆಶಿ ಮನವೊಲಿಸ್ತಾರಾ? ಅಥವಾ ಡಿಕೆಶಿಯನ್ನ ಖರ್ಗೆ…

Read More

ಬೆಂಗಳೂರು: ಶೀಘ್ರದಲ್ಲೇ ಸಿಬಿಐ ನಿರ್ದೇಶಕನಾಗಿ ಅಧಿಕಾರ ವಹಿಸಿಕೊಳ್ಳುವೆ ಎಂದು ಪ್ರವೀಣ್ ಸೂದ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ​ಅಧಿಕಾರವನ್ನು ಶೀಘ್ರದಲ್ಲಿಯೇ ಹಸ್ತಾಂತರ ಮಾಡುತ್ತೇನೆ. ಕರ್ನಾಟಕ ಡಿಜಿ, ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆ ನಿರ್ವಹಣೆಯಿಂದ ಹೊರಬರುತ್ತಿದ್ದೇನೆ. ಇವು ಕರ್ನಾಟಕ ಡಿಜಿ ಆಯಂಡ್​ ಐಜಿಪಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಇದು ಕೊನೆಯ ಟ್ವೀಟ್​ ಆಗಿವೆ ಎಂದು ಬರೆದುಕೊಂಡಿದ್ದಾರೆ. 2020ರಲ್ಲಿ ಈ ಖಾತೆಯ ನಿರ್ವಹಣೆಯನ್ನು ಪ್ರಾರಂಭಿಸಿದ್ದೆ. ಸಾಕಷ್ಟು ವಿಷಯಗಳ ಬಗ್ಗೆ ನಿಮ್ಮೊಂದಿಗೆ ಅಭಿಪ್ರಾಯ ಹಂಚಿಕೊಂಡಿದ್ದೇನೆ. 1.6 ಲಕ್ಷ ಜನ ಈ ಖಾತೆಯನ್ನ ಅನುಸರಿಸುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ಪೊಲೀಸರಿಗೆ ಸಂಬಂಧಿಸಿದ ಅಧಿಕೃತ ವಿಷಯಗಳ ಕುರಿತು ನಿಮ್ಮ ಪ್ರತಿಕ್ರಿಯೆಗಳಿಗಾಗಿ ತುಂಬಾ ಧನ್ಯವಾದಗಳು. ನಾನು ನನ್ನ  ವೈಯಕ್ತಿಕ ಟ್ವಿಟರ್ ಅಕೌಂಟ್ ಬಳಸುವುದನ್ನು ಮುಂದುವರಿಸುತ್ತೇನೆ ಎಂದು ಪ್ರವೀಣ್​ ಸೂದ್​ ತಿಳಿಸಿದ್ದಾರೆ.

Read More