ಬೆಂಗಳೂರು: ಸಿಎಂ ಸ್ಥಾನ ಸಿದ್ದರಾಮಯ್ಯಗೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯಗೆ ಅನುಭವ ಇದೆ. ಕಳೆದ ಬಾರಿಯಂತೆ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ. ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿಕೆ ಶಿವಕುಮಾರ್ ಡಿಸಿಎಂ ಇರಬಹುದು, ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಲೋಕಸಭೆ ಚುನಾವಣೆ ಕೂಡ ಮಾಡ್ತೇವೆ. ನಾನೂ ಕೂಡ ಡಿಸಿಎಂ ಕ್ಲೇಮ್ ಮಾಡ್ತೇನೆ. ಬೇರೆ ಸಮುದಾಯಕ್ಕೆ ಡಿಸಿಎಂ ಕೊಟ್ಟರೆ ಕ್ಲೇಮ್ ಮಾಡ್ತೀನಿ. ವೈಯಕ್ತಿಕವಾಗಿ ಡಿಸಿಎಂ ಬೇಡ, ಸಚಿವನಾಗಿಯೇ ಇರ್ತೀನಿ. ಡಿಕೆ ಶಿವಕುಮಾರ್ ಕೆಲಸ ಕೊಡುಗೆ ಬಹಳ ಇದೆ. ಸಮಾಧಾನಕರ ರೀತಿಯಲ್ಲೇ ಸಂಧಾನ ಆಗಿದೆ ಅವರ ಮಧ್ಯೆ. ಒಬ್ಬರೇ ಸಿಎಂ–ಡಿಸಿಎಂ ಇದ್ದರೆ ಒಳ್ಳೆಯದು ಎಂದರು
Author: Prajatv Kannada
ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ್ತೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಆರ್ ಟಿ ನಗರದಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ರಾಜ್ಯದಲ್ಲಿ ಇಡೀ ಬಿಜೆಪಿ ಸೋಲುವಂತಾಯಿತು. ಬಿಜೆಪಿ ಪಕ್ಷದ ಎಲ್ಲರೂ ನನ್ನ ವಿರುದ್ಧ ನಿಂತರೂ, ಅದರ ಫಲವಾಗಿ ರಾಜ್ಯದಲ್ಲಿ ಬಿಜೆಪಿ ನೆಲ ಕಚ್ಚಿದೆ. ನಾನು ಬಿಜೆಪಿ ಪಕ್ಷ ಬಿಟ್ಟು ಬಂದಿದ್ದು, ಮುಂದೆ ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ್ತೆ ಹೋಗುವುದಿಲ್ಲ. ಕಾಂಗ್ರೆಸ್‍ನಲ್ಲೇ ಮುಂದುವರಿಯುತ್ತೇನೆ. ನಾನು ಪಕ್ಷ ಬಿಟ್ಟು ಹೊರಟಾಗ ಮಾತನಾಡಿಸಬೇಕೆಂಬ ಸಣ್ಣ ಕೆಲಸವನ್ನು ಬಿಜೆಪಿ ಮಾಡಿಲ್ಲ ಎಂದು ಜಗದೀಶ್ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ಚುನಾವಣೆ ಫಲಿತಾಂಶ ಕಳೆದು ನಾನು ಬೆಂಗಳೂರಿಗೆ ಬಂದ ಮೇಲೆ ಸಾಕಷ್ಟು ಕಾಂಗ್ರೆಸ್ ನಾಯಕರು ಮನೆಗೆ ಬಂದು ಮಾತನಾಡಿಸಿ ಹೋಗಿದ್ದಾರೆ. ಡಾ.ಜಿ.ಪರಮೇಶ್ವರ್ ಮಾತನಾಡಿಸಿ ನೀವು ಪಕ್ಷಕ್ಕೆ ಬಂದ ಮೇಲೆ ಒಳ್ಳೆಯದಾಗಿದೆ ಎಂದಿದ್ದರು. ನಾನು ಬಂದ ಮೇಲೆ ಲಿಂಗಾಯತರ ಮತಗಳು ಕೂಡ ಬಂದಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಕಡಿವಾಣ ಹಾಕಲು ಶುರು ಮಾಡಿದ್ದ ‘ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ’ಗೆ ಗ್ರಹಣ ಹಿಡಿದಿದೆ. ಬಿಬಿಎಂಪಿಯ 8 ವಲಯಗಳಲ್ಲೂ ಜಾರಿಗೆ ತರಲು ಉದ್ದೇಶಿಸಿದ್ದ ಪಾವತಿ ಪಾರ್ಕಿಂಗ್ ಯೋಜನೆಗೂ ಮುಹೂರ್ತ ಕೂಡಿ ಬಂದಿಲ್ಲ! ಬಿಬಿಎಂಪಿ ವ್ಯಾಪ್ತಿಯ ಕೇಂದ್ರ ವಾಣಿಜ್ಯ ಪ್ರದೇಶಗಳಾದ ಎಂ.ಜಿ.ರಸ್ತೆ, ಕನ್ನಿಂಗ್‌ಹ್ಯಾಂ ರಸ್ತೆ, ರೆಸಿಡೆನ್ಸಿ ರಸ್ತೆ, ಕಸ್ತೂರಬಾ ರಸ್ತೆ, ರಿಚ್ಮಂಡ್ ರಸ್ತೆ, ಮ್ಯೂಸಿಯಂ ರಸ್ತೆ, ವಿಠಲ್‌ಮಲ್ಯ ರಸ್ತೆ ಸೇರಿದಂತೆ 85 ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿತ್ತು. ಈ ಸಂಬಂಧ ‘ಸೆಂಟ್ರಲ್ ಪಾರ್ಕಿಂಗ್ ಸವೀರ್‍ಸ್’ ಎಂಬ ಸಂಸ್ಥೆಯೊಂದಿಗೆ ಪಾಲಿಕೆಯು 10 ವರ್ಷಗಳ ಅವಧಿಗೆ ಒಡಂಬಡಿಕೆ ಸಹ ಮಾಡಿಕೊಂಡಿದೆ. ಇದರಿಂದ ವಾರ್ಷಿಕ 31.56 ಕೋಟಿ ರೂ. ವರಮಾನ ನಿರೀಕ್ಷಿಸಲಾಗಿತ್ತು. ಸೆಂಟ್ರಲ್ ಪಾರ್ಕಿಂಗ್ ಸವೀರ್‍ಸ್ ಸಂಸ್ಥೆಯು 2020ರ ಸೆಪ್ಟಂಬರ್ 19ರಂದು ಎಂ.ಜಿ.ರಸ್ತೆ ಸೇರಿದಂತೆ 10 ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದು, ಶುಲ್ಕ ವಸೂಲಿ ಆರಂಭಿಸಿತು. ನಗರದ ರಸ್ತೆಗಳನ್ನು ಎ, ಬಿ ಮತ್ತು ಸಿ…
ಬೆಂಗಳೂರು: ಸಿದ್ದರಾಮಯ್ಯ ಅಭಿಮಾನಿ ಸತೀಶ್ ಸಿದ್ದರಾಮಯ್ಯ ಟ್ಯಾಟ್ಯೂ ಹಾಕಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ರಾಜ್ಯದ ಉತ್ತಮ ನಾಯಕ. ಅವರ ಸೇವೆ, ರಾಜ್ಯದಲ್ಲಿ ಜಾರಿಗೊಳಿಸಿರುವ ಯೋಜನೆಯೇ ನನಗೆ ಪ್ರೇರಣೆ. ಎರಡೂವರೆ ವರ್ಷದ ಹಿಂದೆ ಟ್ಯಾಟ್ಯೂ ಹಾಕಿಸಿಕೊಂಡಿದ್ದೆ. ಟ್ಯಾಟ್ಯೂ ನೋಡಿ ಸಿದ್ದರಾಮಯ್ಯ ಸರ್ ಬೈದ್ರು. ಹೇಯ್ ಏನೊ ಇದು, ಹಿಂಗೆಲ್ಲ ಹಾಕಿಸಿಕೊಳ್ಳಬೇಡ ಅಂದ್ರು. ಎರಡು ಏಟು ನನ್ನ ಭುಜದ ಮೇಲೆ ಹೊಡೆದ್ರು. ನಮ್ಮ ಮನೆಯವರು ಸ್ನೇಹಿತರು ಎಲ್ಲರೂ ಖುಷಿ ಪಟ್ರು. ಮತ್ತೆ ಸಿಎಂ ಆದ್ರೆ ಹಲವು ಹಲವು ಯೋಜನೆಗಳನ್ನ ಜಾರಿಗೆ ತರುತ್ತಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಎಂದು ಅಭಿಮಾನಿ ಸತೀಶ್ ಖುಷಿ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಸೋಮವಾರ ಸಿದ್ದರಾಮಯ್ಯನವರ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ. 2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ ನಡೆಸಲಿದ್ದಾರೆ.
ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಜನ್ಪತ್ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಅಧಿಕೃತ ಘೋಷಣೆ ಬಾಕಿ ಇದ್ದು ರಾಹುಲ್ ಗಾಂಧಿ ಭೇಟಿ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ. ರಾಹುಲ್ ಗಾಂಧಿಯವರು ಸಿದ್ದರಾಮಯ್ಯ, ಡಿಕೆಶಿ ಜತೆ ಮಾತುಕತೆ ನಡೆಸಿ ಚರ್ಚೆ ಬಳಿಕ ಘೋಷಣೆ ಸಾಧ್ಯತೆ.
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದ್ದು ಘೋಷಣೆಯೊಂದೇ ಬಾಕಿ ಇದೆ. ಶುಕ್ರವಾರ ಅಮವಾಸ್ಯೆ ಇರುವುದರಿಂದ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭಾರೀ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಬರುವ ಸಾಧ್ಯತೆ ಇರುವುದರಿಂದ, ಸಂಭ್ರಮಿಸಲು ಸೇರುವ ಸಾಧ್ಯತೆ ಇರುವುದರಿಂದ ಖಾಕಿ ಭದ್ರತೆ ಹೆಚ್ಚಿಸಲಾಗಿದೆ.
ಬೆಂಗಳೂರು: ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಸಿದ್ದರಾಮಯ್ಯನವರ ಅಸಹಾಯಕತೆ ಕೆಲವರನ್ನು ಪಕ್ಷ ಬಿಡಲು ಪ್ರೋತ್ಸಾಹಿಸಿತ್ತು ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ. ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು’ ಎಂದು ಬರೆದುಕೊಂಡಿದ್ದಾರೆ. ಇನ್ನೂ ಇದೀಗ ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಗಾದಿಗಾಗಿ ಪಟ್ಟು ಬಿಡದೇ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಟ್ವೀಟ್ಗಳನ್ನು ಬಿಜೆಪಿ ನಾಯಕರು ಹರಿಯ ಬಿಡುತ್ತಿರುವುದು ಅಚ್ಚರಿಯ ನಡೆಯಾಗಿದೆ. ಮೇಲ್ನೋಟಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರೇ ಕಾರಣವಾದರಾ ಎನ್ನುವ ಪ್ರಶ್ನೆಯನ್ನು ಈ ಟ್ವೀಟ್ಗಳು ಹುಟ್ಟು ಹಾಕುತ್ತವೆ. ಇದರಿಂದ ಕಾಂಗ್ರೆಸ್‌ನ ಸಿಎಂ ಆಯ್ಕೆ ಮೇಲೆ ಪ್ರಭಾವ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದ್ದು ಘೋಷಣೆಯೊಂದೇ ಬಾಕಿ ಇದೆ. ಶುಕ್ರವಾರ ಅಮವಾಸ್ಯೆ ಇರುವುದರಿಂದ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭಾರೀ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಬರುವ ಸಾಧ್ಯತೆ ಇರುವುದರಿಂದ, ಸಂಭ್ರಮಿಸಲು ಸೇರುವ ಸಾಧ್ಯತೆ ಇರುವುದರಿಂದ ಖಾಕಿ ಭದ್ರತೆ ಹೆಚ್ಚಿಸಲಾಗಿದೆ.