ಚಿಕ್ಕಬಳ್ಳಾಪುರ: ಮತದಾನಕ್ಕೆ 12 ಗಂಟೆ ಬಾಕಿ ಇರುವಾಗ ಜೆಡಿಎಸ್‌ನವರು ಮಾಡಿದ ರಾಜಕೀಯ ಷಡ್ಯಂತ್ರದಿಂದ ನನ್ನ ಸೋಲಾಗಿದೆ. ಕ್ಷೇತ್ರದ ಮತದಾರರು ಹಾಗೂ ರೈತರು ಯಾವುದೇ ಕಾರಣಕ್ಕೆ ಮಾಜಿ ಶಾಸಕ ಬಚ್ಚೇಗೌಡರ ಈ ಕೆಲಸವನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದವರು ಉದ್ದೇಶಪೂರ್ವಕವಾಗಿ ರಾಜಕೀಯ ಹುನ್ನಾರ ಮಾಡಿ ಕಾಂಗ್ರೆಸ್‌ಗೆ ಮತ ಕೊಡಿಸಿದ್ದಾರೆ. ವದಂತಿಗಳಿಗೆ ಕಿವಿಗೊಟ್ಟು ಷಡ್ಯಂತ್ರ ನಡೆಸಿದ್ದಾರೆ. ಕೆ.ಪಿ.ಬಚ್ಚೇಗೌಡರು ಮಾಡಿರುವ ಈ ಹುನ್ನಾರವನ್ನು ಚರಿತ್ರೆಯಲ್ಲಿ ಈ ಕ್ಷೇತ್ರದ ಮತದಾರರು ಮತ್ತು ರೈತರು ಕ್ಷಮಿಸುವುದಿಲ್ಲ. ದಿವಂಗತರಾಗಿರುವ ಅವರ ತಂದೆಯ ಆತ್ಮಕ್ಕೂ ಶಾಂತಿ ಸಿಗದು ಎಂದರು. ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಹುನ್ನಾರ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದೆ. ಈ ಮೂಲಕ ಅವರ ಮತದಾರರಿಗೆ ಅವರೇ ಮೋಸ ಮಾಡಿದ್ದಾರೆ. ಈ ಹುನ್ನಾರವನ್ನು ಯಾವುದೇ ಕಾರಣಕ್ಕೂ ಮತದಾರರು ಮತ್ತು ರೈತರು ಕ್ಷಮಿಸುವುದಿಲ್ಲ ಎಂದು ತಿಳಿಸಿದರು. ಜೆಡಿಎಸ್‌ಗೆ ಮತ ಹಾಕುವವರ ದಿಕ್ಕು ತಪ್ಪಿಸಿ ಕಾಂಗ್ರೆಸ್‌ಗೆ ಮತ ಹಾಕಿಸಿದ್ದಾರೆ.…
Author: Prajatv Kannada
ಮೈಸೂರು: ಕರ್ನಾಟಕ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದರ ಮೇಲೆ ಬೆಟ್ಟಿಂಗ್ (Betting) ಕಟ್ಟಿದ ಅನೇಕ ಪ್ರಕರಣಗಳು ನಡೆದಿದ್ದವು. ಇದೀಗ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲೂ ಬೆಟ್ಟಿಂಗ್ ಶುರವಾಗಿದೆ. ಹೌದು, ಮೈಸೂರು ತಾಲೂಕಿನ ಕಡವೇ ಕಟ್ಟೆಹುಂಡಿಯ ಅಭಿಮಾನಿಯೊಬ್ಬ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆಯಾಗುತ್ತಾರೆ ಎಂದು ಒಂದಲ್ಲ ಮೂರು ಟಗರುಗಳನ್ನು ಬಾಜಿ (ಬೆಟ್ಟಿಂಗ್) ಇಟ್ಟಿದ್ದಾನೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೇ ಆಗುತ್ತಾರೆ, ಒಂದಲ್ಲ ಮೂರು ಟಗರು ಬಾಜಿ ಕಟ್ಟುತ್ತೇನೆ ಎಂದು ಚಂದ್ರು ಸವಾಲು ಹಾಕಿದ್ದಾನೆ. ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ ಅಂತಾ ಚಂದ್ರು ಮೂರು ಟಗರುಗಳನ್ನು ಬೆಟ್ಟಿಂಗ್ ಕಟ್ಟಿದ್ದಾರೆ. ಆದರೆ ಯಾರು ಕೂಡ ಬೆಟ್ಟಿಂಗ್ ಕಟ್ಟಲು ಮುಂದೆ ಬಂದಿರಲಿಲ್ಲ. ಚಂದ್ರ ನಿರೀಕ್ಷೆಯಂತೆ ಸಿದ್ದರಾಮಯ್ಯ ವರುಣಾದಲ್ಲಿ ಗೆದ್ದಿದ್ದು, ಮೂರು ಟಗರುಗಳು ಚಂದ್ರು ಜೊತೆಯೇ ಉಳಿದುಕೊಂಡಿವೆ. ಸದ್ಯ ಇದೇ ಅಭಿಮಾನಿ ಚಂದ್ರು, ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಮತ್ತೆ ಅದೇ ಮೂರು ಟಗರುಗಳನ್ನು ಬಾಜಿಗಿಟ್ಟಿದ್ದಾನೆ. ಸಿದ್ದರಾಮಯ್ಯ ಅವರು ಸಿಎಂ ಆಗುತ್ತಾರೆ ಎಂದು ಚಂದ್ರುಗೆ ಎಷ್ಟು ಆತ್ಮವಿಶ್ವಾಸ ಇದೆ ಎಂದರೆ ಟಗರನ್ನು ಸಿದ್ದರಾಮಯ್ಯಗೆ ಕೊಡಲು ನಿರ್ಧಾರಿದ್ದಾರೆ. ಸಿದ್ದರಾಮಯ್ಯ ಸಿಎಂ…
ಹಾಸನ: ಮಾಜಿ ಪಿಎಂ ಹೆಚ್.ಡಿ ದೇವೇಗೌಡ (HD Devegowda) ರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು. ಕಾಂಗ್ರೆಸ್ (Congress) ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ…
ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು, ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.. ಇಂದು ವಿ ಸೋಮಣ್ಣ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸೋಮಣ್ಸ ನಮ್ಮ ಹಿರಿಯ ನಾಯಕರು. 40 ವರ್ಷ ಜನಸೇವೆ ಮಾಡಿದವರು. ಬೆಂಗಳೂರಿನ ಅಭಿವೃದ್ಧಿಗೆ ಅನೇಕ ಕೊಡುಗೆ ಕೊಟ್ಟಿದ್ದು, ಗೋವಿಂದರಾಜನಗರವನ್ನು ಮಾದರಿ ಕ್ಷೇತ್ರ ಮಾಡಿದ್ದಾರೆ. ಸೋಮಣ್ಣನವರು ಯಾವಾಗ ಹಿನ್ನೆಡೆಯಾದ್ರೂ ಮತ್ತೆ ಪುಟಿದೇಳ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ. ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ. ಆದರೆ ಮತ್ತೆ ಅದನ್ನು ಮೀರಿ ಬರಬೇಕು. ಸೋಮಣ್ಣ ಮತ್ತು ಪಕ್ಷ ಎರಡು ಕೂಡ ಆ ಕೆಲಸ ಮಾಡಲಿದೆ ಎಂದರು. ಇನ್ನೂ ರಾಜ್ಯಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಆ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಆಮೇಲೆ ಮಾತನಾಡ್ತೀನಿ ಎಂದರು. ಇನ್ನೂ ಶಾಸಕಾಂಗ ಸಭೆ ವಿಚಾರವಾಗಿ ಮಾತನಾಡಿ, ಈ ಸಂಬಂಧ…
ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆ (Assembly election)ಪ್ರಯುಕ್ತ ಮತದಾರರನ್ನು ತನ್ನತ್ತ ಸೆಳೆಯಲು ರಾಜಕೀಯ ಅಭ್ಯರ್ಥಿಗಳು ಇನ್ನಿಲ್ಲದ ತಯಾರಿ ನಡೆಸಿದ್ದಾರೆ. ಅದರ ಭಾಗವಾಗಿ ಬೆಂಗಳೂರಿನ ಹಲಸೂರು ಗೇಟ್ ಠಾಣೆಯಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡ ಮಟ್ಟದ ಹಣದ ದಂಧೆಗೆ ಈ ಮಾರ್ಗ ಬಳಕೆಯಾಗುವುದು ಕೇಳಿ ಬಂದಿದೆ. ಅರ್ಧ ಅಥವಾ ಪೂರ್ತಿ ನೋಟನ್ನು ದಂಧೆಯ ರೂವಾರಿಗಳು ಹೇಳಿದವರಿಗೆ ತೋರಿಸಬೇಕು. ನೋಟಿನಲ್ಲಿರುವ ನಂಬರುಗಳು ಹೊಂದಾಣಿಕೆಯಾದರೆ ಮಾತ್ರ ಹಣದ ವರ್ಗಾವಣೆಯಾಗುತ್ತದೆ. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಯೂ ಇಂಥಹದ್ದೇ ತಂತ್ರ ಮಾಡಲಾಗಿದೆ. ಕಬ್ಬನ್ ಪೇಟೆಯಲ್ಲಿ ದುಡ್ಡು ಹಂಚಲು ಈ ವಿಧಾನವೇ ಬಳಕೆಯಾಗಿದ್ದು, ಇಪ್ಪತ್ತು ರೂಪಾಯಿ ತೋರಿಸಿದರೆ ಎರಡು ಸಾವಿರ ರೂ ಹಣ ಸಿಗುತ್ತಿತ್ತು ಎಂದು ಆರೋಪಿಸಲಾಗಿದೆ. ಬೆಳಗ್ಗೆ ಮತದಾರರಿಗೆ ಇಪ್ಪತ್ತು ರೂಪಾಯಿ ಹಂಚುತ್ತಿದ್ದ ಆರೋಪಿಗಳು ಅವರು ಹೇಳಿದವರ ಬಳಿ ಹೋಗಿ ಆ ನೋಟುಗಳನ್ನು ತೋರಿಸಲು ಸೂಚಿಸುತ್ತಿದ್ದರು. ಇಪ್ಪತ್ತು…
ಬೆಂಗಳೂರು: ಕಾಂಗ್ರೆಸ್ನವರದ್ದು ಚೈನಾ ಬಜಾರ್ ಗ್ಯಾರಂಟಿ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ಗ್ಯಾರಂಟಿ ಬಗ್ಗೆ ಅಪಸ್ವರ ಶುರುವಾಗಿದೆ. ಹಲವೆಡೆ 200 ಯುನಿಟ್ ವಿದ್ಯುತ್ ಬಿಲ್ ಕಟ್ಟಲ್ಲ ಅಂತಿದ್ದಾರೆ. ತೆರಿಗೆ ಕಟ್ಟುವವರಿಗೆ ಗ್ಯಾರಂಟಿ ಅನ್ವಯ ಆಗಲ್ಲ ಅಂತಾ ಡಾ.ಜಿ.ಪರಮೇಶ್ವರ್ ಹಾಗೂ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಡೆಲ್ಲಿ ಮಾಲ್ ಹಾಗೇ, ಅದು ಯಾವುದೇ ಉಪಯೋಗಕ್ಕೆ ಬರಲ್ಲ. ಕಾಂಗ್ರೆಸ್ನದ್ದು ಸುಳ್ಳು ಭರವಸೆ ಅಂತ ಸ್ಪಷ್ಟವಾಗಿದೆ ಎಂದರು.
ದೇವನಹಳ್ಳಿ: ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಅವರು ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿಯಲ್ಲಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿದ್ದಾರೆ ಅಂತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಕೃಷ್ಣಪ್ಪ, ಗಣೇಶಪ್ಪ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿ ಸೇರ್ಪಡೆಯಾಗಿ ಸಚಿವರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಜೊತೆಗೆ ಅಣ್ಣ, ತಮ್ಮಂದಿರ ನಡುವೆ ಜಮೀನು ವ್ಯಾಜ್ಯ ನಡೆಯುತ್ತಿತ್ತು. ಈ ವಿಚಾರಕ್ಕೆ ಗಲಾಟೆಯಾಗಿ ಕೃಷ್ಣಪ್ಪ ಕೊಲೆ ಆಗಿದೆ. ಅವರ ಪಕ್ಷದವರೇ ಕಿತ್ತಾಡಿಕೊಂಡು ಕಾಂಗ್ರೆಸ್ ಮೇಲೆ ಹಾಕುತ್ತಿದ್ದಾರೆ ಎಂದರು. ಮಾಜಿ ಸಚಿವರು ತಾಲೂಕಿನಲ್ಲಿ ಶಾಂತಿ ಕದಡಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕುತಂತ್ರ ರಾಜಕಾರಣವನ್ನು ಬಿಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಕಿಡಿಕಾರಿದರು. ಎಂಟಿಬಿ ಕಡೆಯವರು ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಸೋಲಿನ ಹತಾಶೆಯಲ್ಲಿ ಮಹಿಳೆಯರು, ವೃದ್ದರ ಮೇಲೆ ಹಲ್ಲೆ ಮಾಡಿದ್ದಾರೆ. ಆ ಮೂಲಕ ನಮ್ಮ ಕ್ಷೇತ್ರದಲ್ಲಿ ಶಾಂತಿ ಕದಡಿಸುವ ಪ್ರಯತ್ನ…
ಬೆಂಗಳೂರು: ತಾನು ಜನರಿಗೆ ನೀಡಿದ ಗ್ಯಾರಂಟಿಗಳಿಗೆ ಇದೀಗ ಷರತ್ತು ವಿಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ,(Ashwatthanarayan) ಎಲ್ಲರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಈಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತ ಹೇಳುತ್ತಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಬೇಕು ಎಂದು ಆಗ್ರಹಿಸಿದರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದ್ದಾರೆ. 200 ಯುನಿಟ್ ಕರೆಂಟ್ ಫ್ರೀ, 2000 ರೂ. ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ದು ಎಲ್ಲರಿಗೂ ಕೊಡಲಿ. ಎಂದರು. ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟಲು ನಿರಾಕರಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಹೇಳಿರುವುದನ್ನು ಜನ ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟುವಂತಿಲ್ಲ ಅಂತ ಹೇಳಿದ್ದರು, ಅದಕ್ಕೆ ಕಟ್ಟುತ್ತಿಲ್ಲ. ನಾವು ಇದನ್ನು ಅಸ್ತ್ರ ಮಾಡಿಕೊಂಡಿಲ್ಲ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ ಸೋಲಿಗೆ ಒಂದೊಂದೇ ಕಾರಣ ಹುಡುಕುವಲ್ಲಿ ಬಿಜೆಪಿ ಮಗ್ನವಾಗಿದೆ. ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿಗೆ ಪ್ರಮುಖ ಕಾರಣವಾಗಿ ತಿಳಿದುಬಂದಿದ್ದೇನೆಂದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ. ಇದುವೇ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದ ಬಿಜೆಪಿಗೆ ಚುನಾವಣೆಯಲ್ಲಿ ಬಿಸಿ ತುಪ್ಪುವಾಯಿತು. ಅಲ್ಲದೆ, ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲರಾಗಿದ್ದಲ್ಲದೆ, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಆಸಕ್ತಿ ತೋರಿಸದೇ ಇದ್ದಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ತಿಳಿದುಬಂದಿದೆ.
ಬೆಂಗಳೂರು: ಪ್ರಧಾನಿ ಮೋದಿ ಅವರ ಭಾಷಣದ ವೇಳೆ ಸಂಸದ ತೇಜಸ್ವಿ ಸೂರ್ಯ (Tejasvi Surya)ನಿದ್ದೆಗೆ ಜಾರಿರುವ ವಿಡಿಯೋ ಸೆರೆಯಾಗಿದೆ. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ (Job fair program)ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿದ್ದರೆ, ಇತ್ತ ಸಂಸದ ತೇಜಸ್ವಿ ಸೂರ್ಯ ಅವರು ನಿದ್ದೆಗೆ ಜಾರಿದ್ದಾರೆ. ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರೋಜ್‌ಗಾರ್ ಮೇಳ ನಡೆಯುತ್ತಲಿತ್ತು. ಇಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಳದ ಅಧ್ಯಕ್ಷತೆಯನ್ನು ವಹಿಸಿದ್ದರು. Video Player 00:00 00:10 ಈ ವೇಳೆ ತೇಜಸ್ವಿ ಸೂರ್ಯ ಅವರು, ಕಾರ್ಯಕ್ರಮಕ್ಕೂ ನನಗೂ ಸಂಬಂಧವಿಲ್ಲ ಎಂಬಂತೆ ನಿದ್ರೆಗೆ ಜಾರಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇನ್ನೂ ರಾಜ್ಯದಲ್ಲಿ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರಿನಲ್ಲಿ ಈ ಮೇಳದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. 71 ಸಾವಿರ ನೇಮಕಾತಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಿದ್ದಾರೆ. ವರ್ಚುವಲ್ ಮೂಲಕ ಮೋದಿ ಅವರು ಪತ್ರ ವಿತರಿಸಲಿದ್ದು, ದೇಶದ 45…