ಬೆಂಗಳೂರು ಗ್ರಾಮಾಂತರ: ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ, ಮಗನೇ ದೊಡ್ಡಪ್ಪನನ್ನ ಕೊಲೆಮಾಡಿರುವ ಘಟನೆ ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ (56) ಮೃತ ರ್ದುದೈವಿ. ಹೌದು ಮೇ.10 ರಂದು ನಡೆದಿದ್ದ ವಿಧಾನಸಭೆ ಚುನಾವಣೆ ಫಲಿತಾಂಶ ಮೇ.13 ಹೊರಬಿದ್ದಿದೆ. ಅದರಂತೆ ಕಳೆದ ರಾತ್ರಿ ಚುನಾವಣೆಯಲ್ಲಿ ಓಟ್ ಹಾಕಿಲ್ಲ ಎನ್ನುವ ವಿಚಾರಕ್ಕೆ ಮೃತ ಕೃಷ್ಣಪ್ಪ ಹಾಗೂ ಸಹೋದರ ಗಣೇಶಪ್ಪ ನಡುವೆ ಗಲಾಟೆಯಾಗಿದೆ. ಇದನ್ನ ಗಮನಿಸಿದ ಗಣೆಶಪ್ಪನ ಮಗ ಆದಿತ್ಯಾ ಎಂಬವವನು ದೊಡ್ಡಪ್ಪನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Author: Prajatv Kannada
ಬೆಂಗಳೂರು: ಸಿದ್ದರಾಮಯ್ಯ, ಡಿಕೆಶಿ ನನ್ನ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ. ನನಗೆ ಇಬ್ಬರೂ ಕೂಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ’ ಎಂದು ತಿಳಿಸಿದರು. ಶಾಸಕರು ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಎಲ್ಲ ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ’ ಎಂದರು ಹೇಳಿದರು. ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿದ ಮೂವರು ವೀಕ್ಷಕರು ರವಿವಾರ ತಡರಾತ್ರಿಯವರೆಗೂ ಪಕ್ಷದ ಶಾಸಕರಿಂದ ಲಿಖಿತ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಕೀರ್ತಿ ತರುವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (Praveen Sood)ಹೇಳಿದರು. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಸಿಬಿಐ ನಿರ್ದೇಶಕನಾಗುವ ನಿರೀಕ್ಷೆ ಇರಲಿಲ್ಲ. ನನ್ನ ಆಯ್ಕೆ ಅಚ್ಚರಿ ನನಗೆ ಅಚ್ಚರಿಯಾಗಿದೆ ಎಂದರು. ‘ಮೇ.25 ರಂದು ದೆಹಲಿಗೆ ತೆರಳಿ ಸಿಬಿಐ ನಿರ್ದೇಶಕನಾಗಿ ಅಧಿಕಾರ ಸ್ವೀಕರಿಸಲಿದ್ದೇನೆ. ನನ್ನ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಮಹತ್ವದ ಹೊಣೆಗಾರಿಕೆ ನೀಡಿದೆ. ಆ ನಂಬಿಕೆಗೆ ಚ್ಯುತಿ ಬಾರದಂತೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ನಾನು ಪೊಲೀಸ್ ಅಧಿಕಾರಿಯಾಗಿ ಸುದೀರ್ಘವಾಗಿ ಸೇವೆ ಸಲ್ಲಿಸಿರುವ ಕರ್ನಾಟಕ ರಾಜ್ಯಕ್ಕೂ ಕೀರ್ತಿ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿಬಿಐ ಹಾಗೂ ಪೊಲೀಸ್ ಕಾರ್ಯನಿರ್ವಹಣೆ ವಿಭಿನ್ನವಾಗಿದೆ. ಸದ್ಯ ಸಿಬಿಐ ನಿರ್ದೇಶಕ ಕೆಲಸದ ಬಗ್ಗೆ ಯಾವುದೇ ಪೂರ್ವಯೋಜನೆಗಳನ್ನು ನಾನು ಹಾಕಿಕೊಂಡಿಲ್ಲ. ನನಗೆ ನೀಡಿರುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ಕೆಲಸ ಮಾಡಿ ಘಟನೆ ತರುತ್ತೇನೆ ಎಂದು ಹೇಳಿದರು.
ಬೆಂಗಳೂರು : ಹನಿಮೂನ್ ಅವಧಿ ಇರುವವರೆಗೆ ಎಲ್ಲವೂ ಚೆನ್ನಾಗಿರುತ್ತೆ, ಆಮೇಲೆ ಏನಾಗುತ್ತದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಶಾಸಕ ಸಿಟಿ ರವಿ ಹೇಳಿದರು. ಬೆಂಗಳೂರಿನಲ್ಲಿ ಬೊಮ್ಮಾಯಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರ ಜೊತೆ ಸಿಟಿ ರವಿ ಮಾತನಾಡಿದರು.ಕಾಂಗ್ರೆಸ್ ನವರು ಉಚಿತ ವಿದ್ಯುತ್ ಸೇರಿದಂತೆ ಹಲವು ಭರವಸೆಗಳನ್ನು ಘೋಷಣೆ ಮಾಡಿದ್ದಾರೆ, ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ನೀಡಲು ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ಸಿಟಿ ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬೊಮ್ಮಾಯಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರ ಜೊತೆ ಸಿಟಿ ರವಿ ಮಾತನಾಡಿದರು. ಈ ಬಾರಿಯ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ನಾವು ಸೈದ್ದಾಂತಿಕ ಹೋರಾಟ ಮುಂದುವರಿಸುತ್ತೇವೆ, ಜೆಡಿಎಸ್ ನವರು ಕಾಂಗ್ರೆಸ್ ಗೆ ಸಪೋರ್ಟ್ ಮಾಡಿದ್ದಾರೆ. ಉಚಿತ ವಿದ್ಯುತ್, 2000 ಹಣ , 10 ಕೆಜಿ ಅಕ್ಕಿ ಕೊಡುವುದು ಒಳ್ಳೆಯ ಯೋಜನೆ ಅಲ್ವಾ..? ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಬಗ್ಗೆ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್ ಗಿಫ್ಟ್ ನೀಡುತ್ತೋ, ಇಲ್ಲವೋ ಗೊತ್ತಿಲ್ಲ, ಆದರೆ ರಾಜ್ಯದ ಜನರು ನನ್ನ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಾನು ದೆಹಲಿಗೆ ಹೋಗುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ. ಸಿಎಂ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಸಿಎಂ ಆಯ್ಕೆ ಬಗ್ಗೆ ನಮ್ಮ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಾಸಕಾಂಗ ಸಭೆಯಲ್ಲಿ ಒನ್ ಲೈನ್ ರೆಸ್ಯೂಲೇಷನ್ ಪಾಸ್ ಮಾಡಿದ್ದೇವೆ. ಸಿಎಂ ಆಯ್ಕೆ ಬಗ್ಗೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಮಾಡಲಿದ್ದಾರೆ.
ವೃಷಭ ಸಂಕ್ರಾಂತಿ,ಅಪರಾ ಏಕಾದಶಿ ಸೂರ್ಯೋದಯ: 05.54 AM, ಸೂರ್ಯಾಸ್ತ : 06.38 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ವೈಶಾಖ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ದಶಮಿ 02:46 AM ತನಕ ನಂತರ ಏಕಾದಶಿ ನಕ್ಷತ್ರ: ಇವತ್ತು ಪೂರ್ವಾ ಭಾದ್ರ 09:08 AM ತನಕ ನಂತರ ಉತ್ತರಾ ಭಾದ್ರ ಯೋಗ: ಇವತ್ತು ವೈಧೃತಿ 03:57 AM ತನಕ ನಂತರ ವಿಷ್ಕುಂಭ ಕರಣ: ಇವತ್ತು ವಿಷ್ಟಿ 02:46 AM ತನಕ ನಂತರ ಬವ 01:52 PM ತನಕ ನಂತರ ಬಾಲವ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 01.31 AM to 03.02 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:46 ನಿಂದ ಮ.12:38 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ…
ಸಿದ್ದರಾಮಯ್ಯ ಜೊತೆಗೆ ಜಮೀರ್ ಅಹ್ಮದ್ ಖಾನ್ ಕೂಡ ದೆಹಲಿಗೆ ತೆರಳಲಿದ್ದಾರೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಹೈಕಮಾಂಡ್ ಹೆಚ್ಚಿನ ಮೊರೆ ಹೋಗುವ ಸಾಧ್ಯತೆ ಇದೆ. ನಿನ್ನೆ ಲಿಖಿತ ರೂಪದಲ್ಲಿ ಬಹುತೇಕರಿಂದ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದು ನಮೂದು ಮಾಡಲಾಗಿತ್ತು. ಶೇ.40 ಕ್ಕಿಂತ ಹೆಚ್ಚು ಮಂದಿ ಶಾಸಕರಿಂದ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ನಮೂದು ಮಾಡಲಾಗಿದೆ. ಹೀಗಾಗಿ ಸಿಎಂ ಸ್ಥಾನಕ್ಕಾಗಿ ವಿಶೇಷ ವಿಮಾನದ ಮೂಲಕ ಎಚ್ಎಎಲ್ ನಿಂದ ಸಿದ್ದರಾಮಯ್ಯ ದೆಹಲಿಗೆ ಹಾರಲಿದ್ದಾರೆ.
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು, ರಾಮನಗರ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಡ್ಬೋದು ಈಗಾಗಲೇ ಮೋಕಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.
ಬೆಂಗಳೂರು: ಬಹುಮತಗಳಿಂದ ಗೆದ್ದು ಗದ್ದುಗೆ ಏರಲು ತಯಾರಾಗಿರುವ ಕಾಂಗ್ರೆಸ್‍ಗೆ (Congress) ಈಗ ಮುಖ್ಯಮಂತ್ರಿ ಕುರ್ಚಿ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಡಿ.ಕೆ ಶಿವಕುಮಾರ್ (D.K Shivakumar)ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದರೆ ಇನ್ನೊಂದು ಕಡೆ ಸಿದ್ದರಾಮಯ್ಯ (Siddaramaiah) ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ವಾದ ಏನು? ಎಲ್ಲಾ ಕೆಲಸವನ್ನು ಪಕ್ಷದ ಅಧ್ಯಕ್ಷರೆ ಮಾಡಿದ್ದಾರೆ ಎನ್ನುವುದಾದರೆ, ಅವರು ಒಬ್ಬರೇ ಪ್ರಚಾರ ಮಾಡಬಹುದಿತ್ತು. ನಾನು ಚುನಾವಣಾ (Election) ಪ್ರಚಾರಕ್ಕೆ ಹೋಗುವ ಅಗತ್ಯ ಇರಲಿಲ್ಲ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಜನಪರವಾಗಿ ಮಾಡಲಾದ ಕೆಲಸಗಳು ಕೈ ಹಿಡಿದಿವೆ. ನನ್ನ ವರ್ಚಸ್ಸು ಜನರನ್ನು ಕಾಂಗ್ರೆಸ್ ಕಡೆಗೆ ತಿರುಗುವಂತೆ ಮಾಡಿದೆ ಎಂದು ಸಿದ್ದರಾಮಯ್ಯ ವಾದಿಸಿದ್ದಾರೆ. ಒಬ್ಬರ ನೇತೃತ್ವದಲ್ಲಿ ಚುನಾವಣೆ ನಡೆದಿಲ್ಲ. ನಾನು ಡಿ.ಕೆ ಶಿವಕುಮಾರ್ ಸೇರಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದೇವೆ. ನನ್ನ ಕೈಲಾದ ಮಟ್ಟಿಗೆ ಅಭ್ಯರ್ಥಿಗಳಿಗೆ ಆರ್ಥಿಕ ನೆರವು ನೀಡಿದ್ದೇನೆ. ಇಬ್ಬರ ಶ್ರಮದಿಂದ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ನಾನು ಪೂರ್ಣ 5 ವರ್ಷದ ಅವಧಿಗೆ ಸಿಎಂ…
ಬೆಂಗಳೂರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda Airport)ಪ್ರಯಾಣಿಕರಿಂದ ಸುಲಿಗೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಪ್ರಯಾಣಿಕರಿಂದ ಆರೋಪಿ ಹಣ ಸುಲಿಗೆಗೆ ಯತ್ನಿಸಿದ್ದ. ಈತನ ನಡವಳಿಕೆಯನ್ನು ಕಂಡ ಕೆಲವರು ಅನುಮಾನಗೊಂಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೂರುಗಳ ನಂತರ, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಆರೋಪಿ ವಿಘ್ನೇಶ್ನನ್ನು ಚೆನ್ನೈನಿಂದ ಕಸ್ಟಡಿಗೆ ತೆಗೆದುಕೊಂಡಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಭಾನುವಾರ ಆತನ ವಿರುದ್ಧ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.