Author: Prajatv Kannada

ಬೆಂಗಳೂರು: ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸರಣಿ ಟ್ವೀಟ್ ಮೂಲಕ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ. ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಹೇಳಿದ್ದಾರೆ. ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ  ಅದುವೇ ಕಾಸಿಗಾಗಿ ಪೋಸ್ಟಿಂಗ್ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‌ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? ಎಂದು ಪ್ರಶ್ನಿಸಿದ್ದಾರೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ಇಂದು ಪವರ್ ಕಟ್ ಶಾಕ್ ಎದುರಾಗಲಿದೆ. ವಿದ್ಯುತ್ ಟವರ್ ಕಾಮಗಾರಿ ನಡೆಸುತ್ತಿರುವ ಹಿನ್ನಲೆ ರಾಜಧಾನಿ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಯಲ್ಲಿ ವ್ಯತ್ಯಯ ಉಂಟಾಗಲಿದೆ. ಮೊದಲ ತ್ರೈಮಾಸಿಕ ನಿಯತಕಾಲಿಕ ನಿರ್ವಹಣಾ ಯೋಜನೆಯಡಿ ಟವರ್ಗಳ ನಿರ್ಮಾಣ, ಬಸ್ ಐಸೋಲೇಟರ್ಗಳ ನಿರ್ವಹಣೆ ಹಿನ್ನಲೆ ಬೆಳ್ಳಗ್ಗೆ 10ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ. ಅದರಂತೆ ವಿಶ್ವಪ್ರಿಯ ಲೇಔಟ್, ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ಪ್ರೆಸ್ಟೀಜ್ ಸಾಂಗ್ ಆಫ್ ಸೌತ್, ತೇಜಸ್ವಿನಿ ನಗರ, ಹಿರಾನಂದನಿ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಲಿಟಾ ಪ್ರೊಮೆನೇಡ್ ಅಪಾರ್ಟ್‌ಮೆಂಟ್‌ಗಳು, ಕೆಆರ್ ಲೇಔಟ್, ಶಾರದ ನಗರ, ಚುಂಚುಘಟ್ಟ ಮತ್ತು ಉಪ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳು. ಎಲ್ 6 ಮತ್ತು ಟಿ ಟೆಕ್ ಪಾರ್ಕ್ ಹಾರೋಬೆಲೆಯ 11 ಕಿಲೋವೋಲ್ಟ್ ಉಪ ಕೇಂದ್ರಗಳು, ಕುನ್ನೂರು, ಹುಕುಂದ, ಕೋಡಿಹಳ್ಳಿ, ಬಿಜ್ಜಹಳ್ಳಿ, ಹುಣಸೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಂಗಳೂರು: ಕರಾವಳಿಯಲ್ಲಿ ಮತ್ತೆ ಗೋಹತ್ಯೆ  ವಿರುದ್ಧ ಹೋರಾಟಕ್ಕೆ ಹಿಂದೂ ಸಂಘಟನೆಗಳು ಸಜ್ಜಾಗಿವೆ. ಬಕ್ರೀದ್ ಸಂದರ್ಭದಲ್ಲಿ ಈ ಬಾರಿ ಅಕ್ರಮ ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ (Bajrangdal) ನಾಯಕರು ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಮರು ತಮ್ಮ ಪವಿತ್ರ ಹಬ್ಬ ಬಕ್ರೀದ್ ಆಚರಣೆ ಸಂದರ್ಭದಲ್ಲಿ ಕುರ್ಬಾನಿ ಹೆಸರಲ್ಲಿ ಪ್ರಾಣಿಗಳನ್ನು ಬಲಿ ಕೊಡುತ್ತಾರೆ. ಕೆಲವು ಕಡೆ ಇದಕ್ಕೆ ಕುರಿ- ಆಡುಗಳನ್ನು ಬಳಸಿದರೆ, ಇನ್ನೂ ಕೆಲವು ಕಡೆ ಕೋಣ, ದನಗಳನ್ನು ವಧೆಗೆ ಬಳಸುತ್ತಾರೆ. ಆದರೆ ಗೋವುಗಳನ್ನು ಕುರ್ಬಾನಿ ಹೆಸರಲ್ಲಿ ಕಡಿಯುವುದಕ್ಕೆ ಹಿಂದೂ ಸಂಘಟನೆಗಳ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕರಾವಳಿಯಲ್ಲಿ ಪ್ರಬಲವಾಗಿರುವ ಬಜರಂಗದಳ ನಾಯಕರು, ಈ ಬಾರಿ ಗೋವುಗಳ ಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಅಕ್ರಮ ಗೋಸಾಗಣೆ, ಹತ್ಯೆ ನಡೆಸಿದ್ದಲ್ಲಿ ಯಾವುದೇ ಬೆಲೆ ತೆತ್ತಾದರೂ ನಿಲ್ಲಿಸುತ್ತೇವೆ ಎಂದು ಬಜರಂಗಳದ ದ.ಕ ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ ಹೇಳಿದ್ದಾರೆ.

Read More

ಯಾದಗಿರಿ: ಯಾದಗಿರಿಯ ಗುರುಮಠಕಲ್ ತಾಲೂಕಿನ ಹಿಮ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಬೇಧಿಯಿಂದ 54 ಜನ ಅಸ್ವಸ್ಥಗೊಂಡಿದ್ದಾರೆ. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವವರನ್ನ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.  ರಾಜ್ಯದಲ್ಲಿ ಈಗಾಗಲೇ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ ಬೇಧಿ ಕಾಣಿಸಿಕೊಂಡು 6 ಜನರು ಬಲಿಯಾಗಿದ್ದಾರೆ. ಆದರೆ, ಇಷ್ಟಾದರೂ ಎಚ್ಚೆತಯ್ತುಕೊಳ್ಳದ ರಾಜ್ಯ ಸರ್ಕಾರ ಈಗ ಯಾದಗಿರಿಯಲ್ಲೂ ಕಲುಷಿತ ನೀರು ಪೂರೈಕೆ ಮಾಡುವ ಮೂಲಕ ಜನರ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಇಮ್ಲಾಪುರ ಗ್ರಾಮದಲ್ಲಿ 54 ಮಂದಿ ಕಲುಷಿತ ನೀರು ಸೇವನೆಯಿಂದ ವಾಂತಿ, ಬೇಧಿಗೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಒಡೆಯುತ್ತಿದ್ದಾರೆ. ಇನ್ನು ಗ್ರಾಮಕ್ಕೆ ಪೂರೈಕೆ ಮಾಡುತ್ತಿದ್ದ ನೀರಿನ ಮಾದರಿಯನ್ನು ಸಂಗ್ರಹ ಮಾಡಲಾಗಿದೆ. ನೀರಿನ ರಿಪೋರ್ಟ್ ಬಂದ ನಂತರ ವಾಂತಿ, ಬೇಧಿಗೆ ಕಾರಣವೇನು ಎಂಬುದು ಗೊತ್ತಾಗಲಿದೆ. ಜೊತೆಗೆ, ಲಿಕೇಜ್ ಇದ್ದಲ್ಲಿ ದುರಸ್ತಿ ಮಾಡಲಾಗುತ್ತದೆ ಎಂದು ಜಿ.ಪಂ ಉಪ ಕಾರ್ಯದರ್ಶಿ…

Read More

ಅಕ್ಟೋಬರ್‌ 5ರಿಂದ ನವೆಂಬರ್‌ 19ರವರೆಗೆ ನಡೆಯಲಿರುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ಸ್‌ ಇಂಗ್ಲೆಂಡ್‌ ಮತ್ತು ರನ್ನರ್ಸ್‌ಅಪ್‌ ನ್ಯೂಜಿಲೆಂಡ್‌ ತಂಡಗಳು ಕಾದಾಟ ನಡೆಸಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೂರ್ನಿಯ ಉದ್ಘಾಟನಾ ಪಂದ್ಯ ನಡೆಯಲಿದ್ದು, ಫೈನಲ್ ಪಂದ್ಯಕ್ಕೂ ಇದೇ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಟೂರ್ನಿಯ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಕ್ರಿಕೆಟ್‌ ಪ್ರಿಯರು ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಸಲುವಾಗಿ ಅಂತರ್ಜಾಲವನ್ನು ಜಾಲಾಡಲು ಶುರು ಮಾಡಿದ್ದಾರೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಅಕ್ಟೋಬರ್‌ 15ರಂದು ನಡೆಯಲಿರುವ ಪಂದ್ಯದ ಟಿಕೆಟ್‌ಗೆ ಭಾರಿ ಬೇಡಿಕೆ ಇದೆ. ಜಗತ್ತಿನ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣ ಎಂದೇ ಖ್ಯಾತಿ ಹೊಂದಿರುವ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ. ಬರೋಬ್ಬರಿ ಒಂದು ಲಕ್ಷ, 10 ಸಾವಿರ ಮಂದಿಗೆ ಆಸನ ಒದಗಿಸುವ ಸಾಮರ್ಥ್ಯ ಹೊಂದಿದೆ. ಭಾರತ-ಪಾಕ್‌ ಪಂದ್ಯಕ್ಕೆ ಈ ಕ್ರೀಡಾಂಗಣದ ಸಂಪೂರ್ಣ ಭರ್ತಿಯಾಗುವುದಂತೂ ನಿಶ್ಚಿತ. ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿನ ಒಟ್ಟು 48 ಪಂದ್ಯಗಳನ್ನು ಭಾರತದ 12…

Read More

ದೆಹಲಿ: ವಿರಾಟ್ ಕೊಹ್ಲಿ ಬಗ್ಗೆ ಯಾರಿಗೊತ್ತಿಲ್ಲ ಹೇಳಿ ಅವರು ಬ್ಯಾಟ್ ಹಿಡಿದುಕೊಂಡು ನಿಂತಿದ್ರೆ ಅಭಿಮಾನಿಗಳು ಅವರ ಹೆಸರನ್ನು ಕೂಗಿ ಕೂಗಿ ಕರೆಯುತ್ತಾರೆ ಅವರಿಗೆ ಫ್ಯಾನ್ ಇರೋದು ಲೆಕ್ಕವೇ ಇಲ್ಲ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ ಆದರೆ ಕೊಹ್ಲಿ ಬಾಲ್ಯದ ದಿನಗಳಲ್ಲಿ ಹೇಗಿದ್ದವು? ಈಗ ವಯಸ್ಸಿಗೆ ತಕ್ಕಂತೆ ಹೇಗೆ ಬದಲಾಗಿದ್ದಾರೆ ಎಂಬ ವಿಚಾರವೊಂದು  ಹಂಚಿಕೊಂಡಿದ್ದಾರೆ. ಏನದು ಇಲ್ಲಿದೆ ನೋಡೋಣ! ಹಿರಿಯ ವೇಗಿ ಇಶಾಂತ್ ಈ ಬಗ್ಗೆ ಯೂಟ್ಯೂಬ್ ಚಾನೆಲ್‍ನಲ್ಲಿ ರಣವೀರ್ ಅಲ್ಲಾಬಾಡಿಯಾ ಅವರೊಂದಿಗೆ ಮಾತನಾಡಿದ್ದಾರೆ. ನಾವು ಕೋಲ್ಕತ್ತಾದಲ್ಲಿ ಪಂದ್ಯವನ್ನು ಆಡುವಾಗ ಕೊಹ್ಲಿ ಇಡೀ ರಾತ್ರಿ ಪಾರ್ಟಿ ಮಾಡಿದ್ದರು. ಮರುದಿನ ಬೆಳಗ್ಗೆಯ ಮ್ಯಾಚ್‍ನಲ್ಲಿ ಅವರು 250 ರನ್ ಹೊಡೆದಿದ್ದರು ಎಂದರು. 2012 ರಲ್ಲಿ ವಿಶ್ವಕಪ್ (World Cup) ನಂತರ ಕೊಹ್ಲಿ ತಮ್ಮ ದೈಹಿಕ ಅಂಶಗಳನ್ನು ಬದಲಾಯಿಸಿರುವುದು ಉತ್ತಮ ವಿಷಯವಾಗಿದೆ. ಅವರ ಆಹಾರಕ್ರಮ ಹಾಗೂ ಅವರ ಇಚ್ಛಾ ಶಕ್ತಿಯಿಂದ ಕ್ರಿಕೆಟ್‍ನಲ್ಲಿ ಉನ್ನತ ಮಟ್ಟಕ್ಕೆ ಬೆಳೆದರು. ಅವರ ದೈಹಿಕ ಕಸರತ್ತು ಹಾಗೂ ಮಾನಸಿಕ ಸ್ಥೈರ್ಯದಿಂದ ಅವರಿಗೆ ಸಾಧನೆ ಮಾಡಲು…

Read More

ಮುಂಬೈ: ಈಗಾಗಲೇ ಭಾರತ ತಂಡ ಪಾಕಿಸ್ತಾನದಲ್ಲಿ ಏಷ್ಯಾಕಪ್‌ (AisaCup) ಪಂದ್ಯವನ್ನಾಡಲು ಬಿಸಿಸಿಐ ನಿರಾಕರಿಸಿದ್ದು, ಪಾಕಿಸ್ತಾನ ತಂಡ ಕೂಡ ಭಾರತ ನಿಗದಿಪಡಿಸಿದ ಸ್ಥಳದಲ್ಲಿ ವಿಶ್ವಕಪ್‌ ಆಡುವುದಿಲ್ಲ ಎಂದು ಕಿರಿಕ್‌ ತೆಗೆದಿದೆ. ಪಾಕ್‌ ಮಾಜಿ ಕ್ರಿಕೆಟಿಗರು ಪಾಕ್‌ ತಂಡ ಭಾರತಕ್ಕೆ ಹೋಗದಂತೆ ಸಲಹೆ ನೀಡಿದ್ದಾರೆ. ಈ ಕುರಿತು ಟೀಂ ಇಂಡಿಯಾ (Team India) ಸ್ಪಿನ್‌ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅಶ್ವಿನ್‌, 2023ರ ಏಕದಿನ ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಇನ್ನೂ ಪ್ರಕಟಿಸಿಲ್ಲ. ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಷ್ಟೇ ಎಂದಿದ್ದಾರೆ. ಈ ನಡುವೆ ಪಾಕಿಸ್ತಾನ ಸ್ಥಳ ಬದಲಾಯಿಸುವಂತೆ ಮನವಿ ಮಾಡಿದೆ. ಕರಡು ವೇಳಾಪಟ್ಟಿಯ ಪ್ರಕಾರ ಪಾಕಿಸ್ತಾನ ಬೆಂಗಳೂರಿನಲ್ಲಿ, ಅಫ್ಘಾನಿಸ್ತಾನ ಆಸ್ಟ್ರೇಲಿಯಾ (Australia) ವಿರುದ್ಧ ಚೆನ್ನೈನ ಚೇಪಾಕ್‌ ಕ್ರೀಡಾಂಗಣದಲ್ಲಿ ಆಡಲಿದೆ. ಆದ್ರೆ ಆವರ ಸ್ಥಳ ಬದಲಾಯಿಸುವಂತೆ ಕೋರಿದ್ದಾರೆ. ಯಾವುದೇ ಪಂದ್ಯಗಳಿಗೆ ಭದ್ರತೆಯ ಕಾರಣವಿದ್ದರೆ ಮಾತ್ರ ಐಸಿಸಿ ಅಂತಹ ಮನವಿಯನ್ನ ಪರಿಗಣಿಸುತ್ತೆ. ಇಲ್ಲದಿದ್ದರೆ ಪಾಕಿಸ್ತಾನ ತಂಡ ನಿಗದಿ ಮಾಡಿದ ಸ್ಥಳದಲ್ಲೇ ಆಡಬೇಕಾಗುತ್ತದೆ ಎಂದು ಹೇಳಿದ್ದಾರೆ.…

Read More

ಮುಂಬೈ: ಬೂಮ್ರಾ ಬಹಳ ಮುಖ್ಯ ಕ್ರಿಕೆಟಿಗ. ಆದ್ರೆ ವಿಶ್ವಕಪ್‌ನ ಹಿನ್ನೆಲೆಯಲ್ಲಿ ನೀವು ಆತುರಪಟ್ಟರೆ ನೀವು ಮತ್ತೆ 4 ತಿಂಗಳ ಕಾಲ ಅವರನ್ನ ಕಳೆದುಕೊಳ್ಳಬೇಕಾಗಬಹುದು. ಶಾಹಿನ್ ಅಫ್ರಿದಿ ಆದಂತೆಯೇ ಆಗಬಹುದು. ಇದು ಅತ್ಯಂತ ಸೂಕ್ಷ್ಮ ವಿಚಾರ ಎಂದು ಎಚ್ಚರಿಸಿದ್ದಾರೆ. ಏಕದಿನ ವಿಶ್ವಕಪ್‌ಗೂ ಮುನ್ನ ಜಸ್ಪ್ರೀತ್‌ ಬುಮ್ರಾ ಕಣಕ್ಕಿಳಿಯಲು ಸಿದ್ಧರಾಗಿರಬೇಕು ಎಂಬ ಕಾರಣಕ್ಕೆ, ಆತುರವಾಗಿ ಬುಮ್ರಾ ಅವರನ್ನ ಆಡಿಸುವ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಟೀಂ ಇಂಡಿಯಾ ಮಾಜಿ ಕೋಚ್‌ ರವಿಶಾಸ್ತ್ರಿ (Ravi Shastri) ಎಚ್ಚರಿಕೆ ಕೊಟ್ಟಿದ್ದಾರೆ. ಈ ವರ್ಷಾಂತ್ಯಕ್ಕೆ ಭಾರತದಲ್ಲೇ ಏಕದಿನ ವಿಶ್ವಕಪ್‌ ನಡೆಯಲಿದ್ದು, ಬುಮ್ರಾ ಅವರನ್ನು ಕಣಕ್ಕಿಳಿಸಲು ಬಿಸಿಸಿಐ ತಯಾರಿ ನಡೆಸಿದೆ. ಬುಮ್ರಾ ಬಹುತೇಕ ಫಿಟ್ ಆಗಿದ್ದು, ವಿಶ್ವಕಪ್‌ಗೂ ಮುನ್ನ ಐರ್ಲೆಂಡ್‌ ವಿರುದ್ಧದ ಸರಣಿ ಮೂಲಕ ತಂಡಕ್ಕೆ ಕಂಬ್ಯಾಕ್‌ ಮಾಡಿಸುವ ಪ್ರಯತ್ನದಲ್ಲಿದೆ. ಈ ಬೆಳವಣಿಗೆಯ ಬಗ್ಗೆ ರವಿ ಶಾಸ್ತ್ರಿ ಟೀಂ ಇಂಡಿಯಾಗೆ (Team India) ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರವಿ ಶಾಸ್ತ್ರಿ, ಏಕದಿನ ವಿಶ್ವಕಪ್‌ಗೂ ಮುನ್ನ ಬುಮ್ರಾ…

Read More

ಮಹೇಶ್ ಬಾಬು ನಟನೆಯ, ತ್ರಿವಿಕ್ರಮ್ ನಿರ್ದೇಶನದ ಗುಂಟೂರು ಖಾರಂ ಸಿನಿಮಾ ಆರಂಭಕ್ಕೂ ಮುನ್ನವೇ ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ಮಹೇಶ್ ಗೆ ಜೋಡಿಯಾಗಿ ಯಾರು ನಟಿಸುತ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಉತ್ತರ ಸಿಕ್ಕಿದೆ. ಗುಂಟೂರು ಖಾರಂ ಸಿನಿಮಾದಲ್ಲಿ  ಮಹೇಶ್ ಜೊತೆ ಡ್ಯೂಯೆಟ್ ಹಾಡಲು ಈ ಹಿಂದೆ ನಟಿ ಪೂಜಾ ಹೆಗ್ಡೆಗೆ ಆಫರ್ ನೀಡಲಾಗಿತ್ತು. ಆದ್ರೆ ಸಿನಿಮಾ ಪೋಸ್ಟ್ ಪೋನ್ ಆದ ಕಾರಣದಿಂದಾಗಿ ಡೇಟ್ ಹೊಂದಾಣಿಕೆ ಆಗದೆ ಪೂಜಾ ಆ ಸಿನಿಮಾದಿಂದ ಹೊರ ಬಂದಿದ್ದರು. ಬಳಿಕ ಆ ಜಾಗಕ್ಕೆ ನಟಿ ಶ್ರೀಲೀಲಾ ಎಂಟ್ರಿಕೊಡ್ತಾರೆ ಎಂದು ಹೇಳಲಾಗಿತ್ತು. ಆದ್ರೆ ಇದೀಗ ಚಿತ್ರತಂಡ ಖ್ಯಾತ ನಟಿಯರನ್ನು ಬಿಟ್ಟು ಹೊಸ ಹುಡುಗಿಗೆ ಮಣೆ ಹಾಕಿದೆ. ಸದ್ಯದ ಮಾಹಿತಿಯ ಪ್ರಕಾರ ಗುಂಟೂರು ಖಾರಂ ಸಿನಿಮಾದಲ್ಲಿ ಮಹೇಶ್ ಬಾಬುಗೆ ಜೋಡಿಯಾಗಿ ಯುವ ನಟಿ ಮೀನಾಕ್ಷಿ ಚೌಧರಿ ಎಂಟ್ರಿಕೊಟ್ಟಿದ್ದಾರೆ.  ಕಿರುತೆರೆಯ ಮೂಲಕ ಬಣ್ಣದ ಲೋಕಕ್ಎ ಕಾಲಿಟ್ಟ ಮೀನಾಕ್ಷಿ  ಹಿಟ್ : ದಿ ಸೆಕೆಂಡ್ ಕೇಸ್ ಸೇರಿದಂತೆ ಇನ್ನೂ…

Read More

ಕಳೆದ ಕೆಲ ದಿನಗಳಿಂದ ಟಾಲಿವುಡ್ ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣದ ಸದ್ದು ಕೇಳಿ ಬರುತ್ತಿದೆ. ಈಗಾಗಲೇ ಡ್ರಗ್ಸ್ ಪ್ರಕರಣ ಸಂಬಂಧ ಕಬಾಳಿ ಸಿನಿಮಾದ ನಿರ್ಮಾಪಕ ಕೆ.ಪಿ,ಚೌಧರಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಚೌಧರಿ ಸಂಪರ್ಕದಲ್ಲಿದ್ದ ಸಾಕಷ್ಟು ಮಂದಿಯ ಹೆಸರು ಹೊರ ಬಿದಿದ್ದು ಇದೀಗ ಇದೇ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಫೋನ್ ನಂಬರ್ ಲೀಕ್ ಆಗಿದೆ. ನಟಿ ಅಶು ರೆಡ್ಡಿ ಚೌಧರಿ ಸಂಪರ್ಕದಲ್ಲಿರುವುದ ವಿಚಾರಣೆ ವೇಳೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಚೌಧರಿ ಜೊತೆ ಸಂಪರ್ಕದಲ್ಲಿರುವವರ ಫೋನ್ ನಂಬರ್ ಅನ್ನು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿ ಬಿಡುಗಡೆ ಮಾಡಿದ್ದು ಈ ವರದಿಯೇ ಅಶು ರೆಡ್ಡಿಗೆ ಮುಳುವಾಗಿದೆ. ಅಶು ರೆಡ್ಡಿ ಫೋನ್ ನಂಬರ್ ಇರುವ ವರದಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದರಿಂದ ನಟಿಯ ನಂಬರ್ ಎಲ್ಲ ಕಡೆ ಹರಿದಾಡುತ್ತಿದೆ. ಜೊತೆಗೆ ಈ  ವರದಿಯನ್ನು ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರಿಂದ ಅಶು ರೆಡ್ಡಿ ನಂಬರ್ ಬಹುತೇಕರಿಗೆ ಸಿಕ್ಕಿದೆ. ಹೀಗಾಗಿ ನಿತ್ಯ ಸಾವಿರಾರು ಕರೆಗಳು ಅಶು ರೆಡ್ಡಿಗೆ ಬರುತ್ತಿದ್ದು ಇದರಿಂದ ನಟಿಗೆ…

Read More