Author: Prajatv Kannada

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಿದ್ದ ರಾಹುಲ್ ಗಾಂಧಿ 2024 ರಲ್ಲಿ ಪ್ರಧಾನಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಆಶಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಜನಾದೇಶ ಎಂದು ಬಣ್ಣಿಸಿದ ಸಿದ್ದರಾಮಯ್ಯ, ಇದು ಮುಂದಿನ ವ ರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ‘ಮೆಟ್ಟಿಲು’ ಎಂದು ಹೇಳಿದರು.

Read More

ಮಂಡ್ಯ : ಜೆಡಿಎಸ್​ ಭದ್ರಕೋಟೆ ಎನಿಸಿಕೊಂಡಿದ್ದ ಮಂಡ್ಯ ಜಿಲ್ಲೆಯನ್ನು ಕಾಂಗ್ರೆಸ್​ ಪಕ್ಷ ಛಿದ್ರ ಮಾಡಿದೆ. ಏಳು ವಿಧಾನಸಭಾ ಕ್ಷೇತ್ರದಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ. ಮೊದಲ ಬಾರಿಗೆ ಉಪ ಚುನಾವಣೆಯಲ್ಲಿ ಕಮಲ ಅರಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಮನ್ ಮುಲ್ ನಿರ್ದೇಶಕ ಹೆಚ್.ಟಿ.ಮಂಜು ವಿರುದ್ಧ ಸೋಲುಂಡಿದ್ದು, ಭಾರಿ ಮುಖಭಂಗವಾಗಿದೆ. ಮಂಡ್ಯ ಕ್ಷೇತ್ರದಿಂದ ಗಣಿಗ ರವಿಕುಮಾರ್, ಮದ್ದೂರು ಕ್ಷೇತ್ರದಿಂದ ಕೆ.ಎಂ.ಉದಯ್, ಮಳವಳ್ಳಿ ಕ್ಷೇತ್ರದಿಂದ ನರೇಂದ್ರ ಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದಿಂದ ರಮೇಶ್ ಬಂಡಿ ಸಿದ್ದೇಗೌಡ , ನಾಗಮಂಗಲ ಕ್ಷೇತ್ರದಿಂದ ಎನ್.ಚಲುವರಾಯಸ್ವಾಮಿ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಇನ್ನು ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಸರ್ವೋದಯ ಕರ್ನಾಟಕ ಪಕ್ಷದಿಂದ ಕಣಕ್ಕಿಳಿದಿದ್ದ ದರ್ಶನ್ ಪುಟ್ಟಣ್ಣಯ್ಯ ಮಾಜಿ ಸಚಿವ, ಹಾಲಿ ಶಾಸಕ ಸಿ.ಎಸ್.ಪುಟ್ಟರಾಜು ಅವರನ್ನು ಮಣಿಸಿದ್ದಾರೆ. ಕೆ.ಆರ್.ಪೇಟೆ ಒಂದು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಗೆಲುವಿನ ನಗೆ ಬೀರಿದ್ದು, ಉಳಿದ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿದೆ. ಇನ್ನು ಸತತ ಸೋಲುಗಳಿಂದ ಕಗ್ಗೆಂಟ್ಟಿದ್ದ ಕೈ ನಾಯಕರು ದಳಪತಿಗಳ…

Read More

ಹಾವೇರಿ: ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇವೆ. ಆದರೂ ನಮಗೆ ಬಹುಮತ ದೊರೆತಿಲ್ಲ. ನಮ್ಮ ಕಾರ್ಯಕರ್ತರು, ಎಲ್ಲ ನಾಯಕರು, ಪ್ರಧಾನಮಂತ್ರಿಗಳನ್ನು ಸೇರಿದಂತೆ ಶ್ರಮವಹಿಸಿ ಕೆಲಸ ಮಾಡಿದ್ದೇವು. ಕಾಂಗ್ರೆಸ್ ಗೆ ಬಹುಮತ ದೊರೆತಿದೆ.‌ ನಮ್ಮ ತಪ್ಪುಗಳನ್ನು ವಿಶ್ಲೇಷಣೆ ಮಾಡಿ, ಅದರ ಬಗ್ಗೆ ಕುಳಿತು ಸಮಾಲೋಚನೆ ಮಾಡುತ್ತೇವೆ. ಒಂದು ರಾಷ್ಟ್ರೀಯ ಪಕ್ಷವಾಗಿ ನಮ್ಮ ಕುಂದು ಕೊರತೆಯನ್ನು ಸರಿದೂಗಿಸಿಕೊಂಡು ಸಂಸತ್ ಚುನಾವಣೆಗೆ ಮರು ಸಿದ್ಧತೆ ಮಾಡಿಕೊಳ್ಳುತ್ತೇವೆ. ಪಕ್ಷವನ್ನು ಪುನಃ ಸಂಘಟಿಸಿ ನಾವು ಮತ್ತೆ ಪುನರಗಾಮಿಸುತ್ತೇವೆ ಎಂದರು.

Read More

ಬೀದರ್: ಕೇಂದ್ರದ ಮಂತ್ರಿಯಾಗಿ ತಾಯಿಗೆ ಮೋಸ ಮಾಡಿದ್ದಾರೆ. ತಾಯಿಗೆ ಮೋಸ ಮಾಡಿದವರನ್ನು ಆ ದೇವರೇ ನೋಡಿಕೊಳ್ಳುತ್ತಾನೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ವಿರುದ್ಧ ಕಿರುಕುಳ ಆರೋಪ ಮಾಡಿ ಸಚಿವ ಪ್ರಭು ಚವ್ಹಾಣ್ (Prabhu Chauhan) ಕಣ್ಣೀರು ಹಾಕಿದ್ದಾರೆ. ಬೀದರ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಭು ಚವ್ಹಾಣ್, ನಮ್ಮಗೆ ಬಹಳ ನೋವಾಗಿದೆ. ಅವರ ಚುನಾವಣೆಯಲ್ಲಿ ಸಂಸದರ ಎಲ್ಲಾ ಕ್ಷೇತ್ರದಲ್ಲಿ ಓಡಾಡಿದ್ದೇನೆ. ಅವರಿಗೆ ಟಿಕೆಟ್ ನೀಡಲು ಸೇರಿದಂತೆ ತನುಮನ ಧನ ನೀಡಿ ಖೂಬಾಗೆ ಸಹಾಯ ಮಾಡಿದ್ದೇನೆ. ಆದರೆ ನಮ್ಮನ್ನು ಸೋಲಿಸಲು ನಮ್ಮ ಕಾರ್ಯಕರ್ತರಿಗೆ ರಾಜೀನಾಮೆ ಕೊಡಿಸಿದ್ದಾರೆ. ಕೇಂದ್ರ ಮಂತ್ರಿಯಾಗಿ ಈ ರೀತಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ ಎಲ್ಲರಿಗೂ ಕೇಂದ್ರ ಸಚಿವ ಖೂಬಾ ವಿರುದ್ಧ ದೂರು ನೀಡುತ್ತೇನೆ. 30 ಸಾವಿರ ಲೀಡ್ ಬರುತ್ತಿತ್ತು ಆ ರೀತಿ ಕೆಲಸ ಮಾಡಿದ್ದೇನೆ. ನಮ್ಮ ಕಾರ್ಯಕರ್ತರಿಗೆ ಪೋನ್ ಮಾಡಿ ಪ್ರಭು ಚವ್ಹಾಣ್ಗೆ ವೋಟ್ ಮಾಡಬೇಡ ಎಂದು ಅವಾಜ್ ಹಾಕುತ್ತಾರೆ ಎಂದು ಪ್ರಭು ಚವ್ಹಾಣ್ ಆರೋಪಿಸಿದ್ದಾರೆ

Read More

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ (Karnataka Assembly Election Results 2023) ಬಹಿರಂಗಗೊಂಡಿದ್ದು, ಚಳ್ಳಕೆರೆ ಕ್ಷೇತ್ರದಲ್ಲಿ ಜೆಡಿಎಸ್ (JDS) ವಿರುದ್ಧ ಕಾಂಗ್ರೆಸ್​ನ ಟಿ ರಘುಸ್ವಾಮಿ (T Raghuswamy) ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ (BJP) ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಜೆಡಿಎಸ್​ನ ರವೀಶ್ ಕುಮಾರ್ ಎಂ ಅವರ ವಿರುದ್ಧ ರಘುಮೂರ್ತಿ ಅವರು 16450 ಮತಗಳ ಅಂತದಿಂದ ಗೆಲುವಿನ ನಗೆ ಬೀರಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ರಘುಮೂರ್ತಿ ಅವರು ಶೇ 38.2ರಷ್ಟು ಮತ ಪಡೆದರೆ, ಜೆಡಿಎಸ್​ನ ರವೀಶ್ ಅವರು ಶೇ 28.9ರಷ್ಟು ಮತ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿರುವ ಪಕ್ಷೇತರ ಅಭ್ಯರ್ಥಿ ಶೇ 16.4ರಷ್ಟು ಮತ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ಬಿಜೆಪಿಯ ಅನಿಲ್ ಕುಮಾರ್ ಆರ್ ಅವರು ಶೇ 12.9ರಷ್ಟು ಮತ ಪಡೆದಿದ್ದಾರೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ಗೆದ್ದಿದ್ದರು. 2018ರಲ್ಲೂ ಅವರು 13,539 ಮತಗಳ ಅಂತರದಿಂದ ಜೆಡಿಎಸ್​ನ ರವೀಶ್ ಅವರನ್ನು ಸೋಲಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದ ಟಿ ರಘುಮೂರ್ತಿ ಅವರು ಹ್ಯಾಟ್ರಿಕ್…

Read More

ಬೆಳಗಾವಿ: ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಬಿಜೆಪಿಯ ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ಜಯ ಸಾಧಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ 99,919 ಪಡೆದರೆ, ನಾಗೇಶ್‌ ಅಣ್ಣಪ್ಪ ಮನೋಲ್ಕರ್‌ 45,982 ಪಡೆದಿದ್ದಾರೆ. ಈ ಮೂಲಕ ಲಕ್ಷ್ಮೀ ಹೆಬ್ಬಾಳಕರ್ 53,937 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಗೆಲ್ಲಬಾರದು ಅಂತ ಬಿಜೆಪಿಯ ರಮೇಶ್‌ ಜಾರಕಿಹೊಳಿ ರಣತಂತ್ರವನ್ನ ಹೆಣೆದಿದ್ದರು. ಆದರೆ, ರಮೇಶ್‌ ಜಾರಕಹೊಳಿ ಅವರ ರಣತಂತ್ರವನ್ನ ಲಕ್ಷ್ಮೀ ಹೆಬ್ಬಾಳಕರ್ ಬುಡಮೇಲು ಮಾಡುವಲ್ಲಿ ಯಶಸ್ವಿಯಾಗಿದ್ದರು. ಈ ಕ್ಷೇತ್ರದಲ್ಲಿ ರಮೇಶ್‌ ಜಾರಕಿಹೊಳಿ ಅವರು ಸೂಚಿಸಿದವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿತ್ತು. ಆದರೆ, ಮತದಾರ ಪ್ರಭು ಲಕ್ಷ್ಮೀ ಹೆಬ್ಬಾಳಕರ್ ಅವರನ್ನ ಗೆಲ್ಲಿಸಿದ್ದಾರೆ. ಈ ಕ್ಷೇತವನ್ನ ರಮೇಶ್‌ ಜಾರಕಿಹೊಳಿ ಅವರು ಬಹಳ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಹೆಬ್ಬಾಳಕರ್ ಜಾರಕಿಹೊಳಿ ರಾಜಕೀಯ ಬದ್ಧ ವೈರಿಗಳಾಗಿದ್ದಾರೆ. ರಮೇಶ್ ಜಾರಕಿಹೊಳಿ ಸೂಚಿಸಿದ ಅಭ್ಯರ್ಥಿ ನಾಗೇಶ್‌ ಅಣ್ಣಪ್ಪ…

Read More

ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಎಚ್.ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ಸುಮಾರು 3 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ವೀರೋಚಿತ ಸೋಲುಂಡಿದ್ದಾರೆ. ಹಾಸನ ರಾಜಕಾರಣದಲ್ಲಿ ಹೆಚ್.ಡಿ. ದೇವೇಗೌಡರ ಪ್ರಬಲ ರಾಜಕೀಯ ಎದುರಾಳಿ ಎನಿಸಿದ್ದ ಪುಟ್ಟಸ್ವಾಮಿಗೌಡರ ಕುಟುಂಬಕ್ಕೆ ಸೇರಿದ ಶ್ರೇಯಸ್ ಎಂ ಪಟೇಲ್ ಈ ಬಾರಿ ಹೊಳೆನರಸೀಪುರ ಕ್ಷೇತ್ರದಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಬಹುದು ಎಂಬ ಭಾವನೆಗಳಿದ್ದವು. ಈ ನಿರೀಕ್ಷೆ ಹೆಚ್ಚೂಕಡಿಮೆ ಈಡೇರುವ ಹಂತಕ್ಕೆ ಬಂದಿತ್ತಾದರೂ ಅಂತಿಮವಾಗಿ ರೇವಣ್ಣ ಬಚಾವಾಗಿ ಗೆಲುವಿನ ದಡ ಮುಟ್ಟಿದ್ದಾರೆ.

Read More

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಿಜೆಪಿ ಹಿನ್ನೆಡೆ,  ಕಾಂಗ್ರೆಸ್‌ ಮುನ್ನಡೆ   ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದೆ 224 ಕ್ಷೇತ್ರಗಳಲ್ಲಿ 223ರಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದರೆ, ಬಿಜೆಪಿ 224ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಳಿಸಿದೆ. ಮುನ್ನಡೆ –  ಬಿಜೆಪಿ: 65 ಕಾಂಗ್ರೆಸ್ : 136 ಜೆಡಿಎಸ್: 19 ಇತರೆ 04 ಬೆಳಗ್ಗೆ 03 ಗಂಟೆವರೆಗೆ ನಡೆದ ಮತ ಮಣಿಕೆ ಪ್ರಕ್ರಿಯೆ ಪ್ರತೀ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಹಾಗೂ ಫಲಿತಾಂಶದ ನಿಖರವಾದ ಇಂಚಿಂಚೂ ಮಾಹಿತಿ, ಲೈವ್ ಅಪ್ ಡೇಟ್ ಗಾಗಿ  prajaatvkannadanews ಫಾಲೋ ಮಾಡಿ

Read More

ಬೆಂಗಳೂರು: ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದರು. ಸೊರಬ ಕ್ಷೇತ್ರದಲ್ಲಿ ನಡೆಯುತ್ತಿರುವ ಹೋರಾಟ ಸಹೋದರರ ನಡುವೆಯ ಜಟಾಪಟಿಯಾಗಿದೆ. ಮೊದಲ ಸುತ್ತಿನ ಮತ ಏಣಿಕೆಯಿಂದಲೂ ಮುನ್ನಡೆ ಕಾದುಕೊಂಡಿದ್ದ ಮಧು ಬಂಗಾರಪ್ಪ ಅವರು ಗೆಲುವಿನ ನಗು ಬೀರಿದ್ದಾರೆ.

Read More

Indi Election Result Live: ಇಂಡಿ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ್ ಗೆಲುವು ವಿಜಯಪುರ: ಇಂಡಿ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.

Read More