ಬೆಂಗಳೂರು ;- ಯಾರು ಬೇಕಾದರೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಪೇಕ್ಷೆ ಪಡಬಹುದು, ನಿರ್ಧಾರ ಹೈಕಮಾಂಡ್‌ನದ್ದು ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಪೇಕ್ಷೆ ಪಡೋದು ತಪ್ಪಲ್ಲ. ಆದರೆ ಯಾರು ಸೂಕ್ತ ಎಂದು ಪಕ್ಷ ತೀರ್ಮಾನ ಮಾಡುತ್ತದೆ. ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಪೇಕ್ಷೆ ಪಟ್ಟಿಲ್ಲ. ಸದ್ಯಕ್ಕೆ ನಾನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದೇನೆ. ಮುಂದಿನದನ್ನು ಪಕ್ಷ ತೀರ್ಮಾನಿಸಲಿದೆ ಎಂದರು. ಇನ್ನೂ ಜನರಿಗೆ ಆಶ್ವಾಸನೆ ಕೊಟ್ಟಿದ್ದು ಕಾಂಗ್ರೆಸ್ ಪಾರ್ಟಿ. ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಕೇಂದ್ರ ಸರ್ಕಾರ ಕೊಡುವ 5 ಕೆಜಿ ಅಕ್ಕಿ ಬಿಟ್ಟು, 10 ಕೆಜಿ ಅಕ್ಕಿ ಕೊಡಬೇಕು. ಜುಲೈ 1 ರಿಂದಲೇ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದರು. ಇನ್ನು ಐದು ದಿನಗಳಲ್ಲಿ ಭತ್ತ ಬೆಳೆದಾದರೂ ಕೊಡಲಿ. ಎಲ್ಲಿಂದಲಾದರೂ ತಂದು ಕೊಡಲಿ. ಯಾವ ವಿಶ್ವಾಸದ ಮೇಲೆ ಹೇಳಿದ್ದರೋ ಅದೇ ಮಾತಲ್ಲಿ ಕೊಡಲಿ ಎಂದು ಸಿ.ಟಿ. ರವಿ ಆಗ್ರಹಿಸಿದರು.
Author: Prajatv Kannada
ಬೆಂಗಳೂರು ;- ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅಪರಾಧಿ ಆಗಿದ್ದು, ಹಣ ಪಾವತಿಗೆ ವಿಫಲವಾದಲ್ಲಿ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವವರೆಗೂ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು, ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ಬಿಟಿಎಂ ಬಡಾವಣೆಯ ಪ್ರಕಾಶ್ ಕುಮಾರ್ ಯಾರಪ್ಪ ಎಂಬವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಈ ಆದೇಶ ನೀಡಿದ್ದಾರೆ. ದೂರುದಾರರಿಗೆ ಪಾವತಿಸಬೇಕಾದ ಒಟ್ಟು ಮೊತ್ತದಲ್ಲಿ 64,95,000 ಲಕ್ಷ ರೂಪಾಯಿಗಳನ್ನು ಪಾವತಿಸಿ, 5 ಸಾವಿರ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿ ಮಾಡುವಂತೆ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ;- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಕಾರಣಕ್ಕಾಗಿ ಜುಲೈನಲ್ಲಿ ಮಂಡಿಸುವ ಬಜೆಟ್ ಗಾತ್ರ 3.35 ಲಕ್ಷ ಕೋಟಿಗಳಷ್ಟು ಇರಲಿದೆ. ಹಿಂದಿನ ಸರ್ಕಾರ ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿ ನಾಲ್ಕು ತಿಂಗಳ ಅವಧಿಗೆ ಲೇಖಾನುದಾನ ಪಡೆಯಲಾಗಿತ್ತು. ಆಗಸ್ಟ್1 ರಿಂದ ಅನ್ವಯವಾಗುವಂತೆ ಹೊಸದಾಗಿ ಬಜೆಟ್ ಮಂಡಿಸಬೇಕಿದ್ದು, ಜು. 7 ರಂದು ಬಜೆಟ್ ಮಂಡಿಸಲಾಗುವುದು. ಹಿಂದಿನ ಬಜೆಟ್ ಗಾತ್ರ 3.09 ಲಕ್ಷ ಕೋಟಿ ರೂ. ಇದ್ದು, ಈಗ 3.30 -3.35 ಲಕ್ಷ ಕೋಟಿ ರೂ.ಗಳಷ್ಟು ಇರಲಿದೆ ಹೇಳಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರವನ್ನು ಜೋಡಿಸುವ ಎಕ್ಸ್’ಪ್ರೆಸ್ ವೇ ಸಾವಿನ ಹೆದ್ದಾರಿಯಾಗಿ ಬದಲಾಗುತ್ತಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ 100 ಮಂದಿ ಸಾವನ್ನಪ್ಪಿದ್ದು, 350ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಯ ಸುರಕ್ಷತೆ ಸಂಬಂಧ ಹಲವು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿ ವರ್ಗ ಸಿದ್ದತೆ ನಡೆಸ್ತಿದೆ. ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಪ್ರತಿ ದಿನ ಸರಾಸರಿ 56 ಸಾವಿರ ವಾಹನಗಳು ಓಡಾಡುತ್ತವೆ ಎಂದು ಅಂದಾಜಿಸ ಲಾಗಿದೆ. ಬೆಂಗಳೂರು ಹಾಗೂ ಮೈಸೂರು ನಗರಗಳ ನಡುವೆ ಪ್ರಯಾಣದ ಅವಧಿ ಕೇವಲ 75 ನಿಮಿಷಕ್ಕೆ ಕಡಿತಗೊಂಡಿದೆ. ಜೊತೆಯಲ್ಲೇ ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಸಂಪರ್ಕ ಕೊಂಡಿಯಾಗಿಯೂ ಈ ರಸ್ತೆ ಇದೆ. ರಾಮನಗರ ಹಾಗೂ ಮಂಡ್ಯ ಪೊಲೀಸರ ಬಳಿ ಇರುವ ಅಂಕಿ ಅಂಶಗಳ ಪ್ರಕಾರ ಕಳೆದ ಮೂರು ತಿಂಗಳಲ್ಲಿ ಈ ಹೆದ್ದಾರಿಯಲ್ಲಿ 79 ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಇದಲ್ಲದೆ 226 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಒಟ್ಟು 94…
ಸೂರ್ಯೋದಯ: 05.56 AM, ಸೂರ್ಯಾಸ್ತ : 06.49 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಷಾಢ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಗ್ರೀಷ್ಮ ಋತು, ತಿಥಿ: ಇವತ್ತು ಅಷ್ಟಮಿ 02:04 AM ತನಕ ನಂತರ ನವಮಿ ನಕ್ಷತ್ರ: ಇವತ್ತು ಹಸ್ತ 02:43 PM ತನಕ ನಂತರ ಚಿತ್ತ ಯೋಗ: ಇವತ್ತು ವರಿಯಾನ್ 06:24 AM ತನಕ ನಂತರ ಪರಿಘ ಕರಣ: ಇವತ್ತು ಬವ 02:04 AM ತನಕ ನಂತರ ಬಾಲವ 02:40 PM ತನಕ ನಂತರ ಕೌಲವ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 08.13 AM to 09.57 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:53 ನಿಂದ ಮ.12:45 ವರೆಗೂ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು…
ಬೆಂಗಳೂರು: ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ಟ್ವೀಟ್ ಮೂಲಕ ಕೋರಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ. ನಾಡಪ್ರಭುಗಳು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ ಹಾಗೆ ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿಯಲ್ಲಿ ಸಾಗೋಣ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಬದ್ಧತೆಯಿಂದ ಶ್ರಮಿಸೋಣ ಎಂದು ಹೇಳಿದರು.
ಬೆಂಗಳೂರು : ಜಮೀರ್ ನೀನು ಲೈಬ್ರರಿಗೆ ಯಾವತ್ತಾದ್ರೂ ಹೋಗಿದ್ಯಾ? ಈ ರೀತಿ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಪ್ರಶ್ನೆ ಕೇಳಿದ್ದು ಬೇರೆ ಯಾರೂ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ. ವೇದಿಕೆ ಮೇಲೆ ಹಠಾತ್ತನೇ ಬಂದ ಈ ಪ್ರಶ್ನೆಗೆ ಉತ್ತರಿಸಲು ತಡವರಿಸಿದ ಜಮೀರ್ ಅಹ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಮುಖ ನೋಡಿ ನಕ್ಕು ತಲೆ ತಗ್ಗಿಸಿದರು. ಈ ಘಟನೆ ನಡೆದಿದ್ದು, 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರದ ಉದ್ಘಾಟನೆ ವೇಳೆ. ಹೌದು, ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮಗಾಗಿ ಸಾಕಷ್ಟು ಖರ್ಚು ಮಾಡಿ ಗ್ರಂಥಾಲಯ ಕಟ್ಟಿಸಿದ್ದೇವೆ. ಅಲ್ಲಿಗೆ ಯಾರು ಹೋಗುವುದೇ ಇಲ್ಲ, ಪುಸ್ತಕಗಳನ್ನು ಓದುವುದೇ ಇಲ್ಲ, ಇದೇ ವೇಳೆ ವೇದಿಕೆ ಮೇಲಿದ್ದ ಸಚಿವ ಜಮೀರ್ ಅಹ್ಮದ್ ಅವರನ್ನು ಕಿಚಾರಯಿಸಿದ ಸಿದ್ದರಾಮಯ್ಯ, ಜಮೀರ್ ನೀನು ಲೈಬ್ರರಿಗೆ ಯಾವತ್ತಾದ್ರು ಹೋಗಿದ್ಯಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಪ್ರಶ್ನೆಗೆ ತಬ್ಬಿಬ್ಬಾದ ಸಚಿವ ಜಮೀರ್ ಅಹ್ಮದ್ ಸಿದ್ದು ಮುಖ ನೋಡಿ ನಕ್ಕು ತಲೆ ತಗ್ಗಿಸಿದ್ದಾರೆ. ಇನ್ನು, ರಾಜಕಾರಣ ಧಿಮಾಕು…
ಗದಗ ;- ತಾಲೂಕಿನ ನಾಗಾವಿ ಬಳಿಯ ಹಲವು ರೈತರನ್ನ ಜಮೀನು ತೆಗೆದುಕೊಂಡು ಒಕ್ಕಲೆಬ್ಬಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ ಸ್ಥಾಪಿಸಿ ಪರಿಹಾರ ನೀಡದೆ ಸರಕಾರ ಮೋಸ ಮಾಡಿದೆ ಅಂತ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಾಗಾವಿ ಹಾಗೂ ಬಗುರ್ ಹುಕುಂ ಸಾಗುವಳಿದಾರರು ಪ್ರತಿಭಟನೆ ಮಾಡಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಸುಮಾರು 500 ಕ್ಕೂ ಹೆಚ್ಚು ಎಕರೆ ಜಮೀನನ್ನು ಸರಕಾರ ವಶಪಡಿಸಿಕೊಂಡಿದೆ. ಇದರಲ್ಲಿ ಸುಮಾರು 50ಕ್ಕೂ ಹೆಚ್ಚು ರೈತರು ನಾಲ್ಕು ತಲೆಮಾರುಗಳಿಂದ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತ ಬರ್ತಿದ್ದರು. ಆದ್ರೆ ಇದ್ದಕ್ಕಿದ್ದಂತೆ ಎಲ್ಲ ರೈತರನ್ನ ಒಕ್ಕಲೆಬ್ಬಿಸಿ ಅವರಿಗೆ ಪರಿಹಾರವನ್ನೂ ನೀಡದೆ ಕಾಲೇಜು ಸ್ಥಾಪನೆ ಮಾಡಿದೆ ಅಂತಾ ಆರೋಪಿಸಿದ್ದಾರೆ. ಆದ್ರೆ ಪರಿಹಾರಕ್ಕಾಗಿ ರೈತರು ಐದಾರು ವರ್ಷಗಳಿಂದ ಅಲೆದಾಡ್ತಾಯಿದ್ದಾರೆ. ಯಾರೂ ಈ ಬಗ್ಗೆ ಕಿವಿಗೊಡ್ತಿಲ್ಲ ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ ಗಮನ ಹರಿಸಿ ಪರಿಹಾರ ಕೊಡಿಸಬೇಕು ಅಂತ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಡಿಸಿ ಕಚೇರಿ ಗೇಟ್ ಮುಂಬಾಗದಲ್ಲಿ ಟೆಂಟ್…
ಧಾರವಾಡ : ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಹಿಂಪಡೆಯುವ ಹಾಗೂ ಪಠ್ಯ ಪುಸ್ತಕಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಮಾಜ ಸುಧಾರಕರ ಕುರಿತಾದ ವಿಷಯಗಳನ್ನು ಕೈ ಬಿಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ರಾಜ್ಯಪಾಲರು ತಿರಸ್ಕರಿಸಲು ಆಗ್ರಹಿಸಿ, ಶ್ರೀ ರಾಮ ಸೇನೆ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುದ ಕಾರ್ಯಕರ್ತರು ರಾಜ್ಯ ಸರ್ಕಾರ ನಡೆ ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಗೋ ಹತ್ಯಾ ನಿಷೇಧಕ್ಕೆ ಸಂಬಂಧ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಜನರ, ಮಠಾಧಿಶರ, ಸಂಘಟನಗಳ ಹೋರಾಟ ಫಲವಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ರೈತರ ಬೆನ್ನೆಲುಬು, ದೇಶದ ಆರ್ಥಿಕ ಸಾಮಾಜಿಕ, ಧಾರ್ಮಿಕ,ಆರೋಗ್ಯ, ಕೃಷಿ ಮುಂತಾದವುಗಳಿಗೆ ಆಧಾರ ಸ್ತಂಭ ಗೋ ಗುರುತಿಸಿಕೊಂಡಿದೆ. ಆದರೆ ಈಗಿನ ರಾಜ್ಯ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಮಾಡಿರುವ ಖಂಡನೀಯವಾಗಿದೆ ಎಂದರು. ಮೋಸದ ಮತಾಂತರ ನಿಷೇಧ ಮಸೂದೆ ವಾಪಸ್ ಇದೂ ಸಹ ಹಿಂದಿನ ಬಿಜೆಪಿ ರಾಜ್ಯ…
ಧಾರವಾಡ; ಇಂದು ಜಿಲ್ಲೆಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಎಂ ಬಿ ಪಾಟೀಲ ಭೇಟಿ ನೀಡಿದ್ದಾರೆ. ಈ ವೇಳೆ ಇನ್ಪಾ ಪ್ರೈನ್ ಪ್ರೂಡ್ಸ್ ಕಂಪನಿಗೆ ಬೇಟಿ ನೀಡಿದ ಸಚಿವ ಎಂ ಬಿ ಪಾಟೀಲ ಅವರು ಪರಿಶಿಲನೆ ನಡೆಸಿದರು. ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಎಂ ಬಿ ಪಾಟೀಲ, ಮಾವಿನ ಹಣ್ಣಿನ ಕಾರ್ಖಾನೆಗೆ ಬೇಟಿ ನೀಡಿದ್ದೆನೆ. ಬೇರೆ ಬೇರೆ ದೇಶಗಳಿಗೆ ತಪ್ತು ಮಾಡುತ್ತಾರೆ. ಎರಡು ಎಕರೆಯಷ್ಡು ರೈತರ ಜಮೀನು ಇದ್ದರೂ ಅವರಿಗೆ ಖಾರ್ಕಾನೆ ಸ್ಥಾಪಿಸಲು ಮುಂದೆ ಅವಕಾಶ ಕೊಡಲಾಗುತ್ತೆ. ಸಿಎಂ ಜೊತೆ ಚರ್ಚೆ ಮಾಡಿದ್ದೆನೆ, ಸಿಎಂ ಜೊತೆ ನಾನು ಮಾತನಾಡುತ್ತೆನೆ. ಮಾವಿನ ಹಣ್ಣಿನಲ್ಲಿರುವ ಗಲೀಜು ತೆಗೆದು ಸ್ವಚ್ಚ ವಾಗಿ ಫಲ್ಪನ್ನ ತಯಾರಿಸಿ ವಿದೆಶಕ್ಕೆ ರಪ್ತು ಮಾಡುತ್ತಾರೆ. ಪೂಡ್ ಪ್ರೋಸೆಸಿಂಗ್ ಖಾರ್ಕಾನೆಗೆ ಬಂದಿದ್ದೆನೆ. ಕ್ವಾರ್ಟಗಳು ಹಂಚಿಕೆ ಆಗಿಲ್ಲ, ಕೈಗಾರಿಕೋದ್ಯಮದಲ್ಲಿರುವ ಲೋಪ ದೋಷಗಳನ್ನ ಸರಿಪಡಿಸಲಾಗುವುದು. ಇಂಡಸ್ಡ್ರೀಸ್ ನಲ್ಲಿ ಅಭಿವೃದ್ಧಿ ಮಾಡಬೇಕಿದೆ ಎಂದರು. ಇನ್ನೂ ಭಾಗಲಕೋಟೆಯಲ್ಲಿ ಗದ್ದಲ ವಿಚಾರವಾಗಿ ಮಾತನಾಡಿ, ವಿಜಯಪುರದಲ್ಲಿ ಇಬ್ಬರು ಸಚಿವರು ಇದ್ದಾರೆ ಅವರು…