ಕನ್ನಡದ ನಟಿ ಕವಿತಾ ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಕವಿತಾ ಗೌಡ ಚಂದದ ಫೋಟೋ ಶೂಟ್ ಮಾಡಿಸಿದ್ದಾರೆ. ಲಕ್ಷ್ಮೀ ಬಾರಮ್ಮ ಧಾರವಾಹಿ ಮೂಲಕ ಖ್ಯಾತಿ ಪಡೆದುಕೊಂಡ ಚಂದನ್ ಹಾಗೂ ಕವಿತಾ ಸದ್ಯದಲ್ಲೇ ಫೋಷಕರಾಗುತ್ತಿದ್ದಾರೆ. ತುಂಬು ಗರ್ಭಿಣಿಯಾಗಿರುವ ನಟಿ ಡಿಫರೆಂಟ್ ಫೋಟೋ ಶೂಟ್ ಮಾಡಿಸಿದ್ದಾರೆ. ಮೇ 5ರಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ತಿಳಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ಗೆ ಶುಭ ಹಾರೈಸಿದ್ದರು. ಆಗಾಗ ನಟಿ ಕವಿತಾ ಗೌಡ ತಮ್ಮ ಮುದ್ದಾದ ಬೇಬಿ ಬಂಪ್ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದೀಗ ಇಂದು ಗಣೇಶ ಚತುರ್ಥಿ ಹಬ್ಬದ ನಿಮಿತ್ತ ನಟಿ ಕವಿತಾ ಗೌಡ ಅವರು ಚೆಂದವಾಗಿ ಸೀರೆಯುಟ್ಟು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಒಂದು…
Author: Prajatv Kannada
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇಂದು (ಸೆಪ್ಟೆಂಬರ್ 08) ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ಸಂಜೆ ಮುಂಬೈನ ರಿಲಯನ್ಸ್ ಫೌಂಡೇಶನ್ನ ಆಸ್ಪತ್ರೆಗೆ ದಾಖಲಾಗಿದ್ದರು. ಮದುವೆಯಾದ ಆರು ವರ್ಷದ ಬಳಿಕ ದೀಪಿಕಾ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ. ದೀಪಿಕಾ ಪಡುಕೋಣೆಗೆ ಸೆಪ್ಟೆಂಬರ್ 28 ಗೆ ಹೆರಿಗೆ ದಿನಾಂಕ ನೀಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಸೆಪ್ಟೆಂಬರ್ 08 ರಂದು ಈ ಜೋಡಿಗೆ ಮಗುವಾಗಿದೆ. ಮದುವಿನ ಆಗಮನದ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ದೀಪಿಕಾ ಸ್ಪಷ್ಟಪಡಿಸಿದ್ದಾರೆ. ದೀಪಿಕಾ ಪಡುಕೋಣೆ ‘ಕಲ್ಕಿ’ ಸಿನಿಮಾದಲ್ಲಿ ನಟಿಸುವ ಸಂದರ್ಭದಲ್ಲಿ ತಾವು ಗರ್ಭಿಣಿ ಆಗಿರುವ ವಿಷಯ ಬಹಿರಂಗಪಡಿಸಿದ್ದರು. ಗರ್ಭಿಣಿ ಆಗಿರುವ ಸಂದರ್ಭದಲ್ಲಿಯೇ ಅವರು ‘ಕಲ್ಕಿ 2898’ ಸಿನಿಮಾದಲ್ಲಿ ನಟಿಸಿದ್ದರು. ಆದರೆ ಅದಾದ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಲಿಲ್ಲ. ರಣ್ವೀರ್ ಸಿಂಗ್ ಸಹ ದೀಪಿಕಾ ಗರ್ಭಿಣಿ ಆದ ಬಳಿಕ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿ ಪತ್ನಿಯೊಟ್ಟಿಗೆ ಹೆಚ್ಚು ಸಮಯ ಕಳೆಯಲು ತೊಡಗಿದರು. ರಣ್ವೀರ್ ಸಿಂಗ್ ಮತ್ತು ದೀಪಿಕಾ…
ಹಿಂದಿ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದ ನಟ ವಿಕಾಸ್ ಸೇಥಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ವಿಕಾಸ್ ಸೇಥಿ ಅವರಿಗೆ 48 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ನಿದ್ರೆಯಲ್ಲಿ ಇರುವಾಗಲೇ ವಿಕಾಸ್ ಸೇಥಿ ಅವರಿಗೆ ಹೃದಯಾಘಾತ ಆಗಿದೆ. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಅವರ ಉಸಿರು ನಿಂತಿತ್ತು. ಈ ವಿಷಯ ತಿಳಿದ ಅವರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ವಿಕಾಸ್ ಸೇಥಿ ಅವರು ಸಕ್ರಿಯರಾಗಿದ್ದಾರೆ. ಸೀರಿಯಲ್ಗಳು ಮಾತ್ರವಲ್ಲದೇ ರಿಯಾಲಿಟಿ ಶೋಗಳಲ್ಲೂ ಸ್ಪರ್ಧಿಸಿ ಅವರು ಹೆಸರು ಗಳಿಸಿದ್ದರು. ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ, ಕೆ. ಸ್ಟ್ರೀಟ್ ಪಾಲಿ ಹಿಲ್, ಹಮಾರಿ ಬೇಟಿಯೋಂಕಾ ವಿವಾಹ್, ಡರ್ ಸಬ್ಕೋ ಲಗ್ತಾ ಹೈ, ಸಂಸ್ಕಾರ್ ಲಕ್ಷ್ಮಿ, ಸರುರಾಲ್ ಸಿಮರ್ ಕಾ ಮುಂತಾದ ಧಾರಾವಾಹಿಗಳಲ್ಲಿ ವಿಕಾಸ್ ಸೇಥಿ ನಟಿಸಿದ್ದರು. ‘ದೀವಾನಾಪನ್’, ‘ಕಭಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ರಿಲೀಸ್ ಆಗಲಿದ್ದಾರೆ ಎಂದು ವರದಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF ಜೋಡಿ ಬೇರ್ಪಡುವುದು ಬಹುತೇಕ ಖಚಿತವಾದಂತಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಆರ್ಸಿಬಿ ತಂಡದ ಕೆಜಿಎಫ್ ಜೋಡಿಗಳಾಗಿ ಗುರುತಿಸಿಕೊಂಡಿದ್ದರು. ಇದೀಗ ತ್ರಿವಳಿ ಗುಂಪಿನಿಂದ ಇಬ್ಬರು ಆಟಗಾರರು ಹೊರಬೀಳುವ ಸುದ್ದಿ ಹೊರಬಿದ್ದಿದೆ. ಅಲ್ಲದೆ ಮುಂಬರುವ ಸೀಸನ್ನಲ್ಲಿ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವ ಸಾಧ್ಯತೆಯಿದೆ. 2022 ರಿಂದ ಆರ್ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು. ಅಲ್ಲದೆ 45 ಪಂದ್ಯಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿರುವ ಫಾಫ್ 15 ಅರ್ಧಶತಕಗಳೊಂದಿಗೆ ಒಟ್ಟು 1636 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಫಾಫ್ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳದಿರಲು ಮುಖ್ಯ ಕಾರಣ ಅವರ ವಯಸ್ಸು. ಏಕೆಂದರೆ ಈಗಾಗಲೇ 40 ವರ್ಷ ದಾಟಿರುವ ಅವರು ಮುಂಬರುವ ಸೀಸನ್ಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಅಲ್ಲದೆ ಭವಿಷ್ಯದ ದೃಷ್ಟಿಯಲ್ಲಿ ಈಗಲೇ ಆರ್ಸಿಬಿ ಬದಲಿ…
ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ , ಬಜರಂಗ್ ಪುನಿಯಾ ಕಾಂಗ್ರೆಸ್ ಸೇರಿದ್ದಾರೆ. ಈ ಬೆನ್ನಲ್ಲೇ ಹರಿಯಾಣ ಚುನಾವಣೆಯಲ್ಲಿ ವಿನೇಶ್‌ಗೆ ಕಾಂಗ್ರೆಸ್‌ಗೆ ಟಿಕೆಟ್ ಘೋಷಣೆಯಾಗಿದೆ. ಪುನಿಯಾಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ನೀಡಲಾಗಿದೆ. ಈ ವಿಚಾರವಾಗಿ ಲೈಂಗಿಕ ಕಿರುಕುಳ ಆರೋಪಿ, ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಸಿಡಿದೆದ್ದಿದ್ದಾರೆ. ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕುಸ್ತಿಪಟುಗಳನ್ನು ಕಾಂಗ್ರೆಸ್ ದಾಳವಾಗಿ ಬಳಸಿಕೊಂಡಿದೆ. ರೆಸ್ಲರ್‌ಗಳು ಪ್ರತಿಭಟನೆ ಆರಂಭಿಸಿದ ದಿನವೇ, ಇದರ ಹಿಂದೆ ಕಾಂಗ್ರೆಸ್ ಪಾತ್ರವಿದೆ ಎಂದು ಹೇಳಿದ್ದೆ. ಈಗ ಅದೇ ನಿಜವಾಗಿದೆ. ಕಾಂಗ್ರೆಸ್ ಸಂಚಿಗೆ ವಿನೇಶ್ ಮತ್ತು ಬಜರಂಗ್ ದಾಳವಾಗಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರಯತ್ತದೆ. ಇದಕ್ಕಾಗಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿದೆ ಎಂದು…
ಒಬ್ಬ ಮನುಷ್ಯ ಆರೋಗ್ಯವಾಗಿರಬೇಕಂದ್ರೆ ರೋಗನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗನಿರೋಧಕ ಶಕ್ತಿ ಕಡಿಮೆಯಾದರೆ ಕೆಮ್ಮು, ನೆಗಡಿ, ಕಾಲೋಚಿತ ರೋಗಗಳ ಜೊತೆಗೆ ಹಲವು ರೋಗಗಳು ನಮ್ಮ ದೇಹವನ್ನು ಅಂಟಿಕೊಳ್ಳುತ್ತದೆ. ಆದರೆ ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು.ಅನೇಕ ಜನರು ಈ ಬಗ್ಗೆ ಗೊತ್ತಿಲ್ಲದಿದ್ದರೂ ಬೆಳ್ಳಿಯ ಉಂಗುರಗಳನ್ನು ಧರಿಸುತ್ತಾರೆ. ಬೆಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದ್ದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮನ್ನು ಸೋಂಕುಗಳಿಂದ ದೂರವಿಡುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಉತ್ತಮವಾಗಿದ್ದರೆ ನಾವು ಎಲ್ಲ ರೀತಿಯಲ್ಲೂ ಆರೋಗ್ಯವಾಗಿರುತ್ತೇವೆ. ಆದರೆ ಬೆಳ್ಳಿಯು ನಮ್ಮ ದೇಹದಲ್ಲಿ ರಕ್ತ ಸಂಚಾರವನ್ನು ಸುಧಾರಿಸಲು ತುಂಬಾ ಒಳ್ಳೆಯದು ಎಂದು ಹೇಳಲಾಗಿದೆ. ಬೆಳ್ಳಿಯ ಉಂಗುರ ಆರೋಗ್ಯದ ವಿಷಯದಲ್ಲಿ ತುಂಬಾನೇ ಪ್ರಯೋಜನವನ್ನು ನೀಡುತ್ತದೆ. ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಇದು ಪ್ರಯೋಜನಕಾರಿ. ಮಾನಸಿಕ ಆರೋಗ್ಯ ಹಾಳಾದರೆ ದೈಹಿಕ…
ಅಧಿಕ ರಕ್ತದೊತ್ತಡ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ರಕ್ತದೊತ್ತಡವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಈಗ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಪಾನೀಯಗಳ ಬಗ್ಗೆ ತಿಳಿಯೋಣ. ಆಮ್ಲಾ ಜ್ಯೂಸ್: ಆಮ್ಲಾ ನೈಸರ್ಗಿಕ ಔಷಧೀಯ ಗುಣಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಪ್ರತಿದಿನ ಆಮ್ಲಾ ಜ್ಯೂಸ್ ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ತೆಂಗಿನ ನೀರು: ತೆಂಗಿನ ನೀರು ನೈಸರ್ಗಿಕವಾಗಿ ಪೋಷಕಾಂಶಗಳಿಂದ ತುಂಬಿರುತ್ತದೆ. ಇದು ಎಲೆಕ್ಟ್ರೋಲೈಟ್‌ಗಳಲ್ಲಿ ವಿಶೇಷವಾಗಿ ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿದೆ. ಪೊಟ್ಯಾಸಿಯಮ್ ರಕ್ತನಾಳಗಳಲ್ಲಿನ ಸೋಡಿಯಂ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪ್ರತಿದಿನ ಒಂದು ಲೋಟ ತೆಂಗಿನ ನೀರನ್ನು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಬೀಟ್ರೂಟ್ ರಸ: ಬೀಟ್ರೂಟ್ ನಲ್ಲಿ ನೈಟ್ರೈಟ್ ಎಂಬ ವಸ್ತುವಿದ್ದು, ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಯಾಗುತ್ತದೆ. ನೈಟ್ರಿಕ್ ಆಕ್ಸೈಡ್ ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ರಕ್ತ ಪರಿಚಲನೆಯನ್ನು ಸುಗಮಗೊಳಿಸುತ್ತದೆ. ಇದು ರಕ್ತದೊತ್ತಡವನ್ನೂ ಕಡಿಮೆ ಮಾಡುತ್ತದೆ. ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ರಕ್ತದೊತ್ತಡವನ್ನು ನೈಸರ್ಗಿಕವಾಗಿ ಕಡಿಮೆ ಮಾಡಬಹುದು.…
ಭೋಪಾಲ್:- ಮಧ್ಯಪ್ರದೇಶದ ಜಬಲ್ಪುರ್ ರೈಲ್ವೆ ನಿಲ್ದಾಣದ ಹತ್ತಿರದಲ್ಲಿ ರೈಲಿನ ಎರಡು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಂದೋರ್-ಜಬಲ್ಪುರ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ. ಇಂದೋರ್‌ನಿಂದ ಹೊರಟ ರೈಲು ಜಬಲ್ಪುರ್ ರೈಲ್ವೆ ನಿಲ್ದಾಣದ 6ನೇ ಪ್ಲಾಟ್‌ಫಾರಂಗೆ ಬರಬೇಕಿತ್ತು. ಪ್ಲಾಟಫಾರಂನಿಂದ ಕೇವಲ 150 ಮೀಟರ್ ದೂರ ಇರುವಾಗಲೇ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದೋರ್‌ನಿಂದ ಇಂದೋರ್-ಜಬಲ್ಪುರ್ ಎಕ್ಸ್ಪ್ರೆಸ್ ರೈಲು ಬರುತ್ತಿತ್ತು. ಅದು ಜಬಲ್ಪುರದ ರೈಲ್ವೆ ನಿಲ್ದಾಣದ 6ನೇ ಪ್ಲಾಟ್‌ಫಾರಂಗೆ ಬರಬೇಕಿತ್ತು. ಜಬಲ್ಪುರ್ ರೈಲ್ವೆ ನಿಲ್ದಾಣದ ಹತ್ತಿರ ಬರುತ್ತಿದ್ದಂತೆ ರೈಲಿನ ವೇಗ ಕಡಿಮೆಯಾಗಿತ್ತು. ಆ ವೇಳೆಗಾಗಲೇ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲ ಪ್ರಯಾಣಿಕರು ತಮ್ಮ ತಮ್ಮ ಮನೆಗೆ ಸುರಕ್ಷಿತವಾಗಿ ತೆರಳಿದ್ದಾರೆ ಎಂದು ಪಶ್ಚಿಮ ವಲಯದ ರೈಲ್ವೆ…
ಹೈದರಾಬಾದ್ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧಿಸಲಾಗಿದೆ.ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಗೋವಾಕ್ಕೆ ಹೋಗುತ್ತಿದ್ದ ವಿನಾಯಕನ್, ಕನೆಕ್ಟಿಂಗ್ ಫ್ಲೈಟ್ ಹತ್ತಲೆಂದು ಹೈದರಾಬಾದ್ನಲ್ಲಿ ಇಳಿದಾಗ ವಿಮಾನ ನಿಲ್ದಾಣದ ಸಿಐಎಸ್ಎಫ್ ಸಿಬ್ಬಂದಿ ಒಬ್ಬರೊಟ್ಟಿಗೆ ಜಗಳ ಮಾಡಿಕೊಂಡಿದ್ದು, ಹಲ್ಲೆ ಸಹ ಮಾಡಿದ್ದಾರೆ ಎಂದು ಏರ್ಪೋರ್ಟ್ ಭದ್ರತೆ ಸಿಬ್ಬಂದಿ ಆರೋಪ ಮಾಡಿದ್ದಾರೆ. ಆದರೆ ಮಲಯಾಳಂ ಪತ್ರಿಕೆ ಮನೋರಮಾ ಜೊತೆಗೆ ಮಾತನಾಡಿರುವ ವಿನಾಯಕನ್, ವ್ಯತಿರಿಕ್ತ ಹೇಳಿಕೆ ನೀಡಿದ್ದು, ಸಿಐಎಸ್ಎಫ್ ಸಿಬ್ಬಂದಿಯೇ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಳಿದ್ದಾರೆ. ಮನೋರಮಾಕ್ಕೆ ವಿನಾಯಕನ್ ನೀಡಿರುವ ಹೇಳಿಕೆಯಂತೆ, ಅವರು ಗೋವಾಕ್ಕೆ ತೆರಳುತ್ತಿದ್ದ ಹೈದರಾಬಾದ್ನಲ್ಲಿ ಇಳಿದಿದ್ದಾರೆ. ಸಿಐಎಸ್ಎಫ್ ಸಿಬ್ಬಂದಿ ಕೆಲವರು ಅವರನ್ನು ಒಂದು ಕೋಣೆಗೆ ಕರೆದುಕೊಂಡು ಹೋಗಿ ಹಿಗ್ಗಾ-ಮುಗ್ಗ ಥಳಿಸಿದರಂತೆ. ಸಣ್ಣ ವಿಷಯಕ್ಕೆ ಭದ್ರತಾ ಸಿಬ್ಬಂದಿ ಜೊತೆಗೆ ವಿನಾಯಕನ್ ಜಗಳ ಮಾಡಿದ್ದಕ್ಕೆ ತಮಗೆ ಹೀಗೆ ಥಳಿಸಿದ್ದಾರೆಂದು ಅವರೇ ಹೇಳಿಕೊಂಡಿದ್ದಾರೆ. ‘ನಾನು ಯಾವುದೇ ತಪ್ಪು ಮಾಡಿಲ್ಲ ಬೇಕಿದ್ದರೆ ಸಾಕ್ಷ್ಯವಾಗಿ ಸಿಸಿಟಿವಿ ದೃಶ್ಯಗಳನ್ನು…
ಬಾಗಲಕೋಟೆ: ರಾಜ್ಯ ಸರ್ಕಾರವು ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಚಟುವಟಿಕೆಗಳಿಗೆ ವಿದ್ಯುತ್ ಮಿತಿ ರದ್ದು ಪಡಿಸುವುದರ ಮೂಲಕ ಗಣೇಶ ಹಬ್ಬಕ್ಕೆ ನೇಕಾರರಿಗೆ ಸಿಹಿ ಸುದ್ದಿ ಕೊಟ್ಟಿದೆ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ. ಅಭಿನಂದನಾರ್ಹ ಮಾತುಗಳನ್ನು ಹೇಳಿದ್ದಾರೆ. ಅನೇಕ ಹೋರಾಟಗಳ ಮೂಲಕ ನೇಕಾರರಿಗೆ 10.1ಹೆಚ್‍ಪಿ ಯಿಂದ 20ಹೆಚ್‍ಪಿ ವರೆಗಿನ ಘಟಕಗಳಿಗೆ 500ಯುನಿಟ್ ಉಚಿತ ಸಬ್ಸಿಡಿ ಮಿತಿಯನ್ವಯ ಜಾರಿಮಾಡಿತ್ತು. ಇದೀಗ ಗಣೇಶ ಹಬ್ಬದ ಪ್ರಯುಕ್ತ ಈ ಮಿತಿಯನ್ನು ರದ್ದುಪಡಿಸಲಾಗಿದೆ ಎಂದರು. ಪ್ರಕಾಶ ಕುಂಬಾರ ಬಾಗಲಕೋಟೆ