ಬೆಂಗಳೂರು: ವಲಸಿಗರ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ನಾನು ಇದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಹೋಗಲ್ಲ. ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟಲು ಇಷ್ಟ ಪಡುವುದಿಲ್ಲ. ಯಾರು ಸರಿ ಅಂತಲೂ ನಾವು ಹೇಳುವುದಿಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಏನೇ ಇದ್ದರೂ ಮಾತಾಡುತ್ತೇನೆ. ನಮ್ಮಿಂದ ಏನೂ ತಪ್ಪು ಆಗಿಲ್ಲ ಅನ್ನೋದು ಬೇಡ, ಕೆಲವು ತಪ್ಪಾಗಿದೆ. ಆ ತಪ್ಪು ಆಗದ ರೀತಿ ಮುಂದೆ ಹೋಗೋಣ ಎಂದರು. ಆಪರೇಷನ್ ಕಮಲವೇ ಬಿಜೆಪಿಗೆ ಮುಳುವಾಯ್ತು ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರವಿಕುಮಮಾರ್, ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ. ಎಲ್ಲರೂ ಒಟ್ಟಾಗಿ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಕಾಂಗ್ರೆಸ್ನಿಂದ ಬಂದವರಿಂದಲೇ ನಾವು ಅಧಿಕಾರ ನಡೆಸಿದ್ದು, ಹೊರಗಿನವರು, ಒಳಗಿನವರು ಎಂಬ ಭೇದ ಇಲ್ಲ ಎಂದರು. ಬಿಜೆಪಿ ಸರ್ಕಾರ ಅವಧಿಯ ಯಾವುದೇ ವಿಚಾರ ತನಿಖೆ ಮಾಡಲಿ. ಯಾವುದಕ್ಕೂ…
Author: Prajatv Kannada
ಬೆಂಗಳೂರು: ಬೆಲೆ ಏರಿಕೆ ಬಗ್ಗೆ ನೋಡಿದ್ರೆ ಶಾಕ್ ಆಗ್ತಿದೆ.ಅಕ್ಕಿ, ಹಾಲು , ವಿದ್ಯುತ್ ಹೀಗೆ ಒಂದರ ಮೇಲೊಂದು ಬೆಲೆ ಏರುತ್ತಲೇ ಹೋಗ್ತಿದ್ರೆ ಜನಸಾಮಾನ್ಯರ ಗತಿ ಏನು? ಈಗ ನೋಡಿದ್ರೆ ಟೊಮ್ಯಾಟೋ ಬೆಲೆ 100 ರೂ. ತಲುಪಿದೆ. ಈ ಬೆಲೆ ಏರಿಕೆಯಿಂದಾಗಿ ಅತ್ತ ರೈತನಿಗೂ ಲಾಭ ಇಲ್ಲ, ಇತ್ತ ಗ್ರಾಹಕನಿಗೂ ಲಾಭವಿಲ್ಲ. ಜನ ಬೆಲೆ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು. ಸೊಪ್ಪು ತರಕಾರಿ ಸೇರಿದಂತೆ ಆಹಾರ ಪದಾರ್ಥಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯು ಜನ ಸಾಮ್ಯಾನರಿಗೆ ಶಾಕ್ ಕೊಟ್ಟಂತಾಗಿದೆ. ಈ ಕುರಿತು ಮಾಜಿ ಸಿಎಂ ಹೆಚ್‌ಡಿಕೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಆಪರೇಷನ್ ಕಮಲವೇ ಬಿಜೆಪಿಗೆ ಮುಳುವಾಯ್ತು ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರವಿಕುಮಮಾರ್, ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ. ಎಲ್ಲರೂ ಒಟ್ಟಾಗಿ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಕಾಂಗ್ರೆಸ್ನಿಂದ ಬಂದವರಿಂದಲೇ ನಾವು ಅಧಿಕಾರ ನಡೆಸಿದ್ದು, ಹೊರಗಿನವರು, ಒಳಗಿನವರು ಎಂಬ ಭೇದ ಇಲ್ಲ ಎಂದರು. ಬಿಜೆಪಿ ಸರ್ಕಾರ ಅವಧಿಯ ಯಾವುದೇ ವಿಚಾರ ತನಿಖೆ ಮಾಡಲಿ. ಯಾವುದಕ್ಕೂ ನಾವು ಸೊಪ್ಪು ಹಾಕುವುದಿಲ್ಲ, ಎದುರಿಸುತ್ತೇವೆ. ಸರ್ಕಾರದ ತನಿಖೆಗೆ ನಾವು ಹೆದರಲ್ಲ ಎಂದರು. ಇದನ್ನು ಹೊರತುಪಡಿಸಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಉದ್ದೇಶದಿಂದ ಸಭೆ ಮಾಡ್ತಿದೀವಿ ಅದೇ ರೀತಿ ನಮ್ಮ ಕಾರ್ಯಕರ್ತರ ಸಂಕಲ್ಪ ಶಕ್ತಿಯಿಂದ ಎಲ್ಲಾ ಲೋಕಸಭೆ ಸ್ಥಾನಗಳನ್ನೂ ಗೆಲ್ತೇವೆ ಸಣ್ಣಪುಟ್ಟ ಗೊಂದಲಗಳಿವೆ, ಅದನ್ನೆಲ್ಲ ಸರಿಪಡಿಸಿಕೊಳ್ತೇವೆ ಗೊಂದಲಗಳು ಪಕ್ಷದಲ್ಲಿ ಇಲ್ಲ ಅಂತ ನಾನು ಹೇಳಲ್ಲ ಗೊಂದಲಗಳನ್ನು ಸರಿಪಡಿಸಲು ನಮ್ಮ ನಾಯಕರು ಬಹಿರಂಗವಾಗಿ ಮಾತಾಡ್ತಿದಾರೆ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಒಟ್ಟಾಗಿ ಸೇರಿ ಚರ್ಚೆ ಮಾಡಿ ಬಗೆಹರಿಸಿಕೊಳ್ತೇವೆ ಮತ್ತೊಮ್ಮೆ ರಾಜ್ಯದಲ್ಲಿ…
ಬೆಂಗಳೂರು: ಬೆಸ್ಕಾಂನವರು ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ರಾಮನಗರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಅಧಿಕಾರಿಗಳು ಪ್ರಚಾರ ಮಾಡಿ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಬಿಜೆಪಿ ಸರ್ಕಾರ. ಬಿಜೆಪಿಯವರು ತಿಂದು ನಮ್ಮ ಮೂತಿಗೆ ಒರಿಸುವ ಯತ್ನ ಮಾಡಿದ್ದಾರೆ ಎಂದರು. ಕಳೆದ ಮೂರು ವರ್ಷಗಳಿಂದ ಅನೇಕ ಪಾದಯಾತ್ರೆಗಳಲ್ಲಿ ಪಾಲ್ಗೊಂಡಿದ್ದೇನೆ. ನೀರಿಗಾಗಿ ನಡಿಗೆ, ಸ್ವಾತಂತ್ರ್ಯ ನಡಿಗೆ, ಭಾರತ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದೇವೆ. ಡ್ರಗ್ಸ್ ಸೇವನೆ ಮಾಡಿದರೆ ನೋವು, ಸಾವು ಎರಡೂ ಬರುತ್ತದೆ. ಹೀಗಾಗಿ ಇದರ ಬಗ್ಗೆ ಬಹಳ ಎಚ್ಚರಿಕೆ ಇರಬೇಕು. ನೀವು ಸಾಮಾಜಿಕ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ. ನೀವು ನಿಮ್ಮ, ನಿಮ್ಮ ಸ್ನೇಹಿತರು ಆತ್ಮೀಯರು, ಸಮಾಜ ಆರೋಗ್ಯಕರ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ. ನಿಮಗೆ ಅಭಿನಂದನೆಗಳು.
ಬೆಂಗಳೂರು: ನೀವು ಮೊದಲ ಬಾರಿ ಶಾಸಕರಲ್ಲ, ಪರ್ಮನೆಂಟ್ ಶಾಸಕರಾಗಿರಬೇಕು. ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದ ಇರಲು ಈ ಶಿಬಿರ ಅನುಕೂಲ. ಈ ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ಶಾಸಕರಿಗೆ ತರಬೇತಿ ನೀಡಲಾಗುತ್ತೆ. ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದ ಹಾಗೆ. ಈ ಸರ್ಕಸ್ ಕಂಪನಿಯಲ್ಲಿ ಹುಲಿ, ಸಿಂಹ, ಕೋತಿ, ಆನೆ ಎಲ್ಲವೂ ಇರುತ್ತೆ. ರಾಜಕೀಯದಲ್ಲೂ ಹಾಗೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ. ಸರ್ಕಸ್ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲಾ ಪ್ರಾಣಿಗಳು ಹೋಗುತ್ತವೆ. ಹಾಗೆ ನೀವು ರಾಜಕೀಯದಲ್ಲಿ ರಿಂಗ್ ಮಾಸ್ಟರ್ ಆಗಬೇಕು. ಶಾಸಕರು ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸಬೇಕು ಎಂದು ನೂತನ ಶಾಸಕರ ತರಬೇತಿ ಶಿಬಿರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದರು
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅನಧಿಕೃತ ಲೋಡ್ ಶೆಡ್ಡಿಂಗ್ ಇಲ್ಲ. ನನಗೆ ಗೊತ್ತಿರುವ ಹಾಗೆ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ. ಪರೀಕ್ಷೆ ಹಾಗೂ ಚುನಾವಣೆ ವೇಳೆ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಈಗ ಮೈಂಟೇನೆನ್ಸ್ಗಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಕರೆಂಟ್ ಶಾರ್ಟೇಜ್ ಆಗಿ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ಈ ವೇಳೆ ಜೆಸ್ಕಾಂ ಇಂಜಿನಿಯರ್ ಅವರಿಗೆ ಸಚಿವ ಕೆ.ಜೆ.ಜಾರ್ಜ್ ತರಾಟೆಗೆ ತೆಗೆದುಕೊಂಡಿದ್ದಾರೆ. ನಾನೇನು ಹೊಸದಾಗಿ ಮಂತ್ರಿಯಾಗಿಲ್ಲ. ನಿಮ್ಮ ಕೈಲಾಗದೆ ಇದ್ದರೇ ಹೆಡ್ ಆಫೀಸ್ಗೆ ಹೇಳಿ ಅಂತ ಕೆ.ಜೆ.ಜಾರ್ಜ್ ಗರಂ ಆಗಿದ್ದಾರೆ.
ಬೆಂಗಳೂರು: ವೈಷ್ಣವಿ ಬಿಲ್ಡರ್ಸ್ ಚೇರ್ಮನ್ ದರ್ಶನ್ ಮೇಲೆ ಹಲ್ಲೆ ನಡೆಸಿದ್ದ ಆತನ ಸ್ನೇಹಿತ, ಆರೋಪಿ ವೇದಾಂತ್ ದುಗಾರ್ ನನ್ನ ಬೆಂಗಳೂರು ಏರ್ಪೋರ್ಟ್ ನಲ್ಲಿ ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ. ಮೇ 9ರಂದು ರಾತ್ರಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದ ವೇದಾಂತ್ ಮುಂಬೈಗೆ ತೆರಳಿ ಅಲ್ಲಿಂದ ತನ್ನ ಪ್ರೈವೇಟ್ ಜೆಟ್ ಬಳಸಿ ನೇಪಾಳಕ್ಕೆ ಪರಾರಿಯಾಗಿದ್ದ. ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಎಲ್ಓಸಿ ಹೊರಡಿಸಿದ್ದರು. ಜೂನ್ 24ರಂದು ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಆರೋಪಿಯನ್ನ ಬಂದಿಸಿದ್ದಾರೆ. ಜೂನ್ 9ರಂದು ಸಂಜೆ ಆರ್.ಟಿ.ನಗರದ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಸ್ನೇಹಿತನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವೈಷ್ಣವಿ ಬಿಲ್ಡರ್ಸ್ ಮಾಲೀಕ ಗೋವಿಂದರಾಜು ಪುತ್ರ ದರ್ಶನ್ ಹಾಗೂ ವಿಎಆರ್ ಬಿಲ್ಡರ್ಸ್ ಪುತ್ರ ಸಂಜಯ್ ದುಗಾರ್ ಪುತ್ರ ವೇದಾಂತ್ ದುಗಾರ್ ಬಂದಿದ್ದರು. ಇಬ್ಬರೂ ಸ್ನೇಹಿತರೇ ಆಗಿದ್ದ ವೇದಾಂತ್ ದುಗಾರ್ ಮತ್ತು ದರ್ಶನ್ ಕಳೆದ ಕೆಲ ದಿನದ ಹಿಂದೆ ರೆಸ್ಟೋರೆಂಟ್ನಲ್ಲಿ ಎದುರು ಬದುರಾಗಿದ್ದಾಗ ವೇದಾಂತ್ ನನ್ನ ಮಾತನಾಡಿಸದೇ ಇದ್ದಿದ್ದಕ್ಕೆ ದರ್ಶನ್ ಮೇಲೆ ಹಲ್ಲೆ ನಡೆಸಿದ್ದ.…
ಬೆಂಗಳೂರು: ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಅಧ್ಯಕ್ಷ, 2008ರ ಬೆಂಗಳೂರು ಸರಣಿ ಬಾಂಬ್ (2008 Bengaluru Serial Blasts) ಸ್ಪೋಟದ ಆರೋಪಿ ಅಬ್ದುಲ್ ನಾಸೀರ್ ಮದನಿ (Abdul Nasser Madani) ಇಂದು ಸಂಜೆ ಕೊಚ್ಚಿನ್‌ಗೆ ಪ್ರಯಾಣ ಬೆಳೆಸಲಿದ್ದಾನೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಇಂದು ಸಂಜೆ ಸಂಜೆ 6:15 ರ ವಿಮಾನದಲ್ಲಿ ಪ್ರಯಾಣ ಬೆಳೆಸಿ ರಾತ್ರಿ 7:20ಕ್ಕೆ ಮದನಿ ಕೊಚ್ಚಿನ್ ತಲುಪಲಿದ್ದಾನೆ. ಮದನಿ ಜೊತೆ ಹೆಂಡತಿ ಮತ್ತು ಇತರರು ಪ್ರಯಾಣ ಬೆಳೆಸಲಿದ್ದಾರೆ. ಕೊಚ್ಚಿನ್‌ಗೆ ತೆರಳಿದ ಬಳಿಕ ಕೊಲ್ಲಂ ಜಿಲ್ಲೆಯ ಅನ್ವರ್ ಸಿರಿ ಸಸ್ತುಂಮಕುಟ ಎಂಬಲ್ಲಿಗೆ ಮದನಿ ತೆರಳಲಿದ್ದಾನೆ. ಮದನಿ ಭದ್ರತೆಗೆ ಓರ್ವ ಆರ್‌ಎಸ್ಐ, ಮೂವರು ಪಿಸಿಗಳು, ಒಬ್ಬ ಚಾಲಕನನ್ನು ನಿಯೋಜನೆ ಮಾಡಲಾಗಿದೆ. ತಂದೆಯ ಅನಾರೋಗ್ಯದ ನಿಮಿತ್ತ ಕೇರಳಕ್ಕೆ ತೆರಳಲು ಅನುಮತಿ ನೀಡುವಂತೆ ಮದನಿ ಸುಪ್ರೀಂ ಕೋರ್ಟ್‌ಗೆ (Supreme Court) ಮನವಿ ಮಾಡಿದ್ದ. ಈ ಮನವಿಗೆ ಸ್ಪಂದಿಸಿದ ಸುಪ್ರೀಂ ಕೋರ್ಟ್ ಕೇರಳಕ್ಕೆ ತೆರಳಲು ಏಪ್ರಿಲ್ 17 ರಂದು ಅನುಮತಿ ನೀಡಿತ್ತು. ಸುಪ್ರೀಂ ಕೋರ್ಟ್ 3 ತಿಂಗಳ ಅನುಮತಿ…
ಬೆಂಗಳೂರು: ಜನಸಾಮಾನ್ಯರಿಗೆ ಶಾಕ್ ಮೇಲೆ ಶಾಕ್ ವಿದ್ಯುತ್ , ಹಾಲು, ಮದ್ಯಪಾನ ಹೀಗೆ ಎಲ್ಲದರ ರೇಟ್ ಗಗನಕ್ಕೇರಿದ್ದು ಈಗ ಟೊಮೆಟೋ ಸರದಿ ಬಂದಿದೆ. ಜನರಿಗೆ ಬರೆ ಹಾಕಿದಂತೆ ಆಗುತ್ತಿದೆ. ಸಾಮಾನ್ಯ ಜನರಿಗಂತು ಇದು ನುಂಗಲಾರದ ತುತ್ತಾಗಿಬಿಟ್ಟಿದಂತೆ ಕಾಣುತ್ತಿದೆ. ನೂರರ ಸನಿಹಕ್ಕೆ ಆಗಮಿಸಿದ ಟೊಮೆಟೊ ದರ ಐದು ಗ್ಯಾರಂಟಿ ಖುಷಿ ನಡುವೆ ಜನತೆಗೆ ಟೊಮಟೋ ದರ ಶಾಕ್.ಈ ದಿನದಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಕಳೆದ ವಾರ 30-40 ರೂ. ಇದ್ದ ಟೊಮೆಟೋ ದರ ನಿನ್ನೆ 40-50 ರೂ. ಇಂದು 70-80 ರೂ. ಇನ್ನೆರಡು ದಿನದಲ್ಲಿ 100 ಗಟಿ ದಾಟಿದ ಟೊಮೆಟೋ ದರ. ಮಳೆಯಿಂದಾಗಿ ಕೈ ಕೊಟ್ಟ ಫಸಲು- ಗಗನಕ್ಕೇರಿದ ಟೊಮ್ಯಾಟೊ ದರ ಕೆ ಆರ್ ಮಾರುಕಟ್ಟೆಯಲ್ಲಿ ಟೊಮ್ಯಾಟೊ ದರ ಬಲು ದುಬಾರಿ ಟೊಮ್ಯಾಟೊ ಬೆಲೆ ಕೇಳಿ ಒಂದು ಕ್ಷಣ ಗಾಬರಿಯಾಗ್ತಿದ್ದಾರೆ ಜನ ಬೇಡಿಕೆ ತಕ್ಕಂತೆ ಪೂರೈಕೆಯಾಗ್ತಿಲ್ಲ ಟೊಮ್ಯಾಟೊ ದರ ಕೇಳಿ ಕೊಳ್ಳಲು ಜನ ಹಿಂದೇಟು ಇವತ್ತು ಮಾರುಕಟ್ಟೆ ಯಲ್ಲಿ ಒಂದು ಕೆಜಿ ಟೊಮ್ಯಾಟೊ 80ರಿಂದ…
ಬೆಂಗಳೂರು: ಡ್ರಗ್ಸ್ ಗಾಗಿ ಪೆಡ್ಲರ್ ಗಳ ಜೊತೆ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಟಿ.ಚಂದ್ರಶೇಖರ್ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ಹೀಗೊಂದು ದಿನ’ ಹಾಗೂ ‘ಅಪ್ಪುಗೆ’ ಎಂಬ ಎರಡು ಚಿತ್ರಗಳ ನಿರ್ಮಾಪಕರಾಗಿರುವ ಚಂದ್ರಶೇಖರ್ ಇದೀಗ ಹೆಂಡತಿಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೇಲ್ನೋಟಕ್ಕೆ ಇದು ಕೌಟುಂಬಿಕ ಸಮಸ್ಯೆ ಎನಿಸಿದರು, ಹೆಂಡತಿಯ ವಿರುದ್ಧ ಚಂದ್ರಶೇಖರ್ ಗುರುತರ ಆರೋಪ ಮಾಡಿದ್ದಾರೆ. ಪತ್ನಿ ಡ್ರಗ್ ವ್ಯಸನಿಯಾಗಿದ್ದು, ಡ್ರಗ್ಸ್ ಗಾಗಿಯೇ ಆಕೆ ಡ್ರಗ್ ಪೆಡ್ಲರ್ ಜೊತೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದಾಳೆ ಎಂದು ಚಂದ್ರಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ‘ನನ್ನ ಹೆಂಡತಿಯಾದ ನಮಿತಾರನ್ನು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದೇನೆ. ನನ್ನ ಹೆಂಡತಿಯೊಂದಿಗೆ ವಾಸವಾಗಿರುತ್ತೇನೆ. ನಮಗೆ ಮಕ್ಕಳು ಇರುವುದಿಲ್ಲ. ನನ್ನ ಹೆಂಡತಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವ್ಯಸನಿಯಾಗಿದ್ದು, ಅದನ್ನು ಬಿಡಿಸಲು ಬಹಳ ಸಾರಿ ಪ್ರಯತ್ನ ಪಟ್ಟಿರುತ್ತೇನೆ. ಆದರೂ ಕದ್ದು ಮುಚ್ಚಿ ಆಕೆ ಸೇವನೆ ಮಾಡುತ್ತಿರುತ್ತಾಳೆ’ ಎಂದು ದೂರಿನಲ್ಲಿ…